Breaking News

ರಾಜ್ಯ

ತಂದೆ ತಾಯಿ ಜೊತೆ ಜಗಳವಾಡ್ತಿದ್ದ ಅಣ್ಣ: ಬೇಸತ್ತು ಹತ್ಯೆ ಮಾಡಿದ ತಮ್ಮ

ಹಾವೇರಿ: ಜಿಲ್ಲೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 22 ವರ್ಷ ನಾಗರಾಜ ಗೊರವರ ಹತ್ಯೆಯಾದ ಅಣ್ಣ. ದಿಳ್ಳೆಪ್ಪ ಗೊರವರ (20) ಹತ್ಯೆ ಮಾಡಿದ ಸೋದರ. ಕಾರಣ ಏನು?: ಅಣ್ಣ ನಾಗರಾಜ ನಿತ್ಯ ಕುಡಿದು ಬಂದು ತಂದೆ ತಾಯಿ ಜೊತೆ ಜಗಳವಾಡ್ತಿದ್ದ. ತಂದೆ ತಾಯಿಗೆ ಅಣ್ಣ ನೀಡ್ತಿದ್ದ ಕಿರಿಕಿರಿಯಿಂದ ಬೇಸತ್ತು ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ …

Read More »

ನಗರದಲ್ಲಿ ವಿದೇಶಿ ಘಾಟು, 8 ಬಾಕ್ಸ್‌ಗಳಲ್ಲಿದ್ದ 1,59,800 ವಿದೇಶಿ ಸಿಗರೇಟು ವಶ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ವಿದೇಶಿ ಸಿಗರೇಟುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ತಂಡ ಶಾರ್ಜಾನಿಂದ ವಿಮಾನದಲ್ಲಿ ಬಂದ 8 ಬಾಕ್ಸ್​ಗಳು ಪತ್ತೆಯಾಗಿವೆ. ಆರಂಭಿಕ ಅಂತದ ಪರಿಶೀಲನೆ ವೇಳೆ ಸಿಕ್ಕ ಬಾಕ್ಸ್​ಗಳನ್ನು X-ray scan ಗೆ ಒಳಪಡಿಸಿದಾಗ ಅದರಲ್ಲಿ ಲಕ್ಷಾಂತರ ಮೌಲ್ಯದ ಸಿಗರೇಟ್​ ಇರುವುದು ಗೊತ್ತಾಗಿದೆ.ಬಾಕ್ಸ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್ ಬಂಡಲ್​ಗಳು ಪತ್ತೆಯಾಗಿವೆ. …

Read More »

ಅಬ್ಬಾ! ಇದೆಷ್ಟು ದೊಡ್ಡ ಕುಂಬಳಕಾಯಿ ಗೊತ್ತಾ?

ಕ್ಯಾಲಿಫೋರ್ನಿಯಾ: ವಿಶ್ವದಾದ್ಯಂತ ಆವರಿಸಿರುವ ಮಹಾಮಾರಿ ಕೊರೊನಾದಿಂದ ಜನ ಸಾಕಷ್ಟು ಕಷ್ಟು ನೋವುಗಳನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಲಾಕ್​ಡೌನ್ ಸಮಯವನ್ನು ಬಳಸಿಕೊಂಡು ಅದರ ಪ್ರಯೋಜನ ಪಡೆದವರೂ ಸಹ ಸಾಕಷ್ಟು ಮಂದಿ.  ಇದೇ ರೀತಿ ಇಲೊಬ್ಬ ವ್ಯಕ್ತಿ ತನ್ನ ಸಮಯ ಪರಿಶ್ರಮದಿಂದ 2,350 ಪೌಂಡ್ ತೂಕದ ಕುಂಬಳಕಾಯಿಯನ್ನು ಬೆಳೆಸಿದ್ದಾನೆ. ಸದ್ಯ ಇದು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಹಾಫ್ ಮೂನ್ ಬೇ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ತಂದುಕೊಟ್ಟಿದೆ. ತೋಟಗಾರಿಕಾ ಶಿಕ್ಷಕನಾಗಿರುವ 40 ರ ಹರೆಯದ …

Read More »

ಪ್ರೀತಿಸಿದವಳನ್ನೇ ಕೊಲ್ಲಲು ಯತ್ನಿಸಿ.. ಜೈಲು ಸೇರಿದ ಪ್ರಿಯಕರ

ದೇವನಹಳ್ಳಿ: ಪ್ರೀತಿ ಮಧುರ, ತ್ಯಾಗ ಅಮರ ಅನ್ನೋ ಮಾತಿದೆ. ಆದರೆ ಇತ್ತೀಚಿನ ಯುವಕರು ಪ್ರೀತಿಗಾಗಿ ಪ್ರಾಣ ತೆಗೆಯಲೂ ಸಹ ಹಿಂದೆ ಮುಂದೆ ನೋಡಲ್ಲ. ತಮ್ಮ ಪ್ರೀತಿ ಸಿಗದಿದ್ದರೇ ಸಾಯಿಸಲೂ ಸಿದ್ದ, ಸಾಯಲೂ ಸಿದ್ದ ಅನ್ನುವಂತಿದ್ದಾರೆ. ನಿನ್ನೆ ಹೈದರಾಬಾದ್​ನಲ್ಲೂ ಪಾಗಲ್ ಪ್ರೇಮಿಯೊಬ್ಬ ಯುವತಿ ಪ್ರೀತಿ ನಿರಾಕರಿಸಿದಕ್ಕೆ ಆಕೆಯನ್ನು ಸುಟ್ಟು ಚಿಕಿತ್ಸೆ ಫಲಿಸದೇ ಆತನೂ ಸತ್ತ ಘಟನೆ ನಡೆದಿತ್ತು. ಅದೇ ಮಾದರಿಯಲ್ಲಿ ಇಲ್ಲೊಬ್ಬ ಪ್ರೇಮಿ ತಾನು ಪ್ರೀತಿಸಿದ ನವವಿವಾಹಿತೆಯನ್ನು ಪಾಳು ಬಿದ್ದ ಬಾವಿಗೆ …

Read More »

ಇಂದು ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿರೀಕ್ಷೆಯಂತೆ ಮಾಜಿ ಶಾಸಕ ಮುನಿರತ್ನ ನಾಯ್ಡುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇನ್ನು ಶಿರಾದಿಂದ ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ಡಾ.ರಾಜೇಶ್ ಗೌಡಗೂ ಟಿಕೆಟ್ ನೀಡಲಾಗಿದೆ.  ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿ ಫಾರಂ ನೀಡಲಿದ್ದಾರೆ. ಇಂದು ಸುಪ್ರೀಂಕೋಟ್9 ನಲ್ಲಿ …

Read More »

ವರ್ಷಗಳ ಬಳಿಕ ತುಂಬಿದ ಕೆರೆ- ರೈತರ ಮೊಗದಲ್ಲಿ ಮಂದಹಾಸ

ಚಿಕ್ಕಮಗಳೂರು: ಕಳೆದ 15 ವರ್ಷಗಳಿಂದ ನೀರೇ ಇಲ್ಲದ ಮಕ್ಕಳ ಆಟದ ಮೈದಾನವಾಗಿದ್ದ ಬೃಹತ್ ಕೆರೆಗೆ ನೀರು ಹರಿದು ಬರುತ್ತಿದ್ದು ಚಿಕ್ಕಮಗಳೂರು ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ತಾಲೂಕಿಣ ಬೆಳವಾಡಿಯ ಬೃಹತ್ ಕೆರೆಗೆ ನೀರು ಬಂದಿದ್ದು, ರೈತರಿಗೆ ಮರುಳುಗಾಡಲ್ಲಿ ಓಯಾಸಿಸ್ ಸಿಕ್ಕಂತಾಗಿದ್ದು, ಸ್ಥಳೀಯರ ಪಾಲಿಗೆ ಈ ಕೆರೆ ಪ್ರವಾಸಿ ತಾಣವಾಗಿದೆ. ತಾಲೂಕಿನ ಬೆಳವಾಡಿ, ಕಳಸಾಪುರ ಸೇರಿದಂತೆ ಈ ಭಾಗದ ಹತ್ತಾರು ಹಳ್ಳಿಗಳು …

Read More »

14 ತಿಂಗಳ ಬಳಿಕ ಮೆಹಬೂಬಾ ಮುಫ್ತಿ ಬಿಡುಗಡೆ,ಕೇಂದ್ರದ ನಿರ್ಧಾರ ಕ್ರೂರ ಎಂದು ಕಿಡಿ

ಶ್ರೀನಗರ: ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ, ಮಾಜಿ ಸಿಎಂ ಮೆಹಬೂಬಾ ಮುಫ್ತಿಯರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 5ರಂದು 370ನೇ ವಿಧಿ ರದ್ದುಪಡಿಸಿದ ಬಳಿಕ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮೆಹಬೂಬಾ ಮುಫ್ತಿ ಕಿಡಿ ಕಾರಿದ್ದಾರೆ. ಪೂರ್ತಿ ಕಪ್ಪು ಬಣ್ಣದ ವಿಡಿಯೋವನ್ನು ಹಂಚಿಕೊಂಡಿರುವ ಅವರು, ಆಡಿಯೋ ಮೆಸೇಜ್ ಮೂಲಕ ಕಿಡಿಕಾರಿದ್ದಾರೆ. ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ …

Read More »

ನಿವೃತ್ತ ಐಪಿಎಸ್‌ ಅಧಿಕಾರಿ ಬಿಎನ್ ಎಸ್ ರೆಡ್ಡಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಬಿಎನ್ಎಸ್ ರೆಡ್ಡಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಇಂದಿರಾನಗರ ಕ್ಲಬ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕ್ಲಬ್‌ ಸದಸ್ಯ ರಾಮ್ ಮೋಹನ್ ಕೋರ್ಟ್‌ಗೆ ದೂರು ನೀಡಿದ್ದರು.ಕೋರ್ಟ್‌ ನಿರ್ದೇಶನದಂತೆ ಈಗ ಬಿಎನ್‌ಎಸ್‌ ರೆಡ್ಡಿ ಮತ್ತು ನಾಗೇಂದ್ರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 120 ,418, 465, 471, 420,468, 417ರ ಅಡಿ ಪ್ರಕರಣ ದಾಖಲಾಗಿದೆ.ದೂರಿನಲ್ಲಿ …

Read More »

ರಾಜ್ಯದ ನಗರಗಳ ಹವಾಮಾನ ವರದಿ: 14-10-2020

ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಇನ್ನುಳಿದಂತೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. …

Read More »

ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ

  ಅಥಣಿ :ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ  ಶಂಕರಟ್ಟಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು. ಈ ವೇಳೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು   ಈ  ಸಂದರ್ಭದಲ್ಲಿ ಬಸವರಾಜ ಖೇಮಲಾಪುರ ವಿಪತ್ತು ನಿರ್ವಾಹಕ ಘಟಕದ ಸಂಯೋಜಕರು ದರೂರ ಹಾಗೂ  ವಲಯ ಮೇಲ್ವಿಚಾರಕರು , ಸೇವಾಪ್ರತಿನಿಧಿಗಳು ಮತ್ತು ವೈದ್ದ್ಯಾದಿಕಾರಿಗಳು ಮತ್ತು ನರ್ಸ್ ಸ್ವಯಂ ಸೇವಕರು ಜಕ್ಕಪ್ಪ ತೀರ್ಥ, ವಿಠ್ಠಲ್ ಕುಂಬಾರ್, …

Read More »