ಚಿಕ್ಕೋಡಿ: ಬೆಳೆಗಳೆಲ್ಲವೂ ಭರಪೂರ ಬಂದಿದ್ದು, ಇನ್ನೇನು ಕಟಾವು ಮಾಡಬೇಕೆಂದು ಕೆಲ ರೈತರು ಯೋಚಿಸಿದರೆ, ಕೆಲ ರೈತರು ಫಸಲಿಗೆ ಬಂದ ಬೆಳೆಗಳನ್ನು ಕಟಾವು ಮಾಡಿ ರಾಶಿ ಮಾಡಲು ಮುಂದಾದ ಸಂದರ್ಭದಲ್ಲೇ ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಗಾಳಿಯೂ ಸಹಿತ ಜೋರಾಗಿ ಬೀಸುತ್ತಿರುವ ಪರಿಣಾಮ ಗೋವಿನ ಜೋಳ ಹಾಗೂ ಕಬ್ಬಿನ ಬೆಳೆ ನೆಲಸಮವಾಗಿವೆ. ಈ ಬಾರಿ ಮಳೆ …
Read More »ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತೆಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಆಗ್ರಹ
ಧಾರವಾಡ: ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತೆ ಬಾಗಲಕೋಟೆಯ ಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಗಡಿ ತಾಲೂಕಿನ ಅತ್ಯಾಚಾರ ಪ್ರಕರಣ ನಡೆದ ವಿಚಾರವಾಗಿ ಧಾರವಾಡದಲ್ಲಿ ಮಾತನಾಡುವ ವೇಳೆ ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿದ ಅವರು, ಪೊಲೀಸರು ಬಂಧಿಸೋದು, ಜಾಮೀನು ಕೊಡವುದು ಆಗಬಾರದು. ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವ ಕಾನೂನು ಬರಬೇಕು ಎಂದರು ಈ ರೀತಿ ಮಾಡಿದರೆ ಮಾತ್ರ ಭಾರತದಲ್ಲಿ ಅತ್ಯಾಚಾರ ಕಡಿಮೆ ಆಗುತ್ತವೆ ಎಂದ ಅವರು, ಹೆಣ್ಣು …
Read More »ರಾಗಿಣಿಗೆ ಬೆನ್ನು ನೋವು- ಜೈಲಿನ ಆಸ್ಪತ್ರೆಯಲ್ಲಿ ರಾತ್ರಿ ಪೂರ್ತಿ ಚಿಕಿತ್ಸೆ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ …
Read More »500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿ ವೆಡ್ಡಿಂಗ್ ಡೇ ಆಚರಿಸಿಕೊಂಡ ದಂಪತಿ
ಭುವನೇಶ್ವರ್: ಸಾಮಾನ್ಯವಾಗಿ ವಿವಾಹ ಮಹೋತ್ಸವವನ್ನು ತಮ್ಮ ಹತ್ತಿರದ ಸಂಬಂಧಿಗಳಿಗೆ ಪಾರ್ಟಿಗಳನ್ನು ಆಯೋಜಿಸುವ ಮೂಲಕ ಸೆಲೆಬ್ರೆಟ್ ಮಾಡುತ್ತಾರೆ. ಆದರೆ ಇಲ್ಲೊಬ್ಬ ದಂಪತಿ ಮಾತ್ರ ವಿವಾಹವಾದ ದಿನವನ್ನು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡುವ ಮೂಲಕ ಅತ್ಯಂತ ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಹೌದು. ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಇಂತಹ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೆಪ್ಟೆಂಬರ್ 25ರಂದು ದಂಪತಿ ಭುವನೇಶ್ವರದಲ್ಲಿ ವಿವಾಹವಾಗಿದ್ದಾರೆ. ಇದೇ …
Read More »ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‍ಡಿಕೆ, ಆರ್ ಆರ್ ನಗರ ಚುನಾವಣೆ ಮೂಲಕ ಜೆಡಿಎಸ್ ಪಕ್ಷದ ಸಮಾಧಿ ಅಂತ ನಮ್ಮ ಪಕ್ಷದ ಮುಖಂಡರ ಮನೆಯಲ್ಲಿ ಡಿಕೆಶಿ ಹೇಳಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಸಮಾಧಿ ಮಾಡಿದ್ದಾಗಿದೆ. ಈಗ ಡಿಕೆಶಿ ಯವರು ಅವರಿಗೆ ಕೈ ಜೋಡಿಸ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಆರ್ ಆರ್ ನಗರದಲ್ಲಿ ನನ್ನ …
Read More »ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ
ಮುಂಬೈ: ಡ್ರಗ್ಸ್ ಪ್ರಕರಣ ಸಂಬಂಧ ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಡಲ್ ವುಡೇ ಡ್ರಗ್ಸ್ ಪ್ರಕರಣದಲ್ಲಿ ಎ-6 ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಹುಡುಕಾಟ ನಡೆಸಿದ್ದರೆ. ಆದಿತ್ಯ ಆಳ್ವಾ, ನಟ ವಿವೇಕ ಅವರ ಸಂಬಂಧಿಯಾಗಿದ್ದು, ಅವರ ಮನೆಯಲ್ಲಿ ಇರುವ ಶಂಕೆ ವ್ಯಕ್ತವಾದ ಹಿನ್ನೆಲೆ ದಾಳಿ ನಡೆಸಿದ್ದಾರೆ. ಇದೇ ಕಾರಣದಿಂದ ಬೆಂಗಳೂರಿನ ಸಿಸಿಬಿ ಪೊಲೀಸರು ಸರ್ಚ್ …
Read More »ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆನಾಸೀರ್ ಬಾಗವಾನ್ ಪೆನಲ್ ಭರ್ಜರಿ ಜಯಗಳಿಸಿದೆ.
ಬೆಳಗಾವಿ: ಎಂ.ಕೆ.ಹುಬ್ಬಳ್ಳಿ ಗ್ರಾಮದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಾಸೀರ್ ಬಾಗವಾನ್ ಪೆನಲ್ ಭರ್ಜರಿ ಜಯಗಳಿಸಿದೆ. ನಿನ್ನೆ ಸಂಜೆ 7 ಗಂಟೆಗೆ ಮತ ಎಣಿಕೆ ಆರಂಭವಾಗಿ, ಮದ್ಯರಾತ್ರಿ 2 ಗಂಟೆಗೆ ಮುಕ್ತಾಯವಾಯಿತು. ನಾಸೀರ ಬಾಗವಾನ್ ಗುಂಪಿನ ಎಲ್ಲಾ ಅಭ್ಯರ್ಥಿಗಳು ಗೆಲವು ಸಾಧಿಸಿದ್ದು, ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಅವರ ಪುತ್ರ ಪ್ರಕಾಶಗೌಡ ಪಾಟೀಲ ಅವರ ತಂಡ ಸೋಲು ಅನುಭವಿಸಿದೆ. ಆರಂಭದಲ್ಲಿ ನಾಸೀರ್ ಬಾಗವಾನ್ ಬೆಂಬಲಿತ …
Read More »ಅಮರನಾಥ್ ಜಾರಕಿಹೊಳಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ: ರಮೇಶ್ ಜಾರಕಿಹೊಳಿ
ಬೆಳಗಾವಿ: ಪಕ್ಷದ ನಾಯಕರು, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಿದ್ದೇವೆ. ಸಂತೋಷ ಜಾರಕಿಹೊಳಿ ಅವರಿಗೆ ರಾಜಕಾರಣ ಸಂಬಂಧವಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ಗೋಕಾಕ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತೋಷ ಜಾರಕಿಹೊಳಿಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಅಮರನಾಥ್ ಅವರು ಮಾತ್ರ ರಾಜಕೀಯದಲ್ಲಿ ಇರಲಿದ್ದಾರ. ಈಗಾಗಲೇ ಅಮರನಾಥ್ ಜಾರಕಿಹೊಳಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತೆನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಲೋಕಸಭಾ ಟಿಕೆಟ್ ಅಭ್ಯರ್ಥಿಯ ಬಗ್ಗೆ …
Read More »ಬೇಲ್ ಪಡೆಯಲ್ಲ, ಸ್ಟೇಷನ್‍ಗೆ ಹೋಗಲ್ಲ – ಕುಸುಮಾ ವಿರುದ್ಧದ ಎಫ್ಐಆರ್‌ಗೆ ಡಿಕೆಶಿ ಕಿಡಿ
ಬೆಂಗಳೂರು: ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಈ ಎಫ್ಐಆರ್‌ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್‍ಗೂ ಹೋಗಲ್ಲ. ಇದಕ್ಕೆ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ಪ್ರಜಾಪ್ರಭುತ್ವದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ಪಕ್ಷದ ವಿದ್ಯಾವಂತ ಹೆಣ್ಣುಮಗಳು ಕಾನೂನು ಅರಿವಿರುವ …
Read More »ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ.
ಬೆಂಗಳೂರು: ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ಜಲಾಸುರನ ದಾಳಿಗೆ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ರಾಯಚೂರು ಜಿಲ್ಲೆಗಳು ತತ್ತರಿಸಿದ್ದು, ಗಾಯದ ಮೇಲೆ ಬರೆ ಎಳೆದಂತೆ ಕೊಯ್ನಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಕೊಯ್ನಾದಿಂದ ಅತಿ ಹೆಚ್ಚು ನೀರು ಹೊರ ಬಂದಲ್ಲಿ ಬೆಳಗಾವಿ, ಚಿಕ್ಕೋಡಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. …
Read More »
Laxmi News 24×7