Breaking News

ರಾಜ್ಯ

ವಿಷ್ಣು ಅಭಿಮಾನಿ ಮೃತದೇಹ ಸಾಗಿಸುವುದಕ್ಕೂ ಲಂಚ ಕೇಳಿದ ಆಸ್ಪತ್ರೆಯ ಸಿಬ್ಬಂದಿ’

ದಾವಣಗೆರೆ: ಕೋವಿಡ್ ಹಾಗೂ ನಾನ್ ಕೋವಿಡ್ ವ್ಯಕ್ತಿಗಳು ಆಸ್ಪತ್ರೆಯಲ್ಲಿ ಮೃತರಾದರೆ, ಅವರ ಮೃತದೇಹವನ್ನು ನೀಡಲು ಸಂಬಂಧಿಕರಿಂದ ಹಣದ ಬೇಡಿಕೆ ಇಟ್ಟಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತದೇಹವನ್ನು ನೀಡಲು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ಕೆಲವು ಖಾಸಗಿ ವ್ಯಕ್ತಿಗಳು, ಕುಟುಂಬಸ್ಥರಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಾನ್ ಕೋವಿಡ್ ರೋಗಿಗಳು ಆಸ್ಪತ್ರೆಯಲ್ಲಿ ಮೃತರಾದರೆ ಅಥವಾ ಮನೆಯಲ್ಲಿ ಮೃತರಾದರೆ ಅವರ ಮೃತದೇಹವನ್ನು ಮನೆಯಿಂದ ಆಸ್ಪತ್ರೆಯ ಶವಾಗಾರಕ್ಕೆ ಹಾಗೂ ಶವಗಾರದಿಂದ …

Read More »

ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌

ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌ ಜಾರಿಯಾಗಿದೆ. ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ‌ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ …

Read More »

ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ: ಡಿಕೆ ಬ್ರದರ್ಸ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇರ ಆರೋಪ ಮಾಡಿದ್ದಾರೆ. ಅಲ್ಲದೆ 14 ಕಡೆ 140 ಜನರಿಗೆ ತೊಂದರೆ ಕೊಡಲಾಗ್ತಿದೆ. ನಾವು ಯಾವುದಕ್ಕೂ ಜಗ್ಗಲ್ಲ ಅಂತ ಡಿಕೆ ಬ್ರದರ್ಸ್ ಗುಡುಗಿದ್ದಾರೆ. ಸಿಬಿಐ ದಾಳಿ ಬಗ್ಗೆ ಡಿಕೆ ಬ್ರದರ್ಸ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಸಿಬಿಐಗೆ ಅನುಮತಿ ಕೊಡೋದು ಬೇಡ. ಇದರ ಬಗ್ಗೆ ಐಟಿ, ಸಿಐಡಿ ತನಿಖೆ ನಡೆಸಬಹುದು ಅಂತ …

Read More »

ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್‌ ಹೆದರುವ ಮಗ ಅಲ್ಲ.ಯಾವುದಕ್ಕೂ ಜಗ್ಗಲ್ಲ: ಡಿಕೆಶಿ

ಬೆಂಗಳೂರು: ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್‌ ಹೆದರುವ ಮಗ ಅಲ್ಲ. ಇದು ಸದ್ಯಕ್ಕೆ ಮುಗಿಯುವುದಿಲ್ಲ. ಚುನಾವಣೆ ನಡೆಯುವವರೆಗೂ ಇರುತ್ತದೆ ಎಂದು ಡಿಕೆಶಿ ಹೇಳಿದ್ದಾರೆ ಸಿಬಿಐ ದಾಳಿ ಬಳಿಕ ನಿವಾಸದಿಂದ ಹೊರಬಂದು ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಇರುವ ಎಲ್ಲ ಮಂತ್ರಿಗಳು ಹರಿಶ್ಚಂದ್ರನ ಮೊಮ್ಮಕ್ಕಳು. ಈಗ ನನಗೆ ರಾಜಕೀಯವಾಗಿ ತೊಂದರೆ ನೀಡುತ್ತಿದ್ದರಲ್ಲ ಅವರೆಲ್ಲ ಚೆನ್ನಾಗಿರಲಿ ಎಂದರು.ನಾನು ನನ್ನ ಸಹೋದರ, ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ನಿಮ್ಮ ಅಭಿಮಾನಕ್ಕೆ ತಲೆ …

Read More »

57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ/ಡಿಕೆಶಿ ಬೆನ್ನಿಗೆ ನಿಲ್ಲದ ಎಚ್ ಡಿಕೆ

ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆಯ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ 57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ ನೀಡಿದೆ. ತಮ್ಮ ಮನೆಯಲ್ಲಿ ಯಾವುದೇ ನಗದು ಸಿಕ್ಕಿಲ್ಲ ಎಂದು ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಹೇಳುತ್ತಿರುವ ಸಂದರ್ಭದಲ್ಲೇ ಸಿಬಿಐ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. 14 ಕಡೆಗಳಲ್ಲಿ ದಾಳಿ ಮಾಡಲಾಗಿದೆ. 74.93 ಕೋಟಿ ರೂ. ಅಕ್ರಮ ಆಸ್ತಿ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಬ ಸಿಬಿಐ ತಿಳಿಸಿದೆ.

Read More »

ಬೆಳಗಾವಿಯಲ್ಲಿ MBV ಸೇರಿ ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬೆಳಗಾವಿ: ಹತ್ರಸ್ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ-ಕೊಲೆ ಪ್ರಕರಣ ಖಂಡಿಸಿ ನಗರದಲ್ಲಿ  ಸೋಮವಾರ ಮಾನವ ಬಂಧುತ್ವ ವೇದಿಕೆ  ಹಾಗೂ ದಲಿತ ಸೇನೆ ಸೇರಿ ವಿವಿಧ  ಸಂಘಟನೆಯ ಪದಾಧಿಕಾರಿಗಳು  ಬೃಹತ್ ಪ್ರತಿಭಟನಾ ರ್ಯಾಲಿ  ನಡೆಸಿದರು. ಇಲ್ಲಿನ  ಡಾ. ಬಿ.ಆರ್.  ಅಂಬೇಡ್ಕರ್  ಉದ್ಯಾನವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ  ಪದಾಧಿಕಾರಿಗಳು ಚನ್ನಮ್ಮ ವೃತ್ತ ಮೂಲಕ  ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

Read More »

ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಇಂದು ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯಗೊಂಡಿದೆ. ವಾಡಿಕೆಯ ಪ್ರಕಾರ ಸಿಬಿಐ,ಇಡಿ ಮುಂತಾದ ತನಿಖಾ ಸಂಸ್ಥೆಗಳು ದಾಳಿ ನಡೆಸಿದ ಬಳಿಕ, ಆರೋಪಿಗಳನ್ನು ತತ್​​ಕ್ಷಣ ಬಂಧಿಸುವುದಿಲ್ಲ. ಅಕಸ್ಮಾತ್ ಆರೋಪಿಗಳು ವಿದೇಶಕ್ಕೆ ಪರಾರಿಯಾಗುವ ಅಥವಾ ಸಾಕ್ಷ್ಯ/ದಾಖಲೆಗಳನ್ನು ನಾಶ ಪಡಿಸುತ್ತಾರೆ ಎಂಬ ಗುಮಾನಿ ಬಂದ್ರೆ ಬಂಧನಕ್ಕೆ ಮುಂದಾಗುತ್ತದೆ. ಪ್ರಸ್ತುತ, ಡಿ.ಕೆ.ಶಿವಕುಮಾರ್ ಮನೆ ಸೇರಿ ಹಲವೆಡೆ ಸಿಬಿಐ ದಾಳಿ ನಡೆಸಿದ …

Read More »

ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗಲ್ಲ – ಸಿಬಿಐ ದಾಳಿಗೆ ಡಿ.ಕೆ ಸುರೇಶ್ ಪ್ರತಿಕ್ರಿಯೆ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು ಎಂದು ಸಿಬಿಐ ದಾಳಿಗೆ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಡಿ.ಕೆ.ಸುರೇಶ್ ಟ್ವೀಟ್ ಮಾಡುವ ಮೂಲಕ ಸಿಬಿಐ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ” …

Read More »

ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ

ಕೊಡಗು: ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯ ಜಿಲ್ಲಾಸ್ಪತ್ರೆ ಎದುರು ನಡೆದಿದೆ. ರಸ್ತೆಗೆ ಅಡ್ಡಲಾಗಿ ನಿಂತಿರುವ ಕಾರನ್ನು ತೆಗೆಯುವಂತೆ ಹೇಳಿದ್ದಕ್ಕೆ ನಿಶಾಂತ್ ಎಂಬ ವ್ಯಕ್ತಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಪ್ರಶ್ನಿಸಿದಕ್ಕೆ ಪೊಲೀಸ್ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಿಶಾಂತ್ ವಿರಾಜಪೇಟೆ ತಹಶೀಲ್ದಾರ್ ಕಾರಿನ ಗುತ್ತಿಗೆ ಆಧಾರದ ಚಾಲಕ. ಕರ್ತವ್ಯ ನಿರತ …

Read More »

ಆರ್.ಆರ್.ನಗರದಲ್ಲಿ ಡಿ.ಕೆ.ರವಿ ಪತ್ನಿ ಕಣಕ್ಕಿಳಿಯುವುದು ಫಿಕ್ಸ್..!

ಬೆಂಗಳೂರು, ಅ.5- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ದಕ್ಷ ಐಎಎಸ್ ಅಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಅವರ ಪತ್ನಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರನ್ನು ಸೋಲಿಸಲು ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹಾಗಾಗಿ ಇಂದು ಕುಸುಮಾ ಅವರು ಕಾಂಗ್ರೆಸ್ ಕಚೇರಿಗೆ ಬಂದು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ.ಕುಸುಮಾ ಅವರ ತಂದೆ ಹನುಮಂತರಾಯಪ್ಪ ಬಹಳ ವರ್ಷ ಕಾಂಗ್ರೆಸ್‍ನಲ್ಲಿದ್ದವರು. ನಗರಸಭೆ ಅಧ್ಯಕ್ಷರಾಗಿ, ನೈಸ್ ಪ್ರಾಕಾರದ …

Read More »