Breaking News

ರಾಜ್ಯ

ಚಿನ್ನದ ನಿಕ್ಷೇಪ ವಿರುವುದು ಖಚಿತವಾದರೆ ಚಿನ್ನದ ಗಣಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ

ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ. ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ …

Read More »

ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯ

ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು. 2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್‌ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ …

Read More »

ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ

ಬೆಂಗಳೂರು: ಕಳೆದ ಆರು ವರ್ಷಗಳಿಂದ ರೈತರ ಮೇಲೆ ಪ್ರಧಾನಿ ಮೋದಿಯವರ ವಕ್ರದೃಷ್ಟಿ ಬಿದ್ದಿರಲಿಲ್ಲ. ಹೀಗಾಗಿ ರೈತರ ಆದಾಯ ಕಡಿಮೆ ಆಗಿರಲಿಲ್ಲ ಎಂದು ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ. ನಗರದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈಗ ಅಂಬಾನಿ ಮತ್ತು ಅದಾನಿ ಮಾತ್ರ ಶ್ರೀಮಂತರಾದ್ರು. ದೇಶ ಹಿಂದೆ ಬಿದ್ರೆ ಅಂಬಾನಿ ಮಾತ್ರ ಪ್ರಪಂಚದಲ್ಲಿಯೇ ಐದನೇ ಶ್ರೀಮಂತರಾದ್ರು. ಬಿಜೆಪಿ ಇದೇ ರೀತಿ ಮುಂದುವರಿಯಲು ಬಿಟ್ರೆ ದೇಶ ಅಧೋಗತಿಗೆ ಹೋಗುತ್ತೆ. ಕೇಂದ್ರ ಮತ್ತು …

Read More »

ಹೆಣ್ಮಕ್ಕಳು ನಮಗೆ ಉತ್ತಮ ಸ್ನೇಹಿತರು – ಐರಾಗೆ ರಾಧಿಕಾ ವಿಶ್

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಾಧಿಕಾ ತಮ್ಮ ಮಗಳೊಂದಿಗಿನ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಐರಾ ಮತ್ತು ತಮ್ಮ ಸಹೋದರನ ಮಗಳಿಗೆ ಶುಭಾಶಯ ಕೋರಿದ್ದಾರೆ. ಭಾನುವಾರ ಮಗಳ ದಿನಾಚರಣೆ ಇತ್ತು. ಹೀಗಾಗಿ ಅನೇಕ ನಟ-ನಟಿಯರು ತಮ್ಮ ಮಗಳಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಅದೇ ರೀತಿ ನಟಿ ರಾಧಿಕಾ ಪಂಡಿತ್ ಕೂಡ ತಮ್ಮ …

Read More »

ಅಧಿವೇಶನಕ್ಕೆ ಬಂದ ಶಾಸಕರಿಗೆ ಕೊರೋನಾ ಭಯ, ಈಗಾಗಲೇ ಹಲವರಿಗೆ ಪಾಸಿಟಿವ್..!

ಬೆಂಗಳೂರು, ಸೆ.28- ವಿಧಾನಸಭೆ ಅವೇಶನ ಮುಗಿದ ಬಳಿಕ ಹಲವಾರು ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಸೋಂಕಿನ ಭೀತಿ ಎದುರಿಸುತ್ತಿದ್ದಾರೆ. ಈವರೆಗೆ ಶಾಸಕರಾದ ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಸೇರಿದಂತೆ ಹಲವಾರು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಪರೀಕ್ಷೆಗೆ ಒಳಗಾದ ಬಹಳಷ್ಟು ಮಂದಿ ತಮಗೆ ಸೋಂಕಿರುವ ಬಗ್ಗ ಹೇಳಿಕೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶನಿವಾರ ಮಧ್ಯ ರಾತ್ರಿ 11 ಗಂಟೆವೆರೆಗೂ ವಿಧಾನಮಂಡಲ ಮತ್ತು ವಿಧಾನಸಭೆ ಅವೇಶನ ನಡೆದಿತ್ತು. ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಭಾಗವಹಿಸಿದ್ದರು, …

Read More »

ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ಅವರ ರೈತ ವಿರೋಧಿ ಮನೋಭಾವ ಹೊರಬಂದಿದೆ

ಬೆಂಗಳೂರು: ಸರ್ಕಾರದ ಕೃಷಿ ಮಸೂದೆಗಳು ರೈತ ವಿರೋಧಿಯಾಗಿವೆ. ಭೂ ಸುಧಾರಣೆ ಮತ್ತು ಎಪಿಎಂಎಸಿ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರಲಿಲ್ಲ. ಇವನ್ನ ಜಾರಿಗೆ ತರುವ ಯಾವ ನೈತಿಕತೆಯೂ ಅದಕ್ಕೆ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣ ಆಗುತ್ತದೆ ಎಂಬ ಭರವಸೆ ಸರ್ಕಾರಕ್ಕೆ ಇದ್ದರೆ ಮೊದಲು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಕೃಷಿ …

Read More »

ಆರು ತಿಂಗಳಲ್ಲಿ ರೈತರಿಗೆ ಯಾವ ರೀತಿ ಒಳ್ಳೆಯದು ಆಗುತ್ತದೆ ಎಂಬುದನ್ನು ನೋಡಿ:B.S.Y.

ಬೆಂಗಳೂರು: ಆರು ತಿಂಗಳಲ್ಲಿ ರೈತರಿಗೆ ಯಾವ ರೀತಿ ಒಳ್ಳೆಯದು ಆಗುತ್ತದೆ ಎಂಬುದನ್ನು ನೋಡಿ ಎಂದು ಸಿಎಂ ಯಡಿಯೂರಪ್ಪ ಮಸೂಧೆ ವಿರೋಧಿಸಿ ಪ್ರತಿಭಟನೆ ನಡೆಸಿದವರಿಗೆ ಸವಾಲು ಎಸೆದಿದ್ದಾರೆ. ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೊಂದು ಐತಿಹಾಸಿಕ ನಿರ್ಣಯವಾಗಿದ್ದು. ಎಪಿಎಂಸಿಯ ಬಾಗಿಲು ಮುಚ್ಚಿಲ್ಲ. ರೈತರು ಈಗ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. 6 ತಿಂಗಳ ಕಾದು ನೋಡಿ. ರೈತರಿಗೆ …

Read More »

ಮೋದಿ, ಬಿಎಸ್‍ವೈ ಸರ್ಕಾರ ರೈತರ ಪರ ಕೆಲಸ ಮಾಡ್ತಿದೆ: ಕಟೀಲ್

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಮನೆಗೆ ನಳಿನ್ ಕುಮಾರ್ ಕಟೀಲ್ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಳೀನ್‍ಗೆ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕಟೀಲ್, ಅಶೋಕ್ ಗಸ್ತಿ …

Read More »

ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದುಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ರೈತ

ಬೆಳಗಾವಿ : ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ  ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದು ರೈತ ಮುಖಂಡನೊಬ್ಬ ಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ಘಟನೆ ನಡೆದಿದೆ. ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಂದ್ ಗೆ ಕರೆ ನೀಡಿದ್ದೆವೆ. ಇಂತಹ ಸಂದರ್ಭದಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ನಡೆಸಿ, ಬಂದ್ ಗೆ ವಿರೋಧ ವ್ಯಕ್ತ ಪಡಿಸಿಬೇಡಿ, ಸಾರ್. ಬಸ್ ಸಂಚಾರ ನಿಲ್ಲಿಸಿ ಎಂದು ರೈತ ಮುಖಂಡ …

Read More »

ಪೇಟ ತೊಟ್ಟು ಕತ್ತೆ ಮೇಲೆ ಬಂದ ವಾಟಾಳ್

ಬೆಂಗಳೂರು: ರೈತ ವಿರೋಧಿ ಮಸೂದೆಗಳ ವಿರುದ್ಧ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಪ್ರತಿಭಟನೆ ಮಾಡಲಾಗಿದೆ. ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಮೆಜೆಸ್ಟಿಕ್ ಮುಂಭಾಗ ಪೇಟ ತೊಟ್ಟು ಕತ್ತೆಯ ಮೇಲೆ ಮೆರವಣಿಗೆ ಬರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ ವಾಟಾಳ್ ಮಂಗಳವಾದ್ಯಗಳ ದೊಡ್ಡ ತಂಡದೊಂದಿಗೆ ಆಗಮಿಸಿದ್ದರು. ಇವರ ಜೊತೆಗೆ ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು. ಮಂಗಳವಾದ್ಯಗಳ ಮಧ್ಯೆ …

Read More »