Breaking News

ರಾಜ್ಯ

ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …

Read More »

ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು ಚದುರಂಗದಾಟ

ಮುಳಬಾಗಿಲು: ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು, ದರವೂ 15 ಕೆಜಿ ಬಾಕ್ಸ್‌ಗೆ ₹ 400 ರಿಂದ ₹ 450ಕ್ಕೆ ಏರಿಕೆಯಾಗಿದೆ. ತಾಲ್ಲೂಕಿನ ಕಸಬಾ ಹೋಬಳಿ ಎನ್. ವಡ್ಡಹಳ್ಳಿ ಗ್ರಾಮದ ಆರ್‌ಸಿ ಉಪ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಶುಕ್ರವಾರ 15 ಕೆಜಿ ಬಾಕ್ಸ್‌ಗೆ ₹ 400 ರಿಂದ ₹ 450ಕ್ಕೆ ಏರಿಕೆಯಾಗಿದೆ. ಬುಧವಾರ, ಗುರುವಾರ ₹ 300 ರಿಂದ ₹ 400ಕ್ಕೆ ಮಾರಾಟವಾಗಿತ್ತು. ಕಳೆದ ವಾರ ₹ 850ಕ್ಕೆ ಮಾರಾಟವಾಗಿತ್ತು. ಶುಕ್ರವಾರ ಮಾರುಕಟ್ಟೆಗೆ 50 …

Read More »

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಅನ್ನದಾತರು

ಬೆಂಗಳೂರು, – ಅನ್ನದಾತರ ಆಕ್ರೋಶ ಬುಗಿಲೆದ್ದಿದೆ. ಎಪಿಎಂಸಿ, ಭೂ ಸುಧಾರಣೆ ಸೇರಿದಂತೆ ಹಲವು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು, ಕಾರ್ಮಿಕರು, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಕಾರ್ಯಕತರು ಇಂದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಕೃಷಿ ಕಾಯ್ದೆ ತಿದ್ದುಪಡಿಗಳು ಮಾಲೀಕರು ಮತ್ತು ಬಂಡವಾಳ ಶಾಹಿಗಳ ಪರವಾಗಿವೆ. ರೈತರ ಪಾಲಿಗೆ ಕಂಟಕವಾಗಿದೆ ಎಂದು ರೈತ ಸಂಘಟನೆಗಳು ವಿವಿಧ …

Read More »

ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡ್ತೀನಿ ಅಂದಿದ್ರು ಗಾನ ಗಂಧರ್ವ

ದಕ್ಷಿಣ ಭಾರತದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಅಂದರೆ ಅದೇನೋ ಪ್ರೀತಿ. ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಅನೇಕ ಬಾರಿ ಹೇಳಿದ್ದರು. ಒಂದು ದಶಕಗಳ ಕಾಲ ಎದೆತುಂಬಿ ಹಾಡುವೆನು ಕಾರ್ಯಕ್ರಮವನ್ನು ನಡೆಸಿಕೊಂಡವುದರ ಜೊತೆಗೆ ಬೇರೆ ಭಾಷೆಗಳಲ್ಲಿ ಕೂಡ ಸಂಗೀತದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಜೊತೆಗೆ ತಾವೇ ತೀರ್ಪುಗಾರರಾಗಿ ಹತ್ತು ಹಲವು ಸಂಗೀತದ ಶೋಗಳಲ್ಲಿ ಕುಳಿತಿದ್ದರು. ಈ ವೇಳೆ ಪುಟಾಣಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಂಗೀತದ ಸರಿ-ತಪ್ಪುಗಳನ್ನು …

Read More »

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ.

ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ …

Read More »

ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ.: ರಮೇಶ್ ಜಾರಕಿಹೊಳಿ

ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ  ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ …

Read More »

3 ವರ್ಷ ಡೇಟಿಂಗ್, ಮದ್ವೆಯಾಗಿ 2 ವಾರ – ವಿಚ್ಛೇದನಕ್ಕೆ ಮುಂದಾದ ಪೂನಂ ಪಾಂಡೆ

ನವದೆಹಲಿ: ಮದುವೆಯಾದ ಎರಡು ವಾರದಲ್ಲೇ ಪತಿ ವಿರುದ್ಧ ದೂರು ನೀಡಿದ್ದ ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಇದೀಗ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಪತಿ ಸ್ಯಾಮ್ ಬಾಂಬೆ ತನಗೆ ಕಿರುಕುಳ ನೀಡಿ ಬೆದರಿಕೆ ಹಾಕುತ್ತಾನೆ ಎಂದು ಹೇಳಿ ನಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಹೀಗಾಗಿ ಗೋವಾ ಪೊಲೀಸರು ಸ್ಯಾಮ್ ನನ್ನು ಬಂಧಿಸಿದ್ದರು. ಸ್ಯಾಮ್ ಹಾಗೂ ಪೂನಂ ಸೆಪ್ಟೆಂಬರ್ 10ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇದಕ್ಕೂ ಮೊದಲು ಇವರಿಬ್ಬರು ಮೂರು ವರ್ಷಗಳ …

Read More »

ಲಾಕ್‍ಡೌನ್ ವೇಳೆ ಅನುಷ್ಕಾ ಜೊತೆ ಪ್ರಾಕ್ಟೀಸ್- ಕ್ಯಾಚ್ ಡ್ರಾಪ್ ಕುರಿತು ಗವಾಸ್ಕರ್ ಕಾಮೆಂಟ್

ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಎರಡು ಕ್ಯಾಚ್ ಕೈಚೆಲ್ಲಿದ್ದರು. ಈ ಕುರಿತಂತೆ ವಿಶ್ಲೇಷಣೆ ನೀಡಿದ್ದ ಗವಾಸ್ಕರ್ ಅವರ ಕಾಮೆಂಟ್‍ಗಳು ಸದ್ಯ ವಿವಾದಕ್ಕೆ ಕಾರಣವಾಗಿದೆ. ಗವಾಸ್ಕರ್ ಕಾಮೆಂಟ್ ವಿರುದ್ಧ ಸಾಮಾಜಿಕ ಜಾಲತಾಣಲದಲ್ಲಿ ಆಕ್ರೋಶ ಹೊರ ಹಾಕಿರುವ ಕ್ರಿಕೆಟ್ ಅಭಿಮಾನಿಗಳು ಸುನಿಲ್ ಗವಾಸ್ಕರ್ ಅವರ ವಿರುದ್ಧ ಕಿರಿಕಾರಿದ್ದಾರೆ. ಅಲ್ಲದೇ ಕಾಮೆಂಟರಿ ಬಾಕ್ಸ್ ನಿಂದ ಅವರನ್ನು ಮನೆಗೆ ವಾಪಸ್ ಕಳುಹಿಸಲು ಆಗ್ರಹಿಸಿದ್ದಾರೆ. ಸೆ.24 ರಂದು ದುಬೈನಲ್ಲಿ …

Read More »

ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿ ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ

ಹಾಸನ: ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆಯೊಬ್ಬಳು ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಎಸ್‍ಪಿ ಕಚೇರಿ ಸಮೀಪ ನನಗೆ ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾರೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆಎಸ್‍ಆರ್ ಟಿಸಿ ಬಸ್ ಡ್ರೈವರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ ಮುಂದೆ ಹೋಗದಂತೆ ಅಡ್ಡ …

Read More »

ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ. ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು. ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ …

Read More »