ಹೊಸದಿಲ್ಲಿ: ಲಸಿಕೆ ಸಂಶೋಧನೆಗಳು ಬಹುತೇಕ ಮುಕ್ತಾಯ ಹಂತಕ್ಕೆ ಬಂದು ತಲುಪಿವೆ. ಈ ಲಸಿಕೆಗಳು ಲಭ್ಯವಾದ ಬಳಿಕ ಕೇಂದ್ರದ ಮೂಲಕವೇ ಸಂಗ್ರಹ ಕಾರ್ಯ, ಎಲ್ಲ ರಾಜ್ಯಗಳಿಗೆ ಪೂರೈಕೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ನೀತಿ ಆಯೋಗದ ಕಾಯಂ ಸದಸ್ಯ, ಆರೋಗ್ಯ ಸಚಿವಾಲಯದ ಕಾರ್ಯದರ್ಶಿಯೂ ಆಗಿರುವ ಡಾ| ವಿ.ಕೆ. ಪಾಲ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ಜರುಗಿತು. ಲಸಿಕೆ ವಿತರಣೆಯಲ್ಲಿ ಗೊಂದಲಕ್ಕೆ ಅವಕಾಶ ನೀಡದೆ, ಲಸಿಕೆ ಸಂಗ್ರಹಕ್ಕೆ ಪ್ರತ್ಯೇಕ ಮಾರ್ಗ ಕಂಡುಕೊಳ್ಳದಂತೆ ಎಲ್ಲ …
Read More »ಖಾಸಗಿ ರೈಲುಗಳಿಗೆ ಇರಲಿದೆ ಕೇಂದ್ರದ ನಿಗಾ; ನಿಯಮಗಳ ಪ್ರಕಟ; ಸಮಯ ಪಾಲನೆಗೆ ಇರಲಿದೆ ಬಿಗಿ ಕ್ರಮ
ಹೊಸದಿಲ್ಲಿ: ಖಾಸಗಿ ಕಂಪೆನಿಗಳ ಪಾಲುದಾರಿಕೆಯಲ್ಲಿ ಆರಂಭವಾಗಲಿರುವ ರೈಲು ಸೇವೆಗಳಿಗೆ ಮತ್ತಷ್ಟು ಕಟ್ಟುನಿಟ್ಟಿನ ನಿಯಮಗಳನ್ನು ಹೇರಲು ರೈಲ್ವೆ ಇಲಾಖೆ ಮುಂದಾಗಿದೆ. ಸಮಯ ಪರಿಪಾಲನೆ ಮಾಡದ ರೈಲುಗಳ ಮೇಲೆ ದಂಡ ವಿಧಿಸುವ, ಸುಳ್ಳು ಆದಾಯ ತೋರಿಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂಥ ನಿಯಮಗಳನ್ನು ಪ್ರಕಟಿಸಲಾಗಿದೆ. ತಡವಾದರೆ, ಬೇಗ ಬಂದರೆ ದಂಡ: ಖಾಸಗಿ ರೈಲೊಂದು ನಿಲ್ದಾಣದಿಂದ ತಡವಾಗಿ ಹೊರಟರೆ ಅಥವಾ ನಿಗದಿತ ನಿಲ್ದಾಣವನ್ನು ತಡವಾಗಿ ತಲುಪಿದರೆ ಆ ರೈಲನ್ನು ನಿರ್ವಹಿಸುವ ಖಾಸಗಿ ಕಂಪೆನಿಯ ಮೇಲೆ ದಂಡ …
Read More »ದೇವರ ನಾಡಿನಲ್ಲಿ ಅಲೆಪ್ಪಿಯೇ ಸ್ವರ್ಗ.!
ಅಲೆಪ್ಪಿಗೆ ಒಮ್ಮೆ ಭೇಟಿ ನೀಡಿದವರು ಅಲ್ಲಿನ ಸಹಜ ಸೌಂದರ್ಯವನ್ನು ಮರೆಯಲು ಸಾಧ್ಯವೇ ಇಲ್ಲ. ಒಂದು ಕಡೆ ಕಡಲು, ಮತ್ತೊಂದೆಡೆ ಕಡಲಿನಾಳದ ಹವಳಗಳು ತೇಲಿ ಬಂದು ಸೃಷ್ಟಿಸಿದ ಹವಳದ ದಂಡೆಗಳು, ಪಾಮ್ ಮರದ ದಟ್ಟ ಕಾಡು, ಹಿನ್ನೀರು..ಈ ಎಲ್ಲ ಸೊಬಗನ್ನು ಒಂದೆಡೆ ಸೇರಿಸಬೇಕಾದರೆ ನೀವು ಕೇರಳದ ಅಲೆಪ್ಪಿಗೆ ಭೇಟಿ ನೀಡಲೇ ಬೇಕು. ಇಲ್ಲಿನ ದೋಣಿ ವಿಹಾರ ಅವಿಸ್ಮರಣೀಯ. ಹಿನ್ನೀರಿನ ಪ್ರವಾಸ, ದೋಣಿ ಮನೆಯಲ್ಲಿ ತಂಗುವಿಕೆ, ಪ್ರಶಾಂತ ವಾತಾವರಣ ಎಂಥವರನ್ನೂ ಸೆಳೆಯುವಂತಿದೆ. ದೋಣಿ …
Read More »ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ
ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಮೂರು ಸಲ ಪ್ರಧಾನಿಯಾಗಿ ಆರು ವರ್ಷ 78 ದಿನ ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ. ಮೋದಿ ಆರು ವರ್ಷ 79 ದಿನ ಆಡಳಿತ ನಡೆಸಿದ್ದು ವಾಜಪೇಯಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. 2014ರ ಮೇ 26 ರಂದು ಭಾರತದ 14 ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು 2019ರ ಮೇ …
Read More »ಸುಪ್ರೀಂ ತೀರ್ಪು ಸಮಾನತೆಯ ಹಾದಿಯಲ್ಲಿ
ಸಮಾನತೆಯ ಹಾದಿಯಲ್ಲಿ ದೇಶವು ಸಾಗಬೇಕಾದ ದಾರಿ ಇನ್ನೂ ಇದೆಯಾದರೂ ಈ ನಿಟ್ಟಿನಲ್ಲಿ ಒಂದು ರಾಷ್ಟ್ರವಾಗಿ, ಸಮಾಜವಾಗಿ ನಾವು ಕೆಲವು ವರ್ಷಗಳಿಂದ ಗಮನಾರ್ಹ ಹೆಜ್ಜೆಗಳನ್ನು ಇಡುತ್ತಾ ಸಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ ಈಗ ಸುಪ್ರೀಂ ಕೋರ್ಟ್ ನೀಡಿರುವ ಆದೇಶವೊ ಒಂದೆನ್ನಬಹುದು. ಹಿಂದೂ ಅವಿಭಜಿತ ಕುಟುಂಬದಲ್ಲಿ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಗಳಿಗೆ ತಂದೆಯ ಪಿತ್ರಾರ್ಜಿತ ಆಸ್ತಿಯ ಮೇಲೆ ಸಮಾನ ಹಕ್ಕಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದಷ್ಟೇ ಅಲ್ಲದೇ …
Read More »ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್‌ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ …
Read More »ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢ
ಹೊಸದಿಲ್ಲಿ: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಾಗಿರುವ ಮಹಂತ್ ನೃತ್ಯ ಗೋಪಾಲ್ ದಾಲ್ ಅವರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿ ತಿಳಿಸಿವೆ. ಕೋಟ್ಯಾಂತ ಭಾರತೀಯರ ಕನಸ್ಸಾಗಿದ್ದ ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ನೆರವೇರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐವರು ಪ್ರಮುಖ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. …
Read More »ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಕೊರೊನಾ ಟೆಸ್ಟ್‍ಗೆ ಒಳಾಗಿದ್ದಾರೆ.
ಮುಂಬೈ: ಕ್ರಿಕೆಟ್‍ನಿಂದ ಸಲ್ಪ ಸಮಯ ದೂರ ಉಳಿದಿದ್ದ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಕೊರೊನಾ ಟೆಸ್ಟ್‍ಗೆ ಒಳಾಗಿದ್ದಾರೆ. ಕೊರೊನಾ ವೈರಸ್ ಕಾರಣದಿಂದ ಮುಂದಕ್ಕೆ ಹೋಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿಯನ್ನು ಸೆಪ್ಟೆಂಬರ್ 19ರಿಂದ ಪ್ರಾರಂಭ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತೀರ್ಮಾನ ಮಾಡಿದೆ. ಭಾರತದಲ್ಲಿ ಸೋಂಕು ಹಿಡಿತಕ್ಕೆ ಬಾರದ ಕಾರಣ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದೆ. ಈ ನಡುವೆ ಫ್ರಾಂಚೈಸಿಗಳು ತಮ್ಮ ತಂಡದ …
Read More »ಮೆಡಿಕಲ್ ಕಾಲೇಜಿನ ಕಟ್ಟಡದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ
ಲಕ್ನೋ: ನರ್ಸಿಂಗ್ ವಿದ್ಯಾರ್ಥಿನ ಮೆಡಿಕಲ್ ಕಾಲೇಜಿನ ಕಟ್ಟಡದ ಮೊದಲ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ. ಬುಧವಾರ ಪೊಲೀಸರು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.ವರುಣ್ ಅರ್ಜುನ್ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಕೋವಿಡ್-19 ರೋಗಿಗಳ ವಿಭಾಗಕ್ಕೆ ನೇಮಿಸಲಾಗಿತ್ತು. ಆದ್ರೆ ನರ್ಸಿಂಗ್ ವಿದ್ಯಾರ್ಥಿನಿಗೆ ಡ್ಯೂಟಿಗೆ ತೆರಳಲು ಸಿದ್ಧವಿರಲಿಲ್ಲ. ಅಧಿಕಾರಿಗಳ ಒತ್ತಡದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ …
Read More »ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಫೇಲವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ…
ಸುರಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಫೇಲಾದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಹುಣಸಗಿ ತಾಲೂಕಿನ ಮಾರಲಬಾವಿ ಗ್ರಾಮದ ಸುಮತಿ ನಿಂಗಣ್ಣ ಕಲ್ಯಾಣಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ರಾಜನಕೊಳೂರ ಬಳಿಯ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, ಹತ್ತೆನೇ ತರಗತಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ಪರೀಕ್ಷೆಯಲ್ಲಿ ಫೇಲಾಗಿದ್ದರಿಂದ ಮನನೊಂದು ಮನೆಯಲ್ಲಿ ವಿಷ ಸೇವಿಸಿದ್ಧಾಳೆ. ತೀವ್ರ ಅಸ್ವಸ್ಥಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗ …
Read More »
Laxmi News 24×7