ಮುಂಬೈ: ರಾತ್ರಿಯಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಆಗಸ್ಟ್ 4 ಮತ್ತು 5 ದಿನ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಮಹಾನಗರ ಪಾಲಿಕೆ, ಎನ್‍ಡಿಆರ್‍ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಲರ್ಟ್ ಆಗಿರುವಂತೆ ಸರ್ಕಾರ ಸೂಚಿಸಿದೆ. ಮಂಗಳವಾರ ಬೆಳಗಿನ ಜಾವ ಮೂರು ಗಂಟೆಗೆ ಮುಂಬೈ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮಳೆ …
Read More »ಬೆಳಗಾವಿ ಜಿಲ್ಲೆಯ ಚಾಲಕನ ಪುತ್ರನ ಸಾಧನೆ; UPSC ಪರೀಕ್ಷೆಯಲ್ಲಿ 440ನೇ ಸ್ಥಾನ!
ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್‍ಯಾಂಕ್ ಪಡೆಯುವುದರ ಮೂಲಕ ರಾಜ್ಯದ …
Read More »ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ: ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ
ಹೊಸದಿಲ್ಲಿ: ಅಯ್ಯೋಧ್ಯೆಯ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ ಜತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ. ಅಯೋಧ್ಯೆಯಲ್ಲಿ ರಾಮಮಂದಿರ ದೇವಾಲಯದ ನಿರ್ಮಾಣವು ಟ್ರಸ್ಟ್ ನಿಂದ ಆಗಬೇಕೆಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದ ಕಾರಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ಸರ್ಕಾರದ ಉನ್ನತ …
Read More »ವೀಕೆಂಡ್ ಬಂತು ಅಂದ್ರೆ ಈ ಏರಿಯಾದಲ್ಲಿ ನೈಟ್ ಪಾರ್ಟಿ; ನೈಜೀರಿಯಾ ಪ್ರಜೆಗಳಿಂದ ಬೇಸತ್ತು ಹೋಗಿರುವ ಜನ
ಬೆಂಗಳೂರು(): ವಿದೇಶಗಳಿಂದ ಭಾರತಕ್ಕೆ ಯಾರೇ ಬಂದ್ರೂ ಅತಿಥಿ ದೇವೋ ಭವ ಅಂತ ನಮ್ಮವರು ನಡೆಸಿಕೊಳ್ತಾರೆ. ಅದರಲ್ಲೂ ಕರ್ನಾಟಕದ ಮಂದಿ ಬಂದವರ ಜೊತೆ ಬೆರೆತು ಹೋಗ್ತಾರೆ. ಅಂತಹ ಕನ್ನಡಿಗರ ಕಣ್ಣಿಗೆ ಒಂದಷ್ಟು ವಿದೇಶಿಯರು ಈಗ ವಿಲನ್ಗಳಾಗಿದ್ದಾರೆ. ಅರೇ ಯಾರವರು ಅಂತೀರಾ ಸ್ಟೋರಿ ಓದಿ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಜಿರಿಯನ್ ಪ್ರಜೆಗಳ ಕಿರಿಕ್ ಇದೇನು ಮೊದಲೇನಲ್ಲ. ಸದಾ ಒಂದಿಲ್ಲೊಂದು ಕಿರಿಕ್ ಮಾಡ್ತಾನೆ ಇರ್ತಾರೆ. ಆದ್ರೆ ಇವ್ರ ಕಿರಿಕ್ ನ್ನು ಪದೇ ಪದೇ …
Read More »ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಮೂಡಲಗಿ : ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಲ್ಲಿಗೆ ಸಮೀಪದ ಸುಣಧೋಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ನಬಾರ್ಡ ಯೋಜನೆಯಡಿ ನೂತನ ಶಾಲಾ ಕೊಠಡಿಗಳಿಗೆ 1.04 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗಾಗಿ …
Read More »ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?
ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ …
Read More »ಮತ್ತೆ 4ಸಾವಿರ ಕಿಟ್‌ಗಳ ಪೂರೈಕೆ
ಬೆಳಗಾವಿ: ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಹೊರತುಪಡಿಸಿ ಇತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ‍್ಯಾಪಿಡ್ ಆಂಟಿಜೆನ್ ಕಿಟ್‌ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ …
Read More »ಗೋಕಾಕ: ನಗರಸಭೆ ಸದಸ್ಯ ಗಿರೀಶ ಖೋತ್( 45) ಅಕಾಲಿಕ ಮರಣ……….
ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ್ (45) ಅಕಾಲಿಕ ಮರಣ ಹೊಂದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಸೌಭಾಗ್ಯ ಲಕ್ಷ್ಮಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರು …
Read More »ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ
ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ …
Read More »ಬಿಎಸ್‍ವೈ ಪುತ್ರಿ, ಕಾವೇರಿ ನಿವಾಸದ ಸಿಬ್ಬಂದಿಗೂ ಕೊರೊನಾ ಶಾಕ್.!
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಕೊರೊನಾ ಸೋಂಕು ಇದೆ ಎಂಬುದರ ಪತ್ತೆ ನಡೆಸಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಕಾವೇರಿ ನಿವಾಸದ ಮನೆಗೆಲಸದವರು, ಅಡುಗೆಯವರು ಹಾಗೂ ವಿಶೇಷ ಕರ್ತವ್ಯಾಧಿಕಾರಿ ಕಾರು ಚಾಲಕ ಸೇರಿದಂತೆ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಯಡಿಯೂರಪ್ಪ ಅವರು ಅಡ್ಮಿಟ್ ಆಗಿರುವ ವಾರ್ಡ್‍ನಲ್ಲೇ ಪುತ್ರಿ ಪದ್ಮಾವತಿ ಅವರೂ ಕೂಡ ದಾಖಲಾಗಿದ್ದಾರೆ.
Read More »
Laxmi News 24×7