ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರ ಮಗ ಕೃಷ್ಣಕುಮಾರ್, ಅಸ್ತಮ ಸಮಸ್ಯೆಯಿಂದ ಎರಡು …
Read More »ಮಳೆರಾಯನ ಆರ್ಭಟ- ಕೊಡಗಿನಲ್ಲಿ 2 ದಿನ ರೆಡ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟದ ಮಧ್ಯೆ ಹಲವೆಡೆ ಧಾರಾಕಾರ ಮಳೆ ಆಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೊಡಗು ಜಿಲ್ಲೆಯ ಭಾಗಮಂಡಲ-ತಲಕಾವೇರಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಬಂದ್ ಆಗಿದೆ. ಚೇರಂಗಾಲದ ಬಳಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಬಂದ್ ಆಗಿದೆ. ಮಡಿಕೇರಿಯ ರಾಜಾಸೀಟ್ ರಸ್ತೆಯಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಮುಂದಿನ 2 ದಿನಗಳ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. …
Read More »ಬೆಳಗಾವಿಯಲ್ಲಿ ಕೊರೊನಾತಂಕ ಹೆಚ್ಚುತ್ತಿದೆ. ಡೆಡ್ಲಿ ಕೊರೊನಾಗೆ..
ಗೋಕಾಕ :ವೃದ್ದೆಯೋರ್ವಳು ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುತ್ತಾರೆ. ಕೊರೋನಾ ಶಂಕಿತೆ ಎಂದು ಕೊವೀಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬರುವದು ಬಾಕಿ ಇದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದ ವೃದ್ದೆಯು ಗೋಕಾಕ ತಾಲೂಕಿನ ಕೊಣ್ಣೂರ್ ಗ್ರಾಮದವಳಾಗಿದ್ದು, ಮಹಿಳೆಗೆ ತೀವ್ರ ಮದುಮೇಹದ ಸಮಸ್ಯೆ …
Read More »ಸಾಹುಕಾರ್ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದ್ರು
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ನಿರಂತರ ತರಾಟೆಗೆ ತೆಗೆದುಕೊಳ್ಳುತ್ತಿದ್ದು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ.
ಹೊಸದಿಲ್ಲಿ: ಭಾರತ-ಚೀನಾ ಗಡಿ ತಕರಾರು ಹಾಗೂ ಯೋಧರ ನಡುವಿನ ಹಿಂಸಾತ್ಮಕ ಘರ್ಷಣೆ ಕುರಿತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ನಿರಂತರ ತರಾಟೆಗೆ ತೆಗೆದುಕೊಳ್ಳುತ್ತಿದ್ದು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ರಾಹುಲ್ ಗಾಂಧಿ, ಮತ್ತೆ ಕೇಂದ್ರ ಸರ್ಕಾರಕ್ಕೆ ಗಡಿ ಘರ್ಷಣೆ ಕುರಿತು ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಮುಖವಾಗಿ ರಾಷಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ನಡುವಿನ ದೂರವಾಣಿ ಸಂಭಾಷಣೆ ಬಳಿಕ ಗಲ್ವಾನ್ …
Read More »ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ
ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್‌ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ ಕೊರೊನಾ ವೈರಸ್ ನಿಂದಾಗಿ ಈಗಾಗಲೇ …
Read More »ಸರ್ಕಾರದ ನೆರವಿಲ್ಲದೆ 10 ಲಕ್ಷ ರೂ. ವೆಚ್ಚದಲ್ಲಿ 250 ಮೀಟರ್ ಉದ್ದದ ಬಂಬೂ ಬ್ರಿಡ್ಜುನಿರ್ಮಾಣ
ಅಸ್ಸಾಂ,ಜುಲೈ.6- ಸೇತುವೆ ನಿರ್ಮಾಣಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಇಲ್ಲಿನ ಗ್ರಾಮಸ್ಥರು ಸರ್ಕಾರದ ನೆರವಿಲ್ಲದೆ 10 ಲಕ್ಷ ರೂ. ವೆಚ್ಚದಲ್ಲಿ 250 ಮೀಟರ್ ಉದ್ದದ ಬಂಬೂ ಬ್ರಿಡ್ಜು ನಿರ್ಮಿಸಿದ್ದಾರೆ. ಬರ್ಪೆಟ್ ಜಿಲ್ಲೆಯ ಕಚುಮರ ಪ್ರದೇಶದ ಸುತ್ತಮುತ್ತಲ ಹತ್ತು ಹಳ್ಳಿಗಳ ಗ್ರಾಮಸ್ಥರು ತಮ್ಮ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿಕೊಂಡಿದ್ದು, ಬ್ರಹ್ಮಪುತ್ರ ಉಪನದಿಯಿಂದ ಕಚುಮಾರ ಬಜರ್‍ಗೆ ಸಂಪರ್ಕ ಕಲ್ಪಿಸುವ 250 ಮೀಟರ್ ಉದ್ದದ ಸೇತುವೆಯನ್ನು ಕಟ್ಟಿಕೊಂಡಿದ್ದಾರೆ ಸೇತುವೆ ಇಲ್ಲದೆ ನಮಗೆ …
Read More »22 ವರ್ಷದ ಯುವಕ ಸೇರಿ, ರಾಜ್ಯದಲ್ಲಿ ಕೋವಿಡ್‌ಗೆ 30 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಇಂದು 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 401ಕ್ಕೇರಿದೆ. ಬೆಂಗಳೂರಲ್ಲಿ 10 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 155 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ, ಬೆಂಗಳೂರಿನಲ್ಲಿ 10, ಬೀದರ್ 8, ಮೈಸೂರು 3, ದಕ್ಷಿಣ ಕನ್ನಡ 2, ದಾವಣಗೆರೆ, ಬಳ್ಳಾರಿ, ಹಾಸನ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿದೆ. …
Read More »ಸಂಸದೆ ಸುಮಲತಾ ಅಂಬರೀಷ ಅವರಿಗೆ ಕೊರೊನಾ ಸೋಂಕು ದೃಢ
ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ. ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ …
Read More »ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆಬಿಜೆಪಿ:ರಾಹುಲ್ ಗಾಂಧಿ
ನವದೆಹಲಿ,ಜು.6- ರಾಹುಲ್ ಗಾಂಧಿ ಅವರು ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಯಲ್ಲೂ ಭಾಗವಹಿಸುವುದಿಲ್ಲ, ಜವಾಬ್ದಾರಿಯುತ ಪ್ರತಿಪಕ್ಷದ ನಾಯಕ ಏನು ಮಾಡಬಾರದೋ ಅದನ್ನೇ ಅವರು ಮಾಡುತ್ತಿದ್ದಾರೆ. ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಚೀನಾ-ಭಾರತದ ಗಡಿ ವಿವಾದ ಕುರಿತು ರಾಹುಲ್ ಗಾಂಧಿ ಸರ್ಕಾರದ ವಿರುದ್ಧದ ಆಕ್ರಮಣಕಾರಿ ಪ್ರಶ್ನೆ ಮುಂದುವರಿಸುತ್ತಿದ್ದಂತೆ, ಇದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ನಾಯಕ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ …
Read More »
Laxmi News 24×7