Breaking News

ರಾಜ್ಯ

70 ವರ್ಷದ ಅಜ್ಜ, 7 ವರ್ಷದ ಮೊಮ್ಮಗಳು – 6 ದಿನ ರೇಪ್

ಚೆನ್ನೈ: 70 ವರ್ಷದ ಕಾಮುಕ ಅಜ್ಜನೊಬ್ಬ ಏಳು ವರ್ಷದ ಬಾಲಕಿಯನ್ನು ಅತ್ಯಾಚಾರಗೈದಿರುವ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಏನಿದು ಪ್ರಕರಣ?: ಸಂತ್ರಸ್ತ ಬಾಲಕಿ ಅಪ್ಪ-ಅಮ್ಮ ಹಾಗೂ ಅಣ್ಣನ ಜೊತೆಯಲ್ಲಿ ವಾಸವಾಗಿದ್ದಳು. ಬಾಲಕಿಯ ಪೋಷಕರು ಈರುಳ್ಳಿ ವ್ಯಾಪಾರ ಮಾಡಿಕೊಂಡಿದ್ದು, ಪ್ರತಿನಿತ್ಯ ಮಗನನ್ನು ಕರೆದುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದರು. ಸೇಫ್ ಆಗಿರಲಿ ಎಂದು ಏಳು ವರ್ಷದ ಮಗಳನ್ನು ಅಜ್ಜನ ಬಳಿ …

Read More »

ಪ್ರಸಿದ್ಧ ಶಿರಸಿಯ ಮಾರಿಕಾಂಬಾ ದೇವಸ್ಥಾನ ಸೀಲ್‍ಡೌನ್……….

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 21 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇತ್ತ ಶಿರಸಿಯ ಮಾರಿಕಾಂಬಾ ದೇವಸ್ಥಾನವನ್ನು ಒಂದು ವಾರ ಸೀಲ್‍ಡೌನ್ ಮಾಡಲಾಗಿದೆ. ಶಿರಸಿಯ ಮಾರಿಕಾಂಬಾ ದೇವಸ್ಥಾನದ ಪಕ್ಕದಲ್ಲೇ ವಾಸವಿದ್ದ ವ್ಯಕ್ತಿಗೂ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಈತ ಪ್ರತಿ ದಿನ ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಹೋಗುತಿದ್ದ ಎನ್ನಲಾಗಿದೆ. ಹೀಗಾಗಿ ಈತನಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈಗ ದೇವಸ್ಥಾನವನ್ನು ಸೀಲ್‍ಡೌನ್ ಮಾಡುವ ನಿರ್ಧಾರಕ್ಕೆ ಮಾಡಲಾಗಿದೆ. ಶಿರಸಿ …

Read More »

ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಲಾಕ್‍ಡೌನ್ ನಮಗಲ್ಲ ಎಂಬಂತೆ ಸ್ಥಳೀಯ ಜನ ಪ್ರತಿನಿಧಿಗಳ ಜೊತೆ ಪ್ರವಾಸಿ ತಾಣಗಳಿಗೆ ಭೇಟಿ

ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ರಾಜ್ಯವೇ ಲಾಕ್‍ಡೌನ್ ಆಗಿದೆ. ಆದರೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಲಾಕ್‍ಡೌನ್ ನಮಗಲ್ಲ ಎಂಬಂತೆ ಸ್ಥಳೀಯ ಜನ ಪ್ರತಿನಿಧಿಗಳ ಜೊತೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಸಚಿವ ಸಿ.ಟಿ.ರವಿ, ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಸ್ಥಳಗಳಾದ ದೇವರಮನೆಗುಡ್ಡ, ಹೇಮಾವತಿ ನದಿ ಮೂಲ, ಬಲ್ಲಾಳರಾಯನ ದುರ್ಗಕ್ಕೆ ಭೇಟಿ …

Read More »

ಒಂದು ವರ್ಷದ ಮಗಳನ್ನು ಕೊಂದು ತಾಯಿ ನೇಣಿಗೆ ಶರಣು

ಚೆನ್ನೈ: ತಾಯಿಯೊಬ್ಬಳು ಒಂದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಿಯಾಂಕಾ (22) ಒಂದು ವರ್ಷದ ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಪ್ರಿಯಾಂಕಾ ಮೂರು ವರ್ಷದ ಹಿಂದೆ ಬಾಲಮುರುಗನ್ ಜೊತೆ ವಿವಾಹವಾಗಿದ್ದಳು. ಈ ದಂಪತಿಗೆ ಒಂದು ವರ್ಷದ ಮಗಳಿದ್ದಳು. ಇತ್ತೀಚೆಗೆ ದಂಪತಿಯ ನಡುವೆ ಚಿಕ್ಕ-ಪುಟ್ಟ ವಿಚಾರಗಳಿಗೂ ಪದೇ ಪದೇ ಜಗಳ ನಡೆಯುತ್ತಿತ್ತು. ದಂಪತಿಯ ವಿವಾಹ ವಾರ್ಷಿಕೋತ್ಸವದೊಂದಿಗೆ ಶುಕ್ರವಾರ ಮಗಳ …

Read More »

ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ

ಚಿಕ್ಕೋಡಿ: ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆಯುತು. ವೀರಯೋಧ ಸುನೀಲ್ ಖೀಲಾರಿ (35) ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ವೇಳೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಮೃತ …

Read More »

24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ …

Read More »

ಕೊರೋನಾ ಭಯ: ಪ್ರವಾ​ಸಿ​ಗರ ವಾಹನ ತಡೆದು ವಾಪಸ್‌ ಕಳು​ಹಿ​ಸಿದ ಗ್ರಾಮ​ಸ್ಥ​ರು

ಮಂಡ್ಯ(ಜು.05): ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದಾರೆ. ಕೊರೋನಾ ತಡೆ​ಗಾಗಿ 15 ದಿನ ಲಾಕ್‌​ಡೌ​ನ್‌ಗೆ ಜೆಡಿ​ಎಸ್‌ ಆಗ್ರ​ಹ ಆರೋಗ್ಯ ಸಚಿವ ಶ್ರೀರಾಮುಲು ಅವರ ಜತೆ …

Read More »

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲಂಬೊ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ 5.30ರ ಸುಮಾರಿಗೆ ಪನುಡೊರಾದ ಹೊರೆತುದುವಾ ಪ್ರದೇಶದಲ್ಲಿ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಸೈಕಲ್ ಸವಾರ 64 ವರ್ಷದ ವೃದ್ಧರೊಬ್ಬರು ಅಸುನೀಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉತ್ತರ ಪೊಲೀಸರು ಇಂದು ಕುಸಾಲ್ ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕ್ರಿಕೆಟಿಗನ ಬಂಧನ ವಿಷಯವನ್ನು ಪೊಲೀಸ್ ವಕ್ತಾರ ಜಲಿಯ ಸೇನರತ್ನೆ ಖಚಿತಪಡಿಸಿದ್ದಾರೆ. 25 ವರ್ಷ ಪ್ರಾಯದ ಕುಸಾಲ್ ಮೆಂಡಿಸ್ …

Read More »

ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …

Read More »

ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ ನಡೆಯಬೇಕಿತ್ತು. ಮೇ ಮತ್ತು ನವೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಸಂಯೋಜಿಸಿ ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುವುದು. ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದು ಮಾಡಿರುವ ಕುರಿತಾಗಿ ಐಸಿಎಐ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೊದಲು ಸಿಎ ಪರೀಕ್ಷೆಯನ್ನು ಮೇ …

Read More »