Breaking News

ರಾಜ್ಯ

ಸರ್ ಎಂ.ವಿಶ್ವೇಶ್ವರಯ್ಯ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸ್ಥಾಪಿಸಿದ್ದ ಮೈಸೂರು ಪೇಪರ್ ಮಿಲ್ ಹಲವು ಕಾರಣಗಳಿಂದ ಸ್ಥಗಿತ

ಶಿವಮೊಗ್ಗ: ಮೈಸೂರು ದಿವಾನರಾಗಿದ್ದ ದಿವಂಗತ ಸರ್ ಎಂ.ವಿಶ್ವೇಶ್ವರಯ್ಯ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸ್ಥಾಪಿಸಿದ್ದ ಮೈಸೂರು ಪೇಪರ್ ಮಿಲ್ ಹಲವು ಕಾರಣಗಳಿಂದ ಸ್ಥಗಿತಗೊಂಡಿತ್ತು. ಕಾರ್ಖಾನೆ ಸ್ಥಗಿತಗೊಂಡಿದ್ದರಿಂದ ಸಾವಿರಾರು ಮಂದಿ ಕಾರ್ಮಿಕರು ಅತಂತ್ರರಾಗಿದ್ದರು. ಸರ್ಕಾರ ಕೂಡ ಈ ಹಿಂದೆ ಕಾರ್ಖಾನೆಗೆ ಮರುಜೀವ ನೀಡಲು ಹಲವು ಬಾರಿ ಪ್ರಯತ್ನ ನಡೆಸಿತ್ತು. ಕಾರ್ಖಾನೆ ಆರಂಭಿಸುವಂತೆ ಕಾರ್ಮಿಕರು ಸಹ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದ್ದರು. ಆದರೂ ಕಾರ್ಖಾನೆ ಪುನರ್ ಆರಂಭವಾಗಲೇ ಇಲ್ಲ. ಜಿಲ್ಲೆಯ ಜನಪ್ರತಿನಿಧಿಗಳು …

Read More »

ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..

ಅಥಣಿ:  ಮೃತ ಕೊರೊನಾ ಸೋಂಕಿತ ವ್ಯಕ್ತಿ ಕಳೆದ ಕೆಲವು ದಿನಗಳ ಹಿಂದೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಎಂಬ  ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಐವರು ಪೊಲೀಸರಿಗೆ ಕ್ವಾರಂಟೈನ್ ಒಳಪಡಿಸಲಾಗಿದೆ. ಸಂಕೋನಟ್ಟಿ ಮೂಲಕ  32 ವರ್ಷದ ವ್ಯಕ್ತಿ.  ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆತನ ಟ್ರಾವೆಲ್ ಹಿಸ್ಟರಿ ಕೆದಕಿದಾಗ ಆತ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು …

Read More »

ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆ: ರಮೇಶ ಜಾರಕಿಹೊಳಿ

ರಾಯಚೂರು: ಕೃಷ್ಣಭಾಗ್ಯ ಜಲನಿಗಮದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆಗಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರದಂದು ಮಸ್ಕಿ ತಾಲೂಕಿನ ಬುದ್ದಿಮೆಯಲ್ಲಿ ನೇರವೇರಿಸಿದರು. ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ರಾಜುಗೌಡ, ಡಾ.ಶಿವರಾಜ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More »

ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ

ಪಣಜಿ: ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ ಎಂದು ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕರನ್ನು ಮಾರ್ಗೊವಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನ ವೈರಸ್ ಸೋಂಕು ತಗಲಿರುವುದು ಮಂಗಳವಾರ ನಡೆಸಲಾಗಿರುವ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಕಳೆದ ತಿಂಗಳು ಮಾಜಿ ಆರೋಗ್ಯ ಸಚಿವರಿಗೆ ಕೋವಿಡ್-19ರೋಗ ತಗಲಿದ್ದು, ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಮಂಗಳವಾರ ತನಕ ಗೋವಾದಲ್ಲಿ 1,315   ಪ್ರಕರಣಗಳು ಪತ್ತೆಯಾಗಿದ್ದು ಮತ್ತು ಮೂರು ಸಾವುಗಳು …

Read More »

ಗೌರವಧನ ಸೇರಿ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ

ಸುರಪುರ: ಕೊರೊನಾ ಸಂಕಷ್ಟದಲ್ಲಿ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿದ್ದು, ಗೌರವಧನ ಸೇರಿ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಗರದ ತಹಸೀಲ್ದಾರ್ ಕಚೇರಿ ಎದುರು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಆಶಾ ಕಾರ್ಯಕರ್ತೆಯರಿಗೆ ಸದ್ಯ ಸರ್ಕಾರ ನೀಡುತ್ತಿರುವ ಗೌರವಧನದಲ್ಲಿ ಜೀವನ ನಡೆಸುವುದು ಕಷ್ಟದ ಸಂಗತಿಯಾಗಿದ್ದು, ಕನಿಷ್ಠ 12 ಸಾವಿರ ರೂಪಾಯಿಗಳ ಗೌರವಧನ ನೀಡಬೇಕು. ಕೊರೊನಾ …

Read More »

ಕಸ ಬಿಸಾಡುವಂತೆ ಗುಂಡಿಗೆ ಶವ ಬಿಸಾಕಿದ ಜೆಸಿಬಿ!ನಿನ್ನೆ ಬಳ್ಳಾರಿ, ಇಂದು ದಾವಣಗೆರೆ

ದಾವಣಗೆರೆ: ಸತ್ತ ಮೇಲೆ ನೂರಾರು ಜನ ಮೆರವಣಿಗೆ ಮಾಡಿ ಕಳುಹಿಸಿಕೊಡಬೇಕು ಎಂದು ಪ್ರತಿಯೊಬ್ಬರದ್ದು ಕೊನೆ ಆಸೆಯಾಗಿರುತ್ತೆ. ಆದರೆ ಈ ಕೋವಿಡ್ ಬಂದು ಸಾವನ್ನಪ್ಪಿದರೆ ಮಾತ್ರ ಯಾರೂ ಕೂಡ ಊಹಿಸಲಾಗದಷ್ಟೆ ಮಟ್ಟಿಗೆ ನಮ್ಮ ಶವಸಂಸ್ಕಾರ ಇರುತ್ತೆ. ಹೌದು. ದಾವಣಗೆರೆಯ ಚನ್ನಗಿರಿ ತಾಲೂಕಿನ 56 ವರ್ಷದ ಮಹಿಳೆಯೊಬ್ಬರು ಕಳೆದ 17 ರಂದು ಉಸಿರಾಟದ ತೊಂದರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ಕೂಡ ಅಂದೇ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ …

Read More »

ಅಟ್ಟಾಡಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ………..

ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ನಡೆದಿದೆ. ಹೇಮಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಮಂಜುನಾಥ್ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಣಿಗಲ್ ಮೂಲದ ಹೇಮಾಗೆ ಆರೋಪಿ ಮಂಜುನಾಥ್ ಜೊತೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೃತ ಹೇಮಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳವಾರ ಸಂಜೆ ಹೇಮಾ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಳು. ಅದೇ ವಿಚಾರವಾಗಿ …

Read More »

ಆಟೋ ಚಾಲಕನಿಗೆ ವಕ್ಕರಿಸಿದ ವೈರಸ್…. be alert alll.

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಸೋಂಕು ಆಟೋದಲ್ಲಿ ಸುತ್ತಾಡಿದ್ದು ಜನ ಭಯಭೀತಗೊಂಡಿದ್ದಾರೆ. ಆಟೋ ಚಾಲಕನಿಗೆ ಪಾಸಿಟಿವ್ ಬಂದಿದ್ದು, ಯಾರಿಗೆಲ್ಲಾ ಸೋಂಕು ಹಂಚಿದ್ದಾರೋ ಎಂಬ ಆತಂಕ ಮನೆ ಮಾಡಿದೆ. ಚಿತ್ರದುರ್ಗದ ಸ್ವಾಮಿವಿವೇಕಾನಂದ ನಗರದಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಸೀಲ್‍ಡೌನ್‍ಗೆ ಒಳಗಾಗಿದೆ. 27 ವರ್ಷದ ಆಟೋ ಚಾಲಕನಿಗೆ ಸೋಂಕು ವಕ್ಕಿರಿಸಿದೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಆಟೋ ಚಾಲಕ ತನ್ನ ಸಂಬಂಧಿಗಳ ಊರುಗಳಾದ ಕೊಪ್ಪಳದ ಗಂಗಾವತಿ ಹಾಗೂ ಸೊಂಡೂರಿನಲ್ಲಿ ಸುತ್ತಾಡಿದ್ದನು. ಕಳೆದ 15 …

Read More »

ಕೊರೋನಾಗೆ ಬಲಿಯಾದವರನ್ನು ಅಮಾನವೀಯವಾಗಿ ಅಂತ್ಯಕ್ರಿಯೆ ಮಾಡಿದ ಸಿಬ್ಬಂದಿ ಸಸ್ಪೆಂಡ್..!

ಬೆಂಗಳೂರು-ಕೊರೋನಾ ಸೋಂಕು ದೃಡಪಟ್ಟು ಮೃತಪಟ್ಟವರನ್ನು ಅತ್ಯಂತ ಅಮಾನವೀಯವಾಗಿ ಅಂತ್ಯ ಸಂಸ್ಕಾರ ನಡೆಸಿದ್ದ ಬಳ್ಳಾರಿ ಜಿಲ್ಲೆಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಪಡಿಸಿದೆ. ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದರು.ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಂತ್ಯಸಂಸ್ಕಾರ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಪಡಿಸಿದೆ. ಇ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

Read More »

ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …

Read More »