ಕೋಲಾರ: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಶ್ವನಾಥ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿರುವುದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂದ ಅಧಿಕಾರಿಗಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುತ್ತವೆ. ಅದು …
Read More »ಬೆಳಗಾವಿಯಲ್ಲಿ ಮಾಸ್ಕ್ ಡೇ ಆಚರಣೆ
ಮಾಸ್ಕ್ ಧರಿಸಿ ಕರೋನಾದಿಂದ ದೂರವಿರಿ! ಇಂದು ಬೆಳಗಾವಿಯ ಅಶೋಕ ಸರ್ಕಲ್ ನಿಂದ ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಕೊವಿಡ್ 19 ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಜನರಿಗೆ ಮಾಸ್ಕ್ ವಿತರಿಸಲಾಯಿತು. ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿನ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ! ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ, ಕೊವಿಡ್ 19 ವಿಶೇಷ …
Read More »ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…
; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …
Read More »ಜಿಂದಾಲ್ ಕಾರ್ಖಾನೆಯಲ್ಲಿ ಕೊರೊನಾ ರಣಕೇಕೆ – ಸೋಂಕು ತಡೆಗೆ ಸಪ್ತ ಸೂತ್ರ………
ಬಳ್ಳಾರಿ: ಜಿಂದಾಲ್ ಉಕ್ಕು ಕಾರ್ಖಾನೆ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗ್ತಿದೆ. ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಗ್ರಾಮಗಳಲ್ಲೂ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಜಿಂದಾಲ್ ಕಾರ್ಖಾನೆ ಹೋದ್ರೆ 5,000 ರೂ. ದಂಡ ವಿಧಿಸೋದಾಗಿ ಡಂಗೂರ ಸಾರಿ ಎಚ್ಚರಿಸಲಾಗುತ್ತಿದೆ. ಆದರೆ ಜಿಂದಾಲ್ ಅಧಿಕಾರಿಗಳು ಮಾತ್ರ ಕೆಲಸಕ್ಕೆ ಬರೆದಿದ್ರೆ ಚೆನ್ನಾಗಿ ಇರಲ್ಲಾ ಎಂದು ಆವಾಜ್ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬುಧವಾರ ಒಂದೇ ದಿನ ಜಿಂದಾಲ್ ವ್ಯಾಪ್ತಿಯಲ್ಲೇ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. …
Read More »ಖಾಲಿ ಕಪ್‍ನಿಂದ ಏನೂ ಆಗಲ್ಲ, ಮೊದ್ಲು ನೀವ್ ಚೆನ್ನಾಗಿರಿ- ನಿತ್ಯಾ ಮೆನನ್
ಬೆಂಗಳೂರು: ಬಹುಭಾಷಾ ನಟಿ ನಿತ್ಯಾ ಮೆನನ್ ಲಾಕ್‍ಡೌನ್ ದಿನಗಳನ್ನು ಫೋಟೋ ಶೂಟ್ ಮೂಲಕ ಕಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಫೋಟೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಅಪ್‍ಡೇಟ್ ನೀಡುತ್ತಿದ್ದಾರೆ. ಇದೀಗ ಅವರ ಇನ್‍ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ. ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್‍ವುಡ್‍ನಲ್ಲಿ ನಟಿಸಿದ್ದು ಕೆಲವೇ ಚಿತ್ರಗಳಾದರೂ ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುತ್ತಾರೆ. ಕೇರಳ ಮೂಲದವರಾದರೂ ಕನ್ನಡದ ನಟಿಯರನ್ನೇ ನಾಚಿಸುವಂತೆ ಮಾತನಾಡುತ್ತಾರೆ, ಹಾಡು ಹೇಳುತ್ತಾರೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿರುವ ನಿತ್ಯಾ …
Read More »ಯುಟ್ಯೂಬ್‍ನಿಂದ ದಿಢೀರ್ ಡಿಲೀಟ್ ಆಯ್ತು ಚಂದನವನ ತಾರೆಯರೆಲ್ಲ ಅಭಿನಯಿಸಿದ್ದ ಹಾಡು
ಬೆಂಗಳೂರು: ಇತ್ತೀಚೆಗೆ ಬದಲಾಗು ನೀನು ಬದಲಾಯಿಸು ನೀನು ಹಾಡಿನ ಮೂಲಕ ಸ್ಯಾಂಡಲ್‍ವುಡ್ ಎಲ್ಲ ತಾರೆಯರು ಸೇರಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುತ ಪಡಿಸಿದ್ದ ಹಾಡನ್ನು ಪವರ್ ಓಡೆಯರ್ ನಿರ್ದೇಶನ ಮಾಡಿದ್ದರು. ಎಲ್ಲ ಕಲಾವಿದರ ಮನೆಗೆ ಹೋಗಿ ಹಾಡನ್ನು ಚಿತ್ರೀಕರಣ ಮಾಡಿದ್ದರು. ಅಂತಯೇ ಜೂನ್ 5ರಂದು ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ದಿ ಬೀಟ್ ಆಡಿಯೋದಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿತ್ತು. ಆದರೆ ಈಗ ಏಕಾಏಕಿ ಬದಲಾಗು …
Read More »20 ಯೋಧರ ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ: ರಾಜನಾಥ್‍ಸಿಂಗ್
ನವದೆಹಲಿ, ಜೂ.17- ಭಾರತದ ವಿರುದ್ಧ ಕಾಲುಕೆರೆದು ಸಂಘರ್ಷ ಉಂಟುಮಾಡಿದ್ದಲ್ಲದೆ 20 ಯೋಧರನ್ನು ಹತ್ಯೆ ಮಾಡಿರುವ ಪ್ರತೀಕಾರಕ್ಕೆ ಭಾರತ ಸನ್ನದ್ಧವಾಗಿದ್ದು, ಸೈನಿಕರ ತ್ಯಾಗವನ್ನು ಮರೆಯುವುದಿಲ್ಲ ಎನ್ನುವ ಮೂಲಕ ಚೀನಾಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. 20 ಯೋಧರ ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ. ಸೈನಿಕರ ಸಾವು ಅತ್ಯಂತ ನೋವು ತಂದಿದೆ. ಇದಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಪರೋಕ್ಷವಾಗಿ ಚೀನಾ ರಾಷ್ಟ್ರವನ್ನು ಉಲ್ಲೇಖಿಸದೆ ಭಾರತ ಸಮರಕ್ಕೆ ಸಿದ್ಧ …
Read More »ವಿಪರೀತ ಮಳೆ ಲಾರಿ ಪಲ್ಟಿ- 190 ಚೀಲ ಸಕ್ಕರೆ ಎಗರಿಸಿದ ಜನ………
ಬೆಳಗಾವಿ: ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯವಸ್ಥವಾಗಿದ್ದು, ನದಿಗಳ ಒಳಹರಿವು ಹೆಚ್ಚಾಗಿ ರಸ್ತೆಗಳು ಬಂದ್ ಆಗಿವೆ. ಇದರ ಮಧ್ಯೆಯೇ ಸಕ್ಕರೆ ಸಾಗಿಸುತ್ತಿದ್ದ ಲಾರಿ ಮೊಗಚಿ ಬಿದ್ದಿದೆ. ಬೆಳಗಾವಿ ತಾಲೂಕಿನ ಸುತಗತ್ತಿ ಗ್ರಾಮದ ಸಮೀಪ ತಡರಾತ್ರಿ ಘಟನೆ ನಡೆದಿದ್ದು, ಮಹಾರಾಷ್ಟ್ರದ ಓಲಂ ಸಕ್ಕರೆ ಕಾರ್ಖಾನೆಯಿಂದ 300 ಚೀಲ ಸಕ್ಕರೆ ಹೊತ್ತು ಲಾರಿ ರಾಜ್ಯಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. …
Read More »ಅತ್ತ ಗಡಿಯಲ್ಲಿ ಚೀನಿಯರ ಕಿರಿಕ್ ಬೆನ್ನಲ್ಲೇ ಇತ್ತ ಪಾಕ್ ಪುಂಡಾಟಿಕೆ………….
ಶ್ರೀನಗರ, ಜೂ.17- ಇಂಡೋ-ಚೀನಾ ಗಡಿಯಲ್ಲಿ ಉಭಯ ಸೇನಾ ಪಡೆಗಳ ನಡುವೆ ಬಿಕ್ಕಟ್ಟು ಉಲ್ಬಣಗೊಂಡಿರುವಾಗಲೇ ಅತ್ತ ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲೂ ಪಾಕಿಸ್ತಾನ ಸೇನಾಪಡೆಗಳ ಪುಂಡಾಟ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ನೌಗಂ ಬಳಿ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಉದ್ದಕ್ಕೂ ಪಾಕಿಸ್ತಾನ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾ ಪಡೆಗಳನ್ನು ಗುರಿಯಾಗಿಟ್ಟುಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ನಿನ್ನೆ ರಾತ್ರಿ ಪಾಕಿಸ್ತಾನ ಸೈನಿಕರು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ …
Read More »ಶಿವಮೊಗ್ಗದಲ್ಲಿ ಕೊರನ್ ಮಹಾಮಾರಿಗೆ ಮೊದಲ ಬಲಿ
ಶಿವಮೊಗ್ಗ: ಕೊರೊನಾ ಮಹಾಮಾರಿಗೆ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದ ಮೊದಲ ಘಟನೆಯಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಮೂಲವ್ಯಾಧಿ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು ಕಳೆದ ಮೂರು ದಿನದ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ಸ್ವತಃ ಅವರೇ ಆಗಮಿಸಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಆದರೆ ಈ …
Read More »
Laxmi News 24×7