Breaking News

ರಾಜ್ಯ

ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ

ಅಥಣಿ: ತಾಲೂಕಿನ ಸವದಿ ದರ್ಗಾ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಂದೆನವಾಜ ಮುಲ್ಲಾ ಹಾಗೂ ದೇಸಾರಟ್ಟಿ ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಯವರು ಹಸ್ತಾಂತರಿಸಿದರು.  ಈ ವೇಳೆ ಮಾತನಾಡಿದ ಮಹೇಶ ಕುಮಠಳ್ಳಿ ಇಂತಹ ದುರ್ಘಟನೆ ಘಟಿಸಬಾರದಿತ್ತು ಆದರೆ ವಿಧಿ ಆಟದ ಎದುರು ಎಲ್ಲರೂ …

Read More »

ಹೆಚ್​ಎಎಲ್ ಪೊಲೀಸರು ಸಂತೋಷ್ ಸೇರಿ 9 ಜನರನ್ನು ಬಂಧನ ಮಾಡಿದ್ದಾರೆ.

ಬೆಂಗಳೂರು; ಕಳ್ಳತನ ಮಾಡಿದ್ದ ಹಣವನ್ನು ಹಂಚಿಕೊಳ್ಳೋ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಜೆ.ಪಿ. ನಗರದ ರೌಡಿಶೀಟರ್ ಆಗಿದ್ದ ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸಂತೋಷ್ ಆ್ಯಂಡ್ ಟೀಂನಿಂದ ಈ ಕೊಲೆ ನಡೆದಿದ್ದು, ಸದ್ಯ ಹೆಚ್​ಎಎಲ್ ಪೊಲೀಸರು ಸಂತೋಷ್ ಸೇರಿ 9 ಜನರನ್ನು ಬಂಧನ ಮಾಡಿದ್ದಾರೆ. ಜೂನ್ 6ರಂದು ಸಂತೋಷ್ ಆ್ಯಂಡ್ ಟೀಂನಿಂದ ಪಾಗಲ್ ಶ್ರೀನಿವಾಸ್ ಕೊಲೆ ಮಾಡಲಾಗಿತ್ತು. ಇನ್ನು ಪಾಗಲ್ ಸೀನ ಹಾಗೂ ಸಂತೋಷ್ …

Read More »

ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ

 ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್​​-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​​ನಿಂದ ತಿಳಿದು ಬಂದಿದೆ. ಇನ್ನು, ಮಹಾಮಾರಿ ಕೋವಿಡ್​​-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್​ನಿಂದ …

Read More »

ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರಗಳ ಗರಿಷ್ಠ, …

Read More »

2 ದಿನ ರಜೆ ಹಾಕಿ ಆಸ್ಪತ್ರೆ ಹೋದ ಕಾನ್‍ಸ್ಟೇಬಲ್‍ಗೂ ಕೊರೊನಾ ಸೋಂಕು…………

ಹಾವೇರಿ: ಜಿಲ್ಲೆಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕ ಹಾಗೂ ಪೊಲೀಸ್ ಕಾನ್‍ಸ್ಟೇಬಲ್‍ ನಲ್ಲಿ ಸೋಂಕು ದೃಢಪಟ್ಟಿದೆ. 41 ವರ್ಷದ ಕಾನಸ್ಟೇಬಲ್ ಪಿ-7030ರಲ್ಲಿ ಸೋಂಕು ದೃಢಪಟ್ಟಿದ್ದು, ಹಾವೇರಿ ಜಿಲ್ಲೆ ಬ್ಯಾಡಗಿ ಠಾಣೆಯಲ್ಲಿ ಕಾನ್‍ಸ್ಟೇಬಲ್‍ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮೂಲತಃ ಕದರಮಂಡಲಿ ಗ್ರಾಮದ ನಿವಾಸಿಯಾಗಿದ್ದು, ಎರಡು ದಿನ ರಜೆ ಹಾಕಿ ದಾವಣಗೆರೆ ಜಿಲ್ಲೆ ಮಲೇಬೆನ್ನೂರಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಅಲ್ಲದೇ …

Read More »

ಪ್ರತಿ ಕ್ವಿಂಟಾಲ್‍ಗೆ 10,300 ರೂ. ನಂತೆ ಬೆಂಬಲ ಬೆಲೆಯೊಂದಿಗೆ ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ

ಹಾಸನ: ಪ್ರತಿ ಕ್ವಿಂಟಾಲ್‍ಗೆ 10,300 ರೂ. ನಂತೆ ಬೆಂಬಲ ಬೆಲೆಯೊಂದಿಗೆ ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೂ.11ರ ಸರ್ಕಾರಿ ಆದೇಶದಂತೆ ಕೊಬ್ಬರಿಯನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ಖರೀದಿ ಕೇಂದ್ರಗಳನ್ನು ತರಬೇಕಿದೆ. ಕೇಂದ್ರ ಸರ್ಕಾರ ಬೆಂಬಲಬೆಲೆಯೊಂದಿಗೆ ಕೊಬ್ಬರಿ ಖರೀದಿಸಲು ನೆಫೆಡ್ ಸಂಸ್ಥೆಯನ್ನು ಗುರುತಿಸಿದ್ದು, ರಾಜ್ಯ ಸರ್ಕಾರ ಸಹಕಾರ ಮಾರಾಟ ಮಂಡಳಿ ಮೂಲಕ ಖರೀದಿಸಲು ಸೂಚನೆ ನೀಡಿದೆ. ಅದರಂತೆ …

Read More »

ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹುಬ್ಬಳ್ಳಿಯ ಬಸವ ವನದ 80 ವರ್ಷದ ಅಜ್ಜಿ ಮನೆಯಿಂದ ಹೊರ ಬಾರದಂತಾಗಿದೆ.

ಧಾರವಾಡ/ಹುಬ್ಬಳ್ಳಿ: ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹುಬ್ಬಳ್ಳಿಯ ಬಸವ ವನದ 80 ವರ್ಷದ ಅಜ್ಜಿ ಮನೆಯಿಂದ ಹೊರ ಬಾರದಂತಾಗಿದೆ. 80 ವರ್ಷದ ಪ್ರೇಮಾ ಬಾಯಿ ಅಜ್ಜಿ ಏಕಾಂಗಿಯಾಗಿ ಬದುಕುತ್ತಿದ್ದಾರೆ. ಹುಬ್ಬಳ್ಳಿಯ ಬಸವ ವನದ ಬಳಿ ಇರುವ ಅಜ್ಜಿ ಮನೆ ಸಂಪೂರ್ಣವಾಗಿ ಜಲಾವೃತವಾಗಿದೆ. ಅಜ್ಜಿಯ ಮನೆಯ ಹಿಂಭಾಗದಲ್ಲಿ ಪೊಲೀಸ್ ವಸತಿ ನಿಲಯಗಳಿವೆ. ಇಲ್ಲಿಂದ ಹೊರಹೋಗಬೇಕಿದ್ದ ಚರಂಡಿ ನೀರು ಅಜ್ಜಿಯ ಮನೆಯಂಗಳದಲ್ಲಿ ಬಂದು ನಿಲ್ಲುತ್ತಿದೆ. ಇದರಿಂದಾಗಿ ಅಜ್ಜಿ ಮನೆ ಬಿಟ್ಟು ಹೊರ ಬರಲಾಗದ …

Read More »

ಜೂನ್ 17ರಿಂದ ರಾಯಚೂರಿನಿಂದ ಮಂತ್ರಾಲಯಕ್ಕೆ ಬಸ್‍ಗಳ ಓಡಾಟ ಆರಂಭ

ರಾಯಚೂರು: ಜಿಲ್ಲೆಗೆ ಇಂದು ಸಹ ಕೊರೊನಾಘಾತವಾಗಿದ್ದು ಜಿಲ್ಲೆಯಲ್ಲಿ ಒಂದೇ ದಿನ 18 ಕೊರೊನಾ ಪಾಸಿಟಿವ್ ಪ್ರಕರಗಳು ದೃಢವಾಗಿವೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 403ಕ್ಕೆ ಏರಿದೆ. ಇಂದು ಟ್ರಾವೆಲ್ ಹಿಸ್ಟರಿ ಇಲ್ಲದ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಕಂಟೈನ್ಮೆಂಟ್ ಝೋನ್ ನಿಂದ ಒಂದು ಪ್ರಕರಣ ದಾಖಲಾಗಿದೆ. ತೆಲಂಗಾಣದಿಂದ ಬಂದಿರುವ ಇಬ್ಬರು ಹಾಗೂ ತಮಿಳುನಾಡಿನಿಂದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದಿರುವ 10 ಜನರಲ್ಲಿ ಪಾಸಿಟಿವ್ ದೃಢವಾಗಿದೆ. ಮಹಾರಾಷ್ಟ್ರದಿಂದ ಬಂದಿರುವ 10 …

Read More »

ಮತ್ತೇ ಲಾಕ್ ಡೌನ್ ಆಗತ್ತಾ?..ಬಿಎಸ್ ವಾಯ ಹೇಳಿದ್ದೇನು..

ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು

Read More »

ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ…………

ಬೆಂಗಳೂರು, ಜೂ.15-ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ. 198 ವಾರ್ಡ್‍ಗಳಲ್ಲಿ ಈಗಾಗಲೇ 122 ವಾರ್ಡ್‍ಗಳಿಗೆ ಮಹಾಮಾರಿ ಕಾಲಿಟ್ಟಿದ್ದು, 142 ಕಂಟೇನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ನಿನ್ನೆಯಿಂದೀಚೆಗೆ 32 ಕಂಟೈನ್‍ಮೆಂಟ್ ಪ್ರದೇಶಗಳನ್ನು ಗುರುತಿಸಲಾಗಿದ್ದು, ನಗರದ ಪ್ರತಿಯೊಂದು ರಸ್ತೆಗೂ ಬೀಳುತ್ತಿವೆ ಸೀಲ್‍ಡೌನ್ ಬ್ಯಾರಿಕೇಡ್‍ಗಳು. ನಗರದ ಎಂಟು ವಲಯಗಳಿಗೂ ಮಹಾಮಾರಿ ಹಬ್ಬುತ್ತಿದ್ದು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕು ತಡೆಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ …

Read More »