Breaking News

ರಾಜ್ಯ

ಹಣವಿಲ್ಲದೆ ಪರದಾಡ್ತಿದ್ದ ನಟಿಗೆ ಮೇಕಪ್ ಮ್ಯಾನ್ ಸಹಾಯ……..

ಮುಂಬೈ: ಕೊರೊನಾ ಲಾಕ್‍ಡೌನ್‍ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಅದೇ ರೀತಿ ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸೀರಿಯಲ್, ರಿಯಾಲಿಟಿ ಶೋಗಳಿಂದ ಖ್ಯಾತಿ ಪಡೆದಿರುವ ಸೋನಾಲ್ ವೆಂಗುರ್ಲೇಕರ್ ಕೊರೊನಾ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸ್ವಂತ ಸೋನಾಲ್ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಲಾಕ್‍ಡೌನ್‍ನಿಂದಾಗಿ ಮುಂದಿನ ತಿಂಗಳು ಜೀವನ ನಡೆಸಲು ನನ್ನ ಬಳಿ ಹೆಚ್ಚು …

Read More »

ರಮೇಶ್ ಕುಮಾರ್ ಲಾಕ್‍ಡೌನ್ ಉಲ್ಲಂಘನೆ- ನೂರಾರು ಜನ ಸೇರಿಸಿ ಕೆರೆ ಪೂಜೆ….

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂರಾರು ಜನರನ್ನು ಸೇರಿಸಿ ಕರೆಯಲ್ಲಿ ಪೂಜೆ ಮಾಡುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ತಮ್ಮದೆ ಮುಖಂಡರು, ಸ್ಥಳೀಯರನ್ನು ಸೇರಿಸಿಕೊಂಡು ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಪೂಜೆ ವೇಳೆ ನೂರಾರು ಜನರ ಜಮಾವಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಾಜಿ ಸ್ಪೀಕರ್ ವಿರುದ್ಧ ಹಲವರು …

Read More »

ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ ಕಮಾಂಡರ್ ಡಾ. ಜಿ ಶಿವಣ್ಣ………

ಬೆಂಗಳೂರು: ದೊಡ್ಡಬಸ್ತಿಯಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣದಿಂದ ಬೆಂಗಳೂರು ಆತಂಕಗೊಂಡಿತ್ತು. ಇಡೀ ದೊಡ್ಡಬಸ್ತಿ ಕೊರೊನಾ ಹಾಟ್‍ಸ್ಪಾಟ್ ಆಗುತ್ತಾ ಅನ್ನೋ ಆತಂಕ ಜನರನ್ನು ಕಾಡಿತ್ತು. ಆದರೆ ಜನರ ಸಹಕಾರ ಹಾಗೂ ಕೋವಿಡ್ ಕಮಾಂಡರ್ ಜಿ.ಶಿವಣ್ಣ ಅವರ ಮಾಸ್ಟರ್ ಪ್ಲಾನ್‍ನಿಂದ ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ದೊಡ್ಡಬಸ್ತಿಯನ್ನ ನೋಡಿ ಪಾದರಾಯನಪುರದ ಜನ ಬುದ್ಧಿ ಕಲಿಯಬೇಕಿದೆ. ಏಪ್ರಿಲ್ 12ರಂದು ಈ ಏರಿಯಾದಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು …

Read More »

ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ. ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ. …

Read More »

ಮನೆ ಬಾಗಿಲಿಗೆ ಕೋಲ್ಡ್ ಬಿಯರ್ ತಂದ ಮದ್ಯದ ಕಂಪನಿ ನಿರ್ದೇಶಕ………

ಲಂಡನ್: ಬ್ರಿಟನ್‍ನಲ್ಲಿ ಪಬ್‍ಗಳು ಬಂದ್ ಆಗಿವೆ. ಆದರೆ ಪೂರ್ವ ಲಂಡನ್‍ನ ವ್ಯಕ್ತಿಯೊಬ್ಬ ಬಿಯರ್ ಮಾರಲು ಉಪಾಯ ಹುಡುಕಿದ್ದು, ಕೆಗ್ಸ್ ಗಳನ್ನು ವ್ಯಾನ್‍ನಲ್ಲಿ ಪ್ಯಾಕ್ ಮಾಡಿಕೊಂಡು ಮನೆ ಮನೆಗೆ ಹಂಚುತ್ತಿದ್ದಾನೆ. ವ್ಯಾನ್ ಮೇಲೆ ‘ಟ್ಯಾಕ್ಟಿಕಲ್ ಬಿಯರ್ ರಿಸ್ಪಾನ್ಸ್ ಯುನಿಟ್’ ಎಂದು ಬರೆದುಕೊಂಡು ಫಾರೆಸ್ಟ್ ರೋಡ್ ಬ್ರೇವಿಂಗ್ ಕಂಪನಿಯ ನಿರ್ದೇಶಕ ಪೀಟರ್ ಬ್ರಾವ್ನ್ ಸ್ವತಃ ಬಿಯರ್ ಡೆಲಿವರಿ ಮಾಡಿ ಗ್ರಾಹಕರ ಎಣ್ಣೆ ದಾಹ ತಣಿಸುತ್ತಿದ್ದಾರೆ. ಬಾಕ್ಸ್, ಕ್ಯಾನ್ ಹಾಗೂ ಬಾಟಲಿಗಳ ಬದಲಿಗೆ ಬ್ರಾವ್ನ್ …

Read More »

ಡಾ. ಸಂತೋಷ ಕುರಬೆಟ್ ಅವರು ಶಸ್ತ್ರಚಿಕಿತ್ಸೆ ನೆರವೇರಿಸಿ ಬಾಲಕ ನುಂಗಿದ್ದ ೧೨ ಆಯಸ್ಕಾಂತೀಯ ಬಟನ್ ಹೊರತೆಗೆದು ಜೀವ ಉಳಿಸುವಲ್ಲಿ ಯಶಸ್ವಿ

ಬೆಳಗಾವಿ – ನೆರೆಯ ಗೋವಾ ರಾಜ್ಯದ ೨ ವರ್ಷದ ಮಗುವೊಂದು ತೀವ್ರ ಹೊಟ್ಟೆನೋವು ಹಾಗೂ ಕಪ್ಪಾದ ಬಣ್ಣದ ಮಲದೊಂದಿಗೆ ತೊಂದರೆಯನ್ನು ಅನುಭವಿಸುತ್ತ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಆಗಮಿಸಿತ್ತು. ಇದಕ್ಕೂ ಮುಂಚೆ ಕೊರೊನಾ ವೈರಸ್ ಕೋವಿಡ್ -೧೯ ಸಂದರ್ಭದಲ್ಲಿ ದೇಶಾದ್ಯಂತ ಲಾಕಡೌನ ಪರಿಸ್ಥಿಯಲ್ಲಿ ಬಾಲಕನ ಚಿಕಿತ್ಸೆಗಾಗಿ ಪಾಲಕರು ಸುತ್ತಾಡಿ ಸುಸ್ತಾಗಿದ್ದರು. ಕೊನೆಗೆ ಗೋವಾದ ಜಿಲ್ಲಾಡಳಿತದ ಅನುಮತಿ ಪಡೆದು ಬೆಳಗಾವಿಗೆ ಆಗಮಿಸಿದ್ದರು. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಲಕನನ್ನು ಎಕ್ಸರೇ ತೆಗೆದು …

Read More »

ದುಬೈನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ 177 ಕರಾವಳಿಗರು

ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಇಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ ದುಬೈನಿಂದ ಭಾರತೀಯ ಕಾಲಮಾನ ಸಂಜೆ 4:10ಕ್ಕೆ ವಿಮಾನ ಹೊರಡಲಿದ್ದು, ರಾತ್ರಿ ಸುಮಾರು 9:10 ಗಂಟಗೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ. ದುಬೈಯಿಂದ ಬರುವ 177 ಪ್ರಯಾಣಿಕರಲ್ಲಿ ಎಷ್ಟು ಮಹಿಳೆಯರು, ಪುರುಷರು ಹಾಗೂ ಗರ್ಭಿಣಿಯರು, ಆರೋಗ್ಯ ಸಮಸ್ಯೆ ಎಂಬುವುದು ದುಬೈ ವಿಮಾನ …

Read More »

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಭಾನುವಾರ ರಾತ್ರಿ 8:45ರ ವೇಳೆಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಸಿಕೊಂಡಿದೆ. ಆ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಏಮ್ಸ್​ …

Read More »

ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ

ಚೆನ್ನೈ:ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ವಾಸು(38) ಎಂದು ಗುರುತಿಸಲಾಗಿದ್ದು, ವಿನಯಗಂ(43) ಕೊಲೆಯಾದ ದುರ್ದೈವಿಯಾಗಿದ್ದಾನೆ. ತಮಿಳುನಾಡಿನ ಚೆಂಗಲ್ಪಟ್ಟುವಿನ ಗುಡುವಾಂಚೇರಿ ಪಟ್ಟಣದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ವಾಸು ಹಾಗೂ ವಿನಯಗಂ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಹೂವು ಮಾರುವುದು, ಕ್ಯಾಬ್ ಓಡಿಸುವುದು ಹಾಗೂ ರಿಯಲ್ ಎಸ್ಟೇಟ್ ಬ್ರೋಕರ್ಸ್ ಆಗಿದ್ದರು. ಲಾಕ್‍ಡೌನ್ ಸಡಿಲಿಕೆ …

Read More »

ಇ-ಪಾಸ್​​ ಪಡೆದ ಅಂತರ್​​ ರಾಜ್ಯ ಪ್ರಯಾಣಿಕರಿಗೆ ಬಸ್​​ ವ್ಯವಸ್ಥೆ – ಕೆಎಸ್​ಆರ್​​ಟಿಸಿ ಸಂಸ್ಥೆ

ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಈ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕ್‌ಡೌನ್‌ ವಿಸ್ತರಣೆಯಾಗಿದೆ. ಎರಡು ಹಂತದ ಲಾಕ್‌ಡೌನ್‌ಗಳನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್‌ಡೌನ್‌ ಸಡಿಲಗೊಳಿಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿದೆ. ಇದರಲ್ಲಿ ಅಂತರ್‌ ರಾಜ್ಯ ಪ್ರಯಾಣವೂ ಒಂದು. ಹೌದು, ಅಂತರ್​ ರಾಜ್ಯ ಪ್ರಯಾಣಕ್ಕಾಗಿ ಜನ ಸರ್ಕಾರದಿಂದ ಇ- ಪಾಸ್‌ ಪಡೆಯಬೇಕಾದ ಅಗತ್ಯ ಇದೆ. ಯಾವುದೇ ಮುನ್ಸೂಚನೆ ಇಲ್ಲದೇ ದೇಶವ್ಯಾಪಿ …

Read More »