ಕಾರವಾರ: 20 ದಿನದ ಅಂತರದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಆರೆಂಜ್ ಝೋನ್ ನಿಂದ ಗ್ರೀನ್ ಝೋನ್ ನತ್ತ ಸಾಗುತ್ತಿರುವುದರಿಂದ ಜಿಲ್ಲೆಯ ಜನ ಆತಂಕ ಪಡುವಂತಾಗಿದೆ. ಇಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಭಟ್ಕಳದ 28 ವರ್ಷದ ಯುವಕ ಎಂದು ನಮೂದಾಗಿ ಪ್ರಕಟಗೊಂಡಿತ್ತು. ಆದರೆ ಅದು 18 ವರ್ಷದ ಯುವತಿಯಾಗಿದ್ದು ಸರ್ಕಾರದ ಪ್ರಕಟಣೆಯಲ್ಲಿ ಲೋಪದಿಂದ ಯುವತಿ ಬದಲು ಪುರುಷ …
Read More »ಕೊರೊನಾ ವಾರಿಯರ್ಸ್ ಗೆ ಸೇನೆಯಿಂದ ಸೆಲ್ಯೂಟ್ ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಗೌರವ ವಂದನೆ
ನವದೆಹಲಿ: ಕೊರೊನಾ ವಿರುದ್ಧ ಹಗಲು-ರಾತ್ರಿ ಎನ್ನದೇ ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ದೇಶಾದ್ಯಂತ ಸೇನೆಯಿಂದ ಗೌವರ ಸಲ್ಲಿಸಲಾಗುತ್ತಿದೆ. ಬೆಂಗಳೂರು, ಗೋವಾ, ಕೇರಳ, ಹರ್ಯಾಣ, ಪಂಜಾಬ್, ನವದೆಹಲಿ ರಾಜ್ ಪಥ, ಲೇ ಲಡಾಕ್ ಸೇರಿದಂತೆ ದೇಶಾದ್ಯಂತ ಭೂಸೇನೆ, ನೌಕಾ ಸೇನೆ, ವಾಯುಸೇನೆಯಿಂದ ದಣಿವರಿಯದೇ ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಸ್ ಗೆ ಹೆಲಿಕಾಪ್ಟರ್ ಮೂಲಕ ಹೂವಿನ ಮಳೆಗರೆದು ಗೌರವ ವಂದನೆ ಸಲ್ಲಿಸಲಾಯಿತು. ದೇಶಾದ್ಯಾಂತ ಇರುವ ಕೊವಿಡ್-19 ಆಸ್ಪತ್ರೆಗಳ ಮೇಲೆ ಶ್ರೀನಗರದಿಂದ ತಿರುವನಂತಪುರಂವರೆಗೆ …
Read More »ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ………….
ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು 69 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ(ರೋಗಿ ಸಂಖ್ಯೆ 556) ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿಯಿಂದ …
Read More »ಇರೋಕೆ ಊಟ ಇಲ್ಲ, ಹೋಗೋಕೆ ಕಾಸಿಲ್ಲ : ಅಡಕತ್ತರಿಯಲ್ಲಿ ಅಂತರ ರಾಜ್ಯ ಕಾರ್ಮಿಕರ ಭವಿಷ್ಯ..!
ಬೆಂಗಳೂರು : ಅಂತರ ರಾಜ್ಯ ವಲಸಿಗರ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅಸ್ತು ಎಂದಿದೆ. ರಾಜ್ಯದಲ್ಲೂ ಅನ್ಯ ರಾಜ್ಯದ ಸಾವಿರಾರು ವಲಸಿಗರು ಸಿಲುಕಿಕೊಂಡಿದ್ದು, ತಮ್ಮ ಊರುಗಳಿಗೆ ಹೋಗಲು ಹಾತೊರೆಯುತ್ತಿದ್ದಾರೆ. ಆದರೆ, ಹಲವು ವಲಸಿಗರಿಗೆ ತಮ್ಮ ತವರು ರಾಜ್ಯಕ್ಕೆ ಹೋಗುವ ರಹದಾರಿ ಕಠಿಣವಾಗಿದೆ. ಕೊರೊನಾ ಲಾಕ್ಡೌನ್ನಿಂದ ವಲಸಿಗರು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಒಂದು ಕಡೆ ಕೆಲಸ ಇಲ್ಲ, ಇನ್ನೊಂದೆಡೆ ವಸತಿ, ಆಹಾರ ಇಲ್ಲದೇ ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದಾರೆ. ಆಯಾ ರಾಜ್ಯ ಸರ್ಕಾರ ವಲಸಿಗರಿಗೆ …
Read More »ರಾಜ್ಯದ ರೆಡ್ ಝೋನ್ ,ಆರೆಂಜ್ ಝೋನ್,ಗ್ರೀನ್ ಝೋನ್ ಗಳ ಪರಿಷ್ಕೃತ ಪಟ್ಟಿ……..
ಬೆಂಗಳೂರು : ಮಾರಕ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಏತನ್ಮಧ್ಯೆ, ಕೇಂದ್ರ ಆರೋಗ್ಯ ಇಲಾಖೆ ಇಂದು ದೇಶದ ರೆಡ್, ಆರೆಂಜ್, ಗ್ರೀನ್ ಝೋನ್ ಗಳ ಪರಿಷ್ಕೃತ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಪೈಕಿ 130 ಜಿಲ್ಲೆಗಳು ರೆಡ್ ಜೋನ್ ನಲ್ಲಿವೆ.ರಾಜ್ಯದ ಮೂರು ಜಿಲ್ಲೆಗಳು ರೆಡ್ ಝೋನ್‌ನಲ್ಲಿವೆ. ಸೋಂಕಿನ ತೀವ್ರತೆ ಹೆಚ್ಚಾಗಿರುವ ಜಿಲ್ಲೆಗಳನ್ನು ರೆಡ್ ಜೋನ್ ಗೆ ಸೇರಿಸಿದ್ದು, ಬೆರಳೆಣಿಕೆ ಪ್ರಕರಣಗಳಿರುವ ಜಿಲ್ಲೆಗಳು ಆರೆಂಜ್ ಪಟ್ಟಿಯಲ್ಲಿವೆ. ಕಳೆದ 15 …
Read More »ಮಹಿಳೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬೇಡಿ, ಬೇಕಿದ್ದರೆ ನನ್ನ ಅರ್ಧ ಸಂಬಳವನ್ನು ನೀಡುತ್ತೇನೆ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ.
ಬೆಂಗಳೂರು: ಹಲವರು ಮದ್ಯದಂಗಡಿ ಯಾವಾಗ ತೆರೆಯುತ್ತೆ ಎಂದು ಕಾಯುತ್ತಿದ್ದಾರೆ. ಇನ್ನು ಕೆಲವರು ಮದ್ಯದಂಗಡಿ ತೆರೆಯುವಂತೆ ಸರ್ಕಾರಕ್ಕೆ ದುಂಬಾಲು ಬಿದ್ದಿದ್ದಾರೆ. ಆದರೆ ಇಲ್ಲೊಬ್ಬ ಮಹಿಳೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬೇಡಿ, ಬೇಕಿದ್ದರೆ ನನ್ನ ಅರ್ಧ ಸಂಬಳವನ್ನು ನೀಡುತ್ತೇನೆ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಮುಖ್ಯಮಂತ್ರಿಗಳಿಗೆ ನನ್ನದೊಂದು ಮನವಿ. ಎಣ್ಣೆ ಅಂಗಡಿ ತೆರೆಯಲು ಅವಕಾಶ ನೀಡಬೇಡಿ. ಏಕೆಂದರೆ ಮದ್ಯ …
Read More »ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ
ಆಹಾರ ಪದಾರ್ಥಗಳ ಕಿಟ್ಗಳನ್ನು ಪಡೆಯುವ ಸಲುವಾಗಿ ನೂರಾರು ಜನರು ಒಂದೆಡೆ ಸೇರಿದ್ದರು. ಎಲ್ಲರೂ ಬಿಸಿಲಿನಲ್ಲಿ ಗಂಟೆಗೂ ಹೆಚ್ಚು ಕಾದರೂ ಶಾಸಕ ರೇಣುಕಾಚಾರ್ಯ ಅವರು ಸ್ಥಳಕ್ಕೆ ಬರಲಿಲ್ಲ. ಇದರಿಂದ ಅಸಮಾಧಾಗೊಂಡ ಜನರು ತಾವು ಮನೆಗೆ ಹೋಗುವುದಾಗಿ ಹೇಳಿದ್ದಾರೆ. ದಾವಣಗೆರೆ: ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ ಮಾಡಿದ ಘಟನೆ ಹೊನ್ನಾಳಿ ತಾಲೂಕಿನ ಹನಮಸಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ. ಕಿಟ್ ಬೇಡ ಅಂದ್ರೆ ಎದ್ದು ಹೋಗು ಎಂದು ಶಾಸಕರು …
Read More »ಎಪಿಎಂಸಿಯ 50 ಕೋಟಿ ವಂಚನೆ ಪ್ರಕರಣ : 12 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ
ಬೆಂಗಳೂರು, ಏ.30- ಎಪಿಎಂಸಿಯ 50 ಕೋಟಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿರುವ ಸಿಸಿಬಿ ಪೆÇಲೀಸರು ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 12 ಆರೋಪಿಗಳ ವಿರುದ್ಧ ಸುಮಾರು 1400 ಪುಟಗಳ ಪ್ರಾಥಮಿಕ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಮುಖ ಆರೋಪಿ ಸಿಂಡಿಕೆಟ್ ಬ್ಯಾಂಕ್‍ನ ಸಹಾಯಕ ವ್ಯವಸ್ಥಾಪಕ ಸಿದ್ದಲಿಂಗಯ್ಯ ಹಾಗೂ ನಿವೃತ್ತ ಖಜಾನೆ ಅಧಿಕಾರಿ ಲಕ್ಷ್ಮಯ್ಯ ಸೇರಿದಂತೆ 12 ಮಂದಿ ಆರೋಪಿಗಳಲ್ಲಿ ಕೆಲವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ ಕೃಷಿ ಉತ್ಪನ್ನ ಮಾರುಕಟ್ಟೆ …
Read More »ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಬೆಳಗಾವಿ – ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಿಆರ್ ಪಿಎಫ್ ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ ಮಾಸ್ಕ್ ಧರಿಸಿರಲಿಲ್ಲ ಎನ್ನುವ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಮಾರಾಮಾರಿ ಹಂತಕ್ಕೆ ಹೋಗಿತ್ತು. ನಂತರ ಯೋಧನನ್ನು ಅಮಾನವೀಯವಾಗಿ ಠಾಣೆಗೆ ಕರೆದೊಯ್ದು ಹಿಂಸಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಯೋಧನಿಗೆ ಕೊಳ ತೊಡಿಸಿ ಕೂಡ್ರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ …
Read More »ಬೆಳಗಾವಿ ಯೋಧನಿಗೆ ಬಾಸುಂಡೆ ಬರೋ ಹಾಗೆ ಥಳಿತ
ಬೆಳಗಾವಿ: ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ್ ಅವರಿಗೆ ಬಾಸುಂಡೆ ಬರುವ ಹಾಗೆ ಸದಲಗಾ ಪೊಲೀಸರು ಥಳಿಸಿರುವ ಆರೋಪಗಳು ಕೇಳಿ ಬಂದಿದೆ. ಯೋಧನಿಗೆ ಬಾಸುಂಡೆ ಬಂದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಪೊಲೀಸರ ನಡೆಗೆ ಕಿಡಿಕಾರಿದ್ದಾರೆ. ಏಪ್ರಿಲ್ 23ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಮತ್ತು ಯೋಧನ ನಡುವೆ ಗಲಾಟೆ ನಡೆದಿತ್ತು. ತದನಂತರ ಪೊಲೀಸರು ಯೋಧನನ್ನು ಠಾಣೆಗೆ ಕರೆದುಕೊಂಡು ಕೈಗೆ ಕೋಳ ಹಾಕಿದ್ದರು. …
Read More »
Laxmi News 24×7