ಬೆಂಗಳೂರು – ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೊರೋನಾ ಇಂದು ಕೇವಲ ಒಂದೇ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇಂದು ಬಂದಿರುವ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೋರ್ವಳಲ್ಲಿ ಮಾತ್ರ ಕೊರೋನಾ ವೈರಸ್ ಪತ್ತೆಯಾಗಿದೆ. ಉಳಿದಂತೆ ಬೇರೆ ಯಾವುದೇ ಪ್ರದೇಶದಲ್ಲಿ ಕೊರೋನಾ ರೋಗ ಪತ್ತೆಯಾಗಿಲ್ಲ. ಇದರಿಂದಾಗಿ ರಾಜ್ಯದಲ್ಲಿ ರೋಗಿಗಳ ಸಂಖ್ಯೆ 501 ಆದಂತಾಗಿದೆ. …
Read More »ಅನಂತಕುಮಾರ್ ಹೆಗಡೆ ಟ್ವಿಟ್ಟರ್ ಖಾತೆ ಲಾಕ್-ಹೆಗಡೆ ಕಿಡಿ………..
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅವರ ಟ್ವಿಟ್ಟರ್ ಖಾತೆಯನ್ನು ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಲಾಕ್ ಮಾಡಲಾಗಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟ್ಟರ್, ‘ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ’ ಎಂದು ಗಮನಕ್ಕೆ ತಂದಿದೆ. ಅಷ್ಟಕ್ಕೂ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವೀಟ್ ಅನ್ನು ಡಿಲಿಟ್ ಮಾಡುವಂತೆ ಸೂಚಿಸಿದೆ. ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ …
Read More »ನಿಜವಾದ ಸಂತೋಷ ಅಂದ್ರೆ ಏನೆಂದು ತೋರಿಸಿದೆ – ಭಾವಿ ಪತ್ನಿಗೆ ಕೃಷ್ಣ ವಿಶ್
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮಿಲನಾ ನಾಗರಾಜ್ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೀಗಾಗಿ ನಟ ಡಾರ್ಲಿಂಗ್ ಕೃಷ್ಣ ತಮ್ಮ ಗೆಳತಿಗೆ ಸೋಶಿಯಲ್ ಮೀಡಿಯಾದ ಮೂಲಕ ವಿಶೇಷ ರೀತಿಯಲ್ಲಿ ಶುಭಾಶಯ ತಿಳಿಸಿದ್ದಾರೆ. ಕೊರೊನಾ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಮಿಲನಾ ನಾಗರಾಜ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತ ಕೃಷ್ಣ ಕೂಡ ತಮ್ಮ ಪ್ರೇಯಸಿಯನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದ ಮೂಲಕವೇ ಕೃಷ್ಣ ವಿಶ್ ಮಾಡಿದ್ದಾರೆ. ಕೃಷ್ಣ ಇನ್‍ಸ್ಟಾಗ್ರಾಂನಲ್ಲಿ ಒಂದು …
Read More »ಲಾಕ್‍ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್
ಮಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಎಲ್ಲ ವರ್ಗದ ಜನ ಆತಂಕದಲ್ಲಿದ್ದಾರೆ. ದೇಶದ ಬೆನ್ನೆಲುಬು ರೈತನು ಕೂಡ ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಕಷ್ಟ ನಷ್ಟ ಅನುಭವಿಸುವಂತಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ಕೇರಳದ ಎರ್ನಾಕುಲಂ ಮೂಲದ ಶೈಜು 100 ಎಕರೆ ಜಮೀನನ್ನು ಲೀಸ್‍ಗೆ ಪಡೆದು ಅನಾನಸ್ ಕೃಷಿ ಮಾಡಿದ್ದರು. ಶ್ರಮಕ್ಕೆ ತಕ್ಕ ಪ್ರತಿಫಲ ಭರ್ಜರಿ ಫಸಲು ಕೂಡ ಬಂದಿತ್ತು. …
Read More »ಕಾರ್ಮಿಕರ ಓಡಾಟಕ್ಕೆ ರಸ್ತೆಗೆ ಇಳಿಯಿತು 137 KSRTC ಬಸ್ಸುಗಳು
ಬೆಂಗಳೂರು: 6 ಜಿಲ್ಲೆಗಳಲ್ಲಿ ಕಾರ್ಮಿಕರ ಓಡಾಟಕ್ಕೆ ಕೆಎಸ್ಆರ್‌ಟಿಸಿಯ 137 ಬಸ್ಸುಗಳು ರಸ್ತೆಗೆ ಇಳಿದಿದೆ. 56 ಸೀಟುಗಳ ಈ ಬಸ್ಸಿನಲ್ಲಿ 21 ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅನುಮತಿ ಸಿಕ್ಕಿದೆ. ಕಾರ್ಮಿಕರು ಸೀಟು ಖಾಲಿ ಬಿಟ್ಟು ಕೂರಬೇಕು ಎಂದು ಷರತ್ತು ವಿಧಿಸಲಾಗಿದೆ. ಈ ಬಸ್ಸುಗಳು ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸಿಗ ಕಾರ್ಮಿಕರಿಗಾಗಿ ಮಾತ್ರ ಎಂದು ಕೆಎಸ್ಆರ್‌ಟಿಸಿ ಸ್ಪಷ್ಟಪಡಿಸಿದೆ. ಈ ಬಸ್ಸುಗಳು ಜಿಲ್ಲಾ ವ್ಯಾಪ್ತಿಯ ಒಳಗಡೆ ಮಾತ್ರ ಸಂಚರಿಸುತ್ತದೆ. ಜಿಲ್ಲಾಡಳಿತದ ಮನವಿಯ ಹಿನ್ನೆಲೆಯಲ್ಲಿ …
Read More »ಹೊರ ಜಿಲ್ಲೆಯ ಉದ್ಯೋಗದಿಂದ ಹಿಂತಿರುಗಿದವರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಸೂಚನೆ
ಹಾವೇರಿ: ಎ.25 (ಕರ್ನಾಟಕ ವಾರ್ತೆ): ಉದ್ಯೋಗ ನಿಮಿತ್ಯ ಹೊರ ಜಿಲ್ಲೆಗಳಲ್ಲಿ ಉಳಿದುಕೊಂಡವರು ಇದೀಗ ಮರಳಿ ತಮ್ಮ ಸ್ವಂತ ಗ್ರಾಮಕ್ಕೆ ಆಗಮಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಜಿಲ್ಲೆಗೆ ಬರುವ ಜನರನ್ನು ಕಡ್ಡಾಯವಾಗಿ ಸ್ವ್ಯಾಬ್ ಪರೀಕ್ಷೆಗೆ ಒಳಪಡಿಸಿ ಪ್ರಯೋಗಾಲಯದ ಮಾದರಿ ಬರುವತನಕ ಸರ್ಕಾರಿ ಕ್ವಾರಂಟೈನ್‍ನಲ್ಲಿ ಇರಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಎಲ್ಲ ತಹಶೀಲ್ದಾರಗಳಿಗೆ ಸೂಚನೆ ನೀಡಿದರು. ಶನಿವಾರ ಜಿಲ್ಲೆಯ ತಹಶೀಲ್ದಾರಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಸರ್ಕಾರದ ಸೂಚನೆಯಂತೆ ರಾಜ್ಯದ ವಲಸೆ ಕಾರ್ಮಿಕರನ್ನು …
Read More »ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬಡವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ.
ಮಡಿಕೇರಿ: ಇಡೀ ವಿಶ್ವವನ್ನೇ ಆವರಿಸಿರುವ ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬಡವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಕರಿಯಪ್ಪ ಬಡಾವಣೆ ವೃದ್ಧ ದಂಪತಿ ಕೊರೊನಾ ಲಾಕ್‍ಡೌನ್‍ನಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ವಿಲನ್ಸ್ ಮತ್ತು ಜಯಲಕ್ಷ್ಮಿ ದಂಪತಿ ಕನಿಷ್ಠ ಊಟಕ್ಕೂ ಗತಿ ಇಲ್ಲದೆ ಕಣ್ಣೀರು ಇಡುತ್ತಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಅಪಘಾತದಲ್ಲಿ ವಿಲನ್ಸ್ ಅವರ ಕಾಲು ಮುರಿದುಹೋಗಿತ್ತು. ಬಳಿಕ ಅಕ್ಕಪಕ್ಕದ ಮನೆಯವರಿಂದ 40 …
Read More »ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆ ರದ್ದು……..
ಚಿಕ್ಕೋಡಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಿ ಕೊರೊನಾ ವಾರಿಯರ್ಸ್‍ಗೆ ಅನ್ನ ದಾಸೋಹ ಮಾಡಿ ಹುಕ್ಕೇರಿ ಹಿರೇಮಠ ಮಾದರಿಯಾಗಿದೆ. ಪ್ರತಿ ವರ್ಷ ಏಪ್ರಿಲ್ 24ರಿಂದ ಹುಕ್ಕೇರಿ ಹಿರೇಮಠದಲ್ಲಿ ಗುರುಶಾಂತೇಶ್ವರ ಜಾತ್ರೆ ನಡೆಯಬೇಕಿತ್ತು. ಆದರೆ ಜಾತ್ರೆಯನ್ನು ಈ ಬಾರಿ ರದ್ದು ಮಾಡಲಾಗಿದೆ. ಜಾತ್ರೆ ರದ್ದಾದರೂ ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಪೌರ ಕಾರ್ಮಿಕರು, ಪೊಲೀಸರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಅನ್ನ ದಾಸೋಹವನ್ನು ಆಯೋಜಿಸಲಾಗಿತ್ತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ …
Read More »ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿನಲ್ಲಿ ಹಗಲಿರುಳೆನ್ನದೇ
ಸಂಕೇಶ್ವರ ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿನಲ್ಲಿ ಹಗಲಿರುಳೆನ್ನದೇ ಶ್ರಮಿಸುತ್ತಿರುವ ಸಂಕೇಶ್ವರ ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಪಿಪಿ ಕೀಟ್’ನ್ನು ವಿತರಿಸಿ, ಪೋಲಿಸ್ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗೋಕಾಕ ಡಿವೈಎಸ್ಪಿ ಶ್ರೀ ಡಿ.ಟಿ.ಪ್ರಭು, ಹುಕ್ಕೇರಿ ಸಿಪಿಆಯ್ ಗುರುರಾಜ ಕಲ್ಯಾಣ ಶೆಟ್ಟಿ, ಪಿಎಸ್ಐ ಗಣಪತಿ ಕೊಗನೊಳಿ, ಸಿಬ್ಬಂದಿಗಳಾದ ಬಿ.ಕೆ.ನಾಗನೂರಿ, ಬಿ.ಎಸ್.ಕಪರಟ್ಟಿ, ಎಸ್.ಆರ್.ರಾಜಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Read More »ಕೋವಿಡ್-೧೯: ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಪರೀಕ್ಷೆ “ಮಾಧ್ಯಮ ಪ್ರತಿನಿಧಿಗಳು ಮುನ್ನೆಚ್ಚರಿಕೆ ವಹಿಸಲಿ”- ಡಾ.ಮುನ್ಯಾಳ
ಬೆಳಗಾವಿ, ಏ.೨೫(ಕರ್ನಾಟಕ ವಾರ್ತೆ): ಕೋವಿಡ್-೧೯ ಹರಡುವಿಕೆ ತಡೆಗಟ್ಟುವ ಕುರಿತು ಜನಜಾಗೃತಿ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿರುವ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿದಂತೆ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ “ವಾರ್ತಾಭವನ”ದಲ್ಲಿ ಶನಿವಾರ (ಏ.೨೫) ಕೋವಿಡ್-೧೯ ಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ನಡೆಸಲಾಯಿತು. ಈ …
Read More »
Laxmi News 24×7