ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮೊಬೈಲ್ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನ ಬನಶಂಕರಿ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ದಿಗಂತ್ (28) ಬಂಧಿತ ಆರೋಪಿ. ಹಾಸನದ ಹೊಳೆನರಸೀಪುರ ಮೂಲದ ದಿಗಂತ್ 20 ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದ. ಈತನ ತಂದೆ ಕಂಪೆನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು ಕುಟುಂಬಸ್ಥರೊಂದಿಗೆ ಪೀಣ್ಯದ ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ. ಇಂದಿರಾನಗರದ ಖಾಸಗಿ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿದ್ದು, ಪ್ರತಿದಿನ …
Read More »ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು” ವಿಚಾರ ಸಂಕಿರಣ
ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು” ವಿಚಾರ ಸಂಕಿರಣ ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಿಚಾರ ಸಂಕಿರಣ ಸುಮಾರು ೧೨೦ ಜನರು ಪಡೆದುಕೊಂಡರು ಸದುಪಯೋಗ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಾಗೂ ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಳಗಾವಿ, ಇಂಡಿಯನ್ ಫಾಮರ‍್ಸ್ ಫರ್ಟಿಲೈರ‍್ಸ್ ಕೋ-ಆಪ್ ಲಿ. ಕಂಪನಿಯ ಸಹಯೋಗದಲ್ಲಿ …
Read More »ನಾನು 2028ಕ್ಕೆ ಗುರಿ ಇಟ್ಟುಕೊಂಡವನು ಎಂದಿರುವ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು : ನಾನು ಮಹಾನಾಯಕ ಅಲ್ಲ. ನಾನು ಈಗ ಸಿಎಂ ಕ್ಯಾಂಡಿಡೇಟ್ ಅಲ್ಲ. ನಾನು 2028ಕ್ಕೆ ಗುರಿ ಇಟ್ಟುಕೊಂಡವನು. ಈಗ ನಾನೇನು ಅದಕ್ಕೆ ಒತ್ತಡ ಹಾಕುತ್ತಿಲ್ಲ. ನಮ್ಮದೇನಿದ್ರೂ 2028ಕ್ಕೆ ಎಂದು ಸಚಿವ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ರಾಮನಗರ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಅಧಿಕಾರದಲ್ಲಿ ಯಾರೂ ಶಾಶ್ವತ ಅಲ್ಲ. ಚಕ್ರ ತಿರುಗುತ್ತಲೇ ಇರುತ್ತದೆ. ಡಿಸಿಎಂ ಏನೋ ಉದ್ದೇಶ ಇಟ್ಟು ಮಾಡಿರಬಹುದು. ಈ ಹಿಂದೆ ಹೊಸಪೇಟೆ, ವಿಜಯನಗರ ಮಾಡಿದ್ರು. ಯುಪಿಯಲ್ಲೂ …
Read More »ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ಗಳ ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್
ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ಗಳ ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸ್ವಸಹಾಯ/ಸ್ತ್ರೀ ಶಕ್ತಿ ಮಾದರಿಯಲ್ಲಿ ಗುಂಪುಗಳ ರಚನೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಸಚಿವರು ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ …
Read More »ಭಾವುಕರಾಗಿ ಹುಕ್ಕೇರಿ ಯಿಂದ ತೇರಳಿದ ನ್ಯಾಯಾಧೀಶ ರೋಟ್ಟೆರ ಹುಕ್ಕೇರಿ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ರವರು ಗುಲಬರ್ಗಾ ನಗರಕ್ಕೆ ವರ್ಗಾವಣೆ
ಹುಕ್ಕೇರಿ : ಭಾವುಕರಾಗಿ ಹುಕ್ಕೇರಿ ಯಿಂದ ತೇರಳಿದ ನ್ಯಾಯಾಧೀಶ ರೋಟ್ಟೆರ ಹುಕ್ಕೇರಿ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ರವರು ಗುಲಬರ್ಗಾ ನಗರಕ್ಕೆ ವರ್ಗಾವಣೆ ಗೊಂಡ ಹಿನ್ನಲೆಯಲ್ಲಿ ಹುಕ್ಕೇರಿ ನ್ಯಾಯವಾದಿಗಳ ಸಂಘದ ವತಿಯಿಂದ ಬಿಳ್ಕೋಡುವ ಸಮಾರಂಭ ಜರುಗಿತು. ಹುಕ್ಕೇರಿ ನ್ಯಾಯಾಲಯ ಸಭಾ ಭವನದಲ್ಲಿ ಜರುಗಿದ ಸಮಾರಂಭದಲ್ಲಿ ವರ್ಗಾವಣೆ ಗೊಂಡ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ಮತ್ತು ಕಿರಿಯ ನ್ಯಾಯಾಧೀಶ ಗುರುಪ್ರಸಾದ ರವರಿಗೆ ನ್ಯಾಯವಾದಿಗಳು ಆತ್ಮಿಯವಾಗಿ ಸತ್ಕರಿಸಿ ಶುಭ ಹಾರಿಸಿದರು. …
Read More »ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆ
ಕೃಷ್ಣಾ ನದಿಗೆ 4 ಅಡಿಯಷ್ಟು ನೀರು ಏರಿಕೆ ಚಿಕ್ಕೋಡಿ:ಬಿಸಿಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ …
Read More »ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪೊಲೀಸ್ ವಶಕ್ಕೆ
ಬೆಂಗಳೂರು : ಸಹನಟಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಈ ಸಂಬಂಧ ಕಾಮಿಡಿ ಕಿಲಾಡಿ ರಿಯಾಲಿಟಿ ಶೋ ಖ್ಯಾತಿಯ ಮಡೆನೂರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 33 ವರ್ಷದ ಸಹ ನಟಿ ನೀಡಿದ ದೂರಿನ ಮೇರೆಗೆ ಹಾಸನದ ಶಾಂತಿಗ್ರಾಮದಲ್ಲಿ ಆರೋಪಿ ಮನು ಅವರನ್ನು ವಶಕ್ಕೆ ಪಡೆದು ಕರೆತರಲಾಗುತ್ತಿದೆ. ವಿಚಾರಣೆ ಮುಕ್ತಾಯದ ಬಳಿಕ ಕಾನೂನು ಪ್ರಕ್ರಿಯೆಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹಾಸ್ಯ ನಟನಾಗಿ ಖ್ಯಾತಿ …
Read More »ಬೆಳಗಾವಿ ಜಿಲ್ಲೆಯ ಒಟ್ಟು 15 ಕಡೆಗಳಲ್ಲಿ ಸ್ಕೈ ವಾಕ್ ನಿರ್ಮಾಣ ಮಾಡಲು ಮುಂದಾದ ಪಾಲಿಕೆ
ಬೆಳಗಾವಿ: ದಿನದಿಂದ ದಿನಕ್ಕೆ ರಾಜ್ಯದ ಎರಡನೇ ರಾಜಧಾನಿ ಬೆಳಗಾವಿ ವೇಗವಾಗಿ ಬೆಳೆಯುತ್ತಿದೆ. ಅದೇ ರೀತಿ ಮಹಾನಗರದಲ್ಲಿ ಸಂಚಾರ ದಟ್ಟಣೆ ಕೂಡ ಹೆಚ್ಚುತ್ತಿದೆ. ಹಾಗಾಗಿ, ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ರಸ್ತೆ ದಾಟಲು ಪಾದಚಾರಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಮಹಾನಗರ ಪಾಲಿಕೆಯು ಖಾಸಗಿ ಸಹಭಾಗಿತ್ವದಲ್ಲಿ ಸ್ಕೈ ವಾಕ್ ನಿರ್ಮಾಣಕ್ಕೆ ಮುಂದಾಗಿದೆ. ಹೌದು, ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹಾಗಾಗಿ, ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸಬೇಕಾದ ಪರಿಸ್ಥಿತಿ …
Read More »ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಕುರಿತ ಚರ್ಚೆ ಅಪೂರ್ಣವಾಗಿದೆ: ಹೆಚ್.ಕೆ.ಪಾಟೀಲ್
ಬೆಂಗಳೂರು: “ಜಾತಿಗಣತಿ ಬಗ್ಗೆ ಚರ್ಚೆ ಅಪೂರ್ಣವಾಗಿದೆ. ಬಹುತೇಕ ಸಚಿವರು ಲಿಖಿತ ಅಭಿಪ್ರಾಯ ನೀಡಿದ್ದಾರೆ. ಕೆಲವರು ಕೊಡಬೇಕಿದೆ. ಈ ಬಗ್ಗೆ ಚರ್ಚೆಯಾದ ಮೇಲೆ ತೀರ್ಮಾನ ಮಾಡುತ್ತೇವೆ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಇಂದು ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024ರಲ್ಲಿ ಮಾಡಿರುವ ಶಿಫಾರಸುಗಳ …
Read More »ಮಳೆ ಬಂದ್ರೆ ಕೆರೆಯಂತಾಗುವ ಹೆಚ್‌ಬಿಆರ್ ಲೇಔಟ್
ಬೆಂಗಳೂರು: ಪ್ರತಿ ಬಾರಿಯೂ ಮಳೆ ಅಬ್ಬರಿಸಿದಾಗ ನಗರದ ಹೆಚ್‌ಬಿಆರ್ ಲೇಔಟ್‌ನ ಹಲವಾರು ಪ್ರದೇಶಗಳು ಪ್ರವಾಹ ವಲಯಗಳಂತೆ ಮಾರ್ಪಡುತ್ತವೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಸಂದರ್ಭದಲ್ಲೂ ಇದು ಭಿನ್ನವಾಗಿರಲಿಲ್ಲ. ಧಾರಾಕಾರ ವರ್ಷಧಾರೆಗೆ ಚರಂಡಿಗಳು ತುಂಬಿ ಹರಿದಿದ್ದು, ಬೀದಿಗಳು ಜಲಾವೃತವಾಗಿದ್ದವು. ಮನೆಗಳಿಗೆ ನೀರು ನುಗ್ಗಿದ್ದರಿಂದ ಬಿಬಿಎಂಪಿ ಹಾಗೂ ಗುತ್ತಿಗೆದಾರರ ಪುನರಾವರ್ತಿತ ನಿರ್ಲಕ್ಷ್ಯ ಮತ್ತು ಕಳಪೆ ಕಾಮಗಾರಿಯ ವಿರುದ್ಧ ನಿವಾಸಿಗಳು ಆಕ್ರೋಶ ಹೊರಹಾಕಿದರು. ಇಲ್ಲಿನ ಮೂರನೇ ಬ್ಲಾಕ್ ಮಾಟೇಕರ್ ಬೀದಿ, ಫಾರೆಸ್ಟ್ ಪಾರ್ಕ್ ಬಳಿಯ 4ನೇ …
Read More »
Laxmi News 24×7