ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡದ ಎರಡು ನಗರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳು ಸೂರತ್ ಮೂಲದವರು ಅನ್ನೋದು ತನಿಖೆಯಿಂದ ಪತ್ತೆಯಾಗಿದೆ ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಎನ್ ಶಶಿಕುಮಾರ್ ತಿಳಿಸಿದರು. ಅವಳಿ ನಗರದ ಕೆಲ ಪ್ರಾರ್ಥನಾ ಮಂದಿರಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿದ್ದು, ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಾಸಕ ಅರವಿಂದ ಬೆಲ್ಲದ್ ಬರೆದ ಪತ್ರದ ವಿಚಾರ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.ಹುಬ್ಬಳ್ಳಿ – ಧಾರವಾಡ ನಗರ …
Read More »ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ
ಶಿವಮೊಗ್ಗ: ಬಂಧಿಸಲು ಬಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ನಡೆದಿದೆ. ವಾಕಿಂಗ್ ಹೋಗಿದ್ದ ಹೇಮಣ್ಣ ಎಂಬುವರನ್ನು ಕೊಲೆ ಮಾಡಿದ ಆರೋಪದ ಮೇಲೆ ಮಂಜು ಎಂಬಾತನ ಬಂಧನಕ್ಕೆ ಹೊಳೆ ಹೊನ್ನೂರು ಪೊಲೀಸರು ತೆರಳಿದ್ದರು. ಈ ವೇಳೆ, ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಪೊಲೀಸರು ಆತನ ಕಾಲಿಗೆ ಗುಂಡೇಟು ಹೊಡೆದು ಹಿಡಿದಿದ್ದಾರೆ. ಮೇ 9 ರಂದು …
Read More »ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದ ಬಳಕೆ ಆರೋಪ: ಸಿ.ಟಿ ರವಿಗೆ ಬಿಗ್ ರಿಲೀಫ್
ನವದೆಹಲಿ, (ಮೇ 19): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ (Lakshmi Hebbalkar) ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ (supreme court) ತಡೆಯಾಜ್ಞೆ ನೀಡಿದೆ. ಬೆಳಗಾವಿ ಅಧಿವೇಶನದ (Belagavi Session) ವೇಳೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ದೂರು ನೀಡಿದ್ದರು. ಆದ್ರೆ, ಈ ದೂರು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ …
Read More »ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ
ಬೆಂಗಳೂರು, ಮೇ 19: ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಸುರಿದ ಮಳೆ (rain) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ತಡರಾತ್ರಿ ಕೂಡ ಮಳೆ ಆರ್ಭಟಿಸಿದ್ದು, ವರ್ಷದ ಮೊದಲ ಬಲಿ (death) ಪಡೆದುಕೊಂಡಿದೆ. ರಣ ರಕ್ಕಸ ಮಳೆಗೆ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು ಪ್ರಾಣಬಿಟ್ಟಿದ್ದಾರೆ. ನಗರದ ವೈಟ್ ಫೀಲ್ಡ್ನ ಚನ್ನಸಂದ್ರದಲ್ಲಿ ದುರಂತ ಸಂಭವಿಸಿದೆ. ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ(35) ಮೃತ ಮಹಿಳೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ವೈಟ್ ಫೀಲ್ಡ್ …
Read More »ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರ ವಾಗ್ದಾಳಿ: ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಪೊಸ್ಟರ್ ಬಿಡುಗಡೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರ ವಾಗ್ದಾಳಿ: ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಪೊಸ್ಟರ್ ಬಿಡುಗಡೆ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಕೆ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಎಂಬ ಬರಹದ ಪೋಸ್ಟರ್ ಬಿಡುಗಡೆ ಮಾಡಿದರು. ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಬಿಡುಗಡೆ ಮಾಡಿದ ಬಿಜೆಪಿ ಮುಖಂಡರು …
Read More »ಬ್ಲ್ಯಾಕ್ಔಟ್ ಅಣಕು ಪ್ರದರ್ಶನ: ಬೆಳಗಾವಿಯಲ್ಲಿ ಆವರಿಸಿದ ಕಗ್ಗತ್ತಲು
ಬೆಳಗಾವಿ: ದೇಶದ ವಿವಿಧೆಡೆ ಯುದ್ಧ ಮತ್ತು ತುರ್ತು ಪರಿಸ್ಥಿತಿ ಎದುರಿಸಲು ಬ್ಲ್ಯಾಕ್ಔಟ್ ಅಣಕು ಪ್ರದರ್ಶನ ನಡೆಸಲಾಗುತ್ತಿದ್ದು, ಬೆಳಗಾವಿ ನಗರದಲ್ಲೂ ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು. ನಗರದ ಎರಡು ಪ್ರದೇಶಗಳಲ್ಲಿ 15 ನಿಮಿಷಗಳ ಸಂಪೂರ್ಣ ಕಗ್ಗತ್ತಲು ಆವರಿಸಿತ್ತು. ಕೇಂದ್ರ ಸರ್ಕಾರದ ಸೂಚನೆಯಂತೆ ಬೆಳಗಾವಿ ಜಿಲ್ಲಾಡಳಿತ, ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಪಾಲಿಕೆ ಆಯುಕ್ತೆ ಶುಭಾ ಬಿ. ನೇತೃತ್ವದಲ್ಲಿ ಹನುಮಾನ ನಗರ, ಕುವೆಂಪು ನಗರದಲ್ಲಿ ಬ್ಲ್ಯಾಕ್ಔಟ್ ಅಣಕು ಪ್ರದರ್ಶನ ಏರ್ಪಡಿಸಲಾಗಿತ್ತು. ಐದು ಸೈರನ್ ಮೊಳಗುತ್ತಿದ್ದಂತೆ …
Read More »ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ವೇತಾ ಪೂಜಾರಿ ಮೇ 8ರಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮಂಗಳೂರು ಉತ್ತರ ವಿಧಾನಸಭಾ …
Read More »ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರೈಲ್ವೆಯ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ
ಮೈಸೂರು: ನಗರದ ಕೇಂದ್ರೀಯ ರೈಲ್ವೆ ವರ್ಕ್‌ಶಾಪ್‌ನಲ್ಲಿನ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ವರ್ಕ್‌ಶಾಪ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆ ನೀಡಿದ ದೂರಿನ ಮೇರೆಗೆ ಮೂವರು ಸೀನಿಯರ್ ಸೆಕ್ಷನ್ ಇಂಜಿನಿಯರ್ಗಳು ಹಾಗೂ ಓರ್ವ ಮಹಿಳಾ ಅಧಿಕಾರಿಯ ವಿರುದ್ದ ಅಶೋಕಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ ವಿವರ: ಕೆಲಸದ ವೇಳೆ ಇಂಜಿನಿಯರ್ವೊಬ್ಬರು ಲೈಂಗಿಕ ಪದ ಬಳಸಿ ಮಾತನಾಡುವುದು, ಲೈಂಗಿಕ …
Read More »ರಾಯಚೂರಲ್ಲಿ ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ,
ರಾಯಚೂರು: ನಗರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ನೆತ್ತರು ಹರಿದಿದೆ. ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ನಗರದ ಡಾ.ಜಾಕೀರ್ ಹುಸೇನ್ ವೃತ್ತದಲ್ಲಿ ಯುವಕನ ಕೊಲೆ ನಡೆದಿದೆ. ಜಹೀರಾಬಾದ್ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕ. ಘಟನೆ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕರೀಂ ಬಂಧಿತ ಆರೋಪಿ. ಬೆಳಗ್ಗೆ ನಾಲ್ಕು ಗಂಟೆಗೆ ಇಡ್ಲಿ ತಿನ್ನಲು ಸಾದಿಕ್ ಮನೆಯಿಂದ ಹೊರಗೆ ಬಂದಿದ್ದ. ಈ …
Read More »ಭೀಮಗಡ ದಟ್ಟಾರಣ್ಯದ 27 ಕುಟುಂಬಗಳಿಗೆ ಪುನರ್ವಸತಿ, ತಳೆವಾಡಿ ಫಲಾನುಭವಿಗಳಿಗೆ ತಲಾ 10 ಲಕ್ಷ ರೂ. ಚೆಕ್
ಬೆಳಗಾವಿ: “ಭೀಮಗಡ ಸೇರಿ ರಾಜ್ಯದ ವಿವಿಧೆಡೆ ಅರಣ್ಯ ಪ್ರದೇಶದಲ್ಲಿ ವಾಸವಿರುವ ಜನರಿಗೆ ಶಾಶ್ವತ ನೆಲೆ ಕಟ್ಟಿಕೊಡಲು ಒಂದು ಸಾವಿರ ಕೋಟಿ ಅನುದಾನದ ಅವಶ್ಯಕತೆ ಇದೆ. ಅನುದಾನ ನೀಡುವ ಸಂಬಂಧ ಕೇಂದ್ರದ ಪರಿಸರ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳಿಸಿದ್ದೇವೆ” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. “ಹಿಂದಿನ ತಲೆಮಾರಿನ ಅರಣ್ಯವಾಸಿಗಳಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಚೆನ್ನಾಗಿ ತಿಳಿದಿತ್ತು, ಆದರೆ ಇಂದಿನ ಪೀಳಿಗೆಯ ಅರಣ್ಯವಾಸಿಗಳಿಗೆ ಅಷ್ಟು ಪರಿಣತಿ ಇಲ್ಲ. ಹೀಗಾಗಿ ನಾಗರಿಕ ಸಮಾಜದಲ್ಲಿ …
Read More »
Laxmi News 24×7