Breaking News

ರಾಜ್ಯ

ಬಿಬಿಎಂಪಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ, ಇಲ್ಲಿದೆ ಹೈಲೈಟ್ಸ್

ಬೆಂಗಳೂರು, ಏ.20- ಬಿ ಖಾತಾ ಆಸ್ತಿಗಳನ್ನು ಎ ಖಾತಾಗಳಾಗಿ ಪರಿವರ್ತಿಸುವುದು, ಹೊಸ ವಲಯಗಳಲ್ಲಿನ ಆಸ್ತಿಗಳ ಖಾತಾ ನಕಲು ಮತ್ತು ಖಾತಾ ದೃಢೀಕರಣ ಪತ್ರಗಳ ಗಣಕೀಕರಣ, ಶುಲ್ಕ ದ್ವಿಗುಣ, ಉದ್ಯಮ ಪರವಾನಗಿ ವ್ಯವಸ್ಥೆ ಸರಳೀಕರಣ, ನಾಡಪ್ರಭು ಕೆಂಪೇಗೌಡರ ಹೆಸರಲ್ಲಿ ಹೊಸದಾಗಿ ಶಾಲೆ ನಿರ್ಮಾಣ, ಸ್ಮಾರ್ಟ್ ಶಿಕ್ಷಣ ವ್ಯವಸ್ಥೆ, ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಹಲವು ಕಾರ್ಯಕ್ರಮಗಳು ಸೇರಿದಂತೆ ಬಿಬಿಎಂಪಿ 2020-21ನೆ ಸಾಲಿನ 10,899.23 ಕೋಟಿ ಆಯವ್ಯಯವನ್ನು ಇಂದು ಮಂಡಿಸಿತು. ಮೇಯರ್ ಗೌತಮ್‍ಕುಮಾರ್ ಅವರ …

Read More »

ನರಕದಿಂದ ನಮ್ಮನ್ನು ಹೊರ ತರಲು ಕಷ್ಟ ಪಡ್ತಿರೋರಿಗೆ ನಾವು ಸಹಕರಿಸೋಣ – ಗುಣಮುಖವಾಗಿ ಕಣ್ಣೀರಿಟ್ಟ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಗುಣಮುಖರಾಗಿದ್ದು ಪೊಲೀಸರು, ವೈದ್ಯರು, ನರ್ಸ್‍ಗಳಿಗೆ ನಾವು ಸಹಕರಿಸಬೇಕು ಎಂದು ಕಣ್ಣೀರಿಡುತ್ತಾ ಮನಮುಟ್ಟುವಂತೆ ಜನರಿಗೆ ಸಂದೇಶ ನೀಡಿದ್ದಾರೆ. ವಿಡಿಯೋವೊಂದರ ಮೂಲಕ ಇಡೀ ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಕಳೆದ 3 ದಿನದ ಹಿಂದೆ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೋಂಕಿತ ವ್ಯಕ್ತಿ ಪೊಲೀಸರು, ವೈದ್ಯರು, ನರ್ಸ್‍ಗಳ ಕಾರ್ಯದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ನರಕದಿಂದ ನಮ್ಮನ್ನು ಹೊರ ಕರೆತರಲು ಅವರು ಬಹಳ ಕಷ್ಟಪಡುತ್ತಿದ್ದಾರೆ. ಈ …

Read More »

ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು – ರಾಜ್ಯದಲ್ಲಿ ಬರಲಿದೆ ಕಠಿಣ ಕಾನೂನು ಕ್ರಮ

ಬೆಂಗಳೂರು: ಪೊಲೀಸರು, ಆರೋಗ್ಯ ಇಲಾಖೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ಕೇರಳ ಮತ್ತು ಉತ್ತರಪ್ರದೇಶ ರಾಜ್ಯಗಳ ಮಾದರಿಯಲ್ಲಿ ಕಾನೂನು ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ಮಾಡಿದ್ದು, ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಯಿದೆ. ಸರ್ಕಾರದ ತರಲಿರುವ ಹೊಸ ಕಾನೂನಿನಲ್ಲಿ ಏನೇನು ಇರಲಿದೆ? * ಯುಪಿ ಹಾಗೂ ಕೇರಳ ರಾಜ್ಯಗಳ ಸುಗ್ರೀವಾಜ್ಞೆಯಲ್ಲಿನ ಉಪಯುಕ್ತ ಅಂಶಗಳು ರಾಜ್ಯದ ಕಾನೂನಿನಲ್ಲಿ ತರಲಾಗುತ್ತಿದೆ. * ಸರ್ಕಾರದ ಸಿಬ್ಬಂದಿ …

Read More »

ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆ

ಮುಂಬೈಯಲ್ಲಿ ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಮಾಧ್ಯಮದವರಿಗಾಗಿಯೇ ಏರ್ಪಡಿಸಲಾಗಿದ್ದ ವಿಶೇಷ ವೈದ್ಯಕೀಯ ಶಿಬಿರದಲ್ಲಿ 171 ಜನರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಇನ್ನಷ್ಟೆ ಪೂರ್ಣ ವರದಿ ಬರಬೇಕಿದೆ. ಆದರೆ, ಈವರೆಗೆ ಬಂದಿರುವ ವರದಿಗಳ ಪೈಕಿ ಕನಿಷ್ಟ 30 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ವಿನೋದ ಜಗದಾಳೆ ತಿಳಿಸಿದ್ದಾರೆ. ಟಿವಿ ವರದಿಗಾರರು ಮತ್ತು ಕ್ಯಾಮರಾಮನ್ ಗಳೇ ಇದರಲ್ಲಿ ಹೆಚ್ಚಾಗಿದ್ದಾರೆ. ಸಂಸದೆ ಪ್ರಿಯಾಂಕಾ ಚತುರ್ವೇದಿ …

Read More »

ವಿಜಯ್ ಸೇತುಪತಿ ಜಾಗಕ್ಕೆ ಧನಂಜಯ್?…………

ಬೆಂಗಳೂರು: ಡಾಲಿ ಖ್ಯಾತಿಯ ಧನಂಜಯ್ ಮತ್ತೊಮ್ಮೆ ಟಾಲಿವುಡ್‍ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತ ಎನ್ನಲಾಗಿದ್ದು, ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಇನ್ನೊಂದು ಅಚ್ಚರಿಯ ಪಾತ್ರವೆಂದರೆ ತಮಿಳಿನ ವಿಜಯ್ ಸೇತುಪತಿಯವರ ಜಾಗಕ್ಕೆ ಡಾಲಿ ಆಯ್ಕೆಯಾಗಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಈ ಹಿಂದೆ ಕನ್ನಡದ ಭೈರವಗೀತ ಚಿತ್ರದಲ್ಲಿ ಧನಂಜಯ್ ಅಭಿನಯಿಸಿದ್ದರು, ಅದು ತೆಲುಗಿಗೂ ಡಬ್ ಆಗಿತ್ತು. ಇದೀಗ ಪುಷ್ಪ …

Read More »

ತರೀಕೆರೆ ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ.

ಚಿಕ್ಕಮಗಳೂರು: ಕೊರೊನಾ ವೈರಸ್‍ಗೆ ಆತಂಕಗೊಂಡು ಕಳೆದ 26 ದಿನಗಳಿಂದ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಲೇ ಇದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇವತ್ತು ನೆಗೆಟಿವ್ ಇದ್ದ ಜಿಲ್ಲೆಯಲ್ಲಿ ಬೆಳಗಾಗುವಷ್ಟರಲ್ಲಿ ಎರಡು-ಮೂರು ಪಾಸಿಟಿವ್ ಪ್ರಕರಣಗಳು ಬರುತ್ತಿವೆ. ಇಷ್ಟು ದಿನ ಜಿಲ್ಲೆ, ತಾಲೂಕು, ಪಟ್ಟಣಗಳಲ್ಲಿದ್ದ ಕೊರೊನಾ ಹಳ್ಳಿಗೂ ಕಾಲಿಟ್ಟಿರುವುದರಿಂದ ಜನ …

Read More »

ಐಟಿ-ಬಿಟಿ ಕಂಪನಿ ಓಪನ್ ಇಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು ಹೇಳಿದ್ದರು. ಆದರೆ ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಓಪನ್ ಇಲ್ಲ ಎಂದು ಸಚಿವ ಮಾಧುಸ್ವಾಮಿ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೇ 3ರ ತನಕ ಲಾಕ್‍ಡೌನ್ ಇರುತ್ತದೆ. ಹೀಗಾಗಿ ಯಾವುದೇ ರಿಯಾಯಿತಿ ಇರಲ್ಲ. ರಾಜ್ಯವೇ ಫುಲ್ ಲಾಕ್‍ಡೌನ್ ಆಗುತ್ತದೆ. ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಸುಗ್ರಿವಾಜ್ಞೆಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. …

Read More »

ಒಂದು ತಿಂಗಳು ಪೂರ್ಣಗೊಳಿಸಿದ ” ಹಸಿದವರತ್ತ ನಮ್ಮ ಚಿತ್ತ” ಅಭಿಯಾನ:ಅಶೋಕ ಚಂದರಗಿ

ಬೆಳಗಾವಿ :1991 ರಲ್ಲಿ ಅಸ್ತಿತ್ವಕ್ಕೆ ಬಂದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ನಾಡು,ನುಡಿ,ಗಡಿ ಹಿತಾಸಕ್ತಿಗೆ ಸಂಬಂಧಿಸಿದ ನೂರಾರು ಹೋರಾಟಗಳನ್ನು ಮಾಡುತ್ತ ಬಂದಿದೆ.ಜೊತೆಗೆ ಅನೇಕ ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೂ ಶ್ರಮಿಸಿದ್ದು ಈ ನಾಡಿಗೆ ಗೊತ್ತಿದೆ. ನೆರೆಹಾವಳಿ,ಬರಗಾಲ ಮತ್ತಿತರ ನೈಸರ್ಗಿಕ ವಿಕೋಪದ ಕಾಲಕ್ಕೂ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಲೇ ಬಂದಿದೆ. 2018 ರ ಅಗಷ್ಟ ತಿಂಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಿಂದಾಗಿ ಆದ ಅಪಾರ ಪ್ರಮಾಣದ ಹಾನಿಯ ಸಂದರ್ಭದಲ್ಲೂ ಬೆಳಗಾವಿಯಿಂದ ಅಗತ್ಯ …

Read More »

ಪಾದರಾಯನಪುರದಲ್ಲಿ ಗರುಡ ಟೀಂ ಎಂಟ್ರಿ ಕೊಟ್ಟಿದೆ. ಈ ಮೂಲಕ ಇನ್ಮುಂದೆ ಪಾದರಾಯನಪುರದಲ್ಲಿ ಯಾರೂ ಮಿಸುಕಾಡುವಂಗಿಲ್ಲ.

ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಕೆಲ ಪುಂಡರು ಗಲಭೆ ನಡೆಸಿದ ಸಂಬಂಧ ಇದೀಗ ಏರಿಯಾಗೆ ಗರುಡ ಟೀಂ ಎಂಟ್ರಿ ಕೊಟ್ಟಿದೆ. ಈ ಮೂಲಕ ಇನ್ಮುಂದೆ ಪಾದರಾಯನಪುರದಲ್ಲಿ ಯಾರೂ ಮಿಸುಕಾಡುವಂಗಿಲ್ಲ. ರೈಫಲ್ ಹಿಡಿದುಕೊಂಡು ಗರುಡ ಕಮಾಂಡೋಗಳು ನಡು ರಸ್ತೆಯಲ್ಲಿ ನಿಂತುಕೊಳ್ಳುತ್ತಾರೆ. ಮಾಸ್ಕ್ ಹಾಕದೆ, ಹೊರಗಡೆ ಓಡಾಡುವ ಜನರಿಗೆ ಫುಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಗರುಡ ಟೀಮ್ ನೋಡಿ ಜನ ಮನೆಯಿಂದ ಹೊರಬರಲು ಭಯಪಟ್ಟಿದ್ದಾರೆ. ಇತ್ತ ಪೊಲೀಸರು ಕೂಡ ಪ್ರತಿ ಏರಿಯಾದಲ್ಲೂ ಗಸ್ತು …

Read More »

ನನ್ನ ಕೇಳಿ ಹೋಗಬೇಕಿತ್ತು -ರಾತ್ರಿ ಯಾಕೆ ಹೋದ್ರು? ಜಮೀರ್ ಅಹ್ಮದ್

ಬಿಬಿಎಂಪಿ ಮೇಲೆ ಗೂಬೆ ಕೂರಿಸಿದ ಶಾಸಕ ಜಮೀರ್ ಅಹ್ಮದ್ನನ್ನ ಕೇಳಿ ಹೋಗಬೇಕಿತ್ತು -ರಾತ್ರಿ ಯಾಕೆ ಹೋದ್ರು? ಬೆಂಗಳೂರು: ಈ ರೀತಿಯ ಘಟನೆಗಳು ನಡೆಯಬಾರದಿತ್ತು. ಗಲಾಟೆ ನಡೆಸಿದವರ ಬಗ್ಗೆ ಖಂಡಿತ ಕಠಿಣ ಕ್ರಮ ಜರುಗಿಸಬೇಕು. ರಾತ್ರಿ ವೇಳೆ ಬಿಬಿಎಂಪಿ ಅಧಿಕಾರಿಗಳು ಯಾಕೆ ಪಾದರಾಯನಪುರಕ್ಕೆ ಹೋಗಬೇಕು. ಬೆಳಗ್ಗೆ ಹೋಗಿದ್ದು ತಪ್ಪು ಎಂದು ಬಿಬಿಎಂಪಿ ಮೇಲೆ ಶಾಸಕ ಜಮೀರ್ ಅಹಮದ್ ಗೂಬೆ ಕೂರಿಸಿದ್ದಾರೆ. ಕೊರೊನಾ ಶಂಕಿತರನ್ನು ಕರೆದುಕೊಂಡು ಹೋಗುವ ಮುನ್ನ ನನ್ನನ್ನು ಕೇಳಿ ಬೇಕಿತ್ತು. …

Read More »