ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಕೆಲ ಪುಂಡರು ಗಲಭೆ ನಡೆಸಿದ ಸಂಬಂಧ ಇದೀಗ ಏರಿಯಾಗೆ ಗರುಡ ಟೀಂ ಎಂಟ್ರಿ ಕೊಟ್ಟಿದೆ. ಈ ಮೂಲಕ ಇನ್ಮುಂದೆ ಪಾದರಾಯನಪುರದಲ್ಲಿ ಯಾರೂ ಮಿಸುಕಾಡುವಂಗಿಲ್ಲ. ರೈಫಲ್ ಹಿಡಿದುಕೊಂಡು ಗರುಡ ಕಮಾಂಡೋಗಳು ನಡು ರಸ್ತೆಯಲ್ಲಿ ನಿಂತುಕೊಳ್ಳುತ್ತಾರೆ. ಮಾಸ್ಕ್ ಹಾಕದೆ, ಹೊರಗಡೆ ಓಡಾಡುವ ಜನರಿಗೆ ಫುಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಗರುಡ ಟೀಮ್ ನೋಡಿ ಜನ ಮನೆಯಿಂದ ಹೊರಬರಲು ಭಯಪಟ್ಟಿದ್ದಾರೆ. ಇತ್ತ ಪೊಲೀಸರು ಕೂಡ ಪ್ರತಿ ಏರಿಯಾದಲ್ಲೂ ಗಸ್ತು …
Read More »ನನ್ನ ಕೇಳಿ ಹೋಗಬೇಕಿತ್ತು -ರಾತ್ರಿ ಯಾಕೆ ಹೋದ್ರು? ಜಮೀರ್ ಅಹ್ಮದ್
ಬಿಬಿಎಂಪಿ ಮೇಲೆ ಗೂಬೆ ಕೂರಿಸಿದ ಶಾಸಕ ಜಮೀರ್ ಅಹ್ಮದ್ನನ್ನ ಕೇಳಿ ಹೋಗಬೇಕಿತ್ತು -ರಾತ್ರಿ ಯಾಕೆ ಹೋದ್ರು? ಬೆಂಗಳೂರು: ಈ ರೀತಿಯ ಘಟನೆಗಳು ನಡೆಯಬಾರದಿತ್ತು. ಗಲಾಟೆ ನಡೆಸಿದವರ ಬಗ್ಗೆ ಖಂಡಿತ ಕಠಿಣ ಕ್ರಮ ಜರುಗಿಸಬೇಕು. ರಾತ್ರಿ ವೇಳೆ ಬಿಬಿಎಂಪಿ ಅಧಿಕಾರಿಗಳು ಯಾಕೆ ಪಾದರಾಯನಪುರಕ್ಕೆ ಹೋಗಬೇಕು. ಬೆಳಗ್ಗೆ ಹೋಗಿದ್ದು ತಪ್ಪು ಎಂದು ಬಿಬಿಎಂಪಿ ಮೇಲೆ ಶಾಸಕ ಜಮೀರ್ ಅಹಮದ್ ಗೂಬೆ ಕೂರಿಸಿದ್ದಾರೆ. ಕೊರೊನಾ ಶಂಕಿತರನ್ನು ಕರೆದುಕೊಂಡು ಹೋಗುವ ಮುನ್ನ ನನ್ನನ್ನು ಕೇಳಿ ಬೇಕಿತ್ತು. …
Read More »ನಂಗೆ ಇನ್ನೂ ಮಕ್ಕಳಾಗಿಲ್ಲ, ಪತಿ ಬಳಿ ಕರ್ಕೊಂಡು ಹೋಗಿ- ಮೋದಿಗೆ ರಾಖಿ ಮನವಿ
ಮುಂಬೈ: ಇಡೀ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮುಂಬೈನಲ್ಲಿ ನೆಲೆಸಿರುವ ಬಾಲಿವುಡ್ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಅವರ ಬಳಿ ಪತಿ ಇರುವಲ್ಲಿಗೆ ಕರೆದುಕೊಂಡು ಹೋಗುವಂತೆ ಮನವಿ ಮಾಡಿಕೊಂಡಿದ್ದಾರೆ. ರಾಖಿ ಸಾವಂತ್ ಈ ಬಗ್ಗೆ ಮಾತನಾಡಿರುವ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. “ಮೋದಿ ಜೀ ಮುಂಬೈನಲ್ಲಿ …
Read More »ಸ್ಯಾನಿಟೈಸರ್ ಸಾವು ಪ್ರಕರಣ- ಗ್ರಾಮದ 15 ಮದ್ಯವ್ಯಸನಿಗಳು ಸ್ಯಾನಿಟೈಸರ್ ಸೇವಿಸಿರುವ ಶಂಕೆ
ಧಾರವಾಡ: ಮದ್ಯ ಸಿಗದ್ದಕ್ಕೆ ಸ್ಯಾನಿಟೈಸರ್ ಸೇವಿಸಿ ಅಕ್ಕ, ತಮ್ಮ ಇಬ್ಬರೂ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಇನ್ನೂ ಭಯಾನಕ ಮಾಹಿತಿಯೊಂದು ಹೊರ ಬಿದ್ದಿದೆ. ಅದೇ ಗ್ರಾಮದ ಇನ್ನೂ 15 ಜನ ಮದ್ಯ ವ್ಯಸನಿಗಳು ಸ್ಯಾನಿಟೈಸರ್ ಸೇವಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಭಾನುವಾರವಷ್ಟೇ ಜಿಲ್ಲೆಯ ಗಂಬ್ಯಾಪೂರ ಗ್ರಾಮದಲ್ಲಿ ಸ್ಯಾನಿಟೈಸರ ಕುಡಿದು ಇಬ್ಬರು ಸಾವನ್ನಪ್ಪಿದ್ದರು. ಇದೀಗ ಗ್ರಾಮದ ಅಂದಾಜು 15 ಜನ ಮದ್ಯ ವ್ಯಸನಿಗಳು ಸ್ಯಾನಿಟೈಸರ್ ಸೇವಿಸಿದ್ದಾರೆ ಎಂದು ಶಂಕಿಸಲಾಗಿದೆ. ಪರಿಶೀಲನೆಗಾಗಿ ಭಾನುವಾರ ರಾತ್ರಿ …
Read More »ದುಷ್ಕೃತ್ಯದಲ್ಲಿ ತೊಡಗಿರೋರನ್ನು ಗುರುತಿಸಿ ಕಠಿಣ ಶಿಕ್ಷೆ ನೀಡಿ: ಸಿದ್ದು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್‍ವೈ ಅವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಮಾಜಿ ಸಿಎಂ, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಬರೆದು ಬಿಎಸ್‍ವೈ ಅವರಿಗೆ ಟ್ಯಾಗ್ ಮಾಡಿದ್ದಾರೆ. ಮತ್ತೊಂದು ಟ್ವೀಟ್ …
Read More »ಮಹಿಳಾ ಪೋಲೀಸ್ ಪೇದೆಯಾಗಿ ಕರ್ತವ್ಯ ನಿಭಾಯಿಸಿದ್ದ ರಾಜ್ಯ ಮಟ್ಟದ ಮಹಿಳಾ ಕಬ್ಬಡ್ಡಿ ಆಟಗಾರ್ತಿಹೃದಯಾಘಾತದಿಂದ ನಿಧನ
ಬೆಳಗಾವಿ – ನಗರದ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಮಹಿಳಾ ಪೋಲೀಸ್ ಪೇದೆಯಾಗಿ ಕರ್ತವ್ಯ ನಿಭಾಯಿಸಿದ್ದ ರಾಜ್ಯ ಮಟ್ಟದ ಮಹಿಳಾ ಕಬ್ಬಡ್ಡಿ ಆಟಗಾರ್ತಿ ಯಾಗಿದ್ದ ಕುಮಾರಿ ಗೌರಿ ಜೀವಾಜಿಗೋಳ (28) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ರಾಗಿದ್ದಾರೆ. ಗೌರಿ ಜೋವಾಜಿಗೋಳ ಮೂಲತಹ ವಿಜಯಪೂರದ ಬಬಲೇಶ್ವರ ಗ್ರಾಮದವರು.ಸ್ಪೋರ್ಟ್ಸ್ ಕೋಟಾದಲ್ಲಿ ಮಹಿಳಾ ಪೋಲೀಸ್ ಪೇದೆಯಾಗಿ ಬೆಳಗಾವಿಯ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು …
Read More »ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ
ಚಿಕ್ಕೋಡಿ -ಚಿಂಚಲಿ ಪಟ್ಟಣದಲ್ಲಿ ಕಟ್ಟಡವೊಂದರಲ್ಲಿ ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ. ಕೊರೊನಾ ಭಯಕ್ಕೆ ರಾತ್ರೋರಾತ್ರಿ ಮಾನೆಗಳನ್ನ ಖಾಲಿ ಮಾಡುತ್ತಿರುವ ಜನ ಹತ್ತಿರದ ತೋಟಗಳಲ್ಲಿ ಟೆಂಟ್ ಹಾಕಿಕೊಂಡು ಇರಲು ನಿರ್ಧರಿಸಿದ್ದಾರೆ. ಚಿಂಚಲಿ ಪಟ್ಟಣದ ಭಕ್ತಿ ನಿವಾಸದಲ್ಲಿ 44 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಮಾಯಕ್ಕಾ ದೇವಸ್ಥಾನದ ಭಕ್ತಿನಿವಾಸದ ಸುತ್ತಲೂ ಇರುವ 40 ಕ್ಕೂ ಹೆಚ್ಚು ಕುಟುಂಬಗಳು ಮನೆ ಖಾಲಿ ಮಾಡಿವೆ. ಕುಡಚಿ …
Read More »ಬೆಂಗಳೂರು: ಪಾದರಾಯನಪುರದ ನಿವಾಸಿಗಳಿಗೆ, ಶಾಂತಿ ಕಾಪಾಡುವಂತೆ ಶಾಸಕ ಜಮೀರ್ ಅಹ್ಮದ್ ಮನವಿ
ಬೆಂಗಳೂರು: ಪಾದರಾಯನಪುರದ ನಿವಾಸಿಗಳಿಗೆ, ಶಾಂತಿ ಕಾಪಾಡುವಂತೆನಿನ್ನೆ ಇಲ್ಲಿನ ಕೆಲ ನಿವಾಸಿಗಳನ್ನ ಕ್ವಾರಂಟೈನ್ಗೆ ಒಳಪಡಿಸುವ ವಿಚಾರವಾಗಿ ಸ್ಥಳೀಯರು, ಬಿಬಿಎಂಪಿ, ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಗಲಾಟೆ ಮಾಡಿದ್ರು. ಈ ಹಿನ್ನೆಲೆ ಟ್ವೀಟ್ ಮಾಡಿರೋ ಜಮೀರ್ ಅಹ್ಮದ್, ಪಾದರಾಯನಪುರ ನಿವಾಸಿಗಳೆಲ್ಲಾ ಶಾಂತಿಯಿಂದ ಇದ್ದು, ಬಿಬಿಎಂಪಿಯ ಮಾರ್ಗಸೂಚಿಗಳನ್ನ ಪಾಲಿಸುವಂತೆ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ಶಾಸಕ ಜಮೀರ್ ಅಹ್ಮದ್ ಮನವಿ ಮಾಡಿದ್ದಾರೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. …
Read More »ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯ,ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಮೂಡಲಗಿ: ಇಲ್ಲಿನ ಇತಿಹಾಸ ಪ್ರಸಿದ್ದಿ ಪಡೆದಿರುವ ಶಿವಬೊಧ ರಂಗಮಠದ ಪೀಠಾದಿಪತಿ, ಈ ಭಾಗದ ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ನೆಲೆಸಿದ್ದ ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯರಾದ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಪೂಜ್ಯರ ಪವಿತ್ರ ಆತ್ಮಕ್ಕೆ ಭಕ್ತಿಪೂರ್ವಕ ನಮನವನ್ನು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಲ್ಲಿಸಿ ಅತೀವ ಸಂತಾಪ ಸೂಚಿಸಿದ್ದಾರೆ. ಪೂಜ್ಯರ ಐಕ್ಯದಿಂದಾಗಿ ನಾಡಿಗೆ ಅಪಾರ ಹಾನಿಯಾಗಿದೆ.ಮೂಡಲಗಿ ಭಾಗದಲ್ಲಿ ಶೈಕ್ಷಣಿಕ, …
Read More »ಅಮೆರಿಕದಲ್ಲಿ ಕೊರೊನಾಗೆ ಒಂದೇ ದಿನ 1,997 ಮಂದಿ ಬಲಿ
ವಾಷಿಂಗ್ಟನ್: ಅಮೆರಿಕದಲ್ಲಿ ಒಂದೇ ದಿನಕ್ಕೆ 1,997 ಮಂದಿ ಬಲಿಯಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಮೂಲಕ ಭಾನುವಾರದವರೆಗೆ ಮೃತಪಟ್ಟವರ ಸಂಖ್ಯೆ 40,661 ಕ್ಕೆ ಏರಿಕೆಯಾಗಿದೆ. ಪ್ರಪಂಚದಾದ್ಯಂತ ಕೋವಿಡ್ 19 ಎಂಬ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇತ್ತ ವಿಶ್ವದ ದೊಡ್ಡಣ್ಣ ಈ ಮಹಾಮಾರಿಗೆ ತತ್ತರಿಸಿ ಹೋಗಿದೆ. ಭಾನುವಾರದ ಅಂಕಿ-ಅಂಶವನ್ನು ಗಮನಿಸಿದಾಗ ಇನ್ನೂ ದುಪ್ಪಟ್ಟಾಗುವ ಸಾಧ್ಯತೆಗಳಿರುವುದಾಗಿ ರಾಜ್ಯಪಾಲ ಆಂಡ್ರ್ಯೂ ಕುಮೊ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಮೆರಿಕದಲ್ಲಿ 7,64,265 ಕೊರೊನಾ ಸೋಂಕಿತರಿದ್ದು, ಈ ಮೂಲಕ ಜಗತ್ತಿನಲ್ಲೇ …
Read More »
Laxmi News 24×7