Breaking News

ರಾಜ್ಯ

ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ :ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೇರಳದಲ್ಲಿ ಈ ಹಿಂದೆ ವಿದೇಶಗಳಿಂದ ಬಂದವರ ಸಂಖ್ಯೆ ಹೆಚ್ಚಾಗಿತ್ತು. ಆದರೂ ಅಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದರಿಂದ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ.ಯಾಕೆ ಹೀಗಾಗುತ್ತಿದೆ ಎಂದು ಅಧ್ಯಯನ ನಡೆಸುವುದು ಸೂಕ್ತ ಎಂದು ಹೇಳಿದ್ದಾರೆ ಸೋಂಕು ಕಂಡು ಬಂದ …

Read More »

ಶಾಶ್ವತವಾಗಿ ಮದ್ಯಪಾನ ನಿಷೇಧಿಸಿ – ಸರ್ಕಾರಕ್ಕೆ ರೈತ ಮುಖಂಡರ ಮನವಿ

ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದಾಗಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಲಾಕ್‍ಡೌನ್‍ನಿಂದಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಈಗ ಮುಚ್ಚಿರುವ ಮದ್ಯದ ಅಂಗಡಿಗಳನ್ನು ಮತ್ತೆ ತೆರೆಯಲು ಅವಕಾಶ ಕೊಡದೆ, ಶಾಶ್ವತವಾಗಿ ಮುಚ್ಚುವಂತೆ ಶಿವಮೊಗ್ಗದಲ್ಲಿ ರೈತ ಸಂಘದ ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ರೈತ ಸಂಘದ ಮುಖಂಡರು ಕೊರೊನಾ ವೇಳೆ ಮದ್ಯಪಾನ ನಿಷೇಧದಿಂದಾಗಿ ಕುಡಿತಕ್ಕೆ ಒಳಗಾದವರ ಕುಟುಂಬಗಳು ನೆಮ್ಮದಿಯಿಂದ ಇವೆ. ಹೀಗಾಗಿ ಇದೇ ರೀತಿ ಮದ್ಯದ ಅಂಗಡಿಗಳನ್ನು …

Read More »

ಹಾಸನ:ದೇವಸ್ಥಾನದ ಬಳಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಕೆನ್ನೆ ಕೊಯ್ದ ಪುಂಡರು

ಹಾಸನ: ಕೊರೊನಾ ಲಾಕ್‍ಡೌನ್ ನಡುವೆಯೂ ಹಾಸನದಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು ಮನೆ ಬಳಿ ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಚಾಕುವಿನಿಂದ ಕೊಯ್ದು ಪರಾರಿಯಾಗಿದ್ದಾರೆ. ಹಾಸನದ ಬೇಲೂರು ರಸ್ತೆಯ, ಈಶ್ವರ ದೇವಾಲಯ ಬಳಿ ಆಟೋಚಾಲಕ ನವೀನ್ ಮನೆಯಿದ್ದು, ಅಲ್ಲಿ ಮೂವರು ಯುವಕರು ಸಿಗರೇಟ್ ಸೇದುತ್ತಾ ಕೂಗಾಡುತ್ತಿದ್ದರು. ಇದನ್ನು ನೋಡಿದ ಆಟೋ ಚಾಲಕ ನವೀನ್, ಯಾರು ನೀವು, ಯಾಕೆ ಹೀಗೆ ಕೂಗಾಡುತ್ತಿದ್ದೀರಿ. ದೇವಾಲಯದ ಬಳಿ ಸಿಗರೇಟ್ ಸೇದಬಾರದು ಎಂದು ಬುದ್ಧಿವಾದ ಹೇಳಿದ್ದಾರೆ. …

Read More »

ಶಿವಮೊಗ್ಗ:ಜೋಗದ ರಸ್ತೆಯಲ್ಲಿ ಚಿರತೆ – ಓಡಾಡುತ್ತಿರುವ ದೃಶ್,,,,,,,.

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗದ ಪ್ರಮುಖ ರಸ್ತೆಗಳಲ್ಲಿ ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಮಹಾತ್ಮ ಗಾಂಧಿ ಜಲವಿದ್ಯುತ್ ಕೇಂದ್ರಕ್ಕೆ ತೆರಳುವ ಮಾರ್ಗದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಎರಡು ದಿನದ ಹಿಂದೆ ರಸ್ತೆಯಲ್ಲಿ ಓಡಾಡುತ್ತಿದ್ದ ಚಿರತೆಯನ್ನು ನೋಡಿದ ಸ್ಥಳೀಯರು ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ ಹಿಂದೆ ಜೋಗದ ಸುತ್ತಮುತ್ತಲಿನ ಗ್ರಾಮಗಳಾದ ಶ್ರೀಪುರ, ಬಾಳೆಗದ್ದೆ, ಕೆಮ್ಮಣ್ಣುಗಾರು ಸೇರಿದಂತೆ ಅನೇಕ ಕಡೆ ಚಿರತೆ ಕಾಣಿಸಿಕೊಂಡಿತ್ತು. ಅಲ್ಲದೇ ಕಳೆದ 10 ದಿನಗಳಿಂದ …

Read More »

ಧಾರವಾಡ:ಮನೆ ಮೇಲಿಂದ ಬಿದ್ದು ವೃದ್ಧೆ ಸಾವು..

ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.   ಸಪ್ತಾಪುರ 8ನೇ ಕ್ರಾಸ್‍ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆ ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ …

Read More »

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೊನಾ ಭೀತಿ – 21 ಸಿಬ್ಬಂದಿಗೆ ಸೋಂಕು

ಮುಂಬೈ: ಭಾರತೀಯ ನೌಕಾಪಡೆಗೂ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಮುಂಬೈನಲ್ಲಿ ಇರುವ ನೌಕಾನೆಲೆಯ 21 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನೌಕಾಪಡೆಯ 20 ಸೇಲರ್ ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ. ಐಎನ್‍ಎಸ್ ಅಶ್ವಿನಿ ನೌಕಾಪಡೆ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದ ಮಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕಿತ ಸೇಲರ್ ಗಳು ಮುಂಬೈನ ಐಎನ್‍ಎಸ್ ಆಂಗ್ರೆಯಲ್ಲಿ …

Read More »

ಬೆಳಗಾವಿ-ಲಾಕ್ ಡೌನ್ ಸಂಧರ್ಭದಲ್ಲಿಆಸ್ಪತ್ರೆ ಬಳಿ ಮಹಿಳೆಯಬ್ಬಳ ರಸ್ತೆಯಲ್ಲೇ ಹೆರಿಗೆ

ಬೆಳಗಾವಿ- ಬೆಳಗಾವಿಯ ಶಹಾಪೂರ ಪ್ರದೇಶದ ಮಾಹಿ ಆಸ್ಪತ್ರೆ ಬಳಿ ಮಹಿಳೆಯಬ್ಬಳ ರಸ್ತೆಯಲ್ಲೇ ಹೆರಿಗೆ ಆದ ಘಟನೆ ನಡೆದಿದೆ. ಮಹಿಳೆಯನ್ನು ಹೆರಿಗೆಗಾಗಿ ಮಕ್ಕಳ ಆಸ್ಪತ್ರೆಗೆ ತರಲಾಗಿತ್ತು ಆದರೆ ಈ ಆಸ್ಪತ್ರೆ ಬಂದ್ ಆಗಿತ್ತು ಅದಕ್ಕೆ ಈ ಮಹಿಳೆಯನ್ನು ಬೇರೆ ಆಸ್ಪತ್ರೆಗೆ ವಾಪಸ್ ಕರೆದುಕೊಂಡು ಹೋಗುವ ಸಂಧರ್ಭದಲ್ಲಿ ಮಹಿಳೆಯ ಹೆರಿಗೆ ರಸ್ತೆಯಲ್ಲೇ ಆಗಿದೆ . ವಡಗಾವಿ ಮೂಲದ ಈ ಮಹಿಳೆಯನ್ನು ಲಾಕ್ ಡೌನ್ ಸಂಧರ್ಭದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳು ಬಂದ್ ಆಗಿರುವ ಹಿನ್ನಲೆಯಲ್ಲಿ …

Read More »

ವುಹಾನ್ ಲ್ಯಾಬ್‍ನಿಂದ ವೈರಸ್ ಹೊರಬಂದಿದ್ದು ಹೇಗೆ..? : ತನಿಖೆಗೆ ಟ್ರಂಪ್ ಚಿಂತನೆ

ವಾಷಿಂಗ್ಟನ್, ಏ.18-ವಿಶ್ವವ್ಯಾಪಿ 1.50 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ವೈರಸ್‍ನ ಉಗಮ ಬಿಂದು ಚೀನಾದ ವುಹಾನ ನಗರಿಯ ಪ್ರಯೋಗಾಲಯದಿಂದ ಡೆಡ್ಲಿ ವೈರಸ್ ತಪ್ಪಿಸಿಕೊಂಡಿರುವ ವರದಿ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕೊರೊನಾ ವೈರಸ್ ಸೋಂಕು ಮತ್ತು ಸಾವು ನೋವಿನ ಬಗ್ಗೆ ಸಾಕಷ್ಟು ಸುಳ್ಳುಗಳನ್ನು ಹೇಳಿ ಜಗತ್ತಿನ ದಿಕ್ಕು ತಪ್ಪಿಸುತ್ತಿರುವ ಚೀನಾದ ಕರ್ಮಕಾಂಡಗಳು ಒಂದೊಂದೇ ಬಯಲಿಗೆ ಬರುತ್ತಿದ್ದು, ಆ ದೇಶಕ್ಕೆ …

Read More »

ಅಕ್ರಮ ಬಡಾವಣೆ-ಕಟ್ಟಡಗಳ ಸಕ್ರಮಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ

ಬೆಂಗಳೂರು : ಅಕ್ರಮ ಬಡಾವಣೆ ಹಾಗೂ ಕಟ್ಟಡಗಳನ್ನು ಸಕ್ರಮಗೊಳಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಶುಕ್ರವಾರ ಕೈಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವುದಕ್ಕೆ ಸಂಬಂಧಿಸಿದ ಸಮಸ್ಯೆಗೆ ರಾಜ್ಯ ಸರ್ಕಾರ ಕೊನೆಗೂ ಮುಕ್ತಿ ಕಾಣಿಸಿದೆ. ಅನಧಿಕೃತ ಬಡಾವಣೆ ಹಾಗೂ ಕಟ್ಟಡಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಮೊದಲಾದ ಮೂಲ ಸೌಕರ್ಯ ಒದಗಿಸಿದೆ. ಆದರೂ ಯಾವುದೇ ತೆರಿಗೆ ರಾಜ್ಯದ ಬೊಕ್ಕಸಕ್ಕೆ ಬರುತ್ತಿಲ್ಲ.ರಾಜ್ಯದ ಆದಾಯ ಹೆಚ್ಚಿಸಲು …

Read More »

ಕುಮಟಾ ಪಟ್ಟಣದ ವೈನ್ ಶಾಪ್‍ನಲ್ಲಿ ಕಳ್ಳತನ,43 ಸಾವಿರ ವಿವಿಧ ಬ್ರಾಂಡ್ ಮದ್ಯಗಳನ್ನ ಕಳ್ಳರು ಕದ್ದು ಪರಾರಿಯಾಗಿದ್ದಾರೆ.

ಕಾರವಾರ: ಲಾಕ್‍ಡೌನ್‍ನಿಂದ ಮದ್ಯ ಮಾರಾಟ ಸಹ ಬಂದ್ ಆಗಿದೆ. ಇದರಿಂದ ಮದ್ಯ ಪ್ರಿಯರಿಗಂತೂ ನುಂಗಲಾರದ ತುತ್ತಾಗಿದೆ. ಇದರಿಂದ ಮದ್ಯಕ್ಕಾಗಿ ಪಟ್ಟಣದ ವೈನ್ ಶಾಪ್ ಒಂದಕ್ಕೆ ಕಳ್ಳರು ಕನ್ನ ಹಾಕಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕುಮಟಾ ಪಟ್ಟಣದ ಎಪಿಎಂಸಿ ಬಳಿ ಇರುವ ಅಲ್ಫಾ ವೈನ್ ಶಾಪ್‍ನಲ್ಲಿ ಕಳ್ಳತನ ಮಾಡಲಾಗಿದೆ. ವೈನ್ ಶಾಪ್‍ನ ಶಟರ್ ಒಡೆದು ಕಳ್ಳತನ ಮಾಡಲಾಗಿದೆ. ಒಟ್ಟು 43,665 ರೂಪಾಯಿ ಮೌಲ್ಯದ ವಿವಿಧ ಬ್ರಾಂಡ್ ಮದ್ಯಗಳನ್ನ ಕಳ್ಳರು ಕದ್ದು …

Read More »