ಕಲಬುರಗಿ: ಯಾವುದೇ ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕ ಹೊಂದಿರದ ಎರಡು ವರ್ಷದ ಹೆಣ್ಣು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮಗಳಿಗೆ ಕೊರೊನಾ ಸೋಂಕು ಹರಡಿದೆ ಎಂದು ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಇಂದು ಟ್ವಿಟ್ಟರ್ ಹಾಗೂ ಫೇಸ್‍ಬುಕ್‍ನಲ್ಲಿ ಈ ಮಾಹಿತಿಯನ್ನು …
Read More »ಅಣ್ಣನ ಪತ್ನಿಯೊಂದಿಗೆ ಅನೈತಿಕ ಸಂಬಂಧಕ್ಕೆ ಅಡ್ಡಿ – ಸ್ನೇಹಿತನ ರುಂಡ ತುಂಡರಿಸಿ ಕೊಲೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ವಾರದ ಹಿಂದೆ ನಡೆದ ಕೊಲೆ ಪ್ರಕರಣವೊಂದನ್ನು ಬೇಧಿಸಿರುವ ಪೊಲೀಸರು ನಾಲ್ಕು ದಿನದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳಿಯಾಳ ತಾಲೂಕಿನ ಬೆಳವಟಗಿಯ ಮಾರುತಿ ಮಾದಪ್ಪಗೌಡ ಬಂಧಿತ ಆರೋಪಿ. ಈತ ತನ್ನ ಸ್ನೇಹಿತ ನಾಗರಾಜ್‍ನನ್ನು ಕೊಲೆ ಮಾಡಿದ್ದನು. ಏನಿದು ಪ್ರಕರಣ? ಏಪ್ರಿಲ್ 4 ರಂದು ಬೆಳವಟಗಿಯ ನಾಗರಾಜ್ ಕೊಳದಾರ (31) ಮನೆಯಿಂದ ದೇವಸ್ಥಾನದ ಹತ್ತಿರ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದನು. ಆದರೆ ಈತನ ಮೃತದೇಹ ಏಪ್ರಿಲ್ …
Read More »ಗುಣಮುಖರಾದ ಸೋಂಕಿತರಿಗೆ ಹೂ ಗಿಡ, ಹಣ್ಣು ಕೊಟ್ಟು ಬೀಳ್ಕೊಡುಗೆ
ಇದುವರೆಗೂ 8 ಮಂದಿ ಸೋಂಕಿತರು ಗುಣಮುಖ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನ 5 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಒಂದೇ ಕುಟುಂಬದ ನಾಲ್ವರು ಏಕಕಾಲದಲ್ಲಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಗುಣಮುಖರಾದ ನಾಲ್ವರನ್ನ ಇಂದು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಒಂದೇ ಕುಟುಂಬದ ನಾಲ್ವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಅವರು ಮನೆಗೆ ಹೋಗುವಾಗ ಸರದಿ ಸಾಲಿನಲ್ಲಿ ನಿಂತು …
Read More »ಬೋರ್ ಆಗ್ತಿದೆಂದು ಲಾಕ್‍ಡೌನ್ ನಡುವೆ ವಿದ್ಯಾರ್ಥಿಯ ಖತರ್ನಾಕ್ ಪ್ಲಾನ್”……
ಲಾಕ್‍ಡೌನ್ ನಡುವೆ ವಿದ್ಯಾರ್ಥಿಯ ಖತರ್ನಾಕ್ ಪ್ಲಾನ್ ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಹೀಗಾಗಿ ನಗರದ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸ್ತವ್ಯ ಇರುವವರು ಬಿಟ್ಟು ಹೊರಗಿನಿಂದ ಬರುವವರಿಗೆ ಪ್ರವೇಶಕ್ಕೆ ಕೆಲವು ಕಡೆ ನಿರ್ಬಂಧ ವಿಧಿಸಲಾಗುತ್ತಿದೆ. ಆದರೆ ವಿದ್ಯಾರ್ಥಿಯೊಬ್ಬ ಸೂಟ್‍ಕೇಸ್‍ನೊಳಗೆ ಗೆಳೆಯನನ್ನ ಸಾಗಿಸುವಾಗ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಮಂಗಳೂರಿನ ಆರ್ಯ ಸಮಾಜದ ವಸತಿ ಸಮುಚ್ಚಯದಲ್ಲಿ ನಡೆದಿದೆ. ಆರ್ಯ ಸಮಾಜದ ವಸತಿ ಸಮುಚ್ಚಯದಲ್ಲಿ ವಿದ್ಯಾರ್ಥಿಯೊಬ್ಬ ಬಾಡಿಗೆಗೆ …
Read More »ಬೆಳಗಾವಿ –ಅಬಕಾರಿ ನಾಕಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲಾ 5 ಸೋಲಾರ್ ಲೈಟ್
ಬೆಳಗಾವಿ – ಗೋವಾ ಮತ್ತು ಕರ್ನಾಟಕದ ಗಡಿ ಖಾನಾಪುರ ತಾಲೂಕಿನ ಸುರಾಲ್ ಕ್ರಾಸ್ ನ ಅಬಕಾರಿ ನಾಕಾದಲ್ಲಿ ದಿನದ ಇಪ್ಪತ್ನಾಲ್ಕು ಘಂಟೆಯೂ ಅಬಕಾರಿ ಪೊಲೀಸರು ಮತ್ತು ಕಣಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತರು ಗೋವಾದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ ಎಲ್ಲ ಕಾರ್ಮಿಕ ಪಾದಚಾರಿಗಳ ಪ್ರಾಥಮಿಕ ಚಿಕಿತ್ಸೆ ನಡೆಸುತ್ತಿದ್ದಾರೆ. ಎಲ್ಲರ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾತ್ರಿ ವಿದ್ಯುತ್ತಿನ ತೀವ್ರ ಅಭಾವದಿಂದಾಗಿ ದಟ್ಟ ಅರಣ್ಯದ ಈ ಭಾಗದಲ್ಲಿ ಕೆಲಸ ನಿರ್ವಹಣೆ …
Read More »ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. …
Read More »ಕೊರೊನಾ ಸೋಂಕು ತಗುಲಿತ್ತು ಎಂದು ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ
ಮುಂಬೈ: ಕೊರೊನಾ ಸೋಂಕು ದೃಢ ಪಟ್ಟಿರುವ ಅಸ್ಸಾಂನ ನಾಗೌನ್ ಜಿಲ್ಲೆಯ 30 ವರ್ಷದ ವ್ಯಕ್ತಿ ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿರುಕೊಂಡಿದ್ದಾನೆ. ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಈತನಿಗೆ ಏಪ್ರೀಲ್ 7ರಂದು ಕೊರೊನಾ ಸೋಂಕು ತಗುಲಿತ್ತು ಎಂದು ಅಕೋಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಡಾ.ಅಪೂರ್ವ್ ಪಾವ್ಡೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಶನಿವಾರ ಆಸ್ಪತ್ರೆಯಲ್ಲಿಯೇ …
Read More »ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ಟ್ವಿಟ್ಟರ್‌ಗೆ ಮರಳಿದ ಪದ್ಮಾವತಿ
ಬೆಂಗಳೂರು: ಸ್ಯಾಂಡಲ್‍ವುಡ್ ಬ್ಯೂಟಿಕ್ವೀನ್ ರಮ್ಯ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಸ್ ಬಂದಿದ್ದು, ಅವರ ಟ್ವಿಟ್ಟರ್ ಖಾತೆ ಸಕ್ರಿಯವಾಗಿದೆ. ಒಂದು ಕಾಲದಲ್ಲಿ ಚಂದನವದ ಬುಹುಬೇಡಿಕೆಯ ನಟಿಯಾಗಿ ಮರೆದಿದ್ದ ರಮ್ಯಾ, ಸದ್ಯ ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಸಖತ್ ಸಕ್ರಿಯವಾಗಿ ಇದ್ದ ರಮ್ಯಾ ಅವರು, ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆದರೆ ಈಗ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆ್ಯಕ್ಟಿವ್ ಆಗಿ ಇಟ್ಟುಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ …
Read More »ಹುಬ್ಬಳ್ಳಿಯಲ್ಲಿ ಪಶು ವೈದ್ಯರ ಮಾನವೀಯತೆ; ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗರ್ಭಿಣಿ ಹಸುವಿಗೆ ಮರುಜೀವ
ಹುಬ್ಬಳ್ಳಿ(ಏ.12): ಕೊರೋನಾ ಸೋಂಕಿನ ವಿರುದ್ಧ ವಿಶ್ವದ ವೈದ್ಯರು ಮನುಕುಲದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಉಣಕಲ್ ಗ್ರಾಮದ ಪಶುವೈದ್ಯರು ಮೃತ್ಯುವಿನ ಬಾಗಿಲು ತಟ್ಟಿದ್ದ ಅನಾಥ ಗರ್ಭಿಣಿ ಹಸುವಿಗೆ ಮರುಜನ್ಮ ನೀಡಿದ್ದಾರೆ. ಈ ಹೃದಯಸ್ಪರ್ಶಿ ಘಟನೆ ಉಣಕಲ್ ಸಿದ್ದಪ್ಪಜ್ಜನ ಹೊಸಮಠದ ಆವರಣದಲ್ಲಿ ನಡೆದಿದೆ. ಉಣಕಲ್ ಕ್ರಾಸ್ ರಾಮಲಿಂಗೇಶ್ವರ ದೇವಸ್ಥಾನದ ಬಯಲಿನಲ್ಲಿ ಪರಸ್ಪರ ಬಡಿದಾಡುತ್ತ ಬಂದ ನಾಲ್ಕಾರು ಬೀಡಾಡಿ ದನಗಳು ತುಂಬು ಗರ್ಭಿಣಿ ಹಸುವೊಂದನ್ನು ಕೆಳಗೆ ಬೀಳಿಸಿದ್ದವು. ಹಸುವಿನ ಮೇಲೆ ದಾಳಿ …
Read More »ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು; ನಗರದ ಹಲವೆಡೆ ಸೀಲ್ಡೌನ್
ವಿಜಯಪುರ(ಏ.12): ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ, ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದೆ. ಕೊರೋನಾ ನಿಗ್ರಹಕ್ಕಾಗಿ ಹಲವಾರು ಮುಂಜಾಗ್ರತಾ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯಪುರ ಜಿಲ್ಲಾಡಳಿತವು ತೆಗೆದುಕೊಂಡಿದೆ. ಈಗ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿದೆ. ಹೌದು, ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿದೆ. ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಈ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 150ಕ್ಕೂ ಹೆಚ್ಚು ರೋಗಿಗಳಿದ್ದು, ಅವರನ್ನು ನಗರದ ಬೇರೆ …
Read More »
Laxmi News 24×7