Breaking News

ರಾಜ್ಯ

ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ

ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾಸ್ಪತ್ರೆಯ ಕಾರ್ಮಿಕರಿಗೆ ಸ್ನೇಹ ಕೂಟ ಹಾಗೂ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಲು ಸತ್ಕಾರ ಸಮಾರಂಭ ಆಯೋಜಿಸಲಾಗಿತ್ತು. ಬೆಳಗಾವಿ ನಗರದ ಬಿಮ್ಸ್ ಆವರಣದಲ್ಲಿ ಇರುವ ಸಭಾ ಭವನದಲ್ಲಿ ಈ ಭವ್ಯವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ …

Read More »

ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೈಲಹೊಂಗಲ ತಾಲೂಕಿನ ವಿದ್ಯಾರ್ಥಿನಿ ರೂಪಾ ಪಾಟೀಲ್ ರಾಜ್ಯಕ್ಕೆ ಪ್ರಥ‌‌ಮ ಸ್ಥಾನ ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಶಾಲೆಯ ವಿದ್ಯಾರ್ಥಿನಿಯಾಗಿರುವ ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ‌.

Read More »

ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ

SSLC ಫಲಿತಾಂಶ: ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ವಿಜಯಪುರ ಖಾಸಗಿ ಶಾಲೆಯ ಬಾಲಕ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟ ಆಕ್ಸಪರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಅಕೀಲ್ ಅಹ್ಮದ್ ನದಾಫ್ ಟಾಫರ್ ಆಗಿದ್ದು ಈತ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ಕುಟುಂಬದಲ್ಲಿ ಹಾಗೂ ಶಾಲೆಯಲ್ಲಿ ಸಂತಸ …

Read More »

ವೃದ್ಧೆಯ ಪ್ರಜ್ಞೆ ತಪ್ಪಿಸಿ, ಕೈಗೆ ಕಲ್ಲು ಕೊಟ್ಟು 40 ಗ್ರಾಂ ಚಿನ್ನಾಭರಣ ಹೊತ್ತೊಯ್ದ ಖತರ್ನಾಕ್ ದಂಪತಿ

ಆನೇಕಲ್(ಬೆಂಗಳೂರು): ರಾಜ್ಯದಲ್ಲಿ ಇತ್ತೀಚೆಗೆ ಹಗಲು ದರೋಡೆಗಳು ಹೆಚ್ಚಾಗುತ್ತಿದ್ದು, ಒಂಟಿ ಮಹಿಳೆಯರು ಸಿಕ್ಕಿದ್ರೆ ಸಾಕು ಯಾವುದೋ ನೆಪ ಹೇಳಿ ಕಳ್ಳರು ಚಿನ್ನಾಭರಣವನ್ನು ಕದ್ದು ಪರಾರಿಯಾಗುತ್ತಾರೆ. ಇದೀಗ ಅಂತಹದ್ದೇ ಒಂದು ಘಟನೆ ತಾಲೂಕಿನ ಕೆಂಪಡ್ರಹಳ್ಳಿಯಲ್ಲಿ ನಡೆದಿದೆ. ಕೆಂಪಡ್ರಹಳ್ಳಿ ತೋಟದಲ್ಲಿ ಕೆಲಸ ಮುಗಿಸಿ ಒಬ್ಬಂಟಿಯಾಗಿ ಬರುತ್ತಿದ್ದ ಸಾವಿತ್ರಮ್ಮನನ್ನು ಕಂಡು ಇಬ್ಬರು ದಂಪತಿ ಅಡ್ರೆಸ್ಸ್ ಕೇಳುವ ನೆಪದಲ್ಲಿ ವೃದ್ಧೆಯ ಬಳಿ ತಮ್ಮ ಸ್ಕೂಟಿಯನ್ನು ನಿಲ್ಲಿಸಿದ್ದಾರೆ. ಬಳಿಕ ಅಡ್ರೆಸ್ಸ್ ಕೇಳಿ ಆಕೆಯೊಂದಿಗೆ ಇನ್ನಷ್ಟು ಸಮಯ ಮಾತನಾಡಿದ್ದಾರೆ.ಚಿನ್ನವನ್ನು ಹೀಗೆಲ್ಲ ಹಾಕಿಕೊಂಡು …

Read More »

ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ- ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು ಮುಂದಿನ ದಿನಗಳಲ್ಲಿ ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ- ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು ಮುಂದಿನ ದಿನಗಳಲ್ಲಿ ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು : ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಿಬಿಎಂಪಿ …

Read More »

ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಮಾಡುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಕ್ರಮ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಹಲವು ವರ್ಷಗಳಿಂದ ವೈಜ್ಞಾನಿಕವಾಗಿ ದೇಶದಾದ್ಯಂತ ಜಾತಿಗಣತಿ ಸಮೀಕ್ಷೆಗೆ ಯಾವ ಸರ್ಕಾರವೂ ಮುಂದಾಗಿರಲಿಲ್ಲ. ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ ಈ ನಿರ್ಧಾರದಿಂದ ದೇಶದಲ್ಲಿ ಹಿಂದುಳಿದವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕ …

Read More »

ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ?

ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಇಡೀ ದೇಶವು ಮೋದಿ, ಸರ್ಕಾರ ಹಾಗೂ ಸೈನಿಕರ ಜೊತೆಗೆ ನಿಲ್ಲಬೇಕು. ನಾವ್ಯಾರು ಇಲ್ಲಿ ಬೇರೆ ಬೇರೆ ರೀತಿ ಮಾತನಾಡಲು ಆಗಲ್ಲ ಎಂದು ಹೇಳಿದರು. ಅಂದು ಇಂದಿರಾ ಗಾಂಧಿಗೆ ಇಡೀ ದೇಶದ ಬೆಂಬಲ ಸಿಕ್ಕಿತ್ತು: 1971ರಲ್ಲಿ ಇಂದಿರಾ ಗಾಂಧಿ ಪಾಕಿಸ್ತಾನವನ್ನು ಬಗ್ಗುಬಡಿದಾಗ ಇಡೀ ದೇಶ ಹಾಗೂ ವಿರೋಧ ಪಕ್ಷದವರು ಅವರ ಜೊತೆಗಿದ್ದು ಬೆಂಬಲ ಕೊಟ್ಟರು ಎಂಬುದನ್ನು …

Read More »

ಪಾಕಿಸ್ತಾನಕ್ಕೆ ಜೈ ಎಂದವರನ್ನು ಗುಂಡಿಕ್ಕಿ ಕೊಲ್ಲಬೇಕು’ : ಎಂಎಲ್​ಸಿ ಹೆಚ್ ವಿಶ್ವನಾಥ್ –

ಮೈಸೂರು : ಪಾಕಿಸ್ತಾನಕ್ಕೆ ಜೈ ಎಂದವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್. ವಿಶ್ವನಾಥ್‌ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಕಾರ್ಮಿಕ ದಿನಾಚರಣೆ, ಎಲ್ಲಾ ಕಾರ್ಮಿಕರಿಗೂ ಶುಭಾಶಯ ಎಂದರು. ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಇಡೀ ದೇಶವು ಮೋದಿ, ಸರ್ಕಾರ ಹಾಗೂ ಸೈನಿಕರ ಜೊತೆಗೆ ನಿಲ್ಲಬೇಕು. ನಾವ್ಯಾರು ಇಲ್ಲಿ ಬೇರೆ …

Read More »

ಪಕ್ಕದ ಮನೆಯವನ ಕಿರುಕುಳದಿಂದ ನೊಂದು ಬಾಲಕಿ ಆತ್ಮಹತ್ಯೆ

ಪಕ್ಕದ ಮನೆಯವನ ಕಿರುಕುಳದಿಂದ ನೊಂದು ಬಾಲಕಿ ಆತ್ಮಹತ್ಯೆ ಬಳ್ಳಾರಿ: ಪಕ್ಕದ ಮನೆಯಾತನ ಮಾನಸಿಕ, ದೈಹಿಕ ಕಿರುಕುಳದಿಂದ ನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಡೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ತನ್ನ ಪಕ್ಕದ ಮನೆಯ ವ್ಯಕ್ತಿ ಸುರೇಶ ಎಂಬವನ ಹೆಸರನ್ನು ಡೆತ್ ನೋಟ್​ನಲ್ಲಿ ಬರೆದಿಟ್ಟು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಭಂಗ ಮಾಡಿ, ಕಿರುಕುಳ ನೀಡಿದ್ದಾನೆ, ಅವನನ್ನು ಬಿಡಬೇಡಿ ಎಂದು ಅಪ್ರಾಪ್ತೆ ತಿಳಿಸಿದ್ದಾಳೆ. ಈ ಕುರಿತು ಬಾಲಕಿಯ ತಂದೆ ಮಾತನಾಡಿದ್ದು, “ನಾನು ಮದುವೆಗೆ ಹೋಗಿದ್ದೆ, …

Read More »

ಎಸ್​ಎಸ್ಎಲ್​ಸಿ ಫಲಿತಾಂಶ ನಾಳೆ ಪ್ರಕಟ:

ಬೆಂಗಳೂರು: ಎಸ್​​ಎಸ್​ಎಲ್​ಸಿ ಪರೀಕ್ಷೆ -1ರ ಫಲಿತಾಂಶ ಶುಕ್ರವಾರ ಘೋಷಣೆಯಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11.30 ಗಂಟೆ ಸುಮಾರು ಸುದ್ಧಿಗೋಷ್ಟಿಯಲ್ಲಿ ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ. ಕಳೆದ ಮಾರ್ಚ್ 21ರಿಂದ ಏಪ್ರಿಲ್ 4ನೇ ತಾರೀಖಿನವರೆಗೆ ನಡೆದ ಹತ್ತನೇ ತರಗತಿ ಪರೀಕ್ಷೆಯ ಎಲ್ಲಾ ಉತ್ತರಪತ್ರಿಕೆಗಳ ಮೌಲ್ಯಮಾಪನವು ಮುಕ್ತಾಯಗೊಂಡಿದ್ದು, ಫಲಿತಾಂಶವನ್ನು ನಾಳೆ ಪ್ರಕಟಿಸಲು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಶಿಕ್ಷಣ …

Read More »