Breaking News

ರಾಜ್ಯ

ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್

ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್…… ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಶಾಲಾ ಬಸ್ ಹರಿದ ಘಟನೆ ಗೋಕಾಕ ತಾಲೂಕಿನ ಮಲ್ಲಾಪುರ ಪಿಜಿ ತೋಟದ ಹತ್ತಿರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದರ. ಶಾಲಾ ಬಸ್ ಚಾಲಕನ ದಿವ್ಯ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ರಸ್ತೆ ಬದಿಯಲ್ಲಿ ಸೈಕಲ್ ಮೇಲೆ …

Read More »

ಜ.3ರಂದು ಸೂರ್ಯ, ಚಂದ್ರರ ಅಪರೂಪದ ಸಂಗಮ:

ಜ.3ರಂದು ಸೂರ್ಯ, ಚಂದ್ರರ ಅಪರೂಪದ ಸಂಗಮ: ಮಿಸ್​ ಮಾಡದೆ ನೋಡಿ 2026ರ ಮೊದಲ ಸೂಪರ್‌ಮೂನ್ ಉಡುಪಿ: ನಾಳೆ ಸೂರ್ಯ ಸುಮಾರು 30 ಲಕ್ಷ ಕಿ.ಮೀ ಭೂಮಿಗೆ ಸಮೀಪ ಬಂದು ದೊಡ್ಡದಾಗಿ ಕಾಣುತ್ತಾನೆ. ಚಂದ್ರನೂ ಕೂಡ ಸುಮಾರು 27 ಸಾವಿರ ಕಿ.ಮೀ ಸಮೀಪಿಸಿ ದೊಡ್ಡದಾಗಿಯೇ ಕಾಣುತ್ತಾನೆ. ಈ ವಿಸ್ಮಯ ನಡೆಯುವುದು ಒಂದೇ ದಿನ, ಅದೇ ವಿಶೇಷ. 2026ನ ಮೊದಲ ಸೂಪರ್​ ಮೂನ್: ಚಂದ್ರ ಭೂಮಿಯಿಂದ ಸಾಮಾನ್ಯಕ್ಕಿಂತ ಕಡಿಮೆ ದೂರ ತಲುಪಿದಾಗ ಅದರ ಗಾತ್ರ ಮತ್ತು …

Read More »

ಬಳ್ಳಾರಿ ಘಟನೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

ಬಳ್ಳಾರಿ: ಶಾಸಕ ಭರತ ರೆಡ್ಡಿ ನೇತೃತ್ವದಲ್ಲಿ ನಿನ್ನೆ ಇಲ್ಲಿ ಗುಂಡಾಗರ್ದಿ ನಡೆದಿದೆ. ಸಾವಿರಾರು ಗೂಂಡಾಗಳನ್ನು ಕರೆತಂದು ಗೂಂಡಾಗಿರಿ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬ್ಯಾನರ್ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಗೆ ಆಗಮಿಸಿದ ಅವರು, ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸತೀಶ್ ರೆಡ್ಡಿ ಅನ್ನೋ ವ್ಯಕ್ತಿ ಖಾಸಗಿ ವ್ಯಕ್ತಿಗಳನ್ನು ಬಳಸಿ ಫೈರ್ ಮಾಡಿರುವ ಮಾಹಿತಿ ಇದೆ. …

Read More »

ಇ-ಸ್ವತ್ತು: ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ- ಪ್ರಿಯಾಂಕ್‌ ಖರ್ಗೆ

ಇ-ಸ್ವತ್ತು: ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ- ಪ್ರಿಯಾಂಕ್‌ ಖರ್ಗೆ ಬೆಂಗಳೂರು: ಇ-ಸ್ವತ್ತು ಆನ್‌ಲೈನ್​​ ಅರ್ಜಿ ಸಲ್ಲಿಕೆಯಲ್ಲಿ NIC ತಾಂತ್ರಿಕ ದೋಷ ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು, ಆತಂಕ ಬೇಡ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ. “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ ರಾಜ್​​ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್​​ ಮತ್ತು ಪಂಚಾಯತ್​ ರಾಜ್​ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ …

Read More »

ಹಿಂದೂ ಉತ್ತರಾಧಿಕಾರ ಕಾಯಿದೆ ಸೆಕ್ಷನ್ 6ರ ಗೊಂದಲ ಸರಿಪಡಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಹಿಂದೂ ಉತ್ತರಾಧಿಕಾರ ಕಾಯಿದೆ-1956ರ ಸೆಕ್ಷನ್ 6ರಲ್ಲಿರುವ ತಿದ್ದುಪಡಿಯಲ್ಲಿ ಮೃತಪಟ್ಟ ವ್ಯಕ್ತಿಯ ತಾಯಿ ಮತ್ತು ವಿಧವಾ ಪತ್ನಿಯ ಹಕ್ಕುಗಳ ಕುರಿತ ಅಸ್ಪಷ್ಟತೆಗಳ ಕುರಿತಂತೆ ಕೇಂದ್ರ ಸರ್ಕಾರ ಕೆಲವು ನಿಬಂಧನೆಗಳಿಗೆ ಮರು ತಿದ್ದುಪಡಿ ಮಾಡಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್‌ ತಿಳಿಸಿದೆ. ತನ್ನ ಮೃತಪಟ್ಟ ಪತಿಗೆ ಸೇರಿದ ಆಸ್ತಿಗಳ ಮೇಲಿನ ಹಕ್ಕುಗಳ ಕುರಿತಂತೆ ಸಿವಿಲ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ, ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಕೊಪ್ಪದ ಶರಣವ್ವ ಎಂಬವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವನ್ಯಜೀವಿ ಮಂಡಳಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಸಫಾರಿಗೆ ಅನುಮತಿ ನೀಡುವ ಬಗ್ಗೆ ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ವನ್ಯಜೀವಿ ಮಂಡಳಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸಭೆ ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಿತು. ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು? ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ …

Read More »

ಕಾಲ್ತುಳಿತದಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಕ್ರಿಕೆಟ್ ಟೂರ್ನಿ ನಡೆಸಬೇಕು ಎಂದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

ಬೆಂಗಳೂರು: ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸುವುದು ಪರಿಹಾರವಲ್ಲ ಎಂದು ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, “ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಪಂದ್ಯಾವಳಿ ನಿಲ್ಲಿಸೋದು ಪರಿಹಾರವಲ್ಲ. ಮತ್ತೆ ಅಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಆಟವಾಡಿಸಬೇಕು. ಪಂದ್ಯಾವಳಿ ನಡೆಯಬೇಕೆಂಬುದು ಎಲ್ಲರ ಬಯಕೆ. ದುರಂತ ಆಗಬಾರದಾಗಿತ್ತು, ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಈ ನೋವು ಸಾವನ್ನಪ್ಪಿದ ಕುಟುಂಬದವರಿಗೆ ಇದೆ” ಎಂದರು. ಕರ್ನಾಟಕ …

Read More »

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ಜನವರಿ 2 : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ …

Read More »

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ ಹಾಗೂ ಓರ್ವನ ಸಾವಿನ ಹಿನ್ನೆಲೆಯಲ್ಲಿ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತುಗೊಳಿಸಲಾಗಿದೆ. ಗಲಭೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ವಿಫಲರಾದ ಆರೋಪ ಮತ್ತು ಪರಿಸ್ಥಿತಿ ಕುರಿತು ಮೇಲಧಿಕಾರಿಗಳಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಲು ವಿಫಲರಾದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.

Read More »

ಗಂಡನ ಸಾವಿನಿಂದ ಹೊರಬರಲಾರದೆ ಸಾವಿಗೆ ಶರಣಾದ ಮಹಿಳೆ

ಗಂಡನ ಸಾವಿನಿಂದ ಹೊರಬರಲಾರದೆ ಸಾವಿಗೆ ಶರಣಾದ ಮಹಿಳೆ ಇಸ್ರೇಲ್‌ನಲ್ಲಿ ಕೇ‌ರ್ ಟೇಕರ್ ಆಗಿದ್ದ ಕೇರಳ ಮೂಲದ ಜಿನೇಶ್‌ ಅನುಮಾನಾಸ್ಪದವಾಗಿ ಮೃತಪಟ್ಟ ಒಂದು ತಿಂಗಳಲ್ಲೇ, ಆಘಾತ ತಾಳಲಾರದೆ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಬುಧವಾರ ನಡೆದಿದೆ. ದಂಪತಿಯ ಸಾವಿನಿಂದ ಹತ್ತು ವರ್ಷದ ಪುತ್ರಿ ಈಗ ಅನಾಥಳಾಗಿದ್ದು, ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ. ರೇಷ್ಮಾಗೆ ಕೌನ್ಸಲಿಂಗ್ ಮಾಡಲಾಗಿತ್ತು. ಆದರೂ ಆಘಾತದಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ. ಚೇತರಿಸಿಕೊಳ್ಳದ ರೇಷ್ಮಾ ಬದುಕು ಅಂತ್ಯಗೊಳಿಸಿದ್ದಾರೆ.

Read More »