Breaking News

ರಾಜ್ಯ

ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆ ಜಾರಿಗೆ ನಿರ್ಧಾರ

ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೆ ನಿರ್ಧಾರ ಮಾಡಲಾಗಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು.18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More »

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್​​ನಲ್ಲಿ ಸಿಎಂ ಘೋಷಿಸಿದ್ದಾರೆ.

Read More »

ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More »

ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಸಿದ್ದರಾಮಯ್ಯ

ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಯಾಗಲಿದೆ, ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಬಿದ್ದಿದೆ, ಮದ್ಯದ ಉತ್ಪಾದಕರಿಗೆ ಹೊಸ ಜವಾಬ್ದಾರಿಯನ್ನು ಸರ್ಕಾರ ಕೊಟ್ಟಿದೆ. ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರ ಆಗುವುದಿಲ್ಲ, ಇನ್ಮುಂದೆ ಮದ್ಯದ ಬೆಲೆ ಏರಿಕೆ ಉತ್ಪಾದಕರೇ ಮಾಡ್ಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Read More »

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂ

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂಪಾಯಿ ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂಪಾಯಿ ನಿಗದಿ ತುಂಗಭದ್ರಾ ಜಲಾಶಯದ 33 ಹೊಸ ಗೇಟ್‌ಗಳ ಅಳವಡಿಕೆ ಟಿಬಿ ಜಲಾಶಯದ ಸಾಮರ್ಥ್ಯ ಹೆಚ್ಚಿಸಲು ಸಮತೋಲನ ಜಲಾಶಯ ಹನೂರು ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸಲು ಕ್ರಮ ಭದ್ರಾ ಮೇಲ್ದಂಡೆ ಯೋಜನೆಯಿಂದ 157 ಕೆರೆ ತುಂಬಿಸಲು ಕ್ರಮ ಕೊರಟಗೆರೆ ತಾಲೂಕಿನಲ್ಲಿ 1.2 ಟಿಎಂಸಿ …

Read More »

4110 ಪೊಲೀಸ್ ಹುದ್ದೆ ಸೇರಿ ಗೃಹ ಇಲಾಖೆಯ 8176 ಹುದ್ದೆಗಳ ನೇರ ನೇಮಕಾತಿಗೆ ಚಾಲನೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಖಾಲಿ ಇರುವ 8176 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನಾಗರಿಕ ಪೊಲೀಸ್ ಕಾನ್ಸ್ ಟೆಬಲ್(ಸಿವಿಲ್) 4110, ವಿಶೇಷ ಸಶಸ್ತ್ರ ಮೀಸಲು ಪೊಲೀಸ್ ಪಡೆ(KSRP) 2032, ಪೊಲೀಸ್ ಕಾನ್ಸ್ ಟೆಬಲ್(KSISF) 364, ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ 20 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೆರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ …

Read More »

ನಗಲೇ ಇಲ್ಲ ರತಿ ಮನ್ಮಥರು- ಮೌನ ಶಪಥ, ಯಾರಿಗೂ ಸಿಗದ ₹ 13 ಲಕ್ಷ ಬಹುಮಾನ

ರಾಣಿಬೆನ್ನೂರು: ಇಲ್ಲಿನ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ನಗರದ ಶ್ರೀ ರಾಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಭೀಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಶಕ್ತಿ ಯುವಕ ಸಂಘ ಹಾಗೂ ಜೆಬಿಸಿಸಿ ಯುವಕ ಮಂಡಳಿ ವತಿಯಿಂದ ಕುಳ್ಳರಿಸಿದ್ದ ಜೀವಂತ ರತಿ-ಮನ್ಮಥರು ಈ ಬಾರಿಯೂ ನಗು ಚಿಮ್ಮಿಸದೇ ತಮ್ಮ ದಾಖಲೆ ಮುಂದುವರಿಸಿಕೊಂಡು ಬಂದಿದ್ದಾರೆ.

Read More »

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ ಆಕಾಶದಲ್ಲಿ ಒಂದು ಕೌತುಕ ನಡೆಯಲಿದೆ. ಮಾರ್ಚ್ 3 ಇಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದ್ದು, ಇದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಚಂದ್ರಗ್ರಹಣವು ಎಲ್ಲಾ ರಾಶಿಗಳ ಮೇಲೆ ಮಿಶ್ರ ಫಲ ನೀಡಲಿದೆ. ಮುಖ್ಯವಾಗಿ ಸಿಂಹ ಮತ್ತು ಕುಂಭ ರಾಶಿಯವರು …

Read More »

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

ಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರ ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ  ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ಜನಾಭಿಪ್ರಾಯ ಪರಿಗಣಿಸದೇ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ …

Read More »

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ ಶಾಲಾ ಶಿಕ್ಷಕರು (1-5ನೇ ತರಗತಿ) ಮತ್ತು ಪದವೀಧರ ಶಾಲಾ ಶಿಕ್ಷಕರು (6-8ನೇ ತರಗತಿ) ವೃಂದದಿಂದ ಅನುಕ್ರಮವಾಗಿ 2:1 ಅನುಪಾತದಲ್ಲಿ ಮುಂಬಡ್ತಿ ನೀಡುವ ಮೂಲಕ ಪ್ರತಿ ಮೂರನೇ ರಿಕ್ತ ಸ್ಥಾನವನ್ನು ತುಂಬುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆಯಲ್ಲಿ ನಿರ್ದೇಶಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ …

Read More »