Breaking News

ರಾಜ್ಯ

ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ

ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …

Read More »

ಹುಬ್ಬಳ್ಳಿ-ಗೋವಾ ರೈಲು ಸಂಪರ್ಕ ಕಡಿತ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್

ಹುಬ್ಬಳ್ಳಿ: ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಗೋವಾ ನಡುವೆ ರೈಲು ಸಂಪರ್ಕ ಭಾಗಶಃ ಕಡಿತಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್​​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ. ರೈಲ್ವೆ ಹಳಿ ಕಾಮಗಾರಿ ಕಾರಣದಿಂದಾಗಿ ಹುಬ್ಬಳ್ಳಿ ಹಾಗೂ ವಾಸ್ಕೋಡಗಾಮಾ ನಡುವೆ ಸಂಚರಿಸುವ ಕೆಲವು ರೈಲುಗಳ ಸಂಚಾರವನ್ನು ಏಪ್ರಿಲ್ ಮಧ್ಯಭಾಗದವರೆಗೆ ಭಾಗಶಃ ರದ್ದುಗೊಳಿಸಲಾಗಿದೆ. ಅವುಗಳ ಪೈಕಿ ಶಾಲಿಮಾರ್​​​ನಿಂದ ವಾಸ್ಕೋಡಿಗಾಮಾಕ್ಕೆ ಹೋಗಬೇಕಾದ ಅಮರಾವತಿ …

Read More »

ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ

ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು. ಯಲ್ಲಾಲಿಂಗ ವಾಳದ ಅವರು ಶ್ರೀ …

Read More »

ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ ಐದು ಪ್ರಮುಖ ವಿಧೇಯಕಗಳ ಅನುಮೋದನೆ:

ಬೆಂಗಳೂರು: ಮಾರ್ಚ್ 3ರಿಂದ ಉಭಯ ಸದನಗಳ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಮಾರ್ಚ್ 3ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳು ನಡೆಯಲಿವೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸಚಿವ ಹೆಚ್‌.ಕೆ. ಪಾಟೀಲ್‌ ಹೇಳಿದ್ದಾರೆ. ಹಾಗೇ, ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೇರ ನಗದು ವರ್ಗಾವಣೆ ಬದಲಾಗಿ 5 ಕೆಜಿ ಅಕ್ಕಿ ವಿತರಿಸಲು ನೀಡಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಆಹಾರ ಇಲಾಖೆಯ …

Read More »

ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ; ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಪ್ರವಾಸೋದ್ಯಮ ಅಧಿಕಾರಿಯಿಂದ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಈ ಘಟನೆಯ ಬಗ್ಗೆ ಟಿವಿ9 ವರದಿಯನ್ನೂ ಮಾಡಿತ್ತು.  ಪ್ರವಾಸೋದ್ಯಮ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಪ್ರವಾಸೋದ್ಯಮ ಉಪ ನಿರ್ದೇಶಕ ಜಯಂತ್ ತಮ್ಮ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ನನಗೂ ಜಯಂತ್ ಎಂಬ ಅಧಿಕಾರಿ ಬಗ್ಗೆ ಮಾಹಿತಿ ಬಂದಿದೆ. ಇಂಥ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. …

Read More »

ಅತಿಥಿ ಶಿಕ್ಷಕರ ಪಾಲಿಗೆ ದೈವೀ ಸ್ವರೂಪಿಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ

ಅತಿಥಿ ಶಿಕ್ಷಕರ ಪಾಲಿಗೆ ದೈವೀ ಸ್ವರೂಪಿಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ ೧.೫೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಾಲಾ ಬ್ಯಾಗ್, ಸ್ವೆಟರ್, ಸಮವಸ್ತ್ರಗಳನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ …

Read More »

ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದೆಯೇ ಹೈಕಮಾಂಡ್ ಎಸ್‌ಸಿ, ಎಸ್‌ಟಿ ಸಮುದಾಯಗಳನ್ನು ಒಗ್ಗೂಡಿಸಿ ಅಂತ ಹೇಳಿತ್ತು. ಹೈಕಮಾಂಡ್ ಯಾವಾಗ ಸಮಾವೇಶ ಮಾಡಬೇಕೆಂದು ಹೇಳುತ್ತದೋ ಆವಾಗ ಸಮಾವೇಶವನ್ನು ಮಾಡುತ್ತೇವೆ ಎಂದರು. ನಾನೇನೂ ಹೈಕಮಾಂಡ್ ಭೇಟಿಯಾಗಲ್ಲ. ಸಮಾವೇಶ ಮಾಡಬೇಕು ಅಂತ ರಾಜಣ್ಣ, ಪರಮೇಶ್ವರ್ ಸೇರಿ ಹಲವರು ಮನವಿ ಮಾಡಿದ್ದಾರೆ. ಬೇರೆಯವರು ಹೇಳಿದ್ದನ್ನೇ ನಾನು …

Read More »

ಕಲಬುರಗಿಯಲ್ಲಿ ಕಾರ್ಮಿಕನ ಮೃತದೇಹವನ್ನು ಎಳೆದೊಯ್ದ ಘಟನೆ ಸಂಬಂಧ ಎಸ್​ಪಿ ಜೊತೆ ಮಾತನಾಡಿದ್ದೇನೆ. ಕೆಲವು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಸಚಿವ ಸಂತೋಷ್​ ಲಾಡ್ ತಿಳಿಸಿದರು.​

ಧಾರವಾಡ: ಕಾರ್ಮಿಕನ ಮೃತದೇಹವನ್ನು ಎಳೆದೊಯ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯ ಸಿಮೆಂಟ್ ಕಂಪನಿಯೊಂದರಲ್ಲಿ ನಡೆದಿದೆ. ಬಿಹಾರದ ಚಂದನಸಿಂಗ್ (35) ಮೃತ ಕಾರ್ಮಿಕ. ಕಾರ್ಮಿಕನನ್ನು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಆರು ಮಂದಿ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಲಬುರಗಿ ಎಸ್​ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ. “ಕಾರ್ಮಿಕ ಮೃತಪಟ್ಟಿದ್ದು ಕಾರ್ಖಾನೆಯ ಒಳಗಡೆ ಅಲ್ಲವೇ ಅಲ್ಲ. ಕಾರ್ಮಿಕ ಬಹಿರ್ದೆಸೆಗೆಂದು …

Read More »

ಯಲ್ಲಾಪುರ ಬಳಿ ಲಾರಿ ಡಿಕ್ಕಿ: ಕಾರಲ್ಲಿದ್ದ ಪತಿ – ಪತ್ನಿ ಮತ್ತು ಏಳು ತಿಂಗಳ ಮಗ ಸಾವು

ಕಾರವಾರ: ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಮತ್ತು 7 ತಿಂಗಳ ಮಗ ಸೇರಿದಂತೆ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಬುಧವಾರ ನಡೆದಿದೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಮೂಲಕ ಶ್ರೀಕಾಂತ ರೆಡ್ಡಿ (37), ಅವರ ಪತ್ನಿ ಚೈತ್ರಾ ಆರ್(31) ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಅಪಘಾತದಲ್ಲಿ ಮೃತಟಪಟ್ಟವರು. ಕಾರು ಚಾಲಕ ಆರ್ ವೆಂಕಟೇಶ್ …

Read More »

ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಸಭೆ

ಇಂದು ಸಂಜೆ ಸವದತ್ತಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾನ್ಯ ಸವದತ್ತಿ ಮತಕ್ಷೇತ್ರದ ಶಾಸಕರ ಘನ ಉಪಸ್ಥಿತಿಯಲ್ಲಿ ಉಗರಗೋಳ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ / ಗ್ರಾಮಸ್ಥರೊಂದಿಗೆ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಾಗೂ ಜಮೀನಿನ ವಿಷಯದ ಕುರಿತು ಸಭೆ ಜರುಗಿಸಿ ಚರ್ಚಿಸಲಾಯಿತು. ಜಿಲ್ಲಾಧಿಕಾರಿ ಯವರ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು …

Read More »