ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತವಾಗಿ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಕ್ಷೇತ್ರದ ಎಲ್ಲ ಗ್ರಾಮಗಳ, ಸರ್ವ ಜನಾಂಗಗಳ ಹಿತ ದೃಷ್ಟಿಯಿಂದ ಎಲ್ಲ ಮಹನೀಯರ ಮೂರ್ತಿಗಳ ಪ್ರತಿಷ್ಟಾಪನೆಗೆ ಮಹತ್ವ ನೀಡಲಾಗುತ್ತಿದೆ. ಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಮಹನೀಯರ ಮೂರ್ತಿಗಳು ತಲೆ ಎತ್ತಲಿವೆ. ಈ ಸಂದರ್ಭದಲ್ಲಿ ಯುವರಾಜಣ್ಣ ಕದಂ, ಜಯವಂತ ಬಾಳೇಕುಂದ್ರಿ, ಯುವ ಕಾಂಗ್ರೆಸ್ ಮುಖಂಡ …
Read More »ತಹಶೀಲ್ದಾರ್ ಸಹಿ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್ಐ!
ದೇವನಹಳ್ಳಿ, ಫೆಬ್ರವರಿ 20: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವಿನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಲಕ್ಷಾಂತರ ರೂಪಾಯಿ ಲಪಟಾಯಿಸಿ ಸಿಕ್ಕಿ ಬಿದ್ದಿದ್ದಾರೆ. ರೆವಿನ್ಯೂ ಇನ್ಸ್ಪೆಕ್ಟರ್ (ಆರ್ಐ) ಆಗಿ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದಿದ್ದರಿಂದ, 2023 ರಿಂದ ಇಲ್ಲಿಯವರೆಗೆ ಇಬ್ಬರು ತಹಶಿಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜುರಾಯಿ ಇಲಾಖೆಯಲ್ಲಿನ …
Read More »ಸಾಲಗಾರನ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ
ಧಾರವಾಡ, ಫೆಬ್ರವರಿ 19: ಕಿರುಕುಳ ತಪ್ಪಿಸಬೇಕು ಮತ್ತು ಸಾವಿನ ಸರಣಿ ನಿಲ್ಲಬೇಕು ಅಂತಾ ಸರ್ಕಾರ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ತಂದಿದೆ. ಆದರೆ ಫೈನಾನ್ಸ್ (Microfinance) ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಕರ್ನಾಟಕದಲ್ಲಿ ಮತ್ತೆ ಸಾವುಗಳು ಸಂಭವಿಸುತ್ತಲ್ಲೇ ಇದ್ದಾವೆ. ಇದೀಗ ಸಾಲಗಾರನ ಕಿರುಕುಳದಿಂದಾಗಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಉಣಕಲ್ಕೆರೆಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಯಲಿವಾಳ ಗ್ರಾಮದ ನಿವಾಸಿ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ತಿಕ್ …
Read More »ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಆಟವಾಡುತ್ತಿದ್ದ ಮಗು ಮೇಲೆ ಹರಿದ ಜೆಸಿಬಿ
ಬೆಂಗಳೂರು, ಫೆಬ್ರವರಿ 19: ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ (death) ಹೊಂದಿರುವಂತಹ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. …
Read More »ಮಹಾಕುಂಭಕ್ಕೆ ನಿರೀಕ್ಷೆಮೀರಿದ ಜನಸಾಗರ; ವ್ಯಾಪಾರ ವಹಿವಾಟು ಮೂರು ಲಕ್ಷ ಕೋಟಿ
ನವದೆಹಲಿ, ಫೆಬ್ರುವರಿ 19: ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ಮುಂದಿನ ವಾರ ಸಮಾಪ್ತಿಗೊಳ್ಳಲಿರುವ ಮಹಾಕುಂಭ ಮೇಳ ನಿರೀಕ್ಷೆಮೀರಿದ ಯಶಸ್ಸು ಕಾಣುತ್ತಿದೆ. ಜನವರಿ 13ರಂದು ಆರಂಭವಾಗಿರುವ ಮತ್ತು ಪ್ರತೀ 144 ವರ್ಷಗಳಿಗೊಮ್ಮೆ ನಡೆಯುವ ಈ ಕುಂಭಮೇಳದಲ್ಲಿ ನಿರೀಕ್ಷಿಸಿದುದಕ್ಕಿಂತಲೂ ಹೆಚ್ಚಿನ ಜನರು ಈವರೆಗೆ ಭೇಟಿ ನೀಡಿದ್ದಾರೆ. ಇಡೀ ಕುಂಭಮೇಳದ ಆರು ವಾರದಲ್ಲಿ ಒಟ್ಟು 40 ಕೋಟಿ ಭಕ್ತರು ಆಗಮಿಸಬಹುದು ಎಂದು ಭಾವಿಸಲಾಗಿತ್ತು. ಆದರೆ, ಈವರೆಗಿನ ಸಂಖ್ಯೆ 55 ಕೋಟಿ ಮೀರಿದೆ. ಇನ್ನೊಂದು ವಾರ ಬಾಕಿ ಇದ್ದು ಒಟ್ಟು …
Read More »ಸನಾತನ ಧರ್ಮದ ಅತ್ಯಂತ ಪ್ರಸಿದ್ಧ ಮಹಾಪರ್ವ ಮತ್ತು ಧಾರ್ಮಿಕ ಮೇಳವಾದ ಕುಂಭ
ಸನಾತನ ಧರ್ಮದ ಅತ್ಯಂತ ಪ್ರಸಿದ್ಧ ಮಹಾಪರ್ವ ಮತ್ತು ಧಾರ್ಮಿಕ ಮೇಳವಾದ ಕುಂಭವು ಪ್ರಪಂಚದಾದ್ಯಂತ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆದರೆ ಅದರ ಬಗ್ಗೆ ಮನಸ್ಸಿನಲ್ಲಿ ಹಲವು ರೀತಿಯ ಕುತೂಹಲಗಳಿವೆ. ಕೆಲವೊಮ್ಮೆ ಅದು ಹೇಗೆ ಪ್ರಾರಂಭವಾಯಿತು..? ಕೆಲವೊಮ್ಮೆ ಅದರೊಂದಿಗೆ ಸಂಬಂಧಿಸಿದ ಧಾರ್ಮಿಕ ನಂಬಿಕೆಗಳೇನು.? ಕುಂಭ ಮಹಾಪರ್ವವನ್ನು ಯಾಕೆ ಆಚರಿಸಬೇಕು..? ಹೀಗೆ ನಾನಾ ಪ್ರಶ್ನೆಗಳು, ಗೊಂದಲಗಳು ನಮ್ಮ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಮೂರು ವಿಧಗಳ ಕುಂಭವಿದ್ದು, ಅವುಗಳನ್ನೇಕೇ ಬೇರೆ ಬೇರೆ ವರ್ಷಗಳಲ್ಲಿ ಆಯೋಜಿಸಲಾಗುತ್ತದೆ.? ಎನ್ನುವ …
Read More »140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಅಮೃತ 2.0 ಯೋಜನೆಯಡಿ ಅರಭಾವಿ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ – ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ …
Read More »ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ನಮ್ಮ ಹಠವಲ್ಲ, ರಿಕ್ವೆಸ್ಟ್ ಮಾತ್ರ: ಸಚಿವ ಸತೀಶ್ ಜಾರಕಿಹೊಳಿ
ಮಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ನಮ್ಮದೇನು ಹಠ ಇಲ್ಲ. ಹೈಕಮಾಂಡ್‌ಗೆ ರಿಕ್ವೆಸ್ಟ್ ಮಾತ್ರ ಮಾಡಿದ್ದೇನೆ. ಮುಂದಿನ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಹೋಗಿ ಹೈಕಮಾಂಡ್‌ಗೆ ಪ್ರಾರ್ಥನೆ ಮಾಡುವುದು ಮಾತ್ರ. ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ …
Read More »ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವಿಕೆ ಪ್ರಕ್ರಿಯೆ ವಿಸ್ತರಣೆ ಮಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ
ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ನಡೆದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು, ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ …
Read More »ಗಂಗಾವತಿ : ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ತೆಲಂಗಾಣದ ವೈದ್ಯೆ –
ಗಂಗಾವತಿ (ಕೊಪ್ಪಳ) : ಸ್ನೇಹಿತರೊಂದಿಗೆ ರಜೆ ಕಳೆಯಲು ಆಗಮಿಸಿದ್ದ ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆವೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ತಾಲೂಕಿನ ಸಣಾಪುರದ ಬಳಿ ಸಂಭವಿಸಿದೆ. ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್ ರಾವ್ ಎಂದು ಗುತಿಸಲಾಗಿದೆ. ಇವರು ಹೈದರಾಬಾದ್ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ …
Read More »
Laxmi News 24×7