Breaking News

ರಾಜ್ಯ

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ ಇಲಾಖೆ ಅನಾವರಣ

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ ಇಲಾಖೆ, ಬೆಳಗಾವಿ, ಲೋಕೋಪಯೋಗಿ ಇಲಾಖೆ (ಚಿಕ್ಕೋಡಿ ವಿಭಾಗ) ಹಾಗೂ ಬಾರ್ ಅಸೋಸಿಯೇಷನ್, ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ, ಬಾರ್ ಅಸೋಸಿಯೇಷನ್ ಕಟ್ಟಡದ ಉದ್ಘಾಟನೆ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ಹಸ್ತಾಂತರಿಸುತ್ತಿರುವ ಚಿತ್ರಣವಿರುವ ಗೋಡೆಯ ಮೇಲಿನ ಮ್ಯುರಲ್ ಅನ್ನು ಇಂದು ಮಾನ್ಯ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶ್ರೀ ಪ್ರಸನ್ನ ಬಿ. ವರಾಳೆ ಅವರ‌ ಜೊತೆಗೆ …

Read More »

ಗ್ಲಾಂಡರ್ಸ್‌ ಸೋಂಕಿಗೆ ರೇಸ್‌ಕೋರ್ಸ್‌ನ ಕುದುರೆ ಬಲಿ; ಮೃಗಾಲಯದಲ್ಲಿ ಕಟ್ಟೆಚ್ಚರ

ಮೈಸೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ರೇಸ್‌ಕೋರ್ಸ್‌ನಲ್ಲಿ ಮಾರಕ ಗ್ಲಾಂಡರ್ಸ್‌ ಸೋಂಕಿನಿಂದ ಕುದುರೆಯೊಂದು ಮೃತಪಟ್ಟಿದೆ. ಈ ಹಿನ್ನೆಲೆಯಲ್ಲಿ, ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 17ರಂದು ಎರಡು ವರ್ಷದ ಗಂಡು ಕುದುರೆ ಗ್ಲಾಂಡರ್ಸ್‌ ಸೋಂಕಿಗೆ ಬಲಿಯಾಗಿದೆ. ಈ ಸೋಂಕು ಮಾರಕವಾಗಿದ್ದು, ಎರಡು ಕಿ.ಮೀ ವ್ಯಾಪ್ತಿಯವರೆಗೂ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮೃಗಾಲಯದಲ್ಲಿ ಎಲ್ಲ ಪ್ರಾಣಿಗಳ ಮೇಲೆ ನಿಗಾವಹಿಸಿ, ಮುಂಜಾಗ್ರತಾ ಕ್ರಮ‌ ಕೈಗೊಳ್ಳಲಾಗಿದೆ. ಸೋಂಕು ಮೃಗಾಲಯದಲ್ಲಿರುವ ಜೀಬ್ರಾ …

Read More »

ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ:

ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ: ಮುಂದಿನ ಸಿಎಂ ಆಗಲಿ ಎಂದು ನಾಗಾಸಾಧುಗಳಿಂದ ಡಿಕೆಶಿಗೆ ಆಶೀರ್ವಾದ ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ ಉತ್ತರಾಖಂಡ್ ಉತ್ತರಪ್ರದೇಶದಿಂದ ಆಗಮಿಸಿದ 10 ಸಾಧುಗಳು ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಹರಸಿದ ಸಾಧುಗಳು ಮನೆಗೆ ಬಂದವರನ್ನು ದೂರ ತಳ್ಳಲಾಗದು ಎಂದ ಡಿಕೆಶಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗೆ ಇಂದು ನಾಗಾಸಾಧುಗಳು ತೆರಳಿ ವಿಶೇಷ ಆಶೀರ್ವಾದ ಮಾಡಿದ್ದು, ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದ್ದಾರೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಅರಳಿಮಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಕುತೂಹಲ ಕೆರಳಿಸಿದ ಸತೀಶ್​ ಜಾರಕಿಹೊಳಿ ಡಿನ್ನರ್ ಪಾರ್ಟಿ: ಸಿಎಂ, ಅಹಿಂದ ಸಚಿವರು, ಶಾಸಕರಿಗೆ ಮಾತ್ರ ಆಹ್ವಾನ!

ಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ರಾಜ್ಯ ನಾಯಕರು ಬಂದಿದ್ದೇ ಬಂದಿದ್ದು, ಡಿನ್ನರ್ ಪಾರ್ಟಿಗಳು ನಡೆಯುತ್ತಲೇ ಇವೆ. ಗುರುವಾರ ರಾತ್ರಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ ಅವರು ಆಯೋಜಿಸಿದ್ದ ಭೋಜನಕೂಟವು ತೀವ್ರ ಕುತೂಹಲ ಕೆರಳಿಸಿದೆ. ಬೆಳಗಾವಿಯ ಕುವೆಂಪುನಗರದಲ್ಲಿ ಇರುವ ಸತೀಶ್​ ಜಾರಕಿಹೊಳಿ‌ ನಿವಾಸದಲ್ಲಿ ಡಿನ್ನರ್ ಪಾರ್ಟಿ ಕರೆದಿದ್ದರು. ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್​, ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್ ಸೇರಿದಂತೆ 25 …

Read More »

ಕಲೆಕ್ಷನ್ ಕಿಂಗ್ ಅಂದ್ರೆ ವಿಜಯೇಂದ್ರ:ಡಿ.ಕೆ.ಶಿ

ಚಿಕ್ಕೋಡಿ: ಕಲೆಕ್ಷನ್ ಕಿಂಗ್ ಅಂದ್ರೆ ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಕೆಳಗೆ ಇಳಿಸುತ್ತಿರುವ ವ್ಯಕ್ತಿ ಅಂದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಯತ್ನಾಳ್ ದಾಟಿಯಂತೆ ವಿಜಯೇಂದ್ರ ಮೇಲೆ ನೇರಾನೇರ ಆರೋಪ ಮಾಡಿದರು. ರಾಜ್ಯದ ಖಜಾನೆ ಖಾಲಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಖುಷಿ ಪಡಿಸಿದ್ದೀರಿ ಎಂದು ವಿಜಯೇಂದ್ರ ಅವರ ಹೇಳಿಕೆ ವಿಚಾರವಾಗಿ ಡಿ.ಕೆ. ಶಿವಕುಮಾರ್​ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿ, ವಿಜಯೇಂದ್ರ ಅವರಿಗೆ ಅನುಭವ ಕೊರತೆ ಇದೆ. …

Read More »

ಅನಾರೋಗ್ಯದ ನಡುವೆ ಸಿಎಂ, ಆಪ್ತನ ಔತಣಕೂಟಕ್ಕೆ ಆಗಮಿಸಿದ್ದಾರೆ. 

ಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್​​​ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್​​ನಿಂದ ಡಿನ್ನರ್ ವರೆಗೂ (dinner meeting) ಬಂದು ನಿಂತಿದೆ.  ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ಬಣದ ಡಿನ್ನರ್ ಪಾಲಿಟಿಕ್ಸ್​​ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ …

Read More »

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ

ಬೆಂಗಳೂರು, ಡಿಸೆಂಬರ್​ 18: ಬಿಪಿಎಲ್​​ ಕಾರ್ಡ್​​ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್​ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ …

Read More »

ರಾಜಕೀಯ ಇಚ್ಛಾಶಕ್ತಿಯ ವ್ಯಕ್ತಿತ್ವ. ಗುರುಮಠಕಲ್ ಶಾಸಕರಾದ ಶ್ರೀ ಶರಣಗೌಡ ಕಂದಕೂರ

ರಾಜಕೀಯ ಇಚ್ಛಾಶಕ್ತಿಯ ವ್ಯಕ್ತಿತ್ವ. ಗುರುಮಠಕಲ್ ಶಾಸಕರಾದ ಶ್ರೀ ಶರಣಗೌಡ ಕಂದಕೂರ ಅವರು ರಾಜ್ಯ ಸರ್ಕಾರದ ಬೆಳಗಾವಿಯ ಚಳಿಗಾಲದ ಅಧಿವೇಶನದ ಸದನದಲ್ಲಿ ಸರ್ಕಾರದ ಆಡಳಿತದಲ್ಲಿನ ಸೂಕ್ಷ್ಮತೆಯ ವಿಚಾರವನ್ನು ಉತ್ತರ ಕರ್ನಾಟಕದ ಪ್ರತಿಯೊಂದು ಕ್ಷೇತ್ರಕ್ಕೂ ಅನ್ವಯಿಸುವ ರೀತಿಯಲ್ಲಿ ಸೇರಿದಂತೆ ಅವರ ಗುರುಮಠಕಲ್ ಕ್ಷೇತ್ರದ ಪ್ರತಿಯೊಂದು ಇಲಾಖೆಯ ಆಡಳಿತದ ನ್ಯೂನತೆಗಳನ್ನು ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. ಜನರ ಬದುಕಿನ ಪರವಾಗಿ ನಿಲ್ಲಲು ನಮ್ಮನು ಕ್ಷೇತ್ರದ ಜನತೆ ಆಯ್ಕೆ ಮಾಡಿದ್ದಾರೆ ಆ ಜನರ ರುಣ ತೀರಿಸಲು ನಮ್ಮ ಕ್ಷೇತ್ರದ …

Read More »

ಏಪ್ರಿಲ್–ಮೇನಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಂಪುಟ ನಿರ್ಧಾರ

ಏಪ್ರಿಲ್–ಮೇನಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಂಪುಟ ನಿರ್ಧಾರ ಕರ್ನಾಟಕದಲ್ಲಿ ಬಹುಕಾಲದಿಂದ ವಿಳಂಬವಾಗಿದ್ದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು 2026ರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. 2016ರಲ್ಲಿ ಕೊನೆಯ ಬಾರಿ ನಡೆದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಅವಧಿ ಮುಗಿದು …

Read More »