Breaking News

ರಾಜ್ಯ

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟ ಮೋಹನ್ ಬಾಬು

ಖ್ಯಾತ ನಟ ಮೋಹನ್ ಬಾಬು ಅವರ ಕುಟುಂಬದಲ್ಲಿ ಬಿರುಕು ಮೂಡಿದ್ದು, ಆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಅವರು ಕೋಪಗೊಂಡಿದ್ದರು. ವಿವಾದದ ಕುರಿತು ಪ್ರಶ್ನೆ ಕೇಳಿದ ಟಿವಿ9 ವರದಿಗಾರ ರಂಜಿತ್ ಕುಮಾರ್​ ಮೇಲೆ ಮೋಹನ್​ ಬಾಬು ಅವರು ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ರಂಜಿತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ರಂಜಿತ್ ಕುಮಾರ್​ ಅವರ ಆರೋಗ್ಯವನ್ನು ಮೋಹನ್ ಬಾಬು ವಿಚಾರಿಸಿದ್ದಾರೆ. ಅಲ್ಲದೇ, ಅವರ …

Read More »

ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿ

ಮಂಗಳೂರಿನಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಅರಳಗೊಡು ಬಳಿ ಪಲ್ಟಿಯಾಗಿದೆ. 60 ಪ್ರಯಾಣಿಕರಲ್ಲಿ 21 ಜನ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸಹಾಯ ಮಾಡಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ.

ಡಿಸೆಂಬರ್​ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ (73) ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್​, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ …

Read More »

ಸೊಸೆಯನ್ನ ಮಂಚಕ್ಕೆ ಕರೆದ ಮಾವ : ಬರಲೊಪ್ಪದಕ್ಕೆ ಆಕೆಯ ಜೀವವನ್ನೇ ತೆಗೆದ!

ರಾಯಚೂರು, (ಡಿಸೆಂಬರ್ 15) : ಅತ್ಯಾಚಾರಕ್ಕೆ ಯತ್ನಸಿದ ವೇಳೆ ನಿರಾಕರಿಸಿದ್ದಕ್ಕೆ ಮಾವನೇ ತನ್ನ ಸೊಸೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ (Raichuru) ಜುಲಮಗೇರಾ ಗ್ರಾಮದಲ್ಲಿ ನಡೆದಿದೆ. ದುಳ್ಳಮ್ಮ (27) ಮೃತ ಮಹಿಳೆ. ರಾಮಲಿಂಗಯ್ಯ ಎನ್ನುವಾತ ಇದಕ್ಕೂ ಮುಂಚೆ ಎರಡ್ಮೂರು ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಬಳಿಕ ಗ್ರಾಮದ ಹಿರಿಯರು, ಕುಟುಂಬಸ್ಥರು ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬುದ್ಧಿ ಕಲಿಯದ ಕಾಮುಕ ಮಾವ ರಾಮಲಿಂಗಯ್ಯ, ಮನೆಯಲ್ಲಿ ಯಾರು ಇಲ್ಲದ ವೇಳೆ …

Read More »

ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನವಂತಾಗಿದೆ. ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ಸುಖವಾಗಿ ಜೀವನ ಮಾಡುತ್ತಾರೆ.

ಹಾಸನ, (ಡಿಸೆಂಬರ್ 15): ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನುವಂತಾಗಿದೆ ಎಂದು ಸರ್ಕಾರಿ ನೌಕರರ ಕೆಲಸದ ಒತ್ತಡದ ಬಗ್ಗೆ ಹೊಳೆನರಸೀಪುರ ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರು ಹೊರಹಾಕಿದ್ದಾರೆ. . ಸರ್ಕಾರಿ ನೌಕರರ ಸಂಘದ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬ ತಹಶೀಲ್ದಾರ್, ಒಂದು ತಾಲ್ಲೂಕಿನ ಆಡಳಿತದ ಮುಖ್ಯಸ್ಥನಾಗಿದ್ದೇನೆ. ಈಗ ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನವಂತಾಗಿದೆ. ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ಸುಖವಾಗಿ ಜೀವನ ಮಾಡುತ್ತಾರೆ. …

Read More »

ಸಿಬಿಐ ತನಿಖೆಗೆ ಸಹಕರಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ. ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿ ಮೋದಿ ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಭಾರೀ ಸದ್ದು ಮಾಡುತ್ತಿದೆ. ಈ …

Read More »

ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ

ಡಿಸೆಂಬರ್​ 14: ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (kv prabhakar) ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಅಭಿನಂದಿಸಿದರು. ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ರೂಪಿಸಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಈ ಮೊದಲು 16 …

Read More »

ನಕ್ಸಲ್​ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಪೇಜಾವರ ಶ್ರೀ

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಪೇಜಾವರ ಶ್ರೀಗಳು ನಕ್ಸಲ್ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಶನಿವಾರ ಪೇಜಾವರ ಶ್ರೀಗಳು ಚಿಕ್ಕಮಗಳೂರಿನ ಮುಂಡಗಾರಿಗೆ ಭೇಟಿ ನೀಡಿದಾಗ ಅಲ್ಲಿನ ಗ್ರಾಮಸ್ಥರು ಭಕ್ತಿ ಆದರದಿಂದ ಬರಮಾಡಿಕೊಂಡರು. ಮೈಲುದೂರ ನೂರಾರು ಮಹಿಳೆಯರು, ಪುರುಷರು ರಾಮಮಂತ್ರ ಘೋಷ ಭಜನೆಗಳೊಂದಿಗೆ ಪೂರ್ಣ ಕುಂಭಗಳ ಸಹಿತ ಶ್ರೀಗಳವರನ್ನು ಕಾಲ್ನಡಿಗೆಯಲ್ಲಿ ವನಮೆರವಣಿಗೆ ನಡೆಸಿ ಬರಮಾಡಿಕೊಂಡರು. ಗಿರಿಜನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಶ್ವಪ್ರಸನ್ನ ಶ್ರೀಗಳು, ಗಿರಿಜನರ ಸಮಸ್ಯೆಗಳ ಕುರಿತು …

Read More »

ನಾಯಿಯನ್ನೂ ಬಿಡದ ಕಾಮುಕರು: ಅಸಭ್ಯ ವರ್ತನೆ

ರಾಮನಗರ, ಡಿಸೆಂಬರ್​ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals) ಬಳಸಿಕೊಂಡು ಅನೈಸರ್ಗಿಕ ಲೈಂಗಿಕ‌ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಡೆದಿದೆ ಸ್ಥಳೀಯರಿಂದ ಧರ್ಮದೇಟು ನಾಯಿಯೊಂದಿಗೆ ಅನೈಸರ್ಗಿಕ ಲೈಂಗಿಕ‌ಕ್ರಿಯೆ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ಸಾತನೂರು ರಸ್ತೆ ಬಳಿ ನಡೆದಿದೆ. ಬಳ್ಳಾರಿ ಮೂಲದ ಬಸವ ಎಂಬ …

Read More »

ಹಿಂಡಲಗಾ ಕಾರಾಗೃಹದಲ್ಲಿ ಗಾಂಜಾಗಾಗಿ ಜೈಲು ಅಧಿಕಾರಿ ಮೇಲೆ ಹಲ್ಲೆ

ಬೆಳಗಾವಿ, ಡಿಸೆಂಬರ್​ 15: ಗಾಂಜಾಗಾಗಿ (Drug) ಬೆಳಗಾವಿ ಕೇಂದ್ರ ಕಾರಾಗೃಹದ ಜೈಲಿನ (Hindalaga) ಕೈದಿ ಸಹಾಯಕ ಜೈಲರ್ (Jailar)​ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಡಿಸೆಂಬರ್ ​11ರಂದು ಸಹಾಯಕ ಜೈಲರ್ ಜಿ.ಆರ್.ಕಾಂಬಳೆ ಅವರ ಮೇಲೆ ವಿಚಾರಣಾಧೀನ ಕೈದಿ ಶಾಹೀದ್ ಖುರೇಶಿ ಹಲ್ಲೆ ಮಾಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಜೈಲು ಅಧಿಕಾರಿಗಳು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಸಹಾಯಕ ಜೈಲರ್ ಜಿ.ಆರ್.ಕಾಂಬಳೆ ಅವರು …

Read More »