ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ: 8.50 ಲಕ್ಷದ ಮೌಲ್ಯದ ನಕಲಿ ಮದ್ಯ ವಶಕ್ಕೆ ನಕಲಿ ಮಧ್ಯ ತಯಾರಿಕಾ ಘಟಕದ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ನಕಲಿ ಮಧ್ಯ ಹಾಗೂ ಸ್ಪಿರೀಟ್ ವಶ ಪಡಿಸಿಕೊಂಡ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಹೊರ ಭಾಗದಲ್ಲಿ ಜಮೀನಿನಲ್ಲಿ ನಡೆದಿದೆ. ಜಮೀನಿನ ಮಾಲೀಕ ಅಮೋಘಸಿದ್ದ ಹೂಗಾರ ಹಾಗೂ ನಕಲಿ ಮದ್ಯ ತಯಾರು ಮಾಡುವ ಪರಿಣತ ಹೊಂದಿರುವ ಹುಬ್ಬಳ್ಳಿಯ 5 ಜನನ್ನು …
Read More »ಉಳಿದ ನಾಲ್ಕು ದಿನಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು : ಶಾಸಕ ಪ್ರಸಾದ ಅಬ್ಬಯ್ಯ
ಉಳಿದ ನಾಲ್ಕು ದಿನಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು : ಶಾಸಕ ಪ್ರಸಾದ ಅಬ್ಬಯ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಗ್ಗೆ ಚರ್ಚೆಯನ್ನು ಈ ವಾರ ನಡೆದ ಅಧಿವೇಶನದಲ್ಲಿ ಚರ್ಚೆ ನಡೆಸಲು ಸಾಧ್ಯವಾಗಲಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ವಿನಾಕಾರಣ ಬಿಜೆಪಿಯವರು ಅಭಿವೃದ್ಧಿ ಕುರಿತಾಗಿ ಯಾವುದೇ ಚರ್ಚೆ ಮಾಡಲ್ಲ,ಒಂದು ಜಾತಿಯ ಸಮುದಾಯ …
Read More »ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ
ವಿಜಯಪುರ ನಗರದ ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ವಿಜಯಪುರದ ಸಾಯಿ ಗಾರ್ಡನ್ ಮೈದಾನದಲ್ಲಿ ನಡೆದ ಭಗವದ್ಗೀತಾ ಅಭಿಯಾನ 2024 ರಾಜ್ಯ ಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು, ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಸಿಂದಗಿ ಸಾರಂಗಮಠದ ಶ್ರೀಗಳು ಸೇರಿದಂತೆ ಸ್ವಾಮೀಜಿಗಳು ಹಾಗೂ ಭಗವದ್ಗೀತಾ …
Read More »ಮುತ್ತಯ್ಯನಹಟ್ಟಿಯಲ್ಲಿ ಬಹುನಿರೀಕ್ಷಿತ 24/7 ನೀರು ಸರಬರಾಜು ವ್ಯವಸ್ಥೆಯನ್ನು ಉದ್ಘಾಟಿಸುವ 15 ವರ್ಷಗಳ ಕನಸನ್ನು ನನಸಾಗಿಸಿದರು.
ಶಾಸಕರಾದ ಶ್ರೀ ಆಸಿಫ್ ಸೇಠ್ ಅವರು ಮುತ್ತಯ್ಯನಹಟ್ಟಿಯಲ್ಲಿ ಬಹುನಿರೀಕ್ಷಿತ 24/7 ನೀರು ಸರಬರಾಜು ವ್ಯವಸ್ಥೆಯನ್ನು ಉದ್ಘಾಟಿಸುವ 15 ವರ್ಷಗಳ ಕನಸನ್ನು ನನಸಾಗಿಸಿದರು. ಪ್ರತಿ ಮನೆಯಲ್ಲೂ ಈಗ ಯಾವ ಅಡೆತಡೆಯೂ ಇಲ್ಲದೇ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆಯಾಗಿದ್ದು ನಮ್ಮ ಶಾಸಕರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ.
Read More »9 ಕೋಟಿ ರೂ. ಕಾಮಗಾರಿಗೆ ಸಚಿವದ್ವಯರಿಂದ ಭೂಮಿ ಪೂಜೆ
ವಿಘ್ನ ಸಂತೋಷಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ನನಗೆ ಅಭಿವೃದ್ಧಿ ಮಾತ್ರ ಗೊತ್ತು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 9 ಕೋಟಿ ರೂ. ಕಾಮಗಾರಿಗೆ ಸಚಿವದ್ವಯರಿಂದ ಭೂಮಿ ಪೂಜೆ ಸಚಿವರ ನೆರವು ನೆನೆದು ವೇದಿಕೆಯಲ್ಲೇ ಗಳಗಳ ಅತ್ತ ವ್ಯಕ್ತಿ *ಬೆಳಗಾವಿ:*ಅನಗತ್ಯ ರಾಜಕೀಯ ಮಾಡುವ ವಿಘ್ನ ಸಂತೋಷಿಗಳ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲ, ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. …
Read More »ಜಮೀನಿನಲ್ಲಿ ಬೆಳೆದಿದ್ದ 12 ಲಕ್ಷ ಮೌಲ್ಯದ ಗಾಂಜಾ ವಶ – ಆರೋಪಿ ಬಂಧನ
ಚಾಮರಾಜನಗರ: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ 12 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ .ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದ ಮಾರ ಎಂಬಾತ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಮಾಹಿತಿ ಮೇರೆಗೆ ರಾಮಾಪುರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.211 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿ ಮಾರನನ್ನು ಬಂಧಿಸಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ
ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು, ಗ್ರಾಮ ಪಂಚಾಯತಿಗಳಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿಗಳ ಮ್ಯಾನ್ಯುಯಲ್ ಸರಿಯಾಗಿ ಆಗಿಲ್ಲ. ಸಂಪೂರ್ಣವಾಗಿ ಆಸ್ತಿ ನಮೂದು ಆಗಬೇಕು. …
Read More »ಕಾಮಗಾರಿಯೇ ಮುಗಿದಿಲ್ಲ!ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್
ಹಾಸನದಿಂದ ಮಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ 700 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ಇನ್ನೂ ಅಪೂರ್ಣವಾಗಿದೆ. ಆದರೂ, ಆಲೂರು ತಾಲ್ಲೂಕಿನಲ್ಲಿ ಹೊಸ ಟೋಲ್ ಪ್ಲಾಜಾ ಆರಂಭಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇದರಿಂದ ಜನರ ಆಕ್ರೋಶ ಹೆಚ್ಚಾಗಿದ್ದು, ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಕ್ಕೆ ವಿರೋಧ ವ್ಯಕ್ತವಾಗಿದೆ. ಸ್ಥಳೀಯರು ಹೋರಾಟದ ಎಚ್ಚರಿಕೆ ನೀಡಿದ್ದಾರೆ. ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಪ್ರಮುಖ …
Read More »ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್ ಕೊರೆಸಿದ ಅತ್ತೆ, ಸೊಸೆ!
ಗದಗ, ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕೊಳವೆ ಬಾವಿ ಕೊರೆಸಿದ್ದಾರೆ. ಬೋರ್ವೆಲ್ನಲ್ಲಿ ಅವರಿಗೆ ನೀರು ಕೂಡ ದೊರೆತಿದೆ. ಇದೀಗ ಈ ಬಗ್ಗೆ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಹರ್ಷ ವ್ಯಕ್ತಪಡಿಸಿದ್ದಾರೆ. ಅತ್ತೆ ಹಾಗೂ ಸೊಸೆ ಸೇರಿ ಗೃಹಲಕ್ಷ್ಮಿ ಯೋಜನೆಯಿಂದ ದೊರೆತ 44 ಸಾವಿರ ರೂ. …
Read More »ಹೋರಾಟವನ್ನು ಅಸಂವೈಧಾನಿಕ ಅಂತ ಹೇಳಿ ಸಮುದಾಯದ ಬಗ್ಗೆ ಸಿಎಂ ನಿಷ್ಕಾಳಜಿ ಪ್ರದರ್ಶಿಸಿದ್ದಾರೆ: ಸ್ವಾಮೀಜಿ
ಬೆಳಗಾವಿ: ಪ್ರತಿಭಟನೆನಿರತ ಪಂಚಮಸಾಲಿಗಳ ಮೇಲೆ ಲಾಠಿ ಪ್ರಹಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಾತಾಡುವಾಗ ಪಂಚಮಸಾಲಿಗಳ ಮೀಸಲಾತಿ ಹೋರಾಟವನ್ನು ಸಂವಿಧಾನಬಾಹಿರ ಅಂತ ಹೇಳಿದ್ದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದವರಲ್ಲಿ ತೀವ್ರ ಅಸಮಾಧಾನವನ್ನುಂಟು ಮಾಡಿದೆ. ನಗರದಲ್ಲಿಂದು ಮಾಧ್ಯಮಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಸ್ವಾಮೀಜಿ, ನಮ್ಮ ಹೋರಾಟವನ್ನು ಅಸಂವೈಧಾನಿಕ ಎಂದು ಹೇಳುವ ಮೂಲಕ ಸಮುದಾಯದ ಬಗ್ಗೆ ತನಗೆ ಯಾವುದೇ ಕಾಳಜಿ ಇಲ್ಲವೆನ್ನುವುದನ್ನು ಸಿದ್ದರಾಮಯ್ಯ ನಿರೂಪಿಸಿದ್ದಾರೆ, ಅವರು ಹೇಳಿರುವುದು ಬಸವಣ್ಣನ ಎಲ್ಲ ಅನುಯಾಯಿಗಳಿಗೆ ಮಾಡಿದ …
Read More »
Laxmi News 24×7