ದಾವಣಗೆರೆ: ಅಲೆಮಾರಿ ದಂಪತಿಯ 1 ವರ್ಷ ಗಂಡು ಮಗು ನಾಪತ್ತೆಯಾದ ಘಟನೆ ನ.16ರಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೋಷಕರಾದ ಯುವರಾಜ್ ಪವಾರ್ ಮತ್ತು ಸಾರಿಕಾ ಪವಾರ್ ಹರಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ ಒಂದು ತಿಂಗಳಾದರೂ ಮಗುವಿನ ಸುಳಿವು ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಹೆತ್ತವರು ಅಳಲು ತೋಡಿಕೊಂಡಿದ್ದಾರೆ. ಮಗುವಿನ ತಂದೆ ಯುವರಾಜ್ ಪವಾರ್ ಅವರು ಜೊತೆ ಮಾತನಾಡಿ, “ಹರಪನಹಳ್ಳಿಯಲ್ಲಿ ಟೆಂಟ್ ಹಾಕಿಕೊಂಡು ರಾತ್ರಿ ವೇಳೆ ಮಲಗಿದ್ದಾಗ …
Read More »ಕಿತ್ತೂರು ಕರ್ನಾಟಕಕ್ಕೂ 371ಜೆ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದಕೋನರೆಡ್ಡಿ
ಬೆಳಗಾವಿ: ಕಲ್ಯಾಣ ಕರ್ನಾಟಕ ಮಾದರಿಯಲ್ಲೇ ಕಿತ್ತೂರು ಕರ್ನಾಟಕ ಅಭಿವೃದ್ಧಿಗೂ 371 ಜೆ ವಿಶೇಷ ಸ್ಥಾನಮಾನವನ್ನು ನೀಡುವಂತೆ ಒತ್ತಾಯಿಸುವ ನಿರ್ಣಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಶಾಸಕ ಎನ್. ಹೆಚ್. ಕೋನರೆಡ್ಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ ಅವರು, ಕಿತ್ತೂರು ಕರ್ನಾಟಕ ತುಂಬಾ ಹಿಂದುಳಿದಿದೆ. ಕಲ್ಯಾಣ ಕರ್ನಾಟಕದವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಫೋಟೋ ಇಟ್ಟುಕೊಳ್ಳಬೇಕು ಎಂದರು. ಬೆಣ್ಣೆ ಹಳ್ಳದ ಪ್ರವಾಹದಿಂದ ನಾಲ್ಕು …
Read More »ಯಾವುದೇ ರೈತರು ಇಂತಹ ಕಾರ್ಖಾನೆಯವರು ತೂಕದಲ್ಲಿ ಮೋಸ ಮಾಡಿದ್ದಾರೆ ಎಂದು ದೂರು ಕೊಟ್ಟರೆ ಅಂಥವರಿಗೆ ಸರ್ಕಾರದಿಂದ ಒಂದು ಲಕ್ಷ ರೂಪಾಯಿ;ಶಿವಾನಂದ ಪಾಟೀಲ
ಬೆಳಗಾವಿ : ಯಾವುದೇ ರೈತರು ಇಂತಹ ಕಾರ್ಖಾನೆಯವರು ತೂಕದಲ್ಲಿ ಮೋಸ ಮಾಡಿದ್ದಾರೆ ಎಂದು ದೂರು ಕೊಟ್ಟರೆ ಅಂಥವರಿಗೆ ಸರ್ಕಾರದಿಂದ ಒಂದು ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು. ಅವರು ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಂದ ಮನವಿ ಪತ್ರ ತೆಗೆದುಕೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಕೆಲವು ಸಕ್ಕರೆ ಕಾರ್ಖಾನೆಯಲ್ಲಿ ರೈತರಿಗೆ ಮೋಸ ಮಾಡುತ್ತಾರೆ ಎಂದು ದೂರುಗಳು ಕೇಳಿ ಬರುತ್ತಿವೆ. ಆದರೆ …
Read More »ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿ
ಡಿಸೆಂಬರ್ 16: ದೇಶದಾದ್ಯಂತ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹೆಂಡತಿ, ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಕಾನ್‌ಸ್ಟೇಬಲ್ ತಿಪ್ಪಣ್ಣ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಇದೀಗ ಹೆಂಡತಿಯ ಕಿರುಕುಳ ಆರೋಪದಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ಸಾವಾಗಿದೆ. ಹೌದು. ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ …
Read More »ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆಕುಮಾರಸ್ವಾಮಿ ಅವರಿಗೆ ಮುಖಭಂಗ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅವರು 21 ಮತಗಳೊಂದಿಗೆ ಗೆದ್ದಿದ್ದಾರೆ. ಕುಮಾರಸ್ವಾಮಿ ಬಣದ ಡಾ. ಆಂಜಿನಪ್ಪ ಅವರು 14 ಮತಗಳನ್ನು ಪಡೆದುಕೊಂಡಿದ್ದಾರೆ.ವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್ಡಿ ಕುಮಾರಸ್ವಾಮಿಗೆ (HD Kumaraswamy) ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. …
Read More »ಡ್ರೋನ್ ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
ಡಿಸೆಂಬರ್ 16: ಕೃಷಿ ಹೊಂಡಕ್ಕೆ ಸೋಡಿಯಂ (Sodium) ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ (Drone Pratap) ಡಿಸೆಂಬರ್ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಡ್ರೋನ್ …
Read More »ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಯುವಕ;
ಹಾವುಗಳೆಂದರೆ ಯಾರಿಗೆ ತಾನೇ ಭಯವಿರಲ್ಲ ಹೇಳಿ. ಅದರಲ್ಲೂ ಹೆಬ್ಬಾವು, ಕಾಳಿಂಗ ಸರ್ಪದಂತಹ ದೈತ್ಯ ಹಾವುಗಳನ್ನು ಕಂಡರೆ ಸಾಕು ಜನ ಮಾರು ದೂರ ಓಡಿ ಹೋಗ್ತಾರೆ. ಇವರುಗಳ ನಡುವೆ ಒಂದಿಷ್ಟು ಧೈರ್ಯವಂತ ಉರಗ ಪ್ರೇಮಿಗಳೂ ಇದ್ದಾರೆ. ಎಲ್ಲೇ ಎಷ್ಟು ದೊಡ್ಡ ಹಾವುಗಳಿದ್ದರೂ, ವಿಷಪೂರಿತ ಹಾವುಗಳಿದ್ದರೂ ಕೂಡಾ ಅದನ್ನು ಸಲೀಸಾಗಿ ಹಿಡಿದು ಅದರೊಂದಿಗೆ ಸರಸವಾಡುತ್ತಾರೆ. ಹೀಗೆ ಹಾವಿನ ಜೊತೆ ಸರಸವಾಡಲು ಹೋಗಿ ಪಜೀತಿಗೆ ಸಿಲುಕಿದವರ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಲ್ಲೊಂದು …
Read More »ಮೂರು ತಿಂಗಳಿಂದ ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿದ ಕಾರ್ಮಿಕ
ಡಿಸೆಂಬರ್ 16: ಮೂರು ತಿಂಗಳಿಂದ ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿ ಕಾರ್ಮಿಕ (labor) ಪ್ರತಿಭಟನೆ ಮಾಡಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಮಂಜುನಾಥ ಬಸಪ್ಪ ಮಡೊಳ್ಳಿ (48) ಪ್ರತಿಭಟನೆ ಮಾಡಿದ ಕಾರ್ಮಿಕ. ಸಂಗಮ್ ಹೋಟೆಲ್ನಲ್ಲಿ ಮಂಜುನಾಥ ಕೆಲಸ ಮಾಡುತ್ತಿದ್ದರು. ಸಂಬಳ ಕೇಳಿದ್ದಕ್ಕೆ ಕಾರ್ಮಿಕನ ಮೇಲೆ ಮಾಲೀಕ ಚಂದ್ರಶೇಖರ್ ಶೆಟ್ಟಿ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ಇದರಿಂದ ಮನನೊಂದು ಹೋಟೆಲ್ ಎದುರಿನ ಬ್ಯಾನರ್ ಕಂಬ ಏರಿ ಕುಳಿತಿದ್ದಾರೆ. ಕೂಡಲೇ ಕಂಬ ಏರಿದ ಆಟೋ …
Read More »ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ; ಜಯಮೃತ್ಯುಂಜಯ ಶ್ರೀ
ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ತೀವ್ರಗೊಳಿಸಿರುವ ಪಂಚಮಸಾಲಿ ಸಮುದಾಯ ಸೋಮವಾರ ಡಿಸಿ ಕಚೇರಿ ಬಳಿ ಹೋರಾಟಕ್ಕೆ ಮುಂದಾಗಿತ್ತು. ಲಾಠಿಜಾರ್ಜ್ ಖಂಡಿಸಿ ಹೋರಾಟ ನಡೆಸಲು ಬಸವ ಜಯಮೃತ್ಯುಂಜಯ ಶ್ರೀಗಳು ಕರೆ ನೀಡಿದ್ದರು. ಆದರೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಅವಕಾಶ ನೀಡದ್ದಕ್ಕೆ ಪಂಚಮಸಾಲಿ ಸಮುದಾಯ ಆಕ್ರೋಶ ಹೊರಹಾಕಿದೆ.ಹೋರಾಟಕ್ಕೆ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ …
Read More »ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಸಿದ್ದತೆ ವಿವಿಧ ವೃತ್ತಗಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ.
ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಸಿದ್ದತೆ ಪರಿಶೀಲಿಸಿದ ಸಚಿವ. ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಿಟಿ ರೌಂಡ್ಸ್ ಮೂಲಕ ಪರಿಶೀಲನೆ. ಬೆಳಗಾವಿ ಚೆನ್ನಮ್ಮ ವೃತ್ತ ಸೇರಿದಂತೆ ವಿವಿಧ ವೃತ್ತಗಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲನೆ. ಮಹಾತ್ಮಾ ಗಾಂಧೀಜಿ ಕಾಂಗ್ರೇಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಹಿನ್ನಲೆ ಅದ್ದೂರಿ ಆಚರಣೆಗೆ ಸಿದ್ದತೆ. 1924 ರಲ್ಲಿ ನಡೆದ ಕಾಂಗ್ರೇಸ್ ಅಧಿವೇಶನ ಹಿನ್ನಲೆ 100 ನೇ ವರ್ಷಾಚರಣೆಗೆ ಸಿದ್ದತೆ. ಡಿ.26,27,28,ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ …
Read More »
Laxmi News 24×7