ಯಾದಗಿರಿ: “ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೂಕ್ತ ಸೌಲಭ್ಯಗಳಿಲ್ಲದೆ ಸಾಕಷ್ಟು ಕ್ರೀಡಾಪಟುಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಳೆದ ಮೂರುವರೆ ತಿಂಗಳಿಂದ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿ, ಸಮಸ್ಯೆಗಳ ಕುರಿತು ಪತ್ರ ನೀಡಿದರೂ ಇದುವರೆಗೂ ಒಂದೂ ಉತ್ತರ ದೊರೆತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿರುವ ಖೇಲೋ ಇಂಡಿಯಾ ಖ್ಯಾತಿಯ ಕ್ರೀಡಾಪಟು ಲೋಕೇಶ್ ರಾಠೋಡ ಅವರು ಸೋಮವಾರ (ಇಂದು) ಜಿಲ್ಲಾ ಕ್ರೀಡಾಂಗಣದ ಎದುರು ತಾವು ಗೆದ್ದ ಪದಕಗಳನ್ನು ಮುಂದಿಟ್ಟು ಧರಣಿ ನಡೆಸಿದರು. ಜಿಲ್ಲೆಯ ಕ್ರೀಡಾಪಟುವಾಗಿರುವ ಲೋಕೇಶ್ ರಾಠೋಡ, ಕಳೆದ ತಿಂಗಳು ರಾಜಸ್ಥಾನದ …
Read More »ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ತೀರ್ಮಾನಕ್ಕೆ ನಾನು ಬದ್ಧ: ಸಿಎಂ
ಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ಬದ್ಧ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಗೊಂದಲವನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕೆಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ನಾನು ಹೈಕಮಾಂಡ್ ಜೊತೆ ಮಾತನಾಡಿದ್ದೇನೆ, ಅವರು ಈ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾನು …
Read More »ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಮೆಮೋರಿಯಲ್ ಟರ್ಫ್ ಕ್ರಿಕೆಟ್ ಟ್ರೋಫಿ’ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ
ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ 2025–26ನೇ ಸಾಲಿನ ನಮ್ಮ ಅಜ್ಜನವರ ಸ್ಮರಣಾರ್ಥದ ‘ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಮೆಮೋರಿಯಲ್ ಟರ್ಫ್ ಕ್ರಿಕೆಟ್ ಟ್ರೋಫಿ’ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಧಾರವಾಡ ವಲಯದ ನಿಮಂತ್ರಕ …
Read More »ಎಂಎಲ್ಎ ಕಾರು ಡ್ರೈವರ್ ಅಪಘಾತದಲ್ಲಿ ಸಾವು; ಶಾಸಕ ಮಹೇಶ ಟೆಂಗಿನಕಾಯಿ ಕಣ್ಣೀರು
ಎಂಎಲ್ಎ ಕಾರು ಡ್ರೈವರ್ ಅಪಘಾತದಲ್ಲಿ ಸಾವು; ಶಾಸಕ ಮಹೇಶ ಟೆಂಗಿನಕಾಯಿ ಕಣ್ಣೀರು ಹುಬ್ಬಳ್ಳಿ: ಮಗಳು ಹುಟ್ಟುಹಬ್ಬಕ್ಕೆಂದು ಹೋಗುತ್ತಿದ್ದ ಬಿಜೆಪಿ ಎಂಎಲ್ಎ ಮಹೇಶ ಟೆಂಗಿನಕಾಯಿ ಅವರ ಕಾರು ಚಾಲಕ ಮಂಜುನಾಥ, ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ತಮ್ಮ ಕಾರು ಚಾಲಕನನ್ನು ನೆನೆದು ಬಿಕ್ಕಿ ಬಿಕ್ಕಿ ಅಳುತ್ತ ಕಣ್ಣೀರು ಹಾಕಿದರು. ಶಾಸಕ ಮಹೇಶ ಟೆಂಗಿನಕಾಯಿ ಅವರ ಕಾರು ಚಾಲಕ ಮಂಜುನಾಥ …
Read More »ವಧು–ವರ ಮೆಳವಿಗಳು ಹಾಗೂ ಸಾಮೂಹಿಕ ವಿವಾಹ ಸಮಾರಂಭಗಳು ಪವಿತ್ರ ಪುಣ್ಯಕಾರ್ಯ : ಶಾಸಕ ಮಾರುತ್ತಿರಾವ್ ಮುಳೆ
ವಧು–ವರ ಮೆಳವಿಗಳು ಹಾಗೂ ಸಾಮೂಹಿಕ ವಿವಾಹ ಸಮಾರಂಭಗಳು ಪವಿತ್ರ ಪುಣ್ಯಕಾರ್ಯ : ಶಾಸಕ ಮಾರುತ್ತಿರಾವ್ ಮುಳೆ ರಾಜಮಾತಾ ಜಿಜಾವು ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ವಧು–ವರ ಮೆಳವಿಗೆ ಭರ್ಜರಿ ಪ್ರತಿಕ್ರಿಯೆ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಜೀವನಶೈಲಿಯಲ್ಲಿಯೂ ಮೂಲಭೂತ ಬದಲಾವಣೆಗಳು ಕಂಡುಬರುತ್ತಿವೆ. ಶಿಕ್ಷಣದ ಜೊತೆಗೆ ಯುವಕ–ಯುವತಿಯರ ಭವಿಷ್ಯದ ಜೀವನದ ಕುರಿತ ನಿರೀಕ್ಷೆಗಳು ಹೆಚ್ಚಾಗುತ್ತಿವೆ. ಇದರ ಪರಿಣಾಮವಾಗಿ ಸಮಯಕ್ಕೆ ಸರಿಯಾಗಿ ವಿವಾಹಗಳನ್ನು ಜೋಡಿಸುವುದು ಒಂದು ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದೆ. ಇಂತಹ ಸಂದರ್ಭಗಳಲ್ಲಿ ವಧು–ವರ ಮೆಳವಿಗಳು …
Read More »ಕರ್ತವ್ಯ ಮುಗಿಸಿಕೊಂಡು ತನ್ನೂರಿಗೆ ತೆರಳುತ್ತಿರುವಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡ ಪೊಲೀಸ್ ಶಿವಾನಂದ ಮಾದರ
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಸಹೋದ್ಯೋಗಿ ಶಿವಾನಂದ ಮಾದರ ಅವರು ಮೊನ್ನೆ ದಿನ ರಾತ್ರಿ ಗಸ್ತು ಕರ್ತವ್ಯ ಮುಗಿಸಿಕೊಂಡು ತನ್ನೂರಿಗೆ ತೆರಳುತ್ತಿರುವಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುತ್ತಾರೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ತಲೆ ಮತ್ತು ಎದೆಗೆ ಬಲವಾದ ಹೊಡೆತ ಬಿದ್ದದ್ದು ತಿಳಿದು ಬಂದಿರುತ್ತದೆ. ಹೆಚ್ಚಿನ ಚಿಕಿತ್ಸೆಗಾಗಿ ಗೋಕುಲ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸಿದ್ದು ಜಂಗಲಗಿಯವರು ಶಿವಾನಂದರನ್ನು ಕೆ.ಎಲ್.ಇ ಸುಚಿರಾಯು ಆಸ್ಪತ್ರೆಗೆ ದಾಖಲು ಮಾಡಿದ್ದು ಸದ್ಯ …
Read More »ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ: ಮಧು ಬಂಗಾರಪ್ಪ
ಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ನಮ್ಮ ಸರ್ಕಾರದಿಂದ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ” ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೋರ್ಟ್ ಆದೇಶ ಮಾಡಿರುವುದು ಸರಿ ಇದೆ. ಈಗ ಇರುವ ಶಿಕ್ಷಕರು 20ರಿಂದ 30 ವರ್ಷಗಳ ಹಿಂದೆ ನೇಮಕಗೊಂಡವರು. ಅವರು ಇಂದಿನ …
Read More »ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ
ಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ ಪೂಜೆ ಸಲ್ಲಿಸಿ,ದರ್ಶನ ಪಡೆದು,ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು.ಬಳಿಕ ಅವರು ನೀಡಿದ ಸತ್ಕಾರ ಸ್ವೀಕರಿಸಲಾಯಿತು. ದೇವಾಲಯದ ಸಂಕೀರ್ಣವು ಸಂತ ಜನಾಬಾಯಿಯವರು ಬಳಸಿದ ವಸ್ತುಗಳನ್ನು ಹೊಂದಿರುವ ಕೋಣೆಯನ್ನು ಒಳಗೊಂಡಿದೆ.ಈ ಸ್ಥಳದಲ್ಲಿಯೇ ವಿಠಲನು ಜನಾಬಾಯಿಯವರ ಮನೆಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದನೆಂದು ನಂಬಲಾಗಿದೆ.ಸಂತ ಜನಾಬಾಯಿ 7 ವರ್ಷದವಳಿದ್ದಾಗ,ಆಕೆಯ ಪೋಷಕರು ಪಂಢರಪುರದ ಶ್ರೀ ವಿಠಲ ದೇವಸ್ಥಾನಕ್ಕೆ ಭೇಟಿ ನೀಡಿದರು.ಜನಾಬಾಯಿ …
Read More »ಡಿಕೆಶಿ ಪಕ್ಷದ ಅಧ್ಯಕ್ಷರು. ರಾಜಣ್ಣ ಪಕ್ಷದ ಶಾಸಕರು. ಅವರಿಬ್ಬರು ಭೇಟಿ ಆಗಿರುವುದರಲ್ಲಿ ತಪ್ಪೇನಿದೆ ಎಂದ ಶಾಸಕ ಲಕ್ಷ್ಮಣ್
ಚಿಕ್ಕೋಡಿ: “ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಚಿವ ಕೆ.ಎನ್.ರಾಜಣ್ಣ ಭೇಟಿ ಆಗಿರುವುದಲ್ಲಿ ತಪ್ಪೇನು? ಅವರು ಪಕ್ಷದ ಅಧ್ಯಕ್ಷರು, ಇವರು ಪಕ್ಷದ ಶಾಸಕರು” ಎಂದು ಶಾಸಕ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿದ್ದಾರೆ. ಅಥಣಿ ಪಟ್ಟಣದ ಸಮುದಾಯದ ಆಸ್ಪತ್ರೆಯಲ್ಲಿ ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭಗೊಂಡ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಒಂದೇ ಪಕ್ಷದಲ್ಲಿ ಇರುವುದರಿಂದ ಭೇಟಿ ಮಾಡಿ …
Read More »ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಕ್ತಿ ಕಾಲೊನಿ ಗ್ರಾಮದ ಲೋಕೇಶ್ ಎಂಬವರ ಬಾಳೆತೋಟದಲ್ಲಿ ಇಂದು ಬೆಳಗ್ಗೆ ಹುಲಿ ಕಾಣಿಸಿಕೊಂಡು ಘರ್ಜಿಸುತ್ತಾ ಬೀಡುಬಿಟ್ಟಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದರು. ವಿಷಯ ತಿಳಿಯುತ್ತಿದ್ದಂತೆಯೇ ಬಂಡೀಪುರ ಹುಲಿ ರಕ್ಷಿತಾರಣ್ಯದ ಮದ್ದೂರು ವಲಯ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ, ಸಂಜೆಯ ಹೊತ್ತಿಗೆ ಸೆರೆ ಹಿಡಿದಿದ್ದಾರೆ. …
Read More »
Laxmi News 24×7