ಡಿಸೆಂಬರ್ 13: ರಾಜಧಾನಿ ಬೆಂಗಳೂರಲ್ಲಿ (Bengaluru) ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ (E-Khata) ಕಡ್ಡಾಯಗೊಳಿಸಲಾಗಿದೆ. ಇತ್ತ, ಇ-ಖಾತಾ ಪಡೆಯೋಕೆ ಪ್ರತಿ ವಾರ್ಡ್ನ ಬಿಬಿಎಂಪಿ ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದ್ದರೂ, ಬೆಂಗಳರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದರೂ ಜನರಿಗೆ ಮಾತ್ರ ಸಮಸ್ಯೆ ತಪ್ಪದಂತಾಗಿದೆ. ದಾಖಲೆಗಳು ಸರಿಯಿದ್ದರೆ ಸರ್ವರ್ ಇರಲ್ಲ, ಸರ್ವರ್ ಸರಿಯಿದ್ದರೆ ದಾಖಲೆ ಇಲ್ಲ ಎಂಬ ಸಂದಿಗ್ದ ಪರಿಸ್ಥಿತಿಗೆ ಸಿಲುಕಿರುವ ಜನರು ಇ-ಖಾತಾ ಪಡೆಯೋಕೆ ಪರದಾಡುತ್ತಿದ್ದಾರೆ.ಸದ್ಯ …
Read More »ಬಿಎಂಟಿಸಿ ಆರ್ಥಿಕ ಕುಸಿತಕ್ಕೆ ಕಾರಣ ಬಹಿರಂಗ
ಡಿಸೆಂಬರ್ 13: ಪ್ರಯಾಣ ದರ ಹೆಚ್ಚಿಸದಿದ್ದಕ್ಕೆ ಮತ್ತು ಕರ್ನಾಟಕ ಸರ್ಕಾರವು (Karnataka Government) ಆರ್ಥಿಕ ನೆರವು ನೀಡದೆ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. ಇದು ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿ ಬಯಲು ಮಾಡಿದೆ.ಬಿಎಂಟಿಸಿಯ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆಯ ಸಿಎಜಿ ವರದಿ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಯಿತು. ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಪ್ರಯಾಣಿಕರಿಗೆ ರಿಯಾಯಿತಿ …
Read More »ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ
ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ಬಯಲು. ಈತ ಖಾನಾಪುರದ ಬಿಜೆಪಿ ಮುಖಂಡ ಹಾಗೂ ಶಾಸಕರ ಆಪ್ತ ಆಕಾಶ ಅಥಣಿಕರ್. ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ ಪತ್ರಗಳನ್ನು ತಯಾರಿಸಿ ಕೊಟ್ಟು ಜನರನ್ನು ಯಾಮಾರಿಸುವುದೇ ಈ ಮಹಾನುಭಾವನ ಕಾಯಕ. ಖಾನಾಪುರ ತಾಲ್ಲೂಕಿನ ಶ್ರೀಮತಿ ಶೀತಲ ಪಾಟೀಲ ಎಂಬ ಮಹಿಳೆಗೆ ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿಸುವುದಾಗಿ ನಂಬಿಸಿ ಆಕೆಯಿಂದ 30000/- ಹಣ ಪಡೆದುಕೊಂಡು ಖೊಟ್ಟಿ ಆದೇಶ ಪ್ರತಿಯನ್ನು …
Read More »ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. 2023-24ನೇ ಸಾಲಿನಲ್ಲಿ ಅಭಿವೃದ್ಧಿ ಕೆಲಸಗಳಿಗೆಂದೇ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ.ಗಳನ್ನು ಒದಗಿಸಿದೆ. ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ.ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ …
Read More »ಯತ್ನಾಳ್, ತೇಜಸ್ವಿ ಸೂರ್ಯ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್: ಪ್ರಕರಣವೇನು?
ಬೆಂಗಳೂರು, ಡಿಸೆಂಬರ್ 12: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಆ ಮೂಲಕ ತೇಜಸ್ವಿ ಸೂರ್ಯ ಅವರಿಗೆ ಬಿಗ್ ರೀಲಿಫ್ ಸಿಕ್ಕಿದೆ. ಎಫ್ಐಆರ್ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಲಾಗಿದೆ.ಮೃತ ರೈತನ ತಂದೆಯ ಹೇಳಿಕೆ ಆಧರಿಸಿ …
Read More »ಕಾಂಗ್ರೆಸ್ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಶಾಸಕರು, ಪರಿಷತ್ ಸದಸ್ಯರು ಉಪಸ್ಥಿತರಿದ್ದರು. #CongressFailsKarnataka #PanchamasaliProtest
Read More »ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರ ಪ್ರತಿಭಟನೆ
ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ. ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಟಿವಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಖ್ಯಾತ ನಟ ಮೋಹನ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಟಿವಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಖ್ಯಾತ ನಟ ಮೋಹನ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಗಲಾಟೆ ಪ್ರಕರನ ಸಂಬಂಧ ವರದಿ ಗೆ ತೆರಳಿದ್ದ ಖಾಸಗಿ ಮಾಧ್ಯಮದ ಪತ್ರಕರ್ತ ನಟನಿಗೆ ಪ್ರಶ್ನೆ ಕೇಳುತ್ತಿದ್ದಂತೆ ಪತ್ರಕರ್ತನ ಕೈಲಿದ್ದ ಮೈಕ್ ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ. ನಟ ಮೋಹನ್ ಬಾಬು ಹಲ್ಲೆ ನಡೆಸುವಾಗ ಜೊತೆಯಲ್ಲಿ ಅವರ ಮಗ ಕೂಡ ಇದ್ದರು.ಪತ್ರಕರ್ತನ ಮೇಲೆ ಹಲ್ಲೆ ಪಕರಣ ಸಂಬಂಧ ಮೋಹನ್ ಬಾಬು …
Read More »ಪ್ರವಾಸದ ವೇಳೆ ಮಕ್ಕಳ ಬಗ್ಗೆ ಶಿಕ್ಷಕರಿಗೆ ಜಾಗೃತಿ ಇರಲಿ
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. …
Read More »ರಾಜ್ಯದ ಒಂದೊಂದೇ ಜೈಲಿನ ಕೈದಿಗಳ ಐಷಾರಾಮಿ ಜೀವನ ಅನಾವರಣ
ರಾಜ್ಯದ ಒಂದೊಂದೇ ಜೈಲಿನ ಕೈದಿಗಳ ಐಷಾರಾಮಿ ಜೀವನ ಅನಾವರಣಗೊಳ್ಳುತ್ತಿದೆ. ಕಲಬುರಗಿ ಬಳಿಕ ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳು ಆರಾಮವಾಗಿ ಕಾಲ ಕಳೆಯುತ್ತಿರುವ ಆರೋಪಗಳು ಕೇಳಿ ಬಂದಿವೆ. ಹಣ ನೀಡಿದರೆ ಕೈದಿಗಳಿಗೆ ಎಲ್ಲಾ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಕೈದಿಗಳು ಜೈಲಿನಲ್ಲಿಯೇ ಆಂಡ್ರಾಯ್ಡ್ ಮೊಬೈಲ್, ಹಣ ಇಟ್ಟು ಇಸ್ಪೀಟ್ ಆಡುವುದು ಮಾಡುತ್ತಿದ್ದಾರೆ. ಗಾಂಜಾ, ಬೀಡಿ, ಸಿಗರೇಟ್, ಬೀಯರ್ ಹೀಗೆ ಎಲ್ಲವನ್ನೂ ಹೊರಗಡೆಯಿಂದ ತರಿಸಿಕೊಂಡು ರಾಜರೋಷವಾಗಿ ಕಾಲಕಳೆಯುತ್ತಿದ್ದಾರೆ.ಕೈದಿ ಸುರೇಶ್ ಎಂಬಾತ ಇಸ್ಪೀಟ್ …
Read More »
Laxmi News 24×7