ಹರಿಹರ : ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಹಣವನ್ನು ಬಳಸಿಕೊಂಡಿಲ್ಲ. ಈ ಕುರಿತು ಸುಖಾ ಸುಮ್ಮನೆ ಆರೋಪಿಸುತ್ತಿರುವ ಬಿಜೆಪಿಯವರು, ಈ ಸಮುದಾಯಗಳಿಗೆ ನೀಡಿರುವ ಕೊಡುಗೆ ಏನು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು. ಹರಿಹರದ ಹಳೇ ಹರ್ಲಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರು ಅನಾವಶ್ಯಕವಾಗಿ ಟೀಕಿಸುತ್ತಿದ್ದಾರೆ ಎಂದರು. ಸಮರ್ಥ್ ಗೆಲುವು ಶತಸಿದ್ಧ ಶಾಮನೂರು …
Read More »ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಅವರು ಚಾಲನೆ
ರಾಮದುರ್ಗ: ಪ್ರತಿ ವಾರ ನಡೆಯುವ ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಇಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಶನಿವಾರ ರಾಮದುರ್ಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಇದ್ದು, ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ಮೊಮ್ಮಗ ಸೂರ್ಯ ಶ್ರೇಷ್ಠ ಸಂತೋಷ್ ಜಾರಕಿಹೊಳಿ ಅವರ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮ ಕಂಡು ಖುಷಿಯಾದರು. ಈ ಸಂದರ್ಭದಲ್ಲಿ …
Read More »SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ
ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷದಿಂದ ರಾಜ್ಯದ ಪಠ್ಯಕ್ರಮದಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು. ತೃತೀಯ ಭಾಷೆಗೆ ಗ್ರೇಡ್ ನೀಡುತ್ತೇವೆ ಮತ್ತು ಇದರಲ್ಲಿ ಪಾಸ್, …
Read More »ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ
ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದೆ ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ. ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು …
Read More »ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ
ಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ. ಹೌದು. ವಾರ್ ಎಫೆಕ್ಟ್ ಗಗನಕ್ಕೇರಿದ ಚಿನ್ನ ಈಗ ಪಾತಾಳಕ್ಕೆ ಕುಸಿದಿದೆ. ಚಿನ್ನದ ದರ ಕುಸಿತವು ಹೆಂಗಳೆಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. 10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ …
Read More »ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಕರ್ನಾಟಕ, ಗೋವಾ, ನಾಗಾಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಪಕ್ಷದ ಪ್ರಕಟಣೆಯ ಪ್ರಕಾರ, ಗೋವಾದ ಪೊಂಡಾ ಕ್ಷೇತ್ರದಿಂದ ರಿತೇಶ್ ರವಿ ನಾಯ್ಕ್ ಅವರನ್ನು ಕಣಕ್ಕಿಳಿಸಲಾಗಿದೆ. ನಾಗಾಲ್ಯಾಂಡ್‌ನ 28-ಕೊರಿಡಾಂಗ್ ಕ್ಷೇತ್ರದಿಂದ ದಾವೋಚಿಯರ್ ಐ. ಇಮ್ಚೆನ್ ಅಭ್ಯರ್ಥಿಯಾಗಿದ್ದು, ತ್ರಿಪುರಾದ 56-ಧರ್ಮನಗರ ಕ್ಷೇತ್ರದಿಂದ ಜಹರ್ …
Read More »ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ
ಬೆಂಗಳೂರು: ರಾಜ್ಯದ ಹಲವೆಡೆ ಇಂದೂ ಕೂಡ ಆಲಿಕಲ್ಲು ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಸುರಿದ ಅಕಾಲಿಕ ಭಾರಿ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಕಂಡಿದೆ. ಕಲಘಟಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಮಳೆಯಾಗಿದ್ದು, ಕಾಶ್ಮೀರದಂತ ದೃಶ್ಯ ಕಂಡಿದೆ. ಹುಬ್ಬಳ್ಳಿ ನಗರ ಗೋಕುಲ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್‌ನ ಮೇಲ್ಛಾವಣಿ ಕುಸಿದು ಬಿದ್ದಿದೆ. ಭಯದಿಂದ ಗ್ರಾಹಕರು ಮತ್ತು ಮಳಿಗೆಗಳ ವ್ಯಾಪಾರಿ, ಸಿಬ್ಬಂದಿ ಹೊರಬಂದು ಜೀವ ಉಳಿಸಿಕೊಂಡಿದ್ದಾರೆ. …
Read More »25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಸಿಕ್ಕಿಬಿದ್ದ ಪಿಡಿಓ
ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ.25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಸ್ವಾಮಿ ಎಂಬುವರು ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ.ಅನುಕಂಪದ ಆಧಾರದ ಮೇಲೆ ಸ್ವಾಮಿ ರವರ ಮಗ ಮಹದೇವ್ ಎಂಬುವರಿಗೆ ಕೆಲಸ ಸಿಕ್ಕಿದೆ.ತಂದೆ ಕರ್ತವ್ಯ ನಿರ್ವಹಿಸಿದ್ದ ಎರಡು ವರ್ಷದ ಸಂಬಳ ಬಾಕಿ …
Read More »ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ
ಬೆಂಗಳೂರು: ಯಗಾದಿ ಹಾಗೂ ರಂಜಾನ್ ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಮಾ.18, 19 ಹಾಗೂ 20ರಂದು ಬೆಂಗಳೂರಿನಿಂದ ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ಒಟ್ಟು 2,000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಜೊತೆಗೆ ಹಬ್ಬದ ಹಿನ್ನೆಲೆ ವಿಶೇಷ ರಿಯಾಯಿತಿಯನ್ನು ನೀಡಿದೆ. ಬಸ್ ಬುಕ್ ಮಾಡುವಾಗ ನಾಲ್ಕು ಹಾಗೂ ಹೆಚ್ಚಿನ ಟಿಕೆಟ್ ಬುಕ್ ಮಾಡಿದರೆ 5% ರಿಯಾಯಿತಿ ನೀಡಲಾಗಿದೆ. …
Read More »ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ
ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರವಾಗಿ ಮಳೆ ಸುರಿದಿದ್ದು, ಗುಡುಗು ಸಹಿತ ವರುಣ ಅಬ್ಬರಿಸಿದ್ದಾರೆ. ಇತ್ತ ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಯಾಗಿದೆ. ಆಲಿಕಲ್ಲು, ಬಿರುಗಾಳಿ, ಗುಡುಗು, ಮಿಂಚು, ಸಿಡಿಲು ಸಹಿತ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ವಾಹನ …
Read More »
Laxmi News 24×7