Home / ರಾಜ್ಯ (page 50)

ರಾಜ್ಯ

ಬೆಳಗಾವಿ | ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಲೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ‘ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳ ಕುರಿತು ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಬೆಂಗಳೂರಿನ ಕಾವೇರಿಯಲ್ಲಿ ಶುಕ್ರವಾರ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, …

Read More »

ತೇಗೂರು ಚೆಕ್‌ಪೋಸ್ಟ್‌: 776 ಗ್ರಾಂ ಚಿನ್ನಾಭರಣ ವಶ

ಧಾರವಾಡ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (ನಿಪ್ಪಾಣಿ-ಗಂಗಾವತಿ) ಒಯ್ಯುತ್ತಿದ್ದ 776 ಗ್ರಾಂ ( ₹ 38.5 ಲಕ್ಷ) ಚಿನ್ನಾಭರಣಗಳನ್ನು ತೇಗೂರು ಚೆಕ್ ಪೋಸ್ಟ್‌ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಗುರುವಾರ ರಾತ್ರಿ 11.30 ವೇಳೆಯಲ್ಲಿ ಸಿಬ್ಬಂದಿ ಬಸ್‌ ತಪಾಸಣೆ ಮಾಡಿದಾಗ ಚಿನ್ನಾಭರಣ ಸಿಕ್ಕಿವೆ. ಮಹಾರಾಷ್ಟ್ರ ಕೊಲ್ಲಾಪುರದ ಪ್ರಕಾಶಕುಮಾರ ಹುಕುಮಜಿ ಮಾಲಿ ಅವರು ಚಿನ್ನದ ಸರ, ಗುಂಡು, ಲಾಕೆಟ್‌ಗಳನ್ನು ಬಸ್‌ನಲ್ಲಿ ಸಿಂಧನೂರಿಗೆ ಒಯ್ಯುತ್ತಿದ್ದರು. ಅವರು ತೋರಿಸಿದ ಆಭರಣ ಖರೀದಿ ಬಿಲ್‍ಗಳಲ್ಲಿ ನಮೂದಾಗಿರುವ ತೂಕ …

Read More »

ಬಾಯಿ ಆರೋಗ್ಯ ವಿವಿಧೆಡೆ ಜಾಗೃತಿ ಶಿಬಿರ

ಬೆಳಗಾವಿ: ಭಾರತೀಯ ದಂತ ವೈದ್ಯರ ಸಂಘದ ಬೆಳಗಾವಿ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಜಿಲ್ಲೆಯ ಐದು ಶಾಲೆಗಳಲ್ಲಿ ‘ವಿಶ್ವ ಬಾಯಿ ಆರೋಗ್ಯ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬೆಳಗಾವಿ ತಾಲ್ಲೂಕು ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಶಿಬಿರದಲ್ಲಿ ಸಂಘದ ಡಾ.ಅಶ್ವಿನಿ ಅಂಗಡಿ, ಸದಸ್ಯರಾದ ಡಾ.ಸುಧಾ ಕುಂಬಾರ, ಡಾ.ಅನುರಾಧ ಮತ್ತು ಡಾ.ಸುಶೀಲ್ ನಂದಗಾವಿ ಅವರು ಭಾಗವಹಿಸಿ, ಗರ್ಭಿಣಿಯರು ಮತ್ತು ಹದಿಹರೆಯದ ಬಾಲಕಿಯರಲ್ಲಿ ‘ಪೆರಿಯೊಡಾಂಟಲ್ ಕಾಯಿಲೆಗಳ ತಡೆಗಟ್ಟುವಿಕೆ’ ಕುರಿತು ಜಾಗೃತಿ ಮೂಡಿಸಿದರು. …

Read More »

ಹಂಸಲೇಖಗೆ ‘ವಿಶ್ವ ಚೇತನ’ ಪ್ರಶಸ್ತಿ

ಚಿಕ್ಕೋಡಿ : ತಾಲ್ಲೂಕಿನ ಯಡೂರು ಗ್ರಾಮದ ಕಾಡ ಸಿದ್ಧೇಶ್ವರ ಮಠ ನೀಡುವ ವಿಶ್ವ ಚೇತನ ಪ್ರಶಸ್ತಿಗೆ ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 51 ಸಾವಿರ ನಗದು ಮತ್ತು ಸ್ಮರಣಿಕೆ ಹೊಂದಿದೆ. ಮಾರ್ಚ್ 25ರಂದು ನಡೆಯುವ ವೀರಭದ್ರದೇವ ಕಾಡಸಿದ್ದೇಶ್ವರ ಮಠ ಮತ್ತು ಭದ್ರಕಾಳಿ ವೀರಭದ್ರೇಶ್ವರ ಕಲ್ಯಾಣ ಮಹಾಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Read More »

ಕಾಂಗ್ರೆಸ್‌ನಲ್ಲಿ ಹೊಸ ನೀರಿನ ಹೊಳೆ; ಹಿರಿಯರ ಎದುರು ಹೊಸ ಚಿಗುರು

ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್‌ ಪಾಳೆಯದಲ್ಲಿ ಕಳೆದ 15 ದಿನಗಳಿಂದ ತೀವ್ರ ಗುಮಾನಿಗೆ ಕಾರಣವಾಗಿದ್ದ ಟಿಕೆಟ್‌ ವಿಚಾರ ಈಗ ನಿರಾಳವಾಗಿದೆ. ಇಬ್ಬರೂ ಸಚಿವರ ಮಕ್ಕಳಿಗೇ ಟಿಕೆಟ್‌ ‘ಗ್ಯಾರಂಟಿ’ ಎಂದು ಕಾಂಗ್ರೆಸ್‌ ಘೋಷಿಸಿದೆ. ತಂದೆ-ತಾಯಿ ಅಧಿಕಾರದಲ್ಲಿ ಇದ್ದಾಗಲೇ ಎಳೆ ವಯಸ್ಸಿನ ರಾಜಕಾರಣಿಗಳು ಅಖಾಡಕ್ಕೆ ಧುಮುಕಿದ್ದಾರೆ. ಕಾಂಗ್ರೆಸ್‌ನಲ್ಲಿ ‘ಹೊಸ ನೀರಿನ’ ಹೊಳೆ ಹರಿಯಲಾರಂಭಿಸಿದೆ. ಎರಡೂ ಕ್ಷೇತ್ರಗಳಲ್ಲಿ ಹಿರಿಯರ ಎದುರು ಹೊಸ ಚಿಗುರು ಮೂಡಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ …

Read More »

ಮಲಪ್ರಭೆ ಮಡಿಲಲ್ಲೇ ನೀರಿನ ಬವಣೆ

ಸವದತ್ತಿ: ಇಲ್ಲಿನ ಪುರಸಭೆ ವ್ಯಾಪ್ತಿಯ ಒಟ್ಟು 27 ವಾರ್ಡ್‌ಗಳ ಪೈಕಿ ಐದು ವಾರ್ಡ್‌ಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ತಲೆದೋರಿದೆ. ವಾರಕ್ಕೊಮ್ಮೆ ನೀರು ಪೂರೈಸಲಾಗುತ್ತಿದ್ದು, ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪಟ್ಟಣದ ಇತರ ವಾರ್ಡ್‌ಗಳಿಗೂ ಬವಣೆ ತಪ್ಪಿದ್ದಲ್ಲ ಎಂಬುದು ನಾಗರಿಕರ ಗೋಳು.   ಪಟ್ಟಣದ ಮ‌ಗ್ಗುಲಲ್ಲೇ ಮಲಪ್ರಭೆ ಹರಿಯುತ್ತಾಳೆ, ನವಿಲುತೀರ್ಥ ಜಲಾಶಯ ಇದೆ ಎಂಬ ಭರವಸೆ ಜನರಿಗೆ ಇದೆ. ಆದರೆ, ಜಲಾಶಯದಲ್ಲೂ ನೀರಿನ ಪ್ರಮಾಣ ದಿನೇದಿನೇ ಕ್ಷೀಣಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. 20 ಬಡಾವಣೆಗಳಲ್ಲಿ ಆದ್ಯತೆ …

Read More »

ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಕುಂಠಿತಗೊಳಿಸಲು ಪ್ರಧಾನಿಯಿಂದ ವ್ಯವಸ್ಥಿತ ಪ್ರಯತ್ನ: ಸೋನಿಯಾ ಗಾಂಧಿ ವಾಗ್ದಾಳಿ

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ನಿಧಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇರ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಕುಂಠಿತಗೊಳಿಸಲು ಪ್ರಧಾನಿ ಮೋದಿ ವ್ಯವಸ್ಥಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಸಾರ್ವಜನಿಕರಿಂದ ಸಂಗ್ರಹಿಸಲಾಗಿರುವ ನಿಧಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಹಾಗೂ ನಮ್ಮ ಖಾತೆಗಳಿಂದ ಬಲವಂತವಾಗಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ, ಇಂತಹ ಭಾರಿ ಸವಾಲಿನ ಸನ್ನಿವೇಶದಲ್ಲಿಯೂ, ಚುನಾವಣಾ …

Read More »

ಬಿಜೆಪಿ ಅಭ್ಯರ್ಥಿ ಬದಲಾಗದಿದ್ದರೆ ಅಚ್ಚರಿಯ ಬಂಡಾಯ ಅಭ್ಯರ್ಥಿ

ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬದಲಾವಣೆಗೆ ಪಟ್ಟು ಹಿಡಿದಿರುವ ಅಸಮಾಧಾನಿತರ ಗುಂಪು ಬದಲಾವಣೆ ಮಾಡದಿದ್ದಲ್ಲಿ ಅಚ್ಚರಿ ಅಭ್ಯರ್ಥಿಯೊಬ್ಬರನ್ನ ಕಣಕ್ಕಿಳಿಸಲು ಸಹ ನಿರ್ಧರಿಸಿದ್ದಾರೆ. ಗುರುವಾರ ಸಂಜೆ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಾಕಷ್ಟು ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಜಿ.ಕರುಣಾಕರೆಡ್ಡಿ, ಎಸ್.ಎ. ರವೀಂದ್ರನಾಥ್, ದಾವಣಗೆರೆ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗ ಲೇಬೇಕು. ಬದಲಾಗದಿದ್ದರೆ ಅಚ್ಚರಿಯ …

Read More »

ಹೋಳಿಗೆ ಡಿಜೆ ಕಟ್ಟುನಿಟ್ಟಿನ ನಿಷೇಧ

ಗಂಗಾವತಿ: ಈ ಬಾರಿಯ ಹೋಳಿ ಹಬ್ಬದ ರಂಗ ಪಂಚಮಿ ಸಂದರ್ಭದಲ್ಲಿ ಡಿ ಜೆ ಹಾಕಲು ಪರವಾನಿಗೆ ನಿಷೇಧಿಸಲಾಗಿದೆ ಎಂದು ಡಿ.ವೈ.ಎಸ್. ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಹೇಳಿದರು. ನಗರ ಪೊಲೀಸ್ ಠಾಣಾ ಸಭಾಂಗಣದಲ್ಲಿ ಹೋಳಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಯಾವುದೇ ಡಿಜೆ ಆಚರಣೆ ಸಂಪೂರ್ಣವಾಗಿ ನಿಷೇಧಿಸುವಂತೆ ಸೂಚನೆಯ ಹಿನ್ನೆಲೆಯಲ್ಲಿ ಹೋಳಿ ಹಬ್ಬ ಕಾಮದಾನ ಸಂದರ್ಭದಲ್ಲಿ ಮತ್ತು ರಂಗ ಪಂಚಮಿಯಂದು …

Read More »

BJPಯಲ್ಲಿ ಮುನಿಸು, ಅಸಮಾಧಾನ ಇದೆ : ಸಚಿವ ಜೋಶಿ

ಧಾರವಾಡ : ಬಿಜೆಪಿ ಪಕ್ಷದಲ್ಲಿ ಭಿನ್ನಮತವಿಲ್ಲದ ಕಾರಣ ಯಾರೂ ಪಕ್ಷ ಬಿಟ್ಟು ಹೋಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗುರುವಾರ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕುರಿತಂತೆ ಒಂದಿಷ್ಟು ಮುನಿಸು, ಅಸಮಾಧಾನ ಇರಬಹುದು ಹೊರತು ಭಿನ್ನಮತವಿಲ್ಲ. ಹೀಗಾಗಿ ಸಂಗಣ್ಣ ಕರಡಿ ಸೇರಿದಂತೆ ಯಾರೂ ಬಿಜೆಪಿ ಪಕ್ಷವನ್ನು ತೊರೆದು ಹೋಗಲಾರರು ಎಂದರು. ಮಾಧುಸ್ವಾಮಿ ಜತೆಗೆ ಬಿ.ಎಸ್.ಯಡಿಯೂರಪ್ಪನವರು ಮಾತನಾಡುತ್ತಿದ್ದು, ಈಶ್ವರಪ್ಪ ಜತೆಗೂ ರಾಷ್ಟ್ರೀಯ ನಾಯಕರೇ ಮಾತನಾಡಿದ್ದಾರೆ. ಉಳಿದಂತೆ ಎಲ್ಲವೂ …

Read More »