ಬೆಳಗಾವಿ :ಬೆಳಗಾವಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಕೆ ಸೆಟ್ ಪರೀಕ್ಷೆಗೆ ಹೋದಾಗ ಮೊಬೈಲ್, ಚಿನ್ನಾಭರಣ ಹಾಗೂ ಹಣ ಕಳ್ಳತನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಕ್ಲಬ್ ರಸ್ತೆಯಲ್ಲಿರುವ ಕಾಲೇಜಿನಲ್ಲಿ ಕಳೆದ ಭಾನುವಾರ ನಡೆದ ಕೆ ಸೆಟ್ ಪರೀಕ್ಷೆಯ ವೇಳೆ ವೈಶಾಲಿ ಹಾಗೂ ರೂಪಾ ಎಂಬ ಯುವತಿಯರ ಬೆಲೆ ಬಾಳುವ ಚಿನ್ನಾಭರಣವನ್ನು, ಹಣ ಹಾಗೂ ಮೊಬೈಲ್ ಕಳ್ಳತವಾಗಿದೆ. ಕಾಲೇಜು ಸಿಬ್ಬಂದಿಗಳ ಮೇಲೆ ಶಂಕೆ ವ್ಯಕ್ತಪಡಿಸಲಾಗಿದೆ.ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ಕಲಬುರಗಿ ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು
ಕಲಬುರಗಿ, ನವೆಂಬರ್ 27: ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರುವಂತಾಗಿದೆ. ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ನಾಲ್ಕು ವಿಶೇಷ …
Read More »ಆರ್ಟಿಒ ಅಧಿಕಾರಿಗಳ, ಬ್ರೋಕರ್ಗಳ ಲಂಚತನಕ್ಕೆ ಬೀಳಲಿದೆ ಬ್ರೇಕ್: ಇನ್ಸ್ಪೆಕ್ಟರ್ಗಳಿಲ್ಲದೆಯೇ ಆಗಲಿದೆ ಎಫ್ಸಿ
ನವೆಂಬರ್ 27: ಆರ್ಟಿಒ ಇನ್ಸ್ಪೆಕ್ಟರ್ಗಳಿಲ್ಲದೆಯೇ ಇನ್ಮುಂದೆ ಆಗಲಿದೆ ಎಫ್ಸಿ! ಎಫ್ಸಿ ಮಾಡಲು ಸಾರಿಗೆ ಇಲಾಖೆ Automatic Testing Station (ATS) ತೆರೆದಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನೆಲಮಂಗಲ ಆರ್ಟಿಒದಲ್ಲಿ ಎಟಿಎಸ್ ಸೆಂಟರ್ಗಳನ್ನು ತೆರೆಯಲಾಗಿದೆ. ಈ ಸೆಂಟರ್ಗಳಿಗೆ ವಾಹನಗಳನ್ನು ತೆಗೆದುಕೊಂಡು ಹೋದರೆ ಸಾಕು, ಆ ಮಷಿನ್ಗಳೇ ವಾಹನಗಳಿಗೆ ಪಾಸ್ ಅಥವಾ ಫೇಲ್ ಸರ್ಟಿಫಿಕೇಟ್ ನೀಡುತ್ತವೆ. ಯಾವುದೇ ಆರ್ಟಿಓ ಅಧಿಕಾರಿಗಳು, ಬ್ರೋಕರ್ಗಳ ಹಾವಳಿ ಇಲ್ಲದೆ ವಾಹನಗಳ ಎಫ್ಸಿ ಮಾಡಿಸಿಕೊಳ್ಳಬಹುದು. ಈ ಹಿಂದೆ ವಾಹನಗಳಿಗೆ …
Read More »ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿ:ದೀಪಕ ಗುಡಗನಟ್ಟಿ
ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿ ಬೆಳಗಾವಿ- ಬೆಳಗಾವಿಯ ದಂಡು ಮಂಡಳಿಯ ಪ್ರದೇಶದಲ್ಲಿ ಬರುವ ಅಟೋಗಳಿಗೂ ಪೇ ಪಾರ್ಕಿಂಗ್ ಶುಲ್ಕ ವಿಧಿಸುತ್ತಿರುವದನ್ನು ವಿರೋಧಿಸಿ ಶುಕ್ರವಾರ ದಂಡು ಮಂಡಳಿಯ ಅಧಿಕಾರಿಗಳಿಗೆ ಕರವೇ ನಿಯೋಗ ಭೇಟಿಯಾಗಿ ಅಟೋಗಳಿಗೆ ಶುಲ್ಕ ವಿಧಿಸುತ್ತಿರುವದನ್ನು ಕೂಡಲೇ ನಿಲ್ಲಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿಯ ಅಧಿಕಾರಿಗಳು ಆಟೋಗಳಿಗೆ ಪೇ ಪಾರ್ಕಿಂಗ್ ವಸೂಲಿ ಮಾಡುವದನ್ನು ನಿಲ್ಲಿಸುವಂತೆ ಮೌಖಿಕ ಆದೇಶ ಮಾಡಿದ್ದಾರೆ. ದಂಡು ಮಂಡಳಿಯ ವ್ಯಾಪ್ತಿಯಲ್ಲಿ …
Read More »ಇವಿಎಂ ಹ್ಯಾಕ್ ಬಗ್ಗೆ ಸಮಗ್ರ ತನಿಖೆ ಆಗಬೇಕು: ಡಿ.ಕೆ ಶಿ
ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮಹಾ ವಿಕಾಸ ಆಘಾಡಿಗೆ ತೀವ್ರ ಹಿನ್ನಡೆ ಆದ ಪರಿಣಾಮ ಕೈ ನಾಯಕರು ಇವಿಎಂ ಹ್ಯಾಕ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.NCP ನಾಯಕಿ ಸುಪ್ರಿಯಾ ಸುಳೆ ಹೇಳಿರುವ ಮಾತಿನಂತೆ ನಾವೆಲ್ಲರೂ ಈ ವಿಚಾರವನ್ನ ಗಂಭೀರವಾಗಿ ತೆಗೆದುಕೊಳ್ಳುವ ಸಮಯ ಬಂದಿದೆ. ಕೆಲವೇ ದಿನಗಳಲ್ಲಿ ತಾವು ಕೂಡ ದಿಲ್ಲಿಗೆ ಹೋಗಲಿದ್ದು, ಈ ಬಗ್ಗೆ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸೋದಾಗಿ …
Read More »ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ
ಮಗ ಮಹಾಶಯನೊಬ್ಬ ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ತಂದೆ-ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಸುತ್ತಿಗೆಯಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಮುಸ್ತಫಾ ಬೇಗ್ (42) ಕೊಲೆಯಾದ ವ್ಯಕ್ತಿ. ಶಾಹಿದ್ ಬೇಗ್ ತಂದೆಯನ್ನೇ ಹತ್ಯೆಗೈದ ಮಗ.ಶಿಕಾರಿಪುರ ಟೌನ್ ಪೊಲೀಸರು ಆರೋಪಿ ಮಗ ಶಾಹಿದ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
Read More »ಜನರ ಪ್ರೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ? ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ
ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಮಾದರಿಯಲ್ಲಿ ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಮಾಡಬೇಕೆಂದು ಕನಸು ಕಂಡಿರುವೆ. ಇದಕ್ಕೆ ಕ್ಷೇತ್ರದ ಜನರ ಸಹಕಾರ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹಿಂಡಲಗಾ ಗ್ರಾಮದ ರಕ್ಷಕ್ ಕಾಲೋನಿಯ ಚರಂಡಿ ನಿರ್ಮಾಣದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿದ ಸಚಿವರು, ಕ್ಷೇತ್ರದ ಯಾವುದೇ ಭಾಗಕ್ಕೆ ಹೋದರೂ ಯಾವುದೇ ಸಣ್ಣಪುಟ್ಟ ಕೆಲಸಗಳಿದ್ದರೂ ಕೂಡ ಜನರು ನನ್ನ ಬಳಿ ಹೇಳಿಕೊಳ್ಳುತ್ತಾರೆ. ರಸ್ತೆ …
Read More »ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು
ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ಒಂದು ದುರಂತ ಘಟನೆ ನಡೆದಿದೆ. 65 ವರ್ಷದ ಕಸ್ತೂರಿ ರಂಗಪ್ಪ ಅವರು ಪಡಿತರ ಪಡೆಯಲು ಹೋಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಸುದ್ದಿ ಕೇಳಿ ಅವರ ಪತ್ನಿ ಜಯಮ್ಮ (58) ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ದಾವಣಗೆರೆ, ನವೆಂಬರ್ 26: ಸಾವಿನಲ್ಲೂ ದಂಪತಿ (Couple) ಒಂದಾಗಿರುವಂತಹ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ನಡೆದಿದೆ. ಕಸ್ತೂರಿ ರಂಗಪ್ಪ (65) ಮತ್ತು ಜಯಮ್ಮ …
Read More »ಕಾರ್ಯಕರ್ತರಿಗೆ ಹೊಸ ಸಂದೇಶ: ವಿಜಯೇಂದ್ರಗೆ ಮತ್ತೊಂದು ಶಾಕ್ ಕೊಟ್ಟ ಯತ್ನಾಳ್
ಕಲಬುರಗಿ/ಬೆಂಗಳೂರು, (ನವೆಂಬರ್ 26): ವಕ್ಪ್ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿನ ಅಂತರ್ಯುದ್ಧ ಮುಂದುವರಿದಿದೆ. ರಾಜ್ಯ ಬಿಜೆಪಿಯಿಂದ ಅಧಿಕೃತವಾಗಿ ವಕ್ಪ್ ಹೋರಾಟ ಕುರಿತ ಪ್ರವಾಸ ತಂಡದಲ್ಲಿ ಸೇರ್ಪಡೆ ಮಾಡಿದ್ದರೂ ಪ್ರತ್ಯೇಕ ಮಿತ್ರಕೂಟದಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ತಂಡ ಬೀದರ್ ನಿಂದ ಇಂದು ಜನ ಜಾಗೃತಿ ಅಭಿಯಾನ ಪ್ರಾರಂಭಿಸಿದೆ. ಯತ್ನಾಳ್ ತಂಡದ ಅಭಿಯಾನದಿಂದ ಬೀದರ್ ಜಿಲ್ಲೆಯ ಬಿಜೆಪಿ ಶಾಸಕರು ಅಂತರ ಕಾಯ್ದುಕೊಂಡಿದ್ದರೆ, ಬೀದರ್ ಜಿಲ್ಲಾಧ್ಯಕ್ಷರಂತೂ ಯಾರೋ ಅನಾಮಿಕರು ಬಿಜೆಪಿ ಬ್ಯಾನರ್ ನಲ್ಲಿ …
Read More »ವಿಶ್ವದಲ್ಲೇ ಅತಿ ಶ್ರೇಷ್ಠವಾದ ಸಂವಿಧಾನವನ್ನು ಡಾ ಅಂಬೇಡ್ಕರ್ ಭಾರತಕ್ಕೆ ನೀಡಿದ್ದಾರೆ: ಬಿಎಸ್ ಯಡಿಯೂರಪ್ಪ
ಬೆಂಗಳೂರು: ಭಾರತದಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯುರಪ್ಪನವರು, ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರು ವಿಶ್ವದಲ್ಲೇ ಅತಿ ಶ್ರೇಷ್ಠ ಎನಿಸಿಕೊಂಡಿರುವ ಸಂವಿಧಾನವನ್ನು ದೇಶಕ್ಕೆ ನೀಡಿದ ದಿನವಾಗಿದೆ, ರಾಷ್ಟ್ರದ ಉದ್ದಗಲಕ್ಕೆ ಇವತ್ತಿನ ದಿನವನ್ನು ಸಂವಿಧಾನ ದಿನವಾಗಿ ಅಚರಿಸಲಾಗುತ್ತದೆ ಎಂದು ಹೇಳಿದರು.
Read More »
Laxmi News 24×7