ಕಲಘಟಗಿ: ಗ್ರಾಮೀಣ ಭಾಗದ ಮೂಲ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪಾ ಟಿ.ಕೆ.ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ದೇವಲಿಂಗಕೊಪ್ಪ, ಮುಕ್ಕಲ, ದುಮ್ಮವಾಡ, ಹಿರೇಹೊನ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳ ಆಲಿಸಿ ನರೇಗಾ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ, ಆರೋಗ್ಯ ಕೇಂದ್ರ, ಶಾಲೆಗಳ ಶೌಚಾಲಯ, ಕುಡಿಯುವ ನೀರಿನ ಮೂಲಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಪಂಚಾಯಿತಿ ಇಒ ಪರಶುರಾಮ …
Read More »ಕಲಘಟಗಿ: ಬಾಕಿ ₹73 ನೀಡಲು ಕಬ್ಬು ಬೆಳೆಗಾರರ ಮನವಿ
ಕಲಘಟಗಿ: ಕಬ್ಬು ಬೆಳೆಗಾರರ ಸಂಘಟನೆ ಹೋರಾಟದಿಂದ ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚದಲ್ಲಿ ಕಡಿತಗೊಳಿಸಿ ಪ್ರತಿ ಟನ್ ಕಬ್ಬಿಗೆ ₹183 ಹಳಿಯಾಳದ ಈಐಡಿ ಶುಗರ್ ಕಾರ್ಖಾನೆಯವರು ನೀಡಲು ಒಪ್ಪಿಕೊಂಡಿದ್ದು ಬಾಕಿ ಉಳಿದ ₹73 ಕೊಡಲು ಹಾಗೂ ವಿವಿಧ ಬೇಡಿಕೆ ಈಡೇರಿಸಲು ಜಿಲ್ಲಾ ಕಬ್ಬು ಬೆಳೆಗಾರರ ಸಂಘಟನೆಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಈಚೆಗೆ ಮನವಿ ಸಲ್ಲಿಸಿದರು. ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಎತ್ತಿನಗುಡ್ಡ ಮಾತನಾಡಿ, ‘ಕಳೆದ ವರ್ಷ …
Read More »ನ. 22ಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ
ಹುಬ್ಬಳ್ಳಿ: ‘ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಿದ್ಧಪಡಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಲನಚಿತ್ರ ನವೆಂಬರ್ 22ರಂದು ರಾಜ್ಯದಾದ್ಯಂತ ಮರು ಬಿಡುಗಡೆಯಾಗಲಿದೆ’ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೋಕಾಕ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಒತ್ತಾಯದ ಮೇರೆಗೆ ಚಿತ್ರ ಮತ್ತೊಮ್ಮೆ ಬಿಡುಗಡೆಯಾಗಲಿದೆ. ರಾಯಣ್ಣನ ಸಾಹಸ ಹಾಗೂ ದೇಶಪ್ರೇಮವನ್ನು ಜನತೆಗೆ ತಿಳಿಸಬೇಕು ಎನ್ನುವುದು ಇದರ ಉದ್ದೇಶ’ ಎಂದರು. ಸಿನಿಮಾದ ಹಂಚಿಕೆದಾರ …
Read More »ಸಮೃದ್ಧ ಕೃಷಿ: ಭರಪೂರ ಆದಾಯ
ಬೆಳಗಾವಿ: ಕೃಷಿ ರಂಗದಲ್ಲಿ ಸದಾ ಪ್ರಯೋಗಶೀಲರಾದ ನಿಪ್ಪಾಣಿ ತಾಲ್ಲೂಕಿನ ಸೌಂದಲಗಾ ಗ್ರಾಮದ ರೈತ ಸಂಜಯ ಶಿಂತ್ರೆ ಅವರ ಹೊಲಕ್ಕೆ ಕಾಲಿಟ್ಟರೆ ಸಾಕು; ಹತ್ತಾರು ಬಗೆಯ ಬೆಳೆಗಳ ದರ್ಶನವಾಗುತ್ತದೆ. ಕಬ್ಬು, ಹೂವು, ಹಣ್ಣು, ಎಲೆಗಳು, ಈರುಳ್ಳಿ ಹೀಗೆ… ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ವಾಣಿಜ್ಯ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತ, ಸಮಗ್ರ ಕೃಷಿಯಲ್ಲಿ ಅವರು ಖುಷಿ ಕಾಣುತ್ತಿದ್ದಾರೆ. ಜತೆಗೆ, ತಾಳೆ ಕೃಷಿಯೂ ಉತ್ತಮ ಆದಾಯ ನೀಡುತ್ತಿದೆ. ‘ನಾನು 18 ಎಕರೆ ಜಮೀನು ಹೊಂದಿದ್ದೇನೆ. ಯಾವುದೇ …
Read More »ಬೆಂಬಿಡದ ಬಿಡಾಡಿ ದನಗಳ ಹಾವಳಿ
ಚಿಕ್ಕೋಡಿ: ಪಟ್ಟಣದ ಬಹುತೇಕ ರಸ್ತೆ, ಗಲ್ಲಿ, ಹೆದ್ದಾರಿ, ಮಾರುಕಟ್ಟೆಗಳಲ್ಲಿ ಬಿಡಾಡಿ ದನಗಳ ಹಾವಳಿ ವಿಪರೀತವಾಗಿದೆ. ಸಂಕೇಶ್ವರ- ಜೇವರ್ಗಿ, ನಿಪ್ಪಾಣಿ- ಮುಧೋಳ ಎರಡು ರಾಜ್ಯ ಹೆದ್ದಾರಿಗಳು ಪಟ್ಟಣದಲ್ಲಿ ಹಾದು ಹೋಗುವುದರಿಂದ ವಾಹನ ದಟ್ಟನೆ ಹೆಚ್ಚಾಗಿದೆ. ನಿತ್ಯ ಓಡಾಡುವ ವಾಹನ ಸವಾರರು ಬಿಡಾಡಿ ದನಗಳ ಹಾವಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಶೈಕ್ಷಣಿಕ ಜಿಲ್ಲಾ ಕೇಂದ್ರವೂ, ಉಪ ವಿಭಾಗ ಕೇಂದ್ರವನ್ನು ಹೊಂದಿರುವ ಚಿಕ್ಕೋಡಿ ಪಟ್ಟಣಕ್ಕೆ ಪ್ರತಿದಿನ ಸಹಸ್ರಾರು ಜನರು ತಮ್ಮ ಕೆಲಸಕ್ಕೆ ಆಗಮಿಸುತ್ತಾರೆ. ಹಗಲಿರುಳು 50- …
Read More »CM ಸಿದ್ದರಾಮಯ್ಯರನ್ನು ಯಾರಾದರೂ ಮುಟ್ಟಲು ಆಗುವುದೇ?: ಸಚಿವ ವಿ.ಸೋಮಣ್ಣ ವ್ಯಂಗ್ಯ
ಬೆಳಗಾವಿ: ‘ನನ್ನನ್ನು ಮುಟ್ಟಿದರೆ ಜನ ಸುಮ್ಮನೇ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಸಿ.ಎಂ ಅವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಅವರ ಮಾತಿನ ಮರ್ಮವನ್ನು ಅವರೇ ಅರ್ಥ ಮಾಡಿಕೊಳ್ಳಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯ ಮಾಡಿದರು. ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಸಿ.ಎಂ ಆದವರನ್ನು ಯಾರಾದರೂ ಮುಟ್ಟಿದರೆ ಪೊಲೀಸರು ಕೇಸ್ ಮಾಡಿ ಒಳಗೆ ಹಾಕುತ್ತಾರೆ. ಮುಟ್ಟಲು ಆಗುವುದಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ …
Read More »ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋಗೆ ನಿರ್ಧಾರ
ಹೊಸಪೇಟೆ (ವಿಜಯನಗರ): ಕಬ್ಬು ಬೆಳೆಗಾರರಿಗೆ ಶೇ 9.50 ಸಕ್ಕರೆ ಇಳುವರಿ ಆಧಾರದಲ್ಲಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು, ತೂಕದಲ್ಲಿ ಆಗುತ್ತಿರುವ ಮೋಸ ತಡೆಗಟ್ಟಬೇಕು ಮೊದಲಾದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋ ನಡೆಸಲು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿದೆ. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್.ಎನ್.ಭರತ್‌ರಾಜ್ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹500 ಎಸ್‌ಎಪಿ ನಿಗದಿಪಡಿಸಬೇಕು, …
Read More »ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧ ತನಿಖೆಗೆ ಸರ್ಕಾರ ಮುಂದಾಗಿದೆ.
ಬೆಂಗಳೂರು: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧ ತನಿಖೆಗೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಲೋಕಾಯುಕ್ತ ಎಸ್‌ಐಟಿ ತಂಡದಿಂದ ತನಿಖೆ ನಡೆಸಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಸಚಿವ ಹೆಚ್.ಕೆ ಪಾಟೀಲ್ ಅವರು, 10 ಗಣಿ ಕಂಪನಿಗಳವಿರುದ್ಧ ತನಿಖೆಗೆ ನಿರ್ಣಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಎಸ್ ಐಟಿ ತನಿಖೆಗೆ ವಹಿಸಲು ನಿರ್ಧಾರ …
Read More »ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠಕ್ಕೆ ಕುಸಿದ ರೂಪಾಯಿ ಮೌಲ್ಯ
ಮುಂಬೈ, ನ.14- ಇಂದು ಬೆಳಿಗ್ಗೆ ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ 1 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 84.40 ಕ್ಕೆ ತಲುಪಿತು. ನಿರಂತರವಾಗಿ ವಿದೇಶಿ ನಿಧಿಯ ಹೊರ ಹರಿವು ಮತ್ತು ಹೂಡಿಕೆದಾರರಿಂದ ಬಲವಾದ ಡಾಲರ್ ಬೇಡಿಕೆಯಿಂದ ರೂಪಾಯಿ ತೂಗಿದೆ ಎಂದು ವಿಶ್ಲೇಷಿಸಲಾಗಿದೆ. ಇಂಟರ್‌ಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ರೂಪಾಯಿಯು ಗ್ರೀನ್‌ಬ್ಯಾಕ್ ವಿರುದ್ಧ 84.40 ಕ್ಕೆ ಪ್ರಾರಂಭವಾಯಿತು, ಅದರ ಹಿಂದಿನ ಮುಕ್ತಾಯಕ್ಕಿಂತ 1 ಪೈಸೆಯ ಕುಸಿತವನ್ನು ದಾಖಲಿಸಿದೆ. ಬುಧವಾರ, …
Read More »ಶಾಸಕರಿಗೆ 50 ಕೋಟಿ ಆಫರ್ : ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್
ಬೆಂಗಳೂರು,ನ.14- ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಯೊಬ್ಬ ಶಾಸಕರಿಗೂ 50 ಕೋಟಿ ರೂ.ಗಳ ಆಮಿಷ ಒಡ್ಡುತ್ತಿರುವುದಾಗಿ ಮುಖ್ಯಮಂತ್ರಿಯವರು ಹೇಳಿರುವುದರಲ್ಲಿ ಅರ್ಥ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿ ಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಎಲ್ಲಾ ಪ್ರಯತ್ನಗಳನ್ನೂ ಸತತವಾಗಿ ನಡೆಸುತ್ತಿವೆ. ಮುಡಾ ಪ್ರಕರಣದ ಆರೋಪ ಸೇರಿದಂತೆ ಎಲ್ಲಾ ಯತ್ನಗಳೂ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿಯೇ ನಡೆಯುತ್ತಿವೆ ಎಂದರು. ಈಗ ಶಾಸಕರಿಗೆ ಆಮಿಷವೊಡ್ಡಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿದ್ದಾರೆ. …
Read More »
Laxmi News 24×7