Breaking News

ರಾಜ್ಯ

ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಸಮಿತಿ ಶಿಫಾರಸು

ಬೆಂಗಳೂರು: ‘ಕೋವಿಡ್ -19 ವೇಳೆಯಲ್ಲಿ ಉಪಕರಣಗಳು ಮತ್ತು ಔಷಧಿಗಳ ಖರೀದಿಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿದ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗವು ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ(ನ9) ಹೇಳಿಕೆ ನೀಡಿದ್ದಾರೆ.   ”ಬಿಜೆಪಿ ಅಧಿಕಾರದಲ್ಲಿದ್ದಾಗ ಕೋವಿಡ್ ಸಮಯದಲ್ಲಿ ಉಪಕರಣಗಳು ಮತ್ತು ಔಷಧಿಗಳ ಖರೀದಿಯಲ್ಲಿ ಲೂಟಿ …

Read More »

ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ

ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಕಾರ್ತಿಕ್ ಭಟ್, ಮುಲ್ಕಿಯಲ್ಲಿನ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರೈಲು ಹಳಿ ಬಳಿ …

Read More »

ಕಾರ್ಗಲ್ ನಾಡಕಚೇರಿಯಲ್ಲೇ ದಾಖಲೆ ಒದಗಿಸಲು ಒತ್ತಾಯ

ಸಾಗರ: ಕಾರ್ಗಲ್‌ನ ನಾಡಕಚೇರಿಯಲ್ಲಿನ ದಾಖಲೆಗಳು ಕಾರ್ಗಲ್‌ನಲ್ಲೆ ಸಿಗುವಂತಾಗಬೇಕು ಎಂದು ಒತ್ತಾಯಿಸಿ ಇಲ್ಲಿನ ದಲಿತ ಸಂಘರ್ಷ ಸಮಿತಿಯ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಶುಕ್ರವಾರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. 2013ನೇ ಸಾಲಿನಲ್ಲಿ ಕಾರ್ಗಲ್‌ನಲ್ಲಿ ನಾಡಕಚೇರಿ ಆರಂಭಿಸಲಾಗಿದೆ. 2019ರಲ್ಲಿ ಅಲ್ಲಿನ ನಾಡಕಚೇರಿಗೆ ನೂತನ ಕಟ್ಟಡ ಕೂಡ ಲಭ್ಯವಾಗಿದೆ. ಆದರೆ, ಪ್ರಸ್ತುತ ಆ ಕಚೇರಿ ವ್ಯಾಪ್ತಿಗೆ ಬರುವ ಗ್ರಾಮಗಳ ದಾಖಲೆಗಳು ಅಲ್ಲಿ ಲಭ್ಯವಿಲ್ಲದೆ ಇರುವುದು ಸುತ್ತಮುತ್ತಲ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ. ಕಾರ್ಗಲ್ …

Read More »

ವಕ್ಫ್‌ ಕಾಯ್ದೆ ರದ್ದಿಗೆ ಆಗ್ರಹಿಸಿ ನ.12ರಂದು ಪ್ರತಿಭಟನಾ ಸಭೆ

ಬೆಳಗಾವಿ: ‘ವಕ್ಫ್‌ ಕಾಯ್ದೆ ರದ್ದುಪಡಿಸಬೇಕು ಒತ್ತಾಯಿಸಿ ಹಾಗೂ ಈ ಕಾಯ್ದೆಯಿಂದ ಹಿಂದೂ ಧಾರ್ಮಿಕ ಸಂಸ್ಥೆಗಳ ಮೇಲೆ ಆಗುತ್ತಿರುವ ಅನ್ಯಾಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಇಲ್ಲಿನ ಸಂಭಾಜಿ ಉದ್ಯಾನದಲ್ಲಿ ನ.12ರಂದು ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದೇವೆ’ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಮುಖಂಡ ಬಸವರಾಜ ಭಾಗೋಜಿ ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಕೊಲ್ಹಾಪುರದ ಕನ್ಹೇರಿಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಸಭೆ ಉದ್ದೇಶಿಸಿ ಮಾತನಾಡುವರು. ಜಿಲ್ಲೆಯ ವಿವಿಧ ಮಠಾಧೀಶರು, ಸಂತರು, …

Read More »

ವ್ಯಾನ್‌ನಲ್ಲಿ ಸಾಗಿಸುತ್ತಿದ್ದ ₹3.70 ಕೋಟಿ ನಗದು ವಶ

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವ್ಯಾನ್‌ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹3.70 ಕೋಟಿಗೂ ಹೆಚ್ಚು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ‘ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ನಡೆಸಿದ್ದು, ಪಾಲ್ಘರ್ ಜಿಲ್ಲೆಯ ವಾಡಾದಲ್ಲಿ ನಗದನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಇನ್‌ಸ್ಪೆಕ್ಟರ್‌ ದತ್ತ ಕಿಂದ್ರೆ ತಿಳಿಸಿದ್ದಾರೆ. ‘ಶೋಧ ವೇಳೆಯಲ್ಲಿ ₹3.70 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳು ಈ ನಗದಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆ ಹಾಜರುಪಡಿಸಿಲ್ಲ. …

Read More »

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ

ಬೆಂಗಳೂರು : ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಹೂವಿನ ಕುಂಡದಲ್ಲಿ ಗಾಂಜಾ ( Marijuana ) ಗಿಡ ಬೆಳೆಸಿದ್ದ ನೇಪಾಳ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಊರ್ಮಿಳಾ ಮತ್ತು ಗುರುಂಗ್ ಎಂಬ ದಂಪತಿ ವಿರುದ್ಧ ವಿರುದ್ಧ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 54 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಊರ್ಮಿಳಾ ಮನೆಯ ಬಾಲ್ಕನಿಯಲ್ಲಿ ರೀಲ್ಸ್​ ಮಾಡಿ ಪೋಸ್ಟ್ ಮಾಡಿದ್ದಳು. ಊರ್ಮಿಳಾ ಮಾಡಿದ್ದ ರೀಲ್ಸ್​ನಲ್ಲಿ ಗಾಂಜಾ ಗಿಡ ಕಾಣಿಸಿಕೊಂಡಿದೆ. ಗಾಂಜಾ ಗಿಡ ಕುರಿತು ವ್ಯಕ್ತಿಯೋರ್ವ …

Read More »

ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತ; ಪೌರಕಾರ್ಮಿಕ ಸಾವು

ಸಿರವಾರ: ಸ್ಥಳೀಯ ಪಟ್ಟಣ ಪಂಚಾಯತ್‌ ನಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೃದಯಾಘಾತದಿಂದ ಮೃತಪಟ್ಟ ಘಟನೆ ನ.9ರ ಶನಿವಾರ ಬೆಳಗಿನ ಜಾವ ನಡೆದಿದೆ. ಪಟ್ಟಣ ಪಂಚಾಯತ್‌ ನ ಪೌರಕಾರ್ಮಿಕ ತಿಮ್ಮಪ್ಪ ಅಸ್ಕಿಹಾಲ್ (36) ಮೃತಪಟ್ಟವರು. ತಿಮ್ಮಪ್ಪ ಅಸ್ಕಿಹಾಲ್ ಅವರು ಪಟ್ಟಣದ ಬಸವ ವೃತ್ತದಲ್ಲಿ ಬೆಳಗಿನ ಜಾವ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಕುಳಿತಿದ್ದ ಸ್ಥಳದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.   ಸ್ಥಳಕ್ಕೆ ತಹಶೀಲ್ದಾರ ರವಿ ಎಸ್. ಅಂಗಡಿ, ಪ.ಪಂ. ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಅದೆಪ್ಪ …

Read More »

ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ. ಲಕ್ಷ್ಮಣ ಸವದಿ

ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕ ಯತ್ನಾಳ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಮೂರು ತಂಡಗಳ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ ತೀವ್ರಗೊಂಡಿದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ …

Read More »

ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯಾಗಿ ಉಪಯೋಗಿಸಲು ಹೊರಟಿದೆ. ನಾವೂ ಹಿಂದೂಗಳೇ. ಆದರೆ, ಬಿಜೆಪಿಯವರು ನಕಲಿ ಮನುವಾದವನ್ನು ಪ್ರತಿಪಾದಿಸುವ ನಕಲಿ ಹಿಂದೂಗಳು. ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್‌ ವಿಜಯಪುರಕ್ಕೆ ಭೇಟಿ ನೀಡಿದ್ದು ಕಾನೂನು ಬಾಹಿರ. ಅದು ಹಕ್ಕುಚ್ಯುತಿ ಆಗಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಬೋರ್ಡ್‌ ತನ್ನ ಆಸ್ತಿಗಳನ್ನು ಈ ಹಿಂದೆಯೇ ಇಂದೀಕರಣ ಮಾಡಿಕೊಳ್ಳದ ಪರಿಣಾಮ ಇನಾಂ ಹಾಗೂ ಭೂ ಸುಧಾರಣಾ ಕಾಯ್ದೆಯಡಿ …

Read More »

ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

ಮಂಗಳೂರು: ತುಳು ನಾಡಿನ ಜಾನಪದ ಕ್ರೀಡೆ ಕಂಬಳದ ಅಭಿಮಾನ ಕರಾವಳಿಯಲ್ಲಿ ಇತ್ತೀಚಿನ ಕಾಲಘಟ್ಟದಲ್ಲಿ ಮತ್ತೆ ಹೆಚ್ಚಾಗುತ್ತಿದೆ. ಪುಟಾಣಿಗಳಿಂದ ತೊಡಗಿ ಹಿರಿಯರ ವರೆಗೆ ಎಲ್ಲರಲ್ಲೂ ಕಂಬಳದ ಆಸಕ್ತಿ ಕಾಣಿಸುತ್ತಿದೆ; ಇದಕ್ಕೆ ಬಲ ನೀಡುವಂತೆ ಇತ್ತೀಚಿನ ದಿನಗಳಲ್ಲಿ ಕಂಬಲದ ಕೋಣಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆ ಕಂಡಿದೆ!   ಅದರಲ್ಲಿಯೂ ಸೀನಿಯರ್‌ (6 ವರ್ಷ ಮೀರಿದ) ಹಾಗೂ ಜೂನಿಯರ್‌(ಮೂರರಿಂದ 6 ವರ್ಷ) ಹೊರತುಪಡಿಸಿ ಸಬ್‌ ಜೂನಿಯರ್‌ (3 ವರ್ಷದ ಒಳಗಿನ) ಸಣ್ಣ ಕೋಣಗಳನ್ನು ಸಾಕುವವರ …

Read More »