ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ, ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪುದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS …
Read More »ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರ ಮೇಲೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾ
ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರ ಮೇಲೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಎ1 ತಹಶಿಲ್ದಾರ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಸೋಮು ಅಂತಾ. ಮೊದಲು ಇನ್ಸ್ಪೆಕ್ಟರ್ ತನಿಖಾಧಿಕಾರಿ ಆಗಿದ್ದರು. ಆದ್ರೆ ಈಗ ಎಸಿಪಿಯನ್ನ ತನಿಖಾಧಿಕಾರಿ ಮಾಡಿದ್ದೇನೆ. ಪ್ರಕರಣ ತುಂಬಾ ಸೆನ್ಸಿಟಿವ್ ಇದೆ. …
Read More »ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ …
Read More »ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ಎಸ್‌ಡಿಎ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಮನೆಯಲ್ಲಿ ಇಟ್ಟು ಹೋಗಿದ್ದ ರುದ್ರಣ್ಣ ಮೊಬೈಲ್ ಪತ್ತೆಯಾಗಿದ್ದು, ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಅಳವಡಿಸಿರುವ ಸಿಸಿ ಕೆಮೆರಾಗಳ ದೃಶ್ಯಗಳನ್ನು ಮಂಗಳವಾರ ರಾತ್ರಿಯವರೆಗೂ ಪೊಲೀಸರು ಕಲೆ ಹಾಕಿದ್ದಾರೆ. ಮಂಗಳವಾರ ಬೆಳಗ್ಗೆ 6.38ಕ್ಕೆ ರುದ್ರಣ್ಣ ಕಚೇರಿಗೆ ಬಂದಿರುವುದು ಸೆರೆಯಾಗಿದೆ. ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗುತ್ತಿದ್ದಂತೆ ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಗೆ ಬಂದು ನೋಡಿ …
Read More »ಬಡ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದ ಬಿಗ್ ಗಿಫ್ಟ್ !
ನವದೆಹಲಿ : ಮಧ್ಯಮ ವರ್ಗ ಅಥವಾ ಆರ್ಥಿಕವಾಗಿ ದುರ್ಬಲ ಜನರು ಹಣಕಾಸಿನ ಅಡಚಣೆಗಳಿಂದ ತಮ್ಮ ಅಧ್ಯಯನವನ್ನ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅವರ ಕನಸುಗಳನ್ನ ಈಡೇರಿಸಿಕೊಳ್ಳಲು ವಿಫಲರಾಗುತ್ತಾರೆ. ಈ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಬುಧವಾರ, ಸಚಿವ ಸಂಪುಟವು ಪ್ರಧಾನಮಂತ್ರಿ ವಿದ್ಯಾ ಲಕ್ಷ್ಮಿ ಶಿಕ್ಷಣ ಯೋಜನೆ ಎಂಬ ಯೋಜನೆಗೆ ಅನುಮೋದನೆ ನೀಡಿದ್ದು, ಇದರ ಅಡಿಯಲ್ಲಿ ಕುಟುಂಬದ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ …
Read More »ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಬೆಳಗಾವಿ ಎಪಿಎಂಸಿ ಪೊಲೀಸರು ಬಂಧಿಸಿ ಆತನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಘಟನೆ ನಡೆದಿದೆ
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಬೆಳಗಾವಿ ಎಪಿಎಂಸಿ ಪೊಲೀಸರು ಬಂಧಿಸಿ ಆತನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಘಟನೆ ನಡೆದಿದೆ ವೈಭವ ನಗರದ ವಿವಿಧ ಮನೆಗಳ್ಳತನ ಮಾಡಿದ್ದ ಮಸ್ತಾನ್ ಅಲಿ ಶೇಖ್ ಎಂಬ ಆರೋಪಿಯನ್ನು ಬಂಧಿಸಿರುವ ಎಪಿಎಂಸಿ ಪೊಲೀಸರು ಆತನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡು ಚಿನ್ನಾಭರಣ ಕಳೆದುಕೊಂಡು ದೂರು ನೀಡಿದ ಶಿವಪ್ಪ ಛತ್ರಪ್ಪ ಪೂಜಾರಿ ಗ ಹಸ್ತಾಂತರ ಪ್ರಕ್ರಿಯೆ ನಡೆಸಲಿದ್ದಾರೆ. ನಗರ ಪೊಲೀಸ್ ಆಯುಕ್ತ ಯಡಾ …
Read More »ಡೊನಾಲ್ಡ್ Trumpಗೆ ಮತ್ತೊಮ್ಮೆ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ
ವಾಷಿಂಗ್ಟನ್: ಇಡೀ ಜಗತ್ತಿನ ಕುತೂಹಲಕ್ಕೆ ಕಾರಣವಾಗಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷ ಜಯಭೇರಿ ಬಾರಿಸಿರುವುದಾಗಿ ಬುಧವಾರ (ನ.06) ಘೋಷಿಸುವ ಮೂಲಕ ಟ್ರಂಪ್ 2ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ 270ಕ್ಕೂ ಅಧಿಕ ಎಲೆಕ್ಟ್ರೊರಲ್ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ …
Read More »ಲೈಂಗಿಕ ದೌರ್ಜನ್ಯ ಪ್ರಕರಣ; ʼಪ್ರೇಮಂʼ ನಟ ನಿವಿನ್ ಪೌಲಿಗೆ ಕ್ಲೀನ್ ಚಿಟ್
ತಿರುವನಂತಪುರ: ಜಸ್ಟೀಸ್ ಕೆ. ಹೇಮಾ ಸಮಿತಿ ವರದಿ (Hema Committee Report) ಬೆನ್ನಲ್ಲೇ ಮಲಯಾಳಂ ಚಿತ್ರರಂಗದ ಹಲವು ಕಲಾವಿದರ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಈ ಪಟ್ಟಿಯಲ್ಲಿ ಮಾಲಿವುಡ್ ನಟ “ಪ್ರೇಮಂ’ ಖ್ಯಾತಿಯ ನಿವಿನ್ ಪೌಲಿ (Malayalam actor Nivin Pauly) ವಿರುದ್ಧವೂ ದೂರು ದಾಖಲಾಗಿತ್ತು. ಕೇರಳದ ನೆರಿಯಮಂಗಲಂ ನಿವಾಸಿಯಾಗಿರುವ ದೂರುದಾರೆ ನವೆಂಬರ್ 2023ರಲ್ಲಿ ಸಿನಿಮಾದಲ್ಲಿ ಅವಕಾಶ ನೀಡುತ್ತೇನೆ ಎಂದು ನಿವಿನ್ ಪೌಲಿ ತಮ್ಮ ಮೇಲೆ ದುಬೈಯ ಹೊಟೇಲ್ …
Read More »ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, :ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ನಗರದಲ್ಲಿ ಬುಧವಾರ(ನ6) ಮಾಧ್ಯಮಗಳೊಂದಿಗೆ ಮಾತನಾಡಿ, ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು …
Read More »ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು
ಕಲಬುರಗಿ: ರಾಷ್ಟ್ರೀಯ ಹೆದ್ದಾರಿ ಕಲಬುರಗಿ- ಜೇವರ್ಗಿ ನಡುವಿನ ಫರಹತಾಬಾದ್ ನ ಖಣಿ ಬಳಿ ನ.5ರ ಮಂಗಳವಾರ ರಾತ್ರಿ ಕಾರು ಹಾಗೂ ಪಿಕಪ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಹಾಗೂ ಪಿಕಪ್ ನಲ್ಲಿದ್ದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಕಲಬುರಗಿ ನಗರದ ಜನತಾ ಲೇಔಟ್ ನ ನಿವಾಸಿ ಮುರುಗೇಶ ಚಂದ್ರಶೇಖರ ಉಪ್ಪಿನ (42) ಹಾಗೂ ಶಹಾಬಾದ್ ನ ನಿವಾಸಿ ಧೂಳಮ್ಮ ಯಮನಪ್ಪ ಪೂಜಾರಿ …
Read More »
Laxmi News 24×7