ಶಿವಮೊಗ್ಗ: ಪತಿ-ಪತ್ನಿ ನಡುವಿನ ಜಗಳಕ್ಕೆ ಬೇಸತ್ತ ಪತ್ನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದಲ್ಲಿ ನಡೆದಿದೆ. ಕಮಲಾ ಬಿ.ಪಿ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ತಡರಾತ್ರಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ವಿನೋಬಾನಗರ ರೈಲ್ವೆ ಟ್ರ್ಯಾಕ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ದೇಹ, ತಲೆ, ಕೈಗಳು ಛಿದ್ರಗೊಂಡು ಬೇರ್ಪಟ್ಟಿವೆ. ಕಮಲಾ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಪತಿ-ಪತ್ನಿ ನಡುವೆ …
Read More »ಡಿ ಕೆ ಶಿವಕುಮಾರ್ ಪಾರ್ಟ್ ಟೈಮ್ ನೀರಾವರಿ ಸಚಿವ.
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಪುನರುಚ್ಛರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾನು ಭಾಗವಹಿಸುವದಿಲ್ಲ. ಆದರೆ ನಮ್ಮ ಎನ್ ಡಿಎ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದರು. ಸಿ.ಪಿ.ಯೋಗೇಶ್ವರ ಒಳ್ಳೆಯ ಮನುಷ್ಯ. ಇಲ್ಲಿ ಅವರಿಗೆ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಗೆ ಹೋಗಿದ್ದಾರೆ. ಸೋಲುತ್ತಾರೋ ಅಥವಾ ಗೆಲ್ಲುತ್ತಾರೋ ಗೊತ್ತಿಲ್ಲ ಎಂದರು. ಮಹಾರಾಷ್ಟ್ರ …
Read More »ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ
ಬೆಳಗಾವಿ: ಹೋರಾಟ ಎಂಬುದು ಬಾಹ್ಯಿಕ ಸ್ಫೂರ್ತಿಯಿಂದ ಬಂದಾಗ ಅದು ಆ ಕ್ಷಣದ ಹೋರಾಟವಾಗುತ್ತದೆ. ಅದೇ ಅಂತರಾಳದಿಂದ ಬಂದಾಗ ಸಮಸ್ತ ಪರಿಸರವನ್ನೇ ಬಡಿದೆಬ್ಬಿಸುತ್ತದೆ. ಇದಕ್ಕೆ ರಾಣಿ ಚನ್ನಮ್ಮನ ಹೋರಾಟವೇ ಸಾಕ್ಷಿ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಸಿ ಎಂ ತ್ಯಾಗರಾಜ ಅಭಿಪ್ರಾಯಪಟ್ಟರು. ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಹಯೋಗದಲ್ಲಿ ರಾಣಿ ಚನ್ನಮ್ಮನ ಐತಿಹಾಸಿಕ …
Read More »ಬೆಂಗಳೂರಲ್ಲಿ ಕಟ್ಟಡ ಕುಸಿತ ಪ್ರಕರಣ: 8 ಮಂದಿ ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ವಿತರಣೆ
ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಎಂಟು ಕುಟುಂಬ ಕಾರ್ಮಿಕರ ಕುಟುಂಬಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2.04 ಲಕ್ಷ ರೂಪಾಯಿ ಮೊತ್ತದ ಚೆಕ್ ಗಳನ್ನು ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಚೆಕ್ ವಿತರಿಸಲಾಗಿದೆ. ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಕಳಪೆ …
Read More »ಅಂಜಲಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ
ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ವೀರಾಪುರ ಓಣಿಯ ಮನೆಯಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹5ಲಕ್ಷ ಪರಿಹಾರದ ಚೆಕ್ ಅನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿತರಿಸಿದರು. ಅಂಬಿಗೇರ ಸಮಾಜದ ಮುಖಂಡ ಮನೋಜ ಕರ್ಜಗಿ ಮಾತನಾಡಿ, ‘ಅಂಜಲಿ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ ಗಳ ಸಹಕಾರ ದೊಡ್ಡದು. ₹25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿತ್ತು. ಸದ್ಯ ಸಿಎಂ ಪರಿಹಾರ …
Read More »ಸಂಕಷ್ಟದಲ್ಲಿ ಅಲೆಮಾರಿಗಳ ಬದುಕು
ಹುಬ್ಬಳ್ಳಿ: ‘ಇವತ್ತು ಈ ಊರು, ನಾಳೆ ಮತ್ತೊಂದು ಊರು. ನಮ್ಮಂತಹ ಅಲೆಮಾರಿಗಳಿಗೆ ಸ್ವಂತ ಜಾಗ, ಮನೆ ಎಂಬುದು ಇರುವುದಿಲ್ಲ. ಆಶ್ರಯ ಸಿಕ್ಕ ಕಡೆ ಉಳಿಯುತ್ತೇವೆ. ಕೆಲ ದಿನಗಳ ಬಳಿಕ ಮತ್ತೆ ಮುಂದಿನ ಊರಿಗೆ ಪ್ರಯಾಣಿಸುತ್ತೇವೆ. ಆಯಾ ಸಮಯಕ್ಕೆ ಸಿಗುವ ವಸ್ತುಗಳನ್ನು ಮಾರುತ್ತ ಬದುಕುತ್ತೇವೆ’ ತಮ್ಮ ದೈನಂದಿನ ಬದುಕನ್ನು ಹೀಗೆ ಸಂಕ್ಷಿಪ್ತವಾಗಿ ವಿವರಿಸಿದವರು ಮಲ್ಲಶೆಟ್ಟಿ. ಅಲೆಮಾರಿ ಸಮುದಾಯದ ಅವರು ಕುಟುಂಬ ಸದಸ್ಯರ ಜೊತೆಗೆ ಹುಬ್ಬಳ್ಳಿಯ ಆರ್‌ಟಿಒ ಕಚೇರಿ ಬಳಿ ತಾತ್ಕಾಲಿಕ ನೆಲೆ …
Read More »ಡಿಜಿಟಲ್ ಅರೆಸ್ಟ್; ವಂಚಕರ ಹೊಸ ಟ್ರಿಕ್!
ಹುಬ್ಬಳ್ಳಿ: ತಂತ್ರಜ್ಞಾನ ಆವಿಷ್ಕಾರಗಳು ಹೆಚ್ಚುತ್ತಾ ಹೋದಂತೆ, ಸೈಬರ್ ವಂಚಕರ ಯೋಜನೆ ಮತ್ತು ಯೋಚನೆಗಳು ಸಹ ವಿಸ್ತಾರವಾಗುತ್ತ ಹೋಗುತ್ತಿವೆ. ಒಟಿಪಿ, ಲಿಂಕ್ ಕಳುಹಿಸಿ ಹಣ ವರ್ಗಾವಣೆ, ಮಾರುಕಟ್ಟೆಯಲ್ಲಿ ಹಣ ಹೂಡಿಕೆ ನೆಪದಲ್ಲಿ ಆನ್‌ಲೈನ್ ಕಳ್ಳರು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ಕೋಟಿ ಕೋಟಿ ವಂಚಿಸುತ್ತಿದ್ದಾರೆ. ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಒಂದು ವಾರದ ಅವಧಿಯಲ್ಲಿ ‘ಡಿಜಿಟಲ್ ಅರೆಸ್ಟ್’ ಸಂಬಂಧಿಸಿ ಮೂರು ಪ್ರಕರಣಗಳು ದಾಖಲಾಗಿದ್ದು, ಒಟ್ಟು ₹1.84 ಕೋಟಿ ವರ್ಗಾಯಿಸಿಕೊಂಡಿದ್ದಾರೆ. …
Read More »ನಗರದ ವಿವಿಧೆಡೆ ಪೊಲೀಸರ ಕಾರ್ಯಾಚರಣೆ: 264 ದ್ವಿಚಕ್ರ ವಾಹನ ವಶ
ಹುಬ್ಬಳ್ಳಿ: ‘ಹು-ಧಾ ಕಮಿಷನರೇಟ್ ವ್ಯಾಪ್ತಿಯ ದಕ್ಷಿಣ ಉಪವಿಭಾಗದ ವಿವಿಧೆಡೆ ಶನಿವಾರ ಕಾರ್ಯಾಚರಣೆ ನಡೆಸಿ, ಸರಿಯಾದ ದಾಖಲೆ ಇಲ್ಲದ ಒಟ್ಟು 264 ದ್ವಿಚಕ್ರ ವಾಹನಗಳು ಹಾಗೂ ಮೂರು ಆಟೊಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು. ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ ಶಹರ, ಘಂಟಿಕೇರಿ, ಕಸಬಾ, ಹಳೆ ಹುಬ್ಬಳ್ಳಿ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ಕಡೆ ಚೆಕ್‌ಪೋಸ್ಟ್ …
Read More »ವಿಜಯಪುರದಲ್ಲಿ ಸರಣಿ ಕಳ್ಳತನ: ನಗನಾಣ್ಯ ದೋಚಿ ಪರಾರಿ
ವಿಜಯಪುರದಲ್ಲಿ ಸರಣಿ ಕಳ್ಳತನ: ನಗನಾಣ್ಯ ದೋಚಿ ಪರಾರಿ ನಿನ್ನೆ ತಡರಾತ್ರಿ ವಿಜಯಪುರದಲ್ಲಿ 5 ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ ವಿಜಯಪುರ ನಗರದ ಅಕ್ಕಮಹಾದೇವಿ ಶಾಲೆಯ ಬಳಿ ಜಮಖಂಡಿ ರಸ್ತೆಯಲ್ಲಿರುವ 5 ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಎರಡು ಮನೆಗಳಿಂದ 3 ತೊಲ ಚಿನ್ನ, ಬೆಳ್ಳಿ ಮತ್ತು ೬೫೦೦೦ ನಗದು ಹಣದೊಂದಿಗೆ ಕಳ್ಳರು ಪರಾರಿಯಾಗಿರುವುದಾಗಿ ತಿಳಿಸಿದರು.. ಇಲ್ಲಿನ ಮನೆಗಳ ಸುತ್ತ ಲೈಟ್‌ಗಳಿಲ್ಲದ ಕಾರಣ ಹಲವೆಡೆ ಕಳ್ಳರು ಸುಲಭವಾಗಿ …
Read More »ಇತ್ತ ಮಳೆ ಭಾರಿ, ಅತ್ತ ಬೀಜಗಳೂ ದುಬಾರಿ
ಬೆಳಗಾವಿ: ಅಕಾಲಿಕ ಮಳೆ ಹಿಂಗಾರಿ ಹಂಗಾಮಿಗೆ ಸಿದ್ಧಗೊಂಡ ರೈತರಿಗೆ ಚಿಂತೆ ತಂದಿಟ್ಟಿವೆ. ಜಿಲ್ಲೆಯ ಹಲವು ರೈತರು ಇನ್ನೂ ಮುಂಗಾರು ಫಸಲಿನ ರಾಶಿಯಲ್ಲಿ ನಿರತರಾಗಿದ್ದಾರೆ. ಮತ್ತಷ್ಟು ರೈತರು ಹಿಂಗಾರಿ ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ. ಕಳೆದ ಎರಡು ವಾರಗಳಿಂದ ಸುರಿದ ಮಳೆ ಎರಡೂ ಕೆಲಸಕ್ಕೆ ಅಡಚಣೆ ತಂದೊಡ್ಡಿದೆ. ಗಾಯದ ಮೇಲೆ ಬರೆ ಎಂಬಂತೆ ಬಿತ್ತನೆ ಬೀಜಗಳ ದರ ಹೆಚ್ಚಳವಾಗಿದೆ. ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ರಾಗಿ, ಗೋಧಿ, ಕಡಲೆ ದರ ತುಸು ಹೆಚ್ಚಾಗಿದೆ. ಜೋಳ, …
Read More »
Laxmi News 24×7