Breaking News

ರಾಜ್ಯ

ಕೊನೆಗೂ ಜೈಲಿನಿಂದ ಹೊರಬಿದ್ದ ಶಾಸಕ ಮುನಿರತ್ನ

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲುಪಾಲಾಗಿದ್ದ ಶಾಸಕ ಮುನಿರತ್ನ ನಾಯ್ಡು ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇದೀಗ ಇಂದು ಬಿಡುಗಡೆಯಾಗಿದ್ದಾರೆ. ಮಂಗಳವಾರ ಜಾಮೀನು ಅರ್ಜಿ ತೀರ್ಪು ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.   ಅದರಂತೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಅವರು ಬಿಡುಗಡೆಯಾದರು. ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು …

Read More »

ಇದೆಲ್ಲಾ ಇ.ಡಿ ಪಿತೂರಿ, ನನ್ನದೇನೂ ತಪ್ಪಿಲ್ಲ ಎಂದ ನಾಗೇಂದ್ರ.!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ಹಗರಣ ಪ್ರಕರಣಕ್ಕೆ ಸಂಬಂಧಸಿದಂತೆ ಮಾಜಿ ಸಚಿವ ನಾಗೇಂದ್ರ ಜೈಲಿನಿಂದ ಹೊರಬಂದ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿದೆ ಆ ಸರ್ಕಾರವನ್ನ ಅಸ್ಥಿರ ಗೊಳಿಸುವ ಷಡ್ಯಂತ್ರ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.   ಈ ಬಗ್ಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣದಲ್ಲಿ ಏನೂ ಪಾತ್ರವಿಲ್ಲದಿದ್ದರೂ ಏಕಾಏಕಿ ಬಂಧನ ಮಾಡಿ ಮೂರು ತಿಂಗಳಿಂದ ಇಡಿ ನನಗೆ ಸಾಕಷ್ಟು ಕಿರುಕುಳ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ …

Read More »

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ

ಮುಡಾ ನಿವೇಶನ ಹಂಚಿಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಮಧ್ಯೆ ಮುಡಾ ಹಗರಣ ಅಧ್ಯಕ್ಷ ಮರಿಗೌಡ ತಲೆದಂಡ ಮಾತು ಕೇಳಿಬಂದಿತ್ತು. ಇದೀಗ ಸಿಎಂ ಸೂಚನೆಯಂತೆ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ಇಂದು ರಾಜೀನಾಮೆ ನೀಡಿದ್ದಾರೆ. ಬೆಂಗಳೂರು, ಅಕ್ಟೋಬರ್ 16: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. …

Read More »

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ.. ದಾರುಣ ಸಾವು

ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) ಮೃತ ಮಗು. ಭಾರಿ ಮಳೆ ಕಾರಣಕ್ಕೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಪಾಲಿಕೆಯವರು ಚರಂಡಿ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಮಗು ಚರಂಡಿ ಬಳಿ ಹೋಗಿ ಆಕಸ್ಮಿಕವಾಗಿ ಚಂಡಿಗೆ ಬಿದ್ದು ಸಾವನ್ನಪ್ಪಿದೆ. ದುರಂತಕ್ಕೆ ಪಾಲಿಕೆ ಅಧಿಕಾರಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ. …

Read More »

ಕೆಎಚ್‌ಡಿಸಿ ಅವ್ಯವಹಾರ ತನಿಖೆ ನಡೆಸಿ: ಶಿವಲಿಂಗ ಟಿರಕಿ

ಗೋಕಾಕ: ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ (ಕೆಎಚ್‌ಡಿಸಿ)ದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು. ನೇಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬನಹಟ್ಟಿಯಿಂದ ಹುಬ್ಬಳ್ಳಿವರೆಗೆ ಹಮ್ಮಿಕೊಂಡ ಸ್ವಾಭಿಮಾನಿ ನೇಕಾರರ ಪಾದಯಾತ್ರೆಯ ನೇತ್ರತ್ವ ವಹಿಸಿ, ಇಲ್ಲಿನ ತಹಶೀಲ್ದಾರ್‌ ಕಚೇರಿಗೆ ಸೋಮವಾರ ಮನವಿ …

Read More »

ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ

ಖಾನಾಪುರ: ಪಟ್ಟಣ ಹೊರವಲಯದ ಶಾಂತಿನಿಕೇತನ ಪಿಯು ಕಾಲೇಜಿನ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳವಾರ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು. ಆನಂತರ ಮಾತನಾಡಿದ ಅವರು, ‘ಈ ಭಾಗದ ಗ್ರಾಮೀಣ ಕ್ರೀಡೆಯಾದ ಕುಸ್ತಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದ್ದೇನೆ’ ಎಂದರು.   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, ‘ಶಾಂತಿನಿಕೇತನ ಕಾಲೇಜು ಹಾಗೂ ತೋಪಿನಕಟ್ಟಿ …

Read More »

ಕಿತ್ತೂರಿನಲ್ಲಿ ಅತ್ಯಾಧುನಿಕ ‘ಥೀಮ್ ಪಾರ್ಕ್’

ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಕಿತ್ತೂರು ಸಂಸ್ಥಾನ, ರಾಣಿ ಚನ್ನಮ್ಮನ ಶೌರ್ಯ, ಸಾಹಸ, ಜೀವನ ಶೈಲಿ, ರಾಣಿ ಮತ್ತು ಸೇನಾನಿಗಳ ಹೋರಾಟದ ಕಥನವನ್ನು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಬಿತ್ತರಿಸುವ ‘ಥೀಮ್ ಪಾರ್ಕ್’ ಶೀಘ್ರ ಅನುಷ್ಠಾನಗೊಳ್ಳಲಿದೆ. ಇದಕ್ಕಾಗಿ ಕೋಟೆ ಆವರಣದೊಳಗಿರುವ ಸುಮಾರು ಏಳು ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ‘ಈಗಿನ ಯುಗದ ಪೀಳಿಗೆ ಅರಿಯುವ ಹಾಗೆ ಆಧುನಿಕ ತಂತ್ರಜ್ಞಾನದ ಈ ‘ಥೀಮ್ ಪಾರ್ಕ್’ ಯೋಜನೆ ಜಾರಿ ದೇಶದಲ್ಲಿಯೇ ಪ್ರಥಮ ಎಂದು …

Read More »

ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

ಬೆಂಗಳೂರು: ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ’ ಎಂಬ ವಾದ ಅರ್ಥವಾಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್‌, ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದಲ್ಲಿ ಇಬ್ಬರು ಯುವಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದೆ. 2023ರ ಸೆ. 24ರಂದು ರಾತ್ರಿ ಸುಮಾರು 10.50ರ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ದಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣ ಪ್ರವೇಶಿಸಿ ಜೈ …

Read More »

ಡಿ.16 ರಿಂದ 27ರವರೆಗೆ ಚಳಿಗಾಲದ ಅಧಿವೇಶನ ನಡೆಸುವ ಚಿಂತನೆ?

ಬೆಂಗಳೂರು: ಬರುವ ಡಿಸೆಂಬರ್‌ನಲ್ಲಿ ನಡೆಯಬೇಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಕಾಂಗ್ರೆಸ್‌ ಅಧಿವೇಶನ ಹಾಗೂ ಚಳಿಗಾಲದ ಅಧಿವೇಶನಗಳ ದಿನಾಂಕಗಳು ಪರಸ್ಪರ ಒಂದಕ್ಕೊಂದು ಅಡ್ಡಿಯಾಗುವ ಸಾಧ್ಯತೆ ಇದ್ದು, ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ ಈಗ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಪ್ರಸ್ತುತ ಅಕ್ಟೋಬರ್‌-ನವೆಂಬರ್‌ ತಿಂಗಳಿಡೀ ಉಪಚುನಾವಣೆಯ ಕಾವು ಏರಲಿದ್ದು, ಡಿಸೆಂಬರ್‌ 20 ರಿಂದ 22 ರವರೆಗೆ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಡಿ.26 ಮತ್ತು 27 …

Read More »

ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಪಡೆಯುವ ಮೂಲಕ ಕೌಶಲ್ಯಾಧಾರಿತ ಉದ್ಯೋಗಾವಕಾಶಗಳು ದೊರಕುವಂತೆ ಮಾಡಬಹುದು. ಈ ಸಂಬಂಧ ಜಿಲ್ಲೆಯ ದೊಡ್ಡ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಪಟ್ಟಿ ರಚಿಸಬೇಕು. ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ ಮೂಲಕ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚಿನ ಉದ್ಯೋಗಗಳು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ದೊರಕಲಿವೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಇ.ವಿ ರಮಣರೆಡ್ಡಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಕೌಶಲ್ಯ …

Read More »