Breaking News

ರಾಜ್ಯ

ಇಡಿ, ಸಿಬಿಐ ದುರ್ಬಳಕೆ: ಮೃಣಾಲ್ ಹೆಬ್ಬಾಳಕರ್

ಹಿರೇಬಾಗೇವಾಡಿ: ‘ಬಿಜೆಪಿಯವರು ಇಡಿ, ಸಿಬಿಐ, ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸು ದಾಖಲಿಸುತ್ತಿದ್ದಾರೆ. ಇದು ಅವರಿಗೇ ತಿರುಗುಬಾಣ ಆಗುತ್ತಿದೆ’ ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹೇಳಿದರು.   ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲೂ ಇಡಿ, ಸಿಬಿಐಗೆ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಈ ಹಿಂದೆ ಡಿ.ಕೆ. ಶಿವಕುಮಾರ್ ಅವರ ಮೇಲೂ ಇಡಿ, ಸಿಬಿಐ ದಾಳಿ ಮಾಡಿಸಲಾಗಿತ್ತು. ಬಲಿಷ್ಠ ನಾಯಕರನ್ನೇ ಗುರಿ …

Read More »

ಕಿವುಡ ಮಕ್ಕಳ ಶಾಲೆಯಲ್ಲಿ ಗಾಂಧಿ ಜಯಂತಿ

ಬೆಳಗಾವಿ: ಇಲ್ಲಿನ ಆಜಮ್‌ ನಗರದ ಸರ್ಕಾರಿ ಕಿವುಡ ಮಕ್ಕಳ ಶಾಲೆಯಲ್ಲಿ ಬುಧವಾರ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು. ಮಾತು ಬಾರದ ಹಾಗೂ ಕಿವಿ ಕೇಳದ ಮಕ್ಕಳೇ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸಾಧನೆಗಳನ್ನು ಸಂಜ್ಞೆಯ ಬಿತ್ತರಿಸಿದರು. ವಿದ್ಯಾರ್ಥಿಗಳೇ ಸಂಪೂರ್ಣ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಜ್ಞೆಯ ಮೂಲಕವೇ ಭಾಷಣ ಮಾಡಿದರು. ನಿರೂಪಣೆ, ಸ್ವಾಗತ, ಮಾಲಾರ್ಪಣೆ, ವಂದನಾರ್ಪಣೆ ಎಲ್ಲವೂ ವಿದ್ಯಾರ್ಥಿನಿಯರೇ ಮಾಡಿ ಗಮನ ಸೆಳೆದರು. ಇದಕ್ಕೂ ಮುನ್ನ ಶ್ರಮದಾನದ ಮಾಡಿದ ಶಿಕ್ಷಕಿ …

Read More »

ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ

ಹುಕ್ಕೇರಿ: ಪ್ರಸಕ್ತ ವರ್ಷದ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಶಾಸಕ ನಿಖಿಲ್ ಕತ್ತಿ ಸೋಮವಾರ ಚಾಲನೆ ನೀಡಿದರು. ಪಟ್ಟಣದ ಹೊರವಲಯದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಿಸಿ ಅವರು ಮಾತನಾಡಿದರು. ಈ ಹಂಗಾಮಿಗೆ ಬೇಕಾದ ಗುಣಮಟ್ಟದ ಕಡಲೆ, ಜೋಳ ಬೀಜದ ದಾಸ್ತಾನು ಇದ್ದು, ಬೀಜಗಳ ವಿತರಣೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದರು.   ‘ಹುಕ್ಕೇರಿ, ಸಂಕೇಶ್ಚರ, ಯಮಕನಮರಡಿ ಹೋಬಳಿ …

Read More »

ಅಂಬಾ ಭವಾನಿ ನವರಾತ್ರಿ ಉತ್ಸವ ಇಂದಿನಿಂದ

ಮುನವಳ್ಳಿ: ಪಟ್ಟಣದ ಅಂಬಾ ಭವಾನಿ ದೇವಸ್ಥಾನದಲ್ಲಿ 16ನೇ ನವರಾತ್ರಿ ಉತ್ಸವ ಅ. 3 ರಿಂದ ಅ. 12 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೋಮಶೇಖರ ಮಠದ ಮುರುಘೇಂದ್ರ ಶ್ರೀ, ನರಗುಂದದ ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯ ಶ್ರೀ ನೇತೃತ್ವದಲ್ಲಿ ನಡೆಯಲಿದೆ.   ಅ. 3ರಂದು ಘಟಸ್ಥಾಪನೆ, ಶ್ರೀದೇವಿ ಪುರಾಣ ಆರಂಭ ನಡೆಯಲಿದೆ. ಪ್ರತಿ ದಿನ ಸಂಜೆ 8ರಿಂದ 9ರವರೆಗೆ ಯಕ್ಕುಂಡಿಯ ಸಂಗಯ್ಯ ಹಿರೇಮಠ ಹಾಗೂ ಶ್ರೀನಿವಾಸ ಕುಲಕರ್ಣಿ ಅವರಿಂದ ಶ್ರೀ ದೇವಿ …

Read More »

ಚಿಪ್ಪು ಹಂದಿ ಮಾರಾಟ ಯತ್ನ: ಬಂಧನ

ಖಾನಾಪುರ: ಅಪರೂಪದ ಚಿಪ್ಪು ಹಂದಿ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ತಾಲ್ಲೂಕಿನ ಲೋಂಡಾ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ, ಚಿಪ್ಪು ಹಂದಿ ವಶಕ್ಕೆ ಪಡೆದಿದ್ದಾರೆ. ಸಹಚರರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಖಾನಾಪುರ- ಲೋಂಡಾ ರಾಷ್ಟ್ರೀಯ ಹೆದ್ದಾರಿಯ ವಾಟರೆ ರೈಲ್ವೆ ಗೇಟ್ ಬಳಿ ಬೈಕ್ ಸವಾರನನ್ನು ತಡೆದು ತಪಾಸಣೆ ನಡೆಸಿದ ಅಧಿಕಾರಿಗಳು, ಆತನ ಬಳಿಯಿದ್ದ ಚೀಲವೊಂದರಲ್ಲಿದ್ದ ನಾಲ್ಕು ಕಿಲೋ ತೂಕದ ಚಿಪ್ಪು ಹಂದಿ ಪತ್ತೆ ಹಚ್ಚಿದರು.   …

Read More »

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ, ಪದೇಪದೇ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ವಿಶೇಷ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಸವದತ್ತಿ ತಾಲ್ಲೂಕಿನ ಬಸರಗಿ ಗ್ರಾಮದ ಹನುಮಂತ ಪುಂಡಲೀಕ ಚಿ‍ಪ್ಪಲಕಟ್ಟಿ (21) ಶಿಕ್ಷೆಗೆ ಒಳಗಾದವ. ಬಾಲಕಿಯೊಬ್ಬಳನ್ನು ಪುಸಲಾಯಿಸಿ, ಅಪಹರಣ ಮಾಡಿಕೊಂಡು ಹೋಗಿ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. 2019ರ ನವಂಬರ್‌ 7ರಂದು …

Read More »

ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಗೆ ಅ. 3 ನಾಮಪತ್ರ …

Read More »

ವಾಹನ ಸವಾರರೇ ನ.20 ರೊಳಗೆ ತಪ್ಪದೇ ‘HSRP’ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಿ! ಇಲ್ಲದಿದ್ದರೆ ದಂಡ ಫಿಕ್ಸ್!

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ.   ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ …

Read More »

ʼಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದ್ರೂ ರಾಜೀನಾಮೆʼ

ಬೆಂಗಳೂರು, ಅಕ್ಟೋಬರ್‌ 02: ಅಧಿಕಾರಕ್ಕಾಗಿ ತೊಡೆ ತಟ್ಟುವ ಸ್ವಪಕ್ಷೀಯರನ್ನು ಸುಮ್ಮನಾಗಿಸಲು ಸೈಟ್ ಹಿಂತಿರುಗಿಸುವ ಈ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು. ಮುಖ್ಯಮಂತ್ರಿಗಳು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು. ಇದು ಕೆಲವೇ ಗಂಟೆಗಳಲ್ಲಿ ಆದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.   ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ …

Read More »

ಕಿತ್ತೂರು ಉತ್ಸವ-2024′ ಕ್ಕೆ CM ಸಿದ್ದರಾಮಯ್ಯ ಚಾಲನೆ!

ಬೆಂಗಳೂರು : ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ …

Read More »