ವಿಜಯಪುರ: ದ್ರಾಕ್ಷಿ ಬೆಳೆಯ ವಿಮೆ ತುಂಬಿದ ರೈತರಿಗೆ ಅವಧಿ ಮುಗಿದರೂ ಹಣ ಬಿಡುಗಡೆ ಆಗಿಲ್ಲ. ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ನಾಂದ್ರೇಕರ್ ಈಗಾಗಲೇ ನಮ್ಮ ನೆರೆ ಜಿಲ್ಲೆಯಾದ ಬೆಳಗಾವಿ ದ್ರಾಕ್ಷಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ₹1.80 ಲಕ್ಷ ಜಮೆಯಾಗಿದೆ. ಹವಾಮಾನ ವಿಜಯಪುರ ಮತ್ತು ಬಾಗಲಕೋಟೆಯಲ್ಲಿ …
Read More »ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಚಾಲನೆ
ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಸಂಸ್ಥೆಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಮಂಗಳವಾರ ಪ್ರಾಚಾರ್ಯ ಪ್ರೊ.ರಮೇಶ ಅತ್ತಿಗೇರಿ ಚಾಲನೆ ನೀಡಿದರು. ‘ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಲು ಅವರು ಸಲಹೆ ನೀಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಎಸ್.ಸಿ.ಅಂಗಡಿ ಮತ್ತು ಸಿಬ್ಬಂದಿ ಆರ್.ಜಿ.ಮಣಕಟ್ಟಿ, ಡಿ.ಸಿ.ಕರಿಗೇರ, ಎಸ್.ಎಸ್.ಪಾಟೀಲ, ಎ.ಎಸ್.ಕಡಕೋಳ …
Read More »ಮುಡಾ ನಿವೇಶನ ವಾಪಸ್ ಕೊಟ್ಟರೆ ತಪ್ಪೇನು: ಸಚಿವ ಸಂತೋಷ್ ಲಾಡ್
ಧಾರವಾಡ: ‘ಮುಡಾ ಹಂಚಿಕೆ ಮಾಡಿದ್ದ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ವಾಪಸ್ ನೀಡಿದ್ದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರ ಗೌರವ ಮತ್ತು ಪ್ರತಿಷ್ಠೆ ತುಂಬಾ ಮುಖ್ಯ. ಅದಕ್ಕೆ ನಿವೇಶನಗಳನ್ನು ವಾಪಸ್ ನೀಡಿದ್ದಾರೆ’ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರೇ ನಿವೇಶನಗಳನ್ನು ಹಂಚಿಕೆ ಮಾಡಿದ್ದರು. ನಿವೇಶನಗಳನ್ನು ವಾಪಸ್ ನೀಡಿದ್ದಕ್ಕೆ ‘ಯು ಟರ್ನ್’ ಎಂದರೆ ಏನರ್ಥ? ನಿವೇಶನಗಳನ್ನು ವಾಪಸ್ ನೀಡಬಾರದು ಎಂಬ ಕಾನೂನು …
Read More »ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೇ ಪುತ್ರನಿಗೂ ಸಂಕಷ್ಟ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ತನಿಖೆ ನಡೆಯುತ್ತಿದೆ. ಸಿಎಂ ಸಿದ್ಧರಾಮಯ್ಯ ಮುಡಾ ಸಂಕಷ್ಟ ಎದುರಿಸುತ್ತಿದ್ದಾರೆ. ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೇ ಅವರ ಪುತ್ರನಿಗೂ ಸಂಕಷ್ಟ ಎದುರಾಗಿದೆ. ಸಾಕ್ಷ್ಯ ತಿರುಚಿದ್ದಾರೆ ಎಂಬುದಾಗಿ ವ್ಯಕ್ತಿಯೊಬ್ಬರು ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇಂದು ಪ್ರದೀಪ್ ಕುಮಾರ್ ಎಂಬುವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ …
Read More »ಮನೆ ಕಟ್ಟೋರಿಗೆ ಬಿಗ್ ಶಾಕ್ : ಸಿಮೆಂಟ್, ಇಟ್ಟಿಗೆ, ಕಬ್ಬಿಣದ ಬೆಲೆಯಲ್ಲಿ ಮತ್ತೆ ಏರಿಕೆ!
ನವದೆಹಲಿ : ನಿಮ್ಮ ಸ್ವಂತ ಮನೆ ಕಟ್ಟುವ ಕನಸು ಕಾಣುತ್ತಿದ್ದರೆ, ಈಗ ನಿಮ್ಮ ಜೇಬಿಗೆ ಹೆಚ್ಚಿನ ಹೊರೆ ಬೀಳಲಿದೆ. ಕಳೆದ ಒಂದು ತಿಂಗಳಲ್ಲಿ ಮನೆ ನಿರ್ಮಾಣದ ಪ್ರಮುಖ ವಸ್ತುಗಳಾದ ಕಬ್ಬಿಣ, ಸಿಮೆಂಟ್ ಮತ್ತು ಇಟ್ಟಿಗೆಗಳ ಬೆಲೆಗಳು ವೇಗವಾಗಿ ಏರಿಕೆಯಾಗಿದೆ. ಆಗಸ್ಟ್ ಅಂತ್ಯಕ್ಕೆ ಕುಸಿತ ಕಂಡಿದ್ದ ಕಬ್ಬಿಣದ ಬೆಲೆ ಇದೀಗ ಮತ್ತೆ ಏರಿಕೆಯಾಗಿದೆ. ಪ್ರತಿ ಟನ್‌ಗೆ ರೀಬಾರ್ ಬೆಲೆ 1,500 ರಿಂದ 2,000 ರೂ.ಗೆ ಹೆಚ್ಚಳವಾಗಿದೆ. ಆಗಸ್ಟ್‌ನಲ್ಲಿ ಸುರಿದ ಭಾರಿ ಮಳೆಯಿಂದಾಗಿ …
Read More »ರಾಜಕಾರಣಿಗಳ ಸೆಕ್ಸ್ ವಿಡಿಯೋ & ಫೋಟೋಸ್ SITಗೆ ಕೊಟ್ಟ ಸಂತ್ರಸ್ತೆ
ಬೆಂಗಳೂರು, ಅಕ್ಟೋಬರ್ 03: ಬೆಂಗಳೂರಿನ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಬೆದರಿಕೆ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ಆರೋಪದ ಮೇಲೆ ದೂರು ದಾಖಲಾಗಿವೆ. ಶಾಸಕರು ಮಹಿಳೆಯನ್ನು ಹನಿಟ್ರ್ಯಾಪ್‌ಗೆ ಬಳಸಿದ್ದಾರೆಂಬ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕರ ಮೇಲೆ ದೂರು ನೀಡಿದ್ದ ದೂರುದಾರೆ ಸಂತ್ರಸ್ತೆಯೇ ಇದೀಗ ತನಿಖಾಧಿಕಾರಿಗಳ ಮುಂದೆ ಕೆಲವು ರಾಜಕಾರಣಿಗಳ ಬಂಡವಾಳ ಬಿಚ್ಚಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೌದು, ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ …
Read More »ರಸ್ತೆಯಲ್ಲಿ ಉಗುಳುವುದನ್ನು ತಡೆಯಲು ಈ ಐಡಿಯಾ ಕೊಟ್ಟ ನಿತಿನ್ ಗಡ್ಕರಿ
ಪಾನ್ ಮಸಾಲ, ಗುಟ್ಕಾ ತಿಂದು ರಸ್ತೆಯಲ್ಲಿ ಉಗುಳುವವರನ್ನು ತಡೆಯಲು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶಿಷ್ಟ ಉಪಾಯವೊಂದನ್ನು ನೀಡಿದ್ದಾರೆ. ಪಾನ್, ಮಸಾಲಾ, ಗುಟ್ಕಾ ಸೇವಿಸಿ ರಸ್ತೆಯಲ್ಲಿ ಉಗುಳುವವರ ಫೋಟೋ ತೆಗೆದು ಪತ್ರಿಕೆಯಲ್ಲಿ ಪ್ರಕಟಿಸಬೇಕು ಎಂದು ಅವರು ಹೇಳಿದ್ದಾರೆ. ಗಾಂಧಿ ಜಯಂತಿಯಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ ಸ್ವಚ್ಛ ಭಾರತ್ ಕುರಿತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನಮ್ಮ …
Read More »ಉದ್ಯಮಿಗೆ ಜೀವ ಬೆದರಿಕೆ ಆರೋಪ : ಕೇಂದ್ರ ಸಚಿವ `HDK’ ವಿರುದ್ಧ `FIR’ ದಾಖಲು!
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 50 ಕೋಟಿ ರೂ. ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತ್ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಉದ್ಯಮಿ ವಿಜಯ್ ಟಾಟಾ ಎಂಬುವರು ಬೆಂಗಳೂರಿನ ಅಮೃತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ …
Read More »ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ.ಹಂ.ಪ ನಾಗರಾಜಯ್ಯ
ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಕ್ಕಿದೆ. ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಿದ್ದಾರೆ. ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಅವರು ದಸರಾಗೆ ಅದ್ದೂರಿ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದ ಮಾಹಿತಿ ಇಂದಿನಿಂದ 11ರವರೆಗೂ …
Read More »ಮೈಸೂರು ದಸರಾದಲ್ಲೂ ಧರ್ಮ ದಂಗಲ್: ಗುಂಬಜ್ ಮಾದರಿಯ ದೀಪಾಲಂಕಾರಕ್ಕೆ ಅಪಸ್ವರ
ಮೈಸೂರು, : ವಿಶ್ವವಿಖ್ಯಾತ ದಸರಾ(Dasara)ಬಂದರೆ ಸಾಕು ಮೈಸೂರಿನಲ್ಲಿ ಒಂದಿಲ್ಲೊಂದು ವಿಚಾರಗಳು ಹುಟ್ಟಿಕೊಳ್ಳುತ್ತವೆ. ಇತ್ತೀಚೆಗಷ್ಟೇ ಮಹಿಷಾ ದಸರಾ ಸಂಘರ್ಷವಾಗಿತ್ತು. ಅದು ಮುಗಿಯಿತು ಎನ್ನುವಷ್ಟರಲ್ಲಿ ಇದೀಗ ಧರ್ಮ ದಂಗಲ್ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಗುಂಬಜ್ ಮಾದರಿ ದೀಪಾಲಂಕಾರದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅಪಸ್ವರ ಎತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಅಳವಡಿಸಿರುವ ಹಸಿರು ಚಪ್ಪರದ ದೀಪಾಲಂಕಾರದ ಭಾವಚಿತ್ರ ಹಾಕಿ ಬದಲಾಯಿಸಲು ಹೇಳಿದ್ದೇನೆ ಎಂದು …
Read More »
Laxmi News 24×7