Breaking News

ರಾಜ್ಯ

ಯುವ ದಸರಾ” ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳವನ್ನು ಇಂದು ಪರಿಶೀಲಿಸಿದರು. ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ “ಯುವ ದಸರಾ” ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವರು. ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ …

Read More »

ಸ್ಟ್ಯಾಂಡ್ ಅಪ್ ಪೆಡಲಿಂಗ್ ಚಾಂಪಿಯನ್‌ಷಿಪ್: ಪುರುಷರ ರೇಸ್‌; ಆಕಾಶ್ ಪೂಜಾರ್ ಮಿಂಚು

ಮಂಗಳೂರು: ನಗರದ ಆಕಾಶ್‌ ಪೂಜಾರ್ ತಮಿಳುನಾಡಿನ ರಾಮೇಶ್ವರದಲ್ಲಿ ಭಾನುವಾರ ಕೊನೆಗೊಂಡ ರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪೆಡಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದು ಗಮನ ಸೆಳೆದರು. ಭಾರತ ಸರ್ಫಿಂಗ್ ಫೆಡರೇಷನ್ ಸಹಯೋಗದಲ್ಲಿ ತಮಿಳುನಾಡು ಸರ್ಫಿಂಗ್ ಸಂಸ್ಥೆ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನ ಪುರುಷರ 12 ಕಿಲೊಮೀಟರ್ ರೇಸ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅವರು ಈ ವಿಭಾಗದಲ್ಲಿ ಪದಕ ಗೆದ್ದ 16 ವರ್ಷದೊಳಗಿನ ಭಾರತದ ಮೊದಲ ಸರ್ಫರ್ ಎಂದೆನಿಸಿಕೊಂಡರು. ಕರ್ನಾಟಕ ಇಲ್ಲಿ ಒಟ್ಟು 8 ಪಕದಗಳನ್ನು ಗಳಿಸಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ದೂರದೃಷ್ಟಿ ಚಿಂತನೆ, ಸಹಾಯ, ಸಹಕಾರದ ಪ್ರತಿಫಲವೇ ಈ ಸಾಧನೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಗೋಕಾಕ- ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ವಲಯದಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದಲೇ ಈ ಭಾಗದಲ್ಲಿ ದಾಖಲೆಯ ಮಟ್ಟದಲ್ಲಿ ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಎನ್‌ಎಸ್‌ಎಫ್ ಕಚೇರಿಯಲ್ಲಿ ೨೦೨೩-೨೪ ನೇ ಸಾಲಿನ ವ್ಯಾಸಂಗ ಮಾಡಿ ಉನ್ನತ ವೃತ್ತಿಪರ ಕೋರ್ಸಗಳಿಗೆ ಆಯ್ಕೆಗೊಂಡ ೫೫ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿದ ಅವರು, ಈ …

Read More »

ಯಾದಗಿರಿ | ಮಾರುಕಟ್ಟೆಗೆ ಲಗ್ಗೆ ಇಟ್ಟ ‘ಸೀತಾಫಲ’

ಯಾದಗಿರಿ: ಜಿಲ್ಲೆಯ ಗುಡ್ಡಗಳಲ್ಲಿ ಯಥೇಚ್ಛವಾಗಿ ಬೆಳೆದ ಸೀತಾಫಲ ಹಣ್ಣುಗಳನ್ನು ವ್ಯಾಪಾರಿಗಳು ಅರಣ್ಯಕ್ಕೆ ತೆರಳಿ ಕಿತ್ತು ತಂದು ನಗರ ಪ್ರದೇಶಗಳಲ್ಲಿ ಮಾರುತ್ತಿದ್ದಾರೆ. ಯಾದಗಿರಿ ತಾಲ್ಲೂಕಿನ ಬಂದಳ್ಳಿ, ಯಡ್ಡಳ್ಳಿ, ಯರಗೋಳ, ಹತ್ತಿಕುಣಿ, ಆಶನಾಳ, ಬೆಳಗೇರಾ, ಅರಕೇರಾ (ಕೆ), ಕಟಗಿ, ಶಹಾಪುರ, ಗುರಮಠಕಲ್ ತಾಲ್ಲೂಕಿನ ಚಿಂತನಹಳ್ಳಿ, ಕಂದಕೂರ, ತಾತಳಗೇರಾ, ಬೋರಾಬಂಡ, ಧರ್ಮಪುರ, ಮಿನಸಾಪುರ ಸೇರಿದಂತೆ ವಿವಿಧ ಗುಡ್ಡಗಾಡು ಪ್ರದೇಶದಲ್ಲಿ ನೈಸರ್ಗಿಕವಾಗಿ ಸೀತಾಫಲ ಬೆಳೆದು ನಿಂತಿದೆ.   ಲಂಬಾಣಿ ಸಮಾಜದ ಮಹಿಳೆಯರು ನಗರದ ಹಳೆ ಬಸ್ …

Read More »

ಜೆರಾಕ್ಸ್‌ ಅಂಗಡಿಗಳಲ್ಲಿ ಪ್ರಶ್ನೆಪತ್ರಿಕೆ ಬಿಕರಿ?

ಕುಷ್ಟಗಿ: ಎಸ್‌ಎಸ್‌ಎಲ್‌ಸಿ ಮಧ್ಯವಾರ್ಷಿಕ ಪರೀಕ್ಷೆಯನ್ನು ಮುಖ್ಯಪರೀಕ್ಷೆ ಮಾದರಿಯಲ್ಲಿಯೇ ಏಕರೂಪದ ಪ್ರಶ್ನೆಪತ್ರಿಕೆಗಳ ಮೂಲಕ ನಡೆಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಿಸುವ ಮತ್ತು ಪರೀಕ್ಷೆ ಪಾವಿತ್ರ್ಯ ಕುರಿತು ಮಕ್ಕಳು, ಪಾಲಕರಿಗೆ ಜಾಗೃತಿ ಮೂಡಿಸಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಧ್ಯವಾರ್ಷಿಕ ಪರೀಕ್ಷೆ ನಡೆಸುತ್ತಿದೆ. ಆದರೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮತ್ತು ಸುರಕ್ಷತೆಯೇ ಇಲ್ಲದೆ ಅವ್ಯವಸ್ಥೆಯಿಂದಾಗಿ ಪ್ರಶ್ನೆಪತ್ರಿಕೆಗಳು ಹಣಕ್ಕೆ ಬಿಕರಿಯಾಗುತ್ತಿರುವ ಆರೋಪಗಳು ಕೇಳಿ ಬಂದಿವೆ. …

Read More »

ಅದ್ದೂರಿ ದಸರೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ

ಮೈಸೂರು: ನಾಡಿನ ಸಾಂಸ್ಕೃತಿಕ ಪರಂಪರೆ ಬಿಂಬಿಸಲಿರುವ ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಕಾರ್ಯಕ್ರಮಗಳ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಅ.3ರಂದು ಬೆಳಿಗ್ಗೆ 9.15ರಿಂದ 9.45ರ ನಡುವೆ ಉದ್ಘಾಟನೆಯನ್ನು ಸಾಹಿತಿ ಹಂ.ಪ. ನಾಗರಾಜಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ವೇದಿಕೆಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಂದು ಸಂಜೆ 6ಕ್ಕೆ …

Read More »

ಸಿದ್ದರಾಮಯ್ಯ ನೈತಿಕತೆ ಈಗ ಎಲ್ಲಿಗೆ ಹೋಗಿದೆ?: ಶಾಸಕ ಅಭಯ ಪಾಟೀಲ

ಬೆಳಗಾವಿ: ‘ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.   ‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ …

Read More »

ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ

ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. ಶಾಸಕರ ಖರೀದಿ, ಆಪರೇಷನ್‌ಗೆ ಬಿಜೆಪಿ ವರಿಷ್ಠರು ಅವಕಾಶ ನೀಡುವುದಿಲ್ಲ, ನಾವೂ ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದರು.   ‘ರಾಜ್ಯ ಸರ್ಕಾರ ತಾನಾಗಿಯೇ ಪತನವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ ಮಾಡುವುದಿಲ್ಲ. ಸರ್ಕಾರ ಬೀಳಿಸಲು ಕೆಲವರ ಬಳಿ ಹಣ ಇರಬಹುದು. ಏಕೆಂದರೆ …

Read More »

ಹೊಂಡ-ಗುಂಡಿಗಳ ರಸ್ತೆ: ಬಸ್ ಸಂಚಾರ ಬಂದ್‌

ಹಾನಗಲ್: ತಾಲ್ಲೂಕಿನ ಯಳ್ಳೂರ-ಬಸಾಪುರ ಗ್ರಾಮೀಣ ರಸ್ತೆ ಹದಗೆಟ್ಟಿದೆ. ಮೊಣಕಾಲು ಮಟ್ಟದ ತಗ್ಗುಗಳು ಸೃಷ್ಟಿಯಾಗಿದ್ದು ಸಾರಿಗೆ ಬಸ್‌ ಸಂಚಾರ ಕೂಡ ಅಸಾಧ್ಯವಾಗಿದೆ. ಈ ಭಾಗದ ಜನರು ಮತ್ತು ಶಾಲೆ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಮಳೆಗಾಲದ ಆರಂಭದಿಂದಲೇ ರಸ್ತೆ ಸಂಚಾರ ದುಸ್ತರವಾಗುತ್ತಿದೆ. ಈಚೆಗಂತೂ ಹೆಜ್ಜೆಗೊಂದು ಗುಂಡಿ ಬಾಯ್ತೆರೆದುಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಈ ರಸ್ತೆಯಲ್ಲಿ ಹಾನಗಲ್ ಸಾರಿಗೆ ಘಟಕದ ಬಸ್‌ ಸಂಚಾರ ಬಂದ್‌ ಮಾಡಿ ಒಂದು ತಿಂಗಳು ಗತಿಸಿದೆ. ಮಹರಾಜಪೇಟೆ …

Read More »

ಮಾವನ ಮೇಲೆ ಸಿಟ್ಟು: 106 ಅಡಿಕೆ ಗಿಡ ಕಡಿದು ಹಾಕಿದ ಅಳಿಯ

ಹಾವೇರಿ: ತನ್ನ ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲವೆಂಬ ಕಾರಣಕ್ಕೆ ಮಾವನ ಮೇಲೆ ಸಿಟ್ಟಾದ ಅಳಿಯನೊಬ್ಬ, ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ಹಾಕಿ ನಾಶಪಡಿಸಿರುವ ಬಗ್ಗೆ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.‘ಹಾನಗಲ್ ತಾಲ್ಲೂಕಿನ ಬಸಾಪುರ ಗ್ರಾಮದ ದೇವೇಂದ್ರಪ್ಪ ಫಕ್ಕೀರಪ್ಪ ಗಾಣಿಗೇರ (55) ಅವರು ದೂರು ನೀಡಿದ್ದಾರೆ. ಅವರ ಅಳಿಯನಾದ ಬಸವರಾಜ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ದೂರುದಾರ ದೇವೇಂದ್ರಪ್ಪ, ತಮ್ಮ ಮಗಳನ್ನು …

Read More »