Breaking News

ರಾಜ್ಯ

ತೇವಾಂಶ ಹೆಚ್ಚಳ; ಕುಸಿದ ಮೆಕ್ಕೆಜೋಳ ಬೆಲೆ

ರಾಣೆಬೆನ್ನೂರು: ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೆಳೆ ಕಟಾವಿಗೆ ಬಂದಿದೆ. ಜಿಲ್ಲೆಯ ಹಲವು ತಾಲ್ಲೂಕು ಹಾಗೂ ಹೊರ ಜಿಲ್ಲೆಗಳ ರೈತರು ತಾವು ಬೆಳೆದಿರುವ ಮೆಕ್ಕೆಜೋಳವನ್ನು ಮಾರಾಟ ಮಾಡಲು ನಗರದ ಎಪಿಎಂಸಿಗೆ ತರುತ್ತಿದ್ದಾರೆ. ಬದಲಾದ ವಾತಾವರಣದಿಂದಾಗಿ ಮೆಕ್ಕೆಜೋಳದ ತೇವಾಂಶ ಹೆಚ್ಚಾಗಿದ್ದು, ಬೆಲೆಯಲ್ಲಿಯೂ ಕುಸಿತ ಕಂಡುಬರುತ್ತಿದೆ.   ಜಿಲ್ಲೆಯಲ್ಲಿ ವಾರದಿಂದ ವಾತಾವರಣ ಹೆಚ್ಚು ತಂಪಾಗಿದ್ದು, ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಕೆಲ ರೈತರು, ಮೆಕ್ಕೆಜೋಳದ ತೆನೆ ಮುರಿದು ಅಲ್ಲಲ್ಲಿ ರಾಶಿ ಮಾಡಿ ಇರಿಸುತ್ತಿದ್ದಾರೆ. …

Read More »

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಮುಂಬೈಗೆ ಭೇಟಿ ನೀಡಿದ್ದ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾವು 11 ಪಕ್ಷಗಳ ನಾಯಕರನ್ನು ಭೇಟಿಯಾಗಿದ್ದೇವೆ. ಚುನಾವಣೆ ದಿನಾಂಕಗಳನ್ನು ಘೋಷಿಸುವ ಮುನ್ನ ದೀಪಾವಳಿ …

Read More »

ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ₹60 ಕೋಟಿ ಅವ್ಯವಹಾರದ ತನಿಖೆಗೆ ನಿರ್ಣಯ!

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ₹60 ಕೋಟಿ ಅವ್ಯವಹಾರದ ತನಿಖೆಗೆ ನಿರ್ಣಯ ಕೈಗೊಳ್ಳಲಾಗಿದೆ. ಇದೇ ವಿಚಾರವಾಗಿ ರೈತರು ಕಳೆದ ವಾರ ನಿರಂತರ ಹೋರಾಟ ಮಾಡಿದರು. ಫಲವಾಗಿ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ರೈತರು ತನಿಖೆ ಮಾಡಿಸುವ ನಿರ್ಧಾರಕ್ಕೆ ಬಂದಿದ್ದಾರೆ. ದಶಕಗಳಿಂದಲೂ ರೈತರ ಜೀವನಾಡಿಯಾಗಿದ್ದ ಕಾರ್ಖಾನೆಯ ಈಗ ವಿವಾದದ ಕೇಂದ್ರವಾಗಿದೆ. ‘ಕಾರ್ಖಾನೆಯಲ್ಲಿ ನಡೆದ ಅವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಕಾರ್ಖಾನೆಯ ಈ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅವರ …

Read More »

ಕಂದಾಯ‌ ಅಧಿಕಾರಿಗೆ ಪ್ರಶಸ್ತಿ

ಬೆಳಗಾವಿ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿದ ಕಾರಣಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಸಮಾಲೋಚಕ ನಿಂಗನಗೌಡ ಚನಬಸನಗೌಡರ ಅವರಿಗೆ ‘ಅತ್ಯುತ್ತಮ ಕಂದಾಯ ಅಧಿಕಾರಿ-2024’ ಪ್ರಶಸ್ತಿ ಲಭಿಸಿದೆ. ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ನಿಂಗನಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಸೇರಿದಂತೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ …

Read More »

ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಇಂದು: ನಿಷೇಧಾಜ್ಞೆ

ಮೈಸೂರು: ಮಹಿಷ ದಸರಾ ಆಚರಣೆ ಸಮಿತಿಯು ಭಾನುವಾರ (ಸೆ.29) ‘ಮಹಿಷ ಮಂಡಲೋತ್ಸವ’ದ ಅಂಗವಾಗಿ, ಬೆಳಿಗ್ಗೆ 8.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಪುರಭವನದಲ್ಲಿ ಕಾರ್ಯಕ್ರಮ ನಡೆಸಲಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾರ್ಯಕ್ರಮದ ಕುರಿತು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ ಸಿಂಹ, ‘ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ, ನೋಡೆ ಬಿಡೋಣ’ ಎಂದು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಅವರು, ಮಹಿಷ ದಸರಾಕ್ಕೆ ಪ್ರತಿಯಾಗಿ ಚಾಮುಂಡಿ ಬೆಟ್ಟ …

Read More »

ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವಂತ ಘಟನೆ ಕಲಬುರ್ಗಿಯ ಸೇಡಂನ ಬೇಟಗೇರ(ಬಿ) ಗ್ರಾಮದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಬೇಡಗೇರ(ಬಿ) ಗ್ರಾಮದ ನಾಗಮ್ಮ ಹಾಗೂ ಶೇಖರಪ್ಪ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. ದಿನೇ ದಿನೇ ಹೆಚ್ಚಾಗಿ ಇದರಿಂದ ಬೇಸತ್ತು ಕೂಡ ಹೋಗಲಾಗಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದಂತ ಶೇಖರಪ್ಪ ತನ್ನ ಪತ್ನಿ ನಾಗಮ್ಮ(42) ಎಂಬುವರನ್ನು ಕುಡುಗೋಲಿನಿಂದ ಕೊಚ್ಚಿ …

Read More »

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ ನಟ ಕಿಚ್ಚ ಸುದೀಪ್​ ಅವರೇ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈಗಾಗಲೇ ಯಶಸ್ವಿ 10 ಆವೃತ್ತಿಯನ್ನು ಮುಗಿಸಿರುವ ಬಿಗ್​ಬಾಸ್ ಶೋ 11ನೇ ಆವೃತ್ತಿಗೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಈ ಬಾರಿ ಸ್ವರ್ಗ-ನರಕ ಎಂಬ ಥೀಮ್​ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೊಸ ಅಧ್ಯಾಯದ ಮೇಲೆ ಜನರು ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.   ಬಿಗ್​ಬಾಸ್​ ಸೀಸನ್​-11ರ ಮೊದಲ ಸ್ಫರ್ಧಿಯಾಗಿ ನಟಿ …

Read More »

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲವು ದಿನಗಳಲ್ಲಿ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಇದು ನಿರಂತರ ಪ್ರಕ್ರಿಯೆಯಾಗಿದೆ ಎಂದು ಹೇಳಿದ್ದಾರೆ.   ರಾಜ್ಯದಲ್ಲಿ ಜಾರಿಗೊಳಿಸಲಾದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು …

Read More »

ರಾಜ್ಯದಾದ್ಯಂತ ಅ. 2ರಂದು ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞೆ:

ಬೆಂಗಳೂರು: ‘ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಕಾರಣ, ಒಂದು ವರ್ಷ ರಾಜ್ಯದಾದ್ಯಂತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.   ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ಅಕ್ಟೋಬರ್ 2ರಂದು ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ, ತಾಲ್ಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು. ‘ಬೆಂಗಳೂರಿನಲ್ಲಿ …

Read More »

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗೌರವಯುತವಾಗಿ ರಾಜೀನಾಮೆ ನೀಡಬೇಕು. ಅವರು ಕಳ್ಳರಿದ್ದಾರೆ, ಇವರು ಕಳ್ಳರಿದ್ದಾರೆ ಎನ್ನುವುದು ಬೇಡ. ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು.   ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ವಿಷಯವನ್ನು ಎತ್ತಿದಾಗ ಕೇಂದ್ರ ಸಚಿವ ಎಚ್. ಡಿ. …

Read More »