Breaking News

ರಾಜ್ಯ

ಹವಾಮಾನದಲ್ಲಿ ಬದಲಾವಣೆ: ವೈರಾಣು ಜ್ವರ ವ್ಯಾಪಕ, ಮಕ್ಕಳು ಹೈರಾಣ

ರಾಣೆಬೆನ್ನೂರು: ಹವಾಮಾನದ ಬದಲಾವಣೆಯಿಂದಾಗಿ ತಾಲ್ಲೂಕಿನಾದ್ಯಂತ ಚಿಕ್ಕಮಕ್ಕಳಲ್ಲಿ ಕೆಮ್ಮು, ಜ್ವರ, ನೆಗಡಿ ಪ್ರಕರಣಗಳು ಹೆಚ್ಚಾಗಿವೆ. ನಗರದ ಪ್ರಮುಖ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಿಗೆ ಭೇಟಿ ನೀಡುತ್ತಿರುವವರಲ್ಲಿ ಶೇ 30 ರಿಂದ 40ಕ್ಕೂ ಹೆಚ್ಚು ಮಂದಿ ಜ್ವರ ತಪಾಸಣೆಗೆ ಒಳಗಾಗುತ್ತಿದ್ದಾರೆ. ಇವರಲ್ಲಿ ಮಕ್ಕಳೇ ಹೆಚ್ಚಾಗಿದ್ದಾರೆ. ತಾಪಮಾನ ಏರಿಳಿತ, ಗಾಳಿ ಸಹಿತ ಮಳೆ ಹಾಗೂ ಬಿಸಿಲಿನಿಂದಾಗಿ ವೈರಾಣು ಜ್ವರವು ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿದೆ. ಇನ್ನೊಂದು ಕಡೆ, ಶೀತ- ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಗಳೂ …

Read More »

ಬೆಳಗಾವಿ ಜಿಲ್ಲೆ ವಿಭಜನೆಗೆ ದಸರಾ ನಂತರ ಮನವಿ: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ದಸರಾ ಮುಗಿದ ನಂತರ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ, ಮನವಿ ಪತ್ರ …

Read More »

ನಾಗಮಂಗಲ ಗಲಭೆ ಪ್ರಕರಣ: ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು

ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು ಮಡಿ ಮಂಡ್ಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತಲಾ ಒಂದು ಲಕ್ಷ ಮೌಲ್ಯದ ಬಾಂಡ್, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಪ್ರತಿ ಭಾನುವರ ಠಾಣೆಗೆ ತೆರಳಿ ಸಹಿ, ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿ, ಜಾಮೀನು …

Read More »

ಭೂಮಿಯಿಂದ ‘ವಿಷಜಂತು’ ಹೊರಬಂದು ‘ಮನುಕುಲ’ ನಾಶ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಭೂಮಿಯಿಂದ ಹೊರಬುರುವ ವಿಷಜಂತುಗಳು ಮನುಕುಲ ನಾಶ ಮಾಡಲಿವೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ. ಧಾರವಾಡದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಭೂಮಿಯಿಂದ ವಿಷ …

Read More »

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಕಷ್ಟ: FIR ದಾಖಲಿಸುವಂತೆ ಕೋರ್ಟ್ ಸೂಚನೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ತಿಲಕನಗರ ಪೊಲೀಸರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ …

Read More »

ಸಿಎಂ ತಪ್ಪು ಮಾಡಿಲ್ಲ, ಇದೊಂದು ಷಡ್ಯಂತ್ರ: ಸಿದ್ದು ಬೆನ್ನಿಗೆ ನಿಂತ ‘ಕೈ’ ಪಡೆ

ಬೆಂಗಳೂರು: ಮುಡಾ ಹಗರಣ ಪ್ರಕರಣದ ರಿಟ್ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ. ಆದರೆ, ತನಿಖೆಯ ಭಾಗವಾಗಿ ಎಫ್‌ಐಆರ್ ದಾಖಲಾಗಿದ್ದೇ ಆದರೆ, ಈ ಬೆಂಬಲ ಇದೇ ರೀತಿ ಮುಂದುವರೆಯುತ್ತದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.   ಈ ಹಂತದಲ್ಲಿ ಯಾವುದೇ ಬದಲಾವಣೆಗೆ ಹೈಕಮಾಂಡ್ ಸಿದ್ಧವಾಗಿಲ್ಲ. ಬದಲಾವಣೆಗೆ ಮುಂದಾದರೆ ಇದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದು …

Read More »

ದ್ರಾಮಯ್ಯ ಚಿಲ್ಲರೆ ರಾಜಕಾರಣಿಯಲ್ಲ, ಗೌರವದಿಂದ ರಾಜೀನಾಮೆ ಕೊಡಲಿ-ಯತ್ನಾಳ್

ಬೆಳಗಾವಿ : ಚಿಲ್ಲರೆ ರಾಜಕಾರಣಿಗಳ ರೀತಿ ನೀವು ಮಾಡದೇ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಇಂದು ಸಿಎಂ ವಿರುದ್ಧ FIR ದಾಖಲಾಗಿದ್ದು, ಈ ಬಗ್ಗೆ ಬೈಲಹೊಂಗಲದಲ್ಲಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಿದ್ದರಾಮಯ್ಯ ಅವರೇ..   ನಿಮ್ಮ ಸುತ್ತಮುತ್ತಲಿನ ಪಟಾಲಂನಿಂದ ನಿಮಗೆ ತಪ್ಪು ಸಲಹೆ ನೀಡಲಾಗಿದೆ. ನಿಮ್ಮ ಹೆಸರು ಉಳಿಯಬೇಕು …

Read More »

ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಮೇಲೆ ವಂಚನೆ ಪ್ರಕರಣ

ಚಾಮರಾಜನಗರ : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧದ 3 ವರ್ಷಗಳ ಹಿಂದಿನ ವಂಚನೆ ಆರೋಪ ಪ್ರಕರಣ ಸಂಬಂಧ ಇಂದು ಕೋರ್ಟ್​​ಗೆ ಕೃಷ್ಣ ಅವರು ವಿಚಾರಣೆಗೆ ಹಾಜರಾದರು.     ಕರುಣಾಕರ ಎಂಬುವವರಿಂದ ಕೃಷ್ಣ 2018, 2019 ಹಾಗೂ 2020ರಲ್ಲಿ ತಲಾ ಒಂದು ಲಕ್ಷ ರೂಪಾಯಿಯನ್ನು ಸಾಲ ಪಡೆದು ಸಾಲ ಹಿಂದುರುಗಿಸದೇ ವಂಚನೆ ಮಾಡಿರುವ ಆರೋಪದ ಪ್ರಕರಣ ಇದಾಗಿದೆ. …

Read More »

ಗ್ಯಾರಂಟಿ ಸಮಾವೇಶದಲ್ಲೂ ಗೋಲ್‌ಮಾಲ್..?-‌ ಲೋಕಾಯುಕ್ತಕ್ಕೆ ದೂರು..!

ಧಾರವಾಡ: ಗ್ಯಾರಂಟಿ ಸಮಾವೇಶದಲ್ಲಿ ಗೋಲ್​ಮಾಲ್ ನಡೆದಿರುವ ಅನುಮಾನವೊಂದು ಎದ್ದಿದ್ದು, ಈ ಸಂಬಂಧ ತನಿಖೆಗೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡದ ಕೆಸಿಡಿ ಮೈದಾನ, ಹುಬ್ಬಳ್ಳಿಯ ರೈಲ್ವೆ ಮೈದಾನ, ನವಲಗುಂದದ ಮಾಡೆಲ್ ಹೈಸ್ಕೂಲ್ ಮೈದಾನ ಹಾಗೂ ಕುಂದಗೋಳ, ಕಲಘಟಗಿಯಲ್ಲಿ ಗ್ಯಾರಂಟಿ ಸಮಾವೇಶ ನಡೆದಿತ್ತು.   ಫೆಬ್ರವರಿ 24ರಂದು ನವಲಗುಂದದಲ್ಲಿ ಸಿಎಂ ಭಾವಹಿಸಿದ್ದ ಸಮಾವೇಶದ ಲೆಕ್ಕಪತ್ರದಲ್ಲಿಯೇ ಏರುಪೇರಾಗಿದ್ದು, ಅನೇಕ ಸಂಶಯಗಳು ಬರುತ್ತಿವೆ ಎಂದು ನವಲಗುಂದದ ಸಾಮಾಜಿಕ ಹೋರಾಟಗಾರ …

Read More »

ಸಾರ್ವಜನಿಕ ಹುದ್ದೆಗಳಿಗೆ ಬರಲು ಬ್ರಾಹ್ಮಣರು ಮುಂದಾಗಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಡಾಕ್ಟರ್​, ಇಂಜಿನಿಯರ್​​​ ಎಂಬ ಹುದ್ದೆಗಳಿಗೆ ಮಾತ್ರ ಸೀಮಿತವಾಗದೇ, ಸಾರ್ವಜನಿಕ ಸೇವೆಗಳಿರುವ ಹುದ್ದೆಗಳಲ್ಲಿಯೂ ಬ್ರಾಹ್ಮಣರು ಹೆಚ್ಚೆಚ್ಚು ಆಸಕ್ತಿವಹಿಸಬೇಕು ಎಂದು ಸಚಿವ ದಿನೇಶ್​ ಗುಂಡೂರಾವ್​ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಇಂದು ಆಯೋಜಿಸಿದ್ದ ವಿಶ್ಚಾಮಿತ್ರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಸಿದ್ದಾಂತಕ್ಕಿಂತ ಒಳ್ಳೇ ಉದ್ದೇಶ ನಮ್ಮಲ್ಲಿ ಇರಬೇಕು ಎಂದಿದ್ದಾರೆ.     ಸಾರ್ವಜನಿಕ ಹುದ್ದೆಗಳಲ್ಲಿಯೂ ನಮ್ಮವರೇ ಇದ್ದರೆ, ಆಗ ಎಲ್ಲ ಸಮುದಾಯಗಳಿಗೆ ಸ್ಪಂದಿಸುವ ಮೂಲಕ ನಮ್ಮ …

Read More »