Breaking News

ರಾಜ್ಯ

ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

ಬೆಂಗಳೂರು: ಕೊಡಗು ಜಿಲ್ಲೆಯ ಅರಣ್ಯ ಜಮೀನು, ಸರಕಾರಿ ಜಮೀನು, ಪಶ್ಚಿಮಘಟ್ಟ ಪ್ರದೇಶ ಹಾಗೂ ಬಾಣೆ, ಜಮ್ಮಾ, ಜಾಗೀರು, ಉಂಬಳಿ ಜಮೀನಿನ ಹಿಡುವಳಿದಾರರ ಜಮೀನುಗಳಲ್ಲಿನ ಮರಗಳನ್ನು ಕಡಿಯುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.   ಈ ವಿಚಾರವಾಗಿ ಮಡಿಕೇರಿ ನಿವಾಸಿ ಕೆ.ಎ. ರವಿ ಚೆಂಗಪ್ಪ ಹಾಗೂ ವೀರಾಜಪೇಟೆ ನಿವಾಸಿ ಸಿ.ಸಿ. ದೇವಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. …

Read More »

ಸಂಚಾರ ನಿಯಮ ಉಲ್ಲಂಘಿಸಿದರೆ ಲೈಸನ್ಸ್‌ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಅತೀ ವೇಗವಾಗಿ ವಾಹನ ಚಲಾಯಿಸುವುದರ ಸಹಿತ ಸಂಚಾರ ನಿಯಮ ಉಲ್ಲಂಘಿಸುವವರ ಚಾಲನ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ’ ಅಡಿಯಲ್ಲಿ ನೂತನ 65 ಆಯಂಬುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿ ನಮ್ಮ ಸರಕಾರ ರಸ್ತೆ ಸುರಕ್ಷೆಗೆ ಆದ್ಯತೆ ನೀಡುತ್ತಿದ್ದು, ಅಪಘಾತ …

Read More »

ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

ಬೆಂಗಳೂರು: ದಿನದಿಂದ ದಿನಕ್ಕೆ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮದ ಕುಣಿಕೆ ಬಿಗಿಯಾಗುತ್ತಿದ್ದು, ಮುಂದುವರಿದ ಭಾಗವಾಗಿ ಅವರ ಮೇಲೆ ಈಗ ವಿಧಾನಸಭೆ ಸದಸ್ಯತ್ವ ಸ್ಥಾನದ ಅಮಾನತಿನ ತೂಗುಗತ್ತಿ ನೇತಾಡುತ್ತಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಸೋಮವಾರ ಮುನಿರತ್ನ ಅವರನ್ನು ವಿಧಾನಸಭೆ ಸದಸ್ಯತ್ವದಿಂದ ಅಮಾನತುಗೊಳಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರಕಾರ ಮುನಿರತ್ನ ಶಾಸಕತ್ವ ಅಮಾನತು ಕ್ರಮಕ್ಕೆ ಮುಂದಡಿ ಇಟ್ಟಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ …

Read More »

ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ,

ಮುಧೋಳ: ಸೂಕ್ತ ನಿರ್ವಹಣೆ ಕೊರತೆಯಿಂದಾಗಿ‌ ನಗರದ ಮಧ್ಯಭಾಗದಲ್ಲಿರುವ ಸಮುದಾಯ ಭವನವೊಂದು ಪಾಳು ಕೊಂಪೆಯಂತಾಗುತ್ತಿದ್ದು, ಸಾರ್ವಜನಿಕರ ಅನೈತಿಕ ಚಟುವಟಿಕೆ‌ ತಾಣವಾಗಿ ಬದಲಾಗಿದೆ. ಬಸ್ ನಿಲ್ದಾದಿಂದ ಕೂಗಳತೆ ದೂರದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ‌ ಭವನ‌ದ ನಿರ್ವಹಣೆಗೆ ನಗರಸಭೆ ಮುಂದಾಗದಿರುವ ಕಾರಣ ಭವನದ ಆವರಣ ಮತ್ತು ಭವನದೊಳಗೆ ಕಸಕಡ್ಡಿ‌ಯಥೇಚ್ಛವಾಗಿ ಬೆಳೆದುಕೊಂಡಿದೆ.   ಸುಂದರ ಸಮಾರಂಭ ಹಾಗೂ ವಿವಿಧ ಶುಭ ಕಾರ್ಯಗಳಿಗೆ ಬಳಕೆಯಾಗಬೇಕಿದ್ದ ಭವನಕ್ಕೆ ಗ್ರಹಣ ಹಿಡಿದಿದ್ದು ಅಧಿಕಾರಿಗಳು ಕನಿಷ್ಠ ಸ್ವಚ್ಛತೆಗೂ‌ ಮುಂದಾಗದಿರುವುದು‌ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. …

Read More »

ಇನ್ಮುಂದೆ ಇವರಿಗೆ ಬರಲ್ಲ `ಗೃಹಲಕ್ಷ್ಮಿ’ ಹಣ!

ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.   ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ …

Read More »

ರಾಜ್ಯದಲ್ಲಿ ಅಕ್ರಮ ನೋಂದಣಿ, ತೆರಿಗೆ ವಂಚನೆಗೆ ಮಹತ್ವದ ಕ್ರಮ: ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮ ಜಾರಿ

ಬೆಂಗಳೂರು: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗೆಯೂ ಮಾಹಿತಿ ನೀಡಿದ ಅವರು, “ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ …

Read More »

ಅ.21ರಿಂದ ವಾರಾಂತ್ಯಗಳಲ್ಲೂ ‘ಉಪನೋಂದಣಿ ಕಚೇರಿ’ ಓಪನ್

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್.21ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. …

Read More »

ಚಂದ್ರ ಬಾಬು ನಾಯಡು ಹೇಳಿಕೆಯಿಂದ ನಂದಿನಿ ತುಪ್ಪಕ್ಕೆ ಭಾರಿ ಡಿಮಾಂಡ್.:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ -ತಿರುಪತಿ ಲಡ್ಡು ಬಗ್ಗೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡುವ ಮೂಲಕ ದೇಶದಲ್ಲೇ ನಂದಿನಿ ತುಪ್ಪಕ್ಕೆ ಬಾರೀ ಬೇಡಿಕೆ ಬಂದಿದೆ ಎಂದು ಕೆಎಂಎಫ್‌ ಮಾಜಿ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಧಿಕಾರವಧಿಯಲ್ಲಿ 4 ವರ್ಷದ ಹಿಂದೆ ಕೆಎಂಎಫ್‌ನ ನಂದಿನಿ ತುಪ್ಪ ದೇಶದ ದೊಡ್ಡ ದೇವಸ್ಥಾನ ತಿರುಪತಿ ಬಾಲಾಜಿ ಮಂದಿರದ ಲಡ್ಡು ಪ್ರಸಾದಕ್ಕೆ ಪೂರೈಕೆಯಾಗುತ್ತಿತ್ತು. ತಿರುಪತಿ ಬಾಲಾಜಿ ಮಂದಿರದ …

Read More »

ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ

ಕಲಬುರಗಿ: ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ. ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ ಮಾತುಕತೆಗೆಂದು ಹೋಗಿದ್ದಾರೆ.‌ ಈ ಸಂದರ್ಭದಲ್ಲಿ ಮಾತಿಗೆ …

Read More »

ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

ಚಿಕ್ಕಮಗಳೂರು : ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆ ಕೂಡ ಬರಬೇಕು ಎಂದು ಆದೇಶ ನೀಡಿದ ಇಲಾಖೆಯ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಬಿಜೆಪಿ ಕಿಡಿ ಕಾರಿದೆ. ಮೂಡಿಗೆರೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿ ಆದೇಶ ಹೊರಡಿಸಿದ್ದು ಈ ಆದೇಶದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ಕಿಡಿ ಕಾರಿದ್ದು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಅಲ್ಪಸಂಖ್ಯಾತರನ್ನೇ ನೇಮಕ ಮಾಡಲು ಉರ್ದು …

Read More »