Breaking News

ರಾಜ್ಯ

ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು: ಕಠಿಣ ಶಿಕ್ಷೆಯಾಗಲಿ-ಗುಣಧರನಂದಿ ಮಹಾರಾಜ

ಹುಬ್ಬಳ್ಳಿ: ‘ತಿರುಪತಿ ಸರ್ವಧರ್ಮಗಳ ಶಕ್ತಿ ಕೇಂದ್ರ. ಅಲ್ಲಿ ನೀಡುವ ಪ್ರಸಾದವಾದ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಇರುವ ತುಪ್ಪ ಬಳಕೆ ಮಾಡಿರುವುದು ಸರಿಯಲ್ಲ’ ಎಂದು ಹುಬ್ಬಳ್ಳಿ ತಾಲ್ಲೂಕು ವರೂರಿನ ನವಗ್ರಹತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದರು.   ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಾದರೂ ಪ್ರಸಾದದ ಮೂಲಕ ಮಾಂಸಾಹಾರ ಸೇವನೆ ಮಾಡಿಸುವ ದುಷ್ಟ ಪ್ರಯತ್ನ ಮಾಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ …

Read More »

2ಎ ಮೀಸಲಾತಿ ಹೋರಾಟ: ಪಂಚಮಸಾಲಿ ವಕೀಲರ ರಾಜ್ಯಮಟ್ಟದ ಸಮಾವೇಶ ಯಶಸ್ವಿ

ಬೆಳಗಾವಿ: ‘‍ಪಂಚಮಸಾಲಿ ಸಮಾಜವನ್ನು ಎಲ್ಲರೂ ಬಳಸಿಕೊಂಡರು, ಬೆಳೆದರು. ಆದರೆ, ಸಮಾಜವನ್ನು ಹಿಂದಕ್ಕೆ ತಳ್ಳಿದರು. ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವವರೆಗೂ ನಾವು ವಿಶ್ರಮಿಸಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಯ ಅವಕಾಶ ಕೊಡುತ್ತಿದ್ದೇವೆ’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.   ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ, ಲಿಂಗಾಯತ ಒಳಪಂಗಡಗಳಿಗೆ ಒಬಿಸಿ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿನ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾಜದ ವಕೀಲರ ರಾಜ್ಯಮಟ್ಟದ ಪರಿಷತ್‌ನಲ್ಲಿ ಮಾತನಾಡಿದ …

Read More »

ರಾಯಣ್ಣ-ಚೆನ್ನಮ್ಮ’ ಬ್ರಿಗೇಡ್ ಸ್ಥಾಪನೆಗೆ ಮುನ್ನುಡಿ ಬರೆದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ!

ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು. ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ. ಹೌದು ಈ ವಿಚಾರವಾಗಿ …

Read More »

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಕೀಲರ ಪರಿಷತ್‌ ಯಶಸ್ವಿಯಾಯಿತು. ವಕೀಲರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್‌ 15ರಂದು ಚರ್ಚೆಗೆ ಆಹ್ವಾನಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ತು, ನ್ಯಾಯಪೀಠ- ಕೂಡಲಸಂಗಮ, ಜಿಲ್ಲಾ ವಕೀಲರ ಪರಿಷತ್ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಪಂಚಮಸಾಲಿ ಸಮಾಜದ ವಕೀಲರು ಸಮಾವೇಶಗೊಂಡರು. ಇಡೀ …

Read More »

ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್‌-ಮಿಲಾದ್‌ ಹಬ್ಬದ ಮೆರವಣಿಗೆ

ಬೆಳಗಾವಿ: ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್‌-ಮಿಲಾದ್‌ ಹಬ್ಬದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗವಹಿಸಿ ಭಾವೈಕ್ಯತೆ ಮೆರೆದರು. ನಗರದಲ್ಲಿ ಸೆ.16ರಂದೇ ಈದ್‌-ಮಿಲಾದ್‌ ಹಬ್ಬವನ್ನು ಮುಸ್ಲಿಮರು ಆಚರಿಸಿದ್ದಾರೆ. ಅಂದೇ ಬೆಳಿಗ್ಗೆ ಈದ್‌-ಮಿಲಾದ್‌ ಮೆರವಣಿಗೆ ನಡೆಯಬೇಕಿತ್ತು. ಆದರೆ, ಅದರ ಮಾರನೇ ದಿನವೇ( ಸೆ.17) ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು. ಹಾಗಾಗಿ ಗಣೇಶನ ಮೆರವಣಿಗೆ ಮೊದಲು ಅದ್ದೂರಿಯಾಗಿ ನಡೆಯಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೂ ಅನುಕೂಲವಾಗಲೆಂದು ಮುಸ್ಲಿಮರು …

Read More »

ಬೆಂಗಳೂರಿನಲ್ಲಿ ಮಹಿಳೆಯ ಹತ್ಯೆ ಕೇಸ್ : ಮಹಾಲಕ್ಷ್ಮಿ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ ಎಂದ ಪತಿ!

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಾಲಕ್ಷ್ಮೀಯ ಸ್ನೇಹಿತ ಅಶ್ರಫ್ ಮೇಲೆ ನನಗೆ ಅನುಮಾನ ಇದೆ ಎಂದು ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೊಲೆಯಾದ ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್, ನನಗೆ ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ. ಅಶ್ರಫ್ ಉತ್ತರಾಖಂಡ ಮೂಲದವನು. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್ ವಿರುದ್ಧ ದೂರು ಕೊಟ್ಟಿದ್ದೆ ಎಂದು ಸ್ಪೋಟಕ …

Read More »

ಜಮೀನು ವಿವಾದ: ಗ್ರಾಮದ ಹಿರಿಯನ ಕೊಲೆ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಹೊಸೂರು ಗ್ರಾಮದ ಹದ್ದಿಯಲ್ಲಿ ಶುಕ್ರವಾರ ತಡರಾತ್ರಿ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲಾಗಿದೆ. ತಡರಾತ್ರಿಯೇ ಕಾರ್ಯಪ್ರವೃತ್ತರಾದ ಇಲ್ಲಿನ ಪೊಲೀಸರು ನಾಲ್ಕೇ ತಾಸಿನಲ್ಲಿ ಪ್ರಕರಣ ಭೇದಿಸಿ ಮೂವರನ್ನು ಬಂಧಿಸಿದ್ದಾರೆ.   ಬೈಕ್ ಮೇಲೆ ತೆರಳುತ್ತಿದ್ದ, ಗ್ರಾಮದ ಹಿರಿಯ ವಿಠ್ಠಲ ಜೋತಪ್ಪ ರಾಮಗೋನಟ್ಟಿ (60) ಕೊಲೆಯಾದವರು. ಬೈಕ್‌ ಓಡಿಸುತ್ತಿದ್ದ ಭೀಮಪ್ಪ ಅವರ ಹಿಂದಿದ್ದ ಬಾಬು ಗಾಯಗೊಂಡಿದ್ದಾರೆ. ಭೀಮಪ್ಪ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಬೈಕಿಗೆ ಕಾರು ಡಿಕ್ಕಿ …

Read More »

ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ

ಧಾರವಾಡ: ‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಹೇಳಿದರು. ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ …

Read More »

ಕಲ್ಯಾಣ ಕರ್ನಾಟಕದ ಭಾಗದ ವಿವಿಧೆಡೆ ಮಳೆ

ಕಲಬುರಗಿ: ಹಲವು ದಿನಗಳ ಬಿಡುವಿನ ಬಳಿಕ ಕಲ್ಯಾಣ ಕರ್ನಾಟಕದ ಹಲವೆಡೆ ಶನಿವಾರ ಮಳೆಯಾಗಿದೆ. ಕಲಬುರಗಿ, ಬೀದರ್ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಶನಿವಾರ ಬೆಳಿಗ್ಗೆ ಹಾಗೂ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಜೋರು ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲೂ ಜೋರು ಮಳೆ ಸುರಿದಿದೆ. ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ಬೆಳಿಗ್ಗೆ ವರುಣ ಅಬ್ಬರಿಸಿದ್ದಾನೆ. ಕಲಬುರಗಿ ನಗರದಲ್ಲಿ ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಕಲಬುರಗಿಯಲ್ಲಿ ಬೆಳಿಗ್ಗೆ ತೀಕ್ಷ್ಣ …

Read More »

30 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ: ಫ್ರಿಡ್ಜ್‌ನಲ್ಲಿ ಮೃತದೇಹ ಬಚ್ಚಿಟ್ಟ ಆರೋಪಿ!

ಬೆಂಗಳೂರು: ನಗರದ ಮಲ್ಲೇಶ್ವರದ ಪೈಪ್‌ಲೈನ್‌ನ ಕೆ.ವಿ.ರಸ್ತೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ, ಅವರ ಮೃತದೇಹವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದ ಪ್ರಕರಣ ತಡವಾಗಿ ಪತ್ತೆಯಾಗಿದೆ. ಮಹಾಲಕ್ಷ್ಮಿ(29) ಕೊಲೆಯಾದವರು. ಪ್ರಕರಣ ದಾಖಲಿಸಿಕೊಂಡಿರುವ ವೈಯಾಲಿಕಾವಲ್‌ ಠಾಣೆ ಪೊಲೀಸರು, ಪರಾರಿಯಾಗಿರುವ ಆರೋಪಿ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ತಜ್ಞರು, ಶ್ವಾನದಳ ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ದೆಹಲಿಯಲ್ಲಿ ನಡೆದಿದ್ದ ಶ್ರದ್ದಾ …

Read More »