ಗುಡಗೇರಿ: ಕುಂದಗೋಳ ತಾಲ್ಲೂಕಿನಲ್ಲಿ ಬಹುತೇಕರು ಕೃಷಿಯನ್ನೆ ನಂಬಿಕೊಂಡು ಜೀವನ ಕಟ್ಟಿಕೊಂಡಿದ್ದು, ಸಮರ್ಪಕವಾಗಿ ಮಾಹಿತಿ ನೀಡಬೇಕಾದ ಕೃಷಿ ಇಲಾಖೆಯಲ್ಲಿ ಅಧಿಕಾರಿ ಹುದ್ದೆ ಖಾಲಿ ಇರುವುದರಿಂದ ಈ ಇಲಾಖೆ ಇದ್ದುಇಲ್ಲದಂತೆ ಆಗಿದೆ. ತಾಲ್ಲೂಕಿನಲ್ಲಿ ಒಟ್ಟು 58 ಸಾವಿರ ಹೆಕ್ಟೇರ್ ಸಾಗುವಳಿ ಕ್ಷೇತ್ರವಿದೆ. ಆದರೆ ಕೃಷಿಗೆ ಪೂರಕವಾದ ಮಾಹಿತಿ ಕೂರತೆಯಿಂದಾಗಿ ರೈತರು ಲಾಭದಾಯಕ ಬೆಳೆ ಬೆಳೆಯಲು ವಿಫಲರಾಗುತ್ತಿದ್ದಾರೆ, ಮೆಣಸಿನಕಾಯಿ ಈ ಭಾಗದಲ್ಲಿ ಪ್ರಸಿದ್ದಿ ಬೆಳೆ. ಆದರೆ ಇಳುವರಿ ಕುಂಠಿತದಿಂದ ರೈತರು ಬೆಳೆ ಬೆಳೆಯದೇ ಕೈಬಿಟ್ಟಿದ್ದಾರೆ …
Read More »ಹೇಳುವುದನ್ನು ಕೇಳಿಸಿಕೊಳ್ಳುತ್ತಿದ್ದಿರಾ ಮಿಸ್ಟರ್ ಸಾಬ್: ಕುಲಪತಿಗೆ ಸಚಿವ ಲಾಡ್
ಧಾರವಾಡ: ‘ಏನು ಹೇಳುತ್ತಿದ್ದೆನೆ ಕೇಳಿಸಿಕೊಳ್ಳುತ್ತಿದ್ದಿರಾ ಮಿಸ್ಟರ್ ಪಾಟೀಲ್ ಸಾಬ್? ವಿಶ್ವವಿದ್ಯಾಲಯದ ಸಂಶೋಧನೆಗಳು, ಉತ್ಪನ್ನಗಳನ್ನು ‘ಮಾರ್ಕೆಟಿಂಗ್’ ಹೇಗೆ ಮಾಡಲಾಗುತ್ತಿದೆ?’ ಎಂದು ಕೃಷಿ ವಿವಿ ಕುಲಪತಿ ಪಿ.ಎಲ್.ಪಾಟೀಲ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಪ್ರಶ್ನಿಸಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಭಾನುವಾರ ಕೃಷಿ ಮೇಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ‘ವಿಶ್ವವಿದ್ಯಾಲಯದ ಅನ್ವೇಷಣೆಗಳು ಮತ್ತು ಉತ್ಪನ್ನಗಳನ್ನು ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಕಚೇರಿ, ಸಹಕಾರಿ ಸೊಸೈಟಿ ಬ್ಯಾಂಕ್‌ಗಳ ಮೂಲಕ ಔಟ್ ರೀಚ್ ಪ್ರೋಗ್ರಾಂ …
Read More »ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು: ಕಠಿಣ ಶಿಕ್ಷೆಯಾಗಲಿ-ಗುಣಧರನಂದಿ ಮಹಾರಾಜ
ಹುಬ್ಬಳ್ಳಿ: ‘ತಿರುಪತಿ ಸರ್ವಧರ್ಮಗಳ ಶಕ್ತಿ ಕೇಂದ್ರ. ಅಲ್ಲಿ ನೀಡುವ ಪ್ರಸಾದವಾದ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಇರುವ ತುಪ್ಪ ಬಳಕೆ ಮಾಡಿರುವುದು ಸರಿಯಲ್ಲ’ ಎಂದು ಹುಬ್ಬಳ್ಳಿ ತಾಲ್ಲೂಕು ವರೂರಿನ ನವಗ್ರಹತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಾದರೂ ಪ್ರಸಾದದ ಮೂಲಕ ಮಾಂಸಾಹಾರ ಸೇವನೆ ಮಾಡಿಸುವ ದುಷ್ಟ ಪ್ರಯತ್ನ ಮಾಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ …
Read More »2ಎ ಮೀಸಲಾತಿ ಹೋರಾಟ: ಪಂಚಮಸಾಲಿ ವಕೀಲರ ರಾಜ್ಯಮಟ್ಟದ ಸಮಾವೇಶ ಯಶಸ್ವಿ
ಬೆಳಗಾವಿ: ‘ಪಂಚಮಸಾಲಿ ಸಮಾಜವನ್ನು ಎಲ್ಲರೂ ಬಳಸಿಕೊಂಡರು, ಬೆಳೆದರು. ಆದರೆ, ಸಮಾಜವನ್ನು ಹಿಂದಕ್ಕೆ ತಳ್ಳಿದರು. ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವವರೆಗೂ ನಾವು ವಿಶ್ರಮಿಸಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಯ ಅವಕಾಶ ಕೊಡುತ್ತಿದ್ದೇವೆ’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ, ಲಿಂಗಾಯತ ಒಳಪಂಗಡಗಳಿಗೆ ಒಬಿಸಿ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿನ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾಜದ ವಕೀಲರ ರಾಜ್ಯಮಟ್ಟದ ಪರಿಷತ್‌ನಲ್ಲಿ ಮಾತನಾಡಿದ …
Read More »ರಾಯಣ್ಣ-ಚೆನ್ನಮ್ಮ’ ಬ್ರಿಗೇಡ್ ಸ್ಥಾಪನೆಗೆ ಮುನ್ನುಡಿ ಬರೆದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ!
ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು. ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ. ಹೌದು ಈ ವಿಚಾರವಾಗಿ …
Read More »ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಕೀಲರ ಪರಿಷತ್ ಯಶಸ್ವಿಯಾಯಿತು. ವಕೀಲರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 15ರಂದು ಚರ್ಚೆಗೆ ಆಹ್ವಾನಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ತು, ನ್ಯಾಯಪೀಠ- ಕೂಡಲಸಂಗಮ, ಜಿಲ್ಲಾ ವಕೀಲರ ಪರಿಷತ್ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಪಂಚಮಸಾಲಿ ಸಮಾಜದ ವಕೀಲರು ಸಮಾವೇಶಗೊಂಡರು. ಇಡೀ …
Read More »ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್-ಮಿಲಾದ್ ಹಬ್ಬದ ಮೆರವಣಿಗೆ
ಬೆಳಗಾವಿ: ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್-ಮಿಲಾದ್ ಹಬ್ಬದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗವಹಿಸಿ ಭಾವೈಕ್ಯತೆ ಮೆರೆದರು. ನಗರದಲ್ಲಿ ಸೆ.16ರಂದೇ ಈದ್-ಮಿಲಾದ್ ಹಬ್ಬವನ್ನು ಮುಸ್ಲಿಮರು ಆಚರಿಸಿದ್ದಾರೆ. ಅಂದೇ ಬೆಳಿಗ್ಗೆ ಈದ್-ಮಿಲಾದ್ ಮೆರವಣಿಗೆ ನಡೆಯಬೇಕಿತ್ತು. ಆದರೆ, ಅದರ ಮಾರನೇ ದಿನವೇ( ಸೆ.17) ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು. ಹಾಗಾಗಿ ಗಣೇಶನ ಮೆರವಣಿಗೆ ಮೊದಲು ಅದ್ದೂರಿಯಾಗಿ ನಡೆಯಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೂ ಅನುಕೂಲವಾಗಲೆಂದು ಮುಸ್ಲಿಮರು …
Read More »ಬೆಂಗಳೂರಿನಲ್ಲಿ ಮಹಿಳೆಯ ಹತ್ಯೆ ಕೇಸ್ : ಮಹಾಲಕ್ಷ್ಮಿ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ ಎಂದ ಪತಿ!
ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಾಲಕ್ಷ್ಮೀಯ ಸ್ನೇಹಿತ ಅಶ್ರಫ್ ಮೇಲೆ ನನಗೆ ಅನುಮಾನ ಇದೆ ಎಂದು ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೊಲೆಯಾದ ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್, ನನಗೆ ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ. ಅಶ್ರಫ್ ಉತ್ತರಾಖಂಡ ಮೂಲದವನು. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್ ವಿರುದ್ಧ ದೂರು ಕೊಟ್ಟಿದ್ದೆ ಎಂದು ಸ್ಪೋಟಕ …
Read More »ಜಮೀನು ವಿವಾದ: ಗ್ರಾಮದ ಹಿರಿಯನ ಕೊಲೆ
ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಹೊಸೂರು ಗ್ರಾಮದ ಹದ್ದಿಯಲ್ಲಿ ಶುಕ್ರವಾರ ತಡರಾತ್ರಿ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲಾಗಿದೆ. ತಡರಾತ್ರಿಯೇ ಕಾರ್ಯಪ್ರವೃತ್ತರಾದ ಇಲ್ಲಿನ ಪೊಲೀಸರು ನಾಲ್ಕೇ ತಾಸಿನಲ್ಲಿ ಪ್ರಕರಣ ಭೇದಿಸಿ ಮೂವರನ್ನು ಬಂಧಿಸಿದ್ದಾರೆ. ಬೈಕ್ ಮೇಲೆ ತೆರಳುತ್ತಿದ್ದ, ಗ್ರಾಮದ ಹಿರಿಯ ವಿಠ್ಠಲ ಜೋತಪ್ಪ ರಾಮಗೋನಟ್ಟಿ (60) ಕೊಲೆಯಾದವರು. ಬೈಕ್ ಓಡಿಸುತ್ತಿದ್ದ ಭೀಮಪ್ಪ ಅವರ ಹಿಂದಿದ್ದ ಬಾಬು ಗಾಯಗೊಂಡಿದ್ದಾರೆ. ಭೀಮಪ್ಪ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಬೈಕಿಗೆ ಕಾರು ಡಿಕ್ಕಿ …
Read More »ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ
ಧಾರವಾಡ: ‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಹೇಳಿದರು. ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ …
Read More »
Laxmi News 24×7