Breaking News

ರಾಜ್ಯ

ಡಿಸಿಎಂ ‘ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ಆದಾಯ ಮೀರಿ ಆಸ್ತಿ ಗಳಿಕೆ ಕೇಸಲ್ಲಿ ‘ಸುಪ್ರೀಂ ಕೋರ್ಟ್’ನಿಂದ ನೋಟಿಸ್

ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಹಾಗೂ ಲೋಕಾಯುಕ್ತರಿಗೆ ಸುಪ್ರೀಂ ಕೋರ್ಟ್ ಮಂಗಳವಾರದಂದು ನೋಟಿಸ್ ಜಾರಿಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ …

Read More »

ಬಿಜೆಪಿ ಶಾಸಕ ಮುನಿರತ್ನ ಜೈಲು:ಇಂದು ‘ಜಾಮೀನು ಅರ್ಜಿ’ ವಿಚಾರಣೆ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಎರಡು ದಿನಗಳ ಪೊಲೀಸ್ ಕಸ್ಟಡಿ ಮುಗಿದ ನಂತರ ಬೆಂಗಳೂರಿನ ಆರ್.ಆರ್.ನಗರದ ಶಾಸಕರನ್ನು ಶಾಸಕರು / ಸಂಸದರ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್ -82) ಹಾಜರುಪಡಿಸಲಾಯಿತು.   ಏತನ್ಮಧ್ಯೆ, ಮುನಿರತ್ನ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಬುಧವಾರ …

Read More »

ಮೋದಿ ಹುಟ್ಟುಹಬ್ಬದಂದೇ ಕಾರ್ಯಕರ್ತನಿಗೆ ಕಪಾಳಮೋಕ್ಷ! ಕೇಂದ್ರ ಸಚಿವರ ಮುಂದೆ ಬಿಜೆಪಿ ಭಿನ್ನಮತ ಸ್ಫೋಟ

ತುಮಕೂರು: ಪ್ರಧಾನಿ ನರೇಂದ್ರ ಮೋದಿ (Narendra Modi Birthday) ಅವರ ಜನ್ಮದಿನದಂದೇ ಬಿಜೆಪಿ ಹಿರಿಯ ಮುಖಂಡರೊಬ್ಬರು ಬಿಜೆಪಿ ಕಾರ್ಯಕರ್ತನಿಗೆ ಕಪಾಳಮೋಕ್ಷ (BJP Member Slaps) ಮಾಡಿದ ಘಟನೆ ತುಮಕೂರಿನಲ್ಲಿ (Tumkur) ನಡೆದಿದೆ. ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣರ ಅವರ ಮುಂದೆಯೇ ಬಿಜೆಪಿ ಪಕ್ಷದೊಳಗೆ ಕಿತ್ತಾಟ ನಡೆದಿದ್ದು, ಮಾಜಿ ಸಚಿವ ಸೊಗಡು ಶಿವಣ್ಣರನ್ನು ತಳ್ಳಿದ್ದಕ್ಕೆ ಗಲಾಟೆ ಆರಂಭವಾಗಿದೆ. ನಂತರ ಮಾತಿಗೆ ಮಾತು ಬೆಳೆದು ಸೊಗಡು ಶಿವಣ್ಣ, …

Read More »

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೋತ್ಸವಕ್ಕೆ ಚಾಲನೆ.

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೋತ್ಸವಕ್ಕೆ ಚಾಲನೆ. ಶಾಸಕರಾದ ಅಭಯ್ ಪಾಟೀಲ್,ಆಸೀಪ್‌ಸೇಠ್ ರಿಂದ ಚಾಲನೆ. ಗಣೇಶ ಮೂರ್ತಿಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ. ಬೆಳಗಾವಿಯ ಹುತಾತ್ಮಚೌಕನಲ್ಲಿ ಪೂಜೆ ಸಲ್ಲಿಸಿದ ಗಣ್ಯರು. ಶಾಸಕರಿಗೆ ಡಿಸಿ ಮೊಹ್ಮದ್ ರೋಷನ್ ಜಿಪಂ ಸಿಇಒ ರಾಹುಲ್ ಶಿಂಧೆ,ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸಾಥ್. ಕಳೆದ ವರ್ಷ ನಿರಂತರ 34 ಗಂಟೆಗಳ ಕಾಲ ನಡೆದಿದ್ದ ವಿಸರ್ಜನ ಮಹೋತ್ಸವ. ಈ ಬಾರಿಯೂ ಹಲವು ಆತಂಕಗಳ ನಡುವೆ ವಿಸರ್ಜನ ಮಹೋತ್ಸವಕ್ಕೆ ಚಾಲನೆ. …

Read More »

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಗೆ ಭಾರಿ ಪೊಲೀಸ್ ಬಂದೊಬಸ್ತ.!!!

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಗೆ ಭಾರಿ ಪೊಲೀಸ್ ಬಂದೊಬಸ್ತ.!!! ಮಂಡ್ಯದ ನಾಗಮಂಗಲ ಕೋಮು ಗಲಭೆಯ ನಂತರ ಅಲರ್ಟ್ ಆದ ಖಾಕಿ. ಅಹಿತರ ಘಟನೆ ನಡೆಯದಂತೆ ಗಣೇಶ ವಿಸರ್ಜನೆಗೆ ಭಾರಿ ಬಂದೊಬಸ್ತ. ಬೆಳಗಾವಿಯಲ್ಲಿ ಇಂದು ನಡೆಯಲಿರುವ ಗಣೇಶ ವಿಸರ್ಜನಾ ಕಾರ್ಯಕ್ರಮ. 300 ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ವಿಗ್ರಹಗಳ ವಿಸರ್ಜನಾ ಕಾರ್ಯಕ್ರಮ. ಬೆಳಗಾವಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ 7 ಎಸ್ಪಿ,31 ಡಿಎಸ್ಪಿ,110 ಸಿಪಿಐ,140 ಪಿಎಸ್ಐ,150 ಎಎಸ್ಐ,10 ಕೆ ಎಸ್ ಆರ್ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ.

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ದೇವಶಿಲ್ಪಿ ಭಗವಾನ್ ವಿಶ್ವಕರ್ಮ ಜಯಂತಿಯ ಅಂಗವಾಗಿ ಕಾರ್ಖಾನೆಯಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಆಚರಣೆ ಮಾಡಿದರು. ಸೃಷ್ಟಿಕರ್ತ ಬ್ರಹ್ಮನ ಅಂಶವಾಗಿರುವ ದೇವಶಿಲ್ಪಿ ವಿಶ್ವಕರ್ಮನು ಎಲ್ಲಾ ಕುಶಲಕರ್ಮಿಗಳಿಗೆ ಒಳಿತನ್ನು ತರಲಿ ಎಂದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಹಿರಿಯರು ಯುವಕರು ಕಾರ್ಖಾನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು

Read More »

ಜೋಕುಮಾರನ ಹಬ್ಬ: ಸಾಂಪ್ರದಾಯಿಕ ಆಚರಣೆ

ಉಪ್ಪಿನಬೆಟಗೇರಿ: ಗಣೇಶ ವಿಸರ್ಜನೆಯ ಮರುದಿನ ಜೋಕುಮಾರಸ್ವಾಮಿ ಅಷ್ಟಮಿಯ ಗಡಗಿಯೊಳಗೆ ಹುಟ್ಟುತ್ತಾನೆ. ಆತನ ಆಯುಷ್ಯ ಏಳು ದಿನ. ಆ ಏಳು ದಿನಗಳಲ್ಲಿ ಬಾಲ್ಯ, ಯೌವ್ವನ, ಸಾವು ಎಲ್ಲವೂ ಸಂಭವಿಸುತ್ತದೆ. ಉತ್ತರ ಕರ್ನಾಟಕ ಸೇರಿ ನಾಡಿನ ಹಲವು ಹಳ್ಳಿಗಳಲ್ಲಿ ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಇಂದಿಗೂ ಆಚರಿಸಲಾಗುತ್ತದೆ.   ಬಡಿಗೇರ ಮನೆಯವರು ತಯಾರಿಸುವ ಜೋಕುಮಾರನ ಮಣ್ಣಿನ ಮೂರ್ತಿಯನ್ನು ಅಂಬಿಗೇರ ಮನೆತನದ ಮಹಿಳೆಯರು ಬಿದಿರಿನ ಬುಟ್ಟಿಯಲ್ಲಿ ಇಟ್ಟು ಬೇವಿನ ತಪ್ಪಲಿನಿಂದ ಸಿಂಗರಿಸುತ್ತಾರೆ. ಸುಣಗಾರ ಮನೆ ಮಹಿಳೆಯರು …

Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ : `DCM ಡಿ.ಕೆ.ಶಿವಕುಮಾರ್’ ಗೆ ಸುಪ್ರೀಂಕೋರ್ಟ್ ನಿಂದ ನೋಟಿಸ್!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.   ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ …

Read More »

ಮಗನ 83 ಕೆಜಿ ತೂಕದಷ್ಟೇ ಹಣವಿಟ್ಟು ತುಲಾಭಾರ ನೇರವೇರಿಸಿದ ರೈತ!

ಭೋಪಾಲ್​: ತಮ್ಮ ಆಸೆ ಈಡೇರಿದಕ್ಕೆ ಮಗನ ತೂಕಕ್ಕೆ ಸಮನಾದ ಹಣವನ್ನು ತುಲಾಭಾರದ ಮೂಲಕ ದೇವಸ್ಥಾನಕ್ಕೆ ಅರ್ಪಿಸುವುದರೊಂದಿಗೆ ರೈತರೊಬ್ಬರು ಹರಕೆ ತೀರಿಸಿದ ಅಪರೂಪದ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಬದ್‌ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.   ಬದ್‌ನಗರದ ರೈತರಾಗಿರುವ ಚತುರ್ಭುಜ್ ಜಾಟ್ ಅವರು ತಮ್ಮ ಆಸೆ ಈಡೇರಿದ ಬಳಿಕ ಶ್ರೀ ಸತ್ಯವಾದಿ ವೀರ ತೇಜಾಜಿ ಮಹಾರಾಜ್ ದೇವಸ್ಥಾನದಲ್ಲಿ ತುಲಾಭಾರ ನಡೆಸಿ ದೇಣಿಗೆಯನ್ನು ನೀಡಿದರು. ರೈತರೊಬ್ಬರ …

Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಶೇ.40ರಷ್ಟು ಬಡ್ಡಿ ವಸೂಲಿ ಮೂಲಕ ಮಹಿಳೆಯರ ಶೋಷಣೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಆರೋಪ

ಮಳವಳ್ಳಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳಾ ಸಂಘಗಳಿಗೆ ಸಾಲ ನೀಡಿ ಶೇ.40ರಷ್ಟು ಬಡ್ಡಿ ವಸೂಲಿ ಮಾಡುತ್ತಾ ಗ್ರಾಮೀಣ ಮಹಿಳೆಯರ ಶೋಷಣೆ ಮಾಡಲಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಆರೋಪ ಮಾಡಿದ್ದಾರೆ. ತಾಲೂಕಿನ ಹಾಡ್ಲಿ ಗ್ರಾಮದಲ್ಲಿ ಸೋಮವಾರ ನೂತನ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲು ಹೊರಟಿದೆ. ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವನ್ನು ಬಿಟ್ಟು, ಸರಕಾರದ ಸಂಜೀವಿನಿ …

Read More »