ಬೆಂಗಳೂರು:ಹೊಸ ಕಾರ್ಡ್ಗಾಗಿ ಅರ್ಜಿದಾರರು 3 ವರ್ಷದಿಂದ ಜಾತಕಪಕ್ಷಿಯಂತೆ ಕಾಯುತ್ತಿರುವ ನಡುವೆಯೂ ಅರ್ಹತೆ ಹೊಂದಿಲ್ಲದ 46 ಮಂದಿಗೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಮಂಜೂರು ಮಾಡಿರುವುದು ಆಹಾರ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಆಹಾರ ಶಿರಸ್ತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ಜಿ. ತಿಮ್ಮಯ್ಯ ಎಂಬುವರು, ಲಂಚ ಪಡೆದು ವಿಶೇಷ ‘ವೈದ್ಯಕಿಯ ಕೇಸ್’ ವಿನಾಯಿತಿ ದುರ್ಬಳಕೆ ಮಾಡಿಕೊಂಡು ಅನಧಿಕೃತವಾಗಿ 46 ಬಿಪಿಎಲ್ ಚೀಟಿ ಕೊಟ್ಟಿರುವುದು ಚಿಕ್ಕಮಗಳೂರು ಜಿಲ್ಲಾಧಿಕಾರಿ, ಆಹಾರ ಇಲಾಖೆ ಆಯುಕ್ತರಿಗೆ ಕೊಟ್ಟಿರುವ ವರದಿಯಲ್ಲಿ …
Read More »ಜೈಲಲ್ಲಿ ‘ನಟ ದರ್ಶನ್’ ಸ್ಥಿತಿ ಕಂಡು ಕಣ್ಣೀರಿಟ್ಟ ರಚಿತಾ ರಾಮ್
ಬೆಂಗಳೂರು: ರಾಜನನ್ನು ರಾಜನ ರೀತಿ ನೋಡೋಕೆ ಇಷ್ಟ. ಆದರೇ ಎನ್ನುತ್ತಲೇ ನಟಿ ರಚಿತಾ ರಾಮ್ ಅವರು ಜೈಲಲ್ಲಿ ನಟ ದರ್ಶನ್ ಸ್ಥಿತಿ ಕಂಡು ಕಣ್ಣೀರಿಟ್ಟರು. ಈ ಮೂಲಕ ಭಾವುಕರಾದರು. ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ನಟಿ ರಚಿತಾ ರಾಮ್ ತೆರಳಿ, ನಟ ದರ್ಶನ್ ಭೇಟಿಯಾದರು. ಅವರ ಆರೋಗ್ಯ ವಿಚಾರಿಸಿ, ಮಾತನಾಡಿಕೊಂಡ ಬಂತ ನಂದ್ರ, ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ನಟಿ ರಚಿತಾ ರಾಮ್ ಎಂಬುದಾಗಿ ಗುರುತಿಸಿಕೊಳ್ಳಲು ನಟ ದರ್ಶನ್ …
Read More »ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಬಿಜೆಪಿ ಕಾರ್ಯಕರ್ತರ ಆಗ್ರಹ
ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮತ್ತು ಮಹಾನಗರ ಘಟಕಗಳ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ …
Read More »: ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ(ಹೆಸ್ಕಾಂಗೆ) ಈ ಬಾರಿ ಮಳೆಗಾಲದಲ್ಲಿ ₹11.29 ಕೋಟಿ ನಷ್ಟ
ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ(ಹೆಸ್ಕಾಂಗೆ) ಈ ಬಾರಿ ಮಳೆಗಾಲದಲ್ಲಿ ₹11.29 ಕೋಟಿ ನಷ್ಟವಾಗಿದೆ. ಹಾನಿಗೀಡಾದ ವಿದ್ಯುತ್ ಪರಿಕರಗಳ ದುರಸ್ತಿ ಕಾರ್ಯ ನಡೆದಿದೆ. 2019ರಲ್ಲಿ ಭೀಕರ ಪ್ರವಾಹದಿಂದ ಹೆಸ್ಕಾಂ ತತ್ತರಿಸಿತ್ತು. ಆಗ ಬೆಳಗಾವಿ ಜಿಲ್ಲೆಯಲ್ಲಿ 17 ಸಾವಿರಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿತ್ತು. 5 ಸಾವಿರ ವಿದ್ಯುತ್ ಪರಿವರ್ತಕಗಳು ನೀರಲ್ಲಿ ಮುಳುಗಿದ್ದವು. ಈ ಬಾರಿ ಮಲಪ್ರಭಾ, ಘಟಪ್ರಭಾ, ಕೃಷ್ಣಾ, ಹಿರಣ್ಯಕೇಶಿ, ದೂಧಗಂಗಾ, ವೇದಗಂಗಾ, ಮಾರ್ಕಂಡೇಯ …
Read More »ಸರ್ಕಾರದ ಸೌಲಭ್ಯಕ್ಕಾಗಿ ಒಗ್ಗಟ್ಟಾಗಿ: ಶೆಟ್ಟರ್
ರಾಮದುರ್ಗ: ‘ವೀರಶೈವ ಲಿಂಗಾಯತ ಒಳಪಂಗಡಗಳು ಸಮಾಜದ ಪ್ರತಿಭಾವಂತರಿಗೆ ಹಾಗೂ ಸಾಧಕರಿಗೆ ಪ್ರೋತ್ಸಾಹಿಸಲು ಪ್ರೇರಣೆ ನೀಡಬೇಕು’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿನ ಕರ್ನಾಟಕ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ಸರ್ಕಾರದ ಸೌಲಭ್ಯಕ್ಕಾದರೂ ಲಿಂಗಾಯತ ಸಮಾಜವನ್ನು ಒಟ್ಟಾಗಿಸುವ ಕಾರ್ಯ ಮಾಡಬೇಕು’ ಎಂದರು. ‘ರಾಜ್ಯದಲ್ಲಿ ಬಣಜಿಗ ಸಮಾಜದ ಎಲ್ಲ ತಾಲ್ಲೂಕು ಘಟಕಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಆದರೆ ರಾಜ್ಯ …
Read More »ಆ.24ರಿಂದ ಕನ್ನಡ ವೈದ್ಯ ಬರಹಗಾರರ ಸಮ್ಮೇಳನ
ಬೆಳಗಾವಿ: ಕನ್ನಡ ವೈದ್ಯ ಬರಹಗಾರರ 5ನೇ ರಾಜ್ಯ ಸಮ್ಮೇಳನವು ಬೆಳಗಾವಿಯ ಕೆಎಲ್‌ಇ ಶತಮಾನೋತ್ಸವ ಭವನದ ಎಚ್.ಬಿ.ರಾಜಶೇಖರ ಸಭಾಂಗಣದಲ್ಲಿ ಆಗಸ್ಟ್ 24 ಮತ್ತು 25ರಂದು ನಡೆಯಲಿದೆ. ವೈದ್ಯ ಸಾಹಿತಿ ಡಾ. ನಾ.ಸೋಮೇಶ್ವರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೆಎಲ್‌ಇ ವಿಶ್ವವಿದ್ಯಾಲಯದ ಕನ್ನಡ ಬಳಗ, ಭಾರತೀಯ ವೈದ್ಯಕೀಯ ಸಂಘ ಹಾಗೂ ಕನ್ನಡ ವೈದ್ಯ ಬರಹಗಾರರ ಸಮಿತಿ ಸಹಯೋಗದಲ್ಲಿ ನಡೆಯುವ ಈ ಸಮ್ಮೇಳನವನ್ನು ಸಾಹಿತಿ ಜಯಂತ್ ಕಾಯ್ಕಿಣಿ ಉದ್ಘಾಟಿಸುವರು. ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ …
Read More »ನ್ಯಾಯ ಕೊಡಿ ಇಲ್ಲವೆ ದಯಾಮರಣಕ್ಕೆ ಅನುಮತಿ ಕೊಡಿ: ತಮ್ಮಣ್ಣ ಕಾಂಬಳೆ ಕುಟುಂಬದ ಧರಣಿ
ಬೆಳಗಾವಿ: ‘ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸಂಬಂಧಿಕರು ನಮಗೆ ನೆಮ್ಮದಿಯಿಂದ ಜೀವನ ಸಾಗಿಸಲು ಅವಕಾಶ ನೀಡುತ್ತಿಲ್ಲ. ದೈಹಿಕವಾಗಿ ಹಲ್ಲೆಯನ್ನೂ ಮಾಡುತ್ತಿದ್ದಾರೆ. ನಮಗೆ ನ್ಯಾಯ ಕೊಡಿಸಿ. ಇಲ್ಲದಿದ್ದರೆ ದಯಾಮರಣಕ್ಕೆ ಅನುಮತಿ ಕೊಡಿ’ ಎಂದು ಆಗ್ರಹಿಸಿ ರಾಯಬಾಗ ತಾಲ್ಲೂಕಿನ ನಿಲಜಿಯ ತಮ್ಮಣ್ಣ ಕಾಂಬಳೆ ಕುಟುಂಬಸ್ಥರು ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ‘ನಮ್ಮ ಮೇಲೆ ಆಗಿರುವ ಅನ್ಯಾಯದ ಕುರಿತು ಕುಡಚಿ ಪೊಲೀಸರಿಗೆ ತಿಳಿಸಿದ್ದೇವೆ. ಆದರೆ, ಯಾವುದೇ ಕ್ರಮ ವಹಿಸಿಲ್ಲ. …
Read More »600 ಫಲಾನುಭವಿಗಳಿಗೆ ಶೀಘ್ರದಲ್ಲಿ ಸೂರು: ಜೊಲ್ಲೆ
ನಿಪ್ಪಾಣಿ: ‘ನಗರದಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ₹ 133 ಕೋಟಿ ಮೊತ್ತದಲ್ಲಿ ನಿರ್ಮಾಣವಾಗುತ್ತಿರುವ ಜಿ +2 ಮಾದರಿಯ 2,052 ಮನೆಗಳ ನಿರ್ಮಾಣ ಕಾಮಗಾರಿಯನ್ನು ಬುಧವಾರ ಶಾಸಕಿ ಶಶಿಕಲಾ ಜೊಲ್ಲೆ ಅಧಿಕಾರಿಗಳೊಂದಿಗೆ ವೀಕ್ಷಿಸಿದರು. ಕಾಮಗಾರಿಯ ಪ್ರಗತಿ ಕಾರ್ಯವನ್ನು ಪರಿಶೀಲಿಸಿ ಸೂಚನೆಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು, ‘ಪ್ರಧಾನಮಂತ್ರಿ ಆವಾಸ ಯೋಜನೆಯ ಅಡಿ ಈಗ ಮತ್ತೆ ₹ 21 ಕೋಟಿ ಮಂಜೂರಾಗಿದೆ. 600 ಮನೆಗಳು ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿವೆ. ಹೆಚ್ಚಿನ ಮೂಲ …
Read More »ಕೆಸೆಟ್: ಅರ್ಜಿ ಸಲ್ಲಿಸಲು ಆ. 28ರವರೆಗೆ ಅವಕಾಶ
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್- 2024) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಗಸ್ಟ್ 28ರವರೆಗೆ ವಿಸ್ತರಿಸಿದೆ. ‘ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆ. 30ರವರೆಗೆ ಅವಕಾಶ ನೀಡಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
Read More »ನಿಮಗೆ ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಆದರೆ ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ
ಕೋಲ್ಕತಾ: ಇಲ್ಲಿನ ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ ನೆಟ್ಟಿಗರ ಹೃದಯಗಳನ್ನು ಗೆದ್ದಿದ್ದಾರೆ. ಲೈಂಗಿಕ ಕಾರ್ಯಕರ್ತ ಮಹಿಳೆ ಕೆಲವು ನಿಮಿಷಗಳ ಕಾಮಕ್ಕಾಗಿ ಮಹಿಳೆಯರನ್ನು ಅತ್ಯಾಚಾರ ಮತ್ತು ಕೊಲ್ಲುವ ಬದಲು ಕೆಂಪು ದೀಪದ ಪ್ರದೇಶಗಳಿಗೆ ಭೇಟಿ ನೀಡುವಂತೆ ಪುರುಷರಿಗೆ ಸಲಹೆ ನೀಡಿದರು. ನಿನಗೆ ಹೆಂಗಸಿನ ಮೇಲೆ ಅಷ್ಟೊಂದು ವ್ಯಾಮೋಹವಿದ್ದರೆ ನಮ್ಮ ಬಳಿಗೆ ಬಾ. ದಯವಿಟ್ಟು ಮಹಿಳೆಯರ …
Read More »
Laxmi News 24×7